ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ; ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಸುದ್ದಿಗಳು News

Posted by vidyamaana on 2024-06-30 21:58:04 |

Share: | | | | |


ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ;  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ.

ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.

ಬೆಂಕಿ ಅವಘಡದ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತರಾದ ಸಲೀಕತ್, ಅಬೂಬಕ್ಕರ್, ರಿಯಾಝ್, ಜುನೈದ್ ಮನೆಯೊಳಗೆ ಪ್ರವೇಶಿಸಿ

ವಿದ್ಯುತ್ ಸಂಪರ್ಕ, ಗ್ಯಾಸ್ ಸಂಕರ್ಪ ಕಡಿತಗೊಳಿಸಿದರು. ಪುತ್ತೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.

ಘಟನಾ ಸ್ಥಳಕ್ಕೆ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಆತೂರು ಬದ್ರಿಯಾ ಮಸೀದಿ ಖತೀಬ್ ಜುನೈದ್ ಜಿಫ್ರಿ ತಂಙಳ್ ಭೇಟಿ ನೀಡಿದರು. ಕೊಯಿಲ ಗ್ರಾಮಕರಣಿಕ ಶೇಷಾದ್ರಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ನಾನು ಕೋಣೆಯೊಂದರಲ್ಲಿ ಕೆಲಸದಲ್ಲಿ ನಿರತಳಾಗಿದ್ದೆ. ತುಂತುರು ಮಳೆಯಾಗುತ್ತಿತ್ತು. ಭಾರಿ ಸಿಡಿಲಿನ ಶಬ್ದ ಕೇಳಿಸಿತ್ತು. ಸ್ವಲ್ಪ ಹೊತ್ತಿನ ಬಳಿಕ ಮನೆಯೊಳಗೆ ಹೊಗೆ ತುಂಬತೊಡಗಿತು. ಮನೆಯಿಂದ ಹೊರ ಬರುವುದಕ್ಕೂ ದಾರಿ ಕಾಣುತ್ತಿರಲಿಲ್ಲ ಎಂದು ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ತಿಳಿಸಿದರು.

ಉಪ್ಪಿನಂಗಡಿ ಸಮೀಪದ ಕೆಮ್ಮಾರದಲ್ಲಿ ಮನೆ ಭಾಗಶಃ ಬೆಂಕಿಗೆ ಆಹುತಿಯಾಗಿದ್ದು ಕಂದಾಯ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು

 Share: | | | | |


ಮೂಡುಬಿದ್ರೆ ; ಖಾಸಗಿ ಕಾಲೇಜು ವಿದ್ಯಾರ್ಥಿನಿ ಆದಿರಾ ನಾಪತ್ತೆ

Posted by Vidyamaana on 2024-02-25 13:42:08 |

Share: | | | | |


ಮೂಡುಬಿದ್ರೆ ; ಖಾಸಗಿ ಕಾಲೇಜು ವಿದ್ಯಾರ್ಥಿನಿ ಆದಿರಾ ನಾಪತ್ತೆ

ಮೂಡಬಿದಿರೆ, ಫೆ.25: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬೈಂದೂರು ಮೂಲದ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡುಬಿದ್ರೆ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಪಿಟಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ನಾಪತ್ತೆಯಾದವಳು. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದಿದ್ದು ಕನ್ನಡ ಭವನದ ಬಳಿ ಇಳಿದಿದ್ದಾಳೆಂದು ಜೊತೆಗಿದ್ದವರು ಮಾಹಿತಿ ನೀಡಿದ್ದಾರೆ. ಆನಂತರ ಯುವತಿ ಅಲ್ಲಿಂದ ಕಾಲೇಜಿಗೆ ಅಥವಾ ಮನೆಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ. ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ರೀಲ್ಸ್ ಮಾಡುವುದನ್ನು ವಿರೋಧಿಸಿದ್ದಕ್ಕೆ ಗಂಡನನ್ನೇ ಹತ್ಯೆ ಮಾಡಿದ ಪತ್ನಿ!

Posted by Vidyamaana on 2024-01-09 14:54:51 |

Share: | | | | |


ರೀಲ್ಸ್ ಮಾಡುವುದನ್ನು ವಿರೋಧಿಸಿದ್ದಕ್ಕೆ ಗಂಡನನ್ನೇ ಹತ್ಯೆ ಮಾಡಿದ ಪತ್ನಿ!

ಪಾಟ್ನಾ: ರೀಲ್ಸ್ ಮಾಡುವುದನ್ನು ವಿರೋಧಿಸಿದ್ದಕ್ಕೆ ಪತ್ನಿಯೊಬ್ಬಳು ಅಪ್ಪ- ಅಮ್ಮನೊಂದಿಗೆ ಸೇರಿ ಗಂಡನನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.ಈ ಘಟನೆ ಬಿಹಾರದ (Bihar) ಬೇಗುಸರಾಯ್‌ನಲ್ಲಿ (Begusarai) ನಡೆದಿದೆ. ಮಹೇಶ್ವರ್ ಕುಮಾರ್ ಸಾವನ್ನಪ್ಪಿದ ದುರ್ದೈವಿ. ಈ ವ್ಯಕ್ತಿ ಕೋಲ್ಕತ್ತಾದಲ್ಲಿ (Kolkata) ಕೂಲಿ ಕೆಲಸ ಮಾಡುತ್ತಿದ್ದರು.ಪತ್ನಿ ರಾಣಿಕುಮಾರಿಗೆ ರೀಲ್ಸ್ ಮಾಡುವ ಹುಚ್ಚಿತ್ತು. ಆದರೆ, ಪತಿ ಅದನ್ನು ವಿರೋಧಿಸಿದ್ದರು. ಹೀಗಾಗಿ ಕೋಪಗೊಂಡ ಪತ್ನಿಯು ತನ್ನ ತಂದೆ-ತಾಯಿಯೊಂದಿಗೆ ಸೇರಿಕೊಂಡು ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ.


ಫಫೌತ್ ಗ್ರಾಮದ ರಾಣಿ ಕುಮಾರಿ ಸುಮಾರು 7 ವರ್ಷಗಳ ಹಿಂದೆ ಮಹೇಶ್ವರ್ ನನ್ನ ಮದುವೆಯಾಗಿದ್ದರು. ಮಹೇಶ್ವರ್ ಕೆಲಸಕ್ಕೆ ಹೋಗುವ ವೇಳೆ ಫಫೌತ್ ಗ್ರಾಮದಲ್ಲಿನ ತನ್ನ ಅತ್ತೆಯ ಮನೆಗೆ ಹೋಗಿದ್ದರು ಎನ್ನಲಾಗಿದೆ. ಇನ್ಸ್ಟಾಗ್ರಾಂ ರೀಲ್ಸ್ ವಿಚಾರವಾಗಿ ಮಹೇಶ್ವರ್ ಮತ್ತು ರಾಣಿ ಕುಮಾರಿ ನಡುವೆ ವಾಗ್ವಾದ ನಡೆದಿತ್ತು. ಆಗ ಜಗಳ ವಿಕೋಪಕ್ಕೆ ಹೋಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತ್ನಿ ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಗಮನಿಸಿ : ಗ್ರಾಮಪಂಚಾಯಿತಿಗಳಲ್ಲಿ ಜನನ-ಮರಣ ನೋಂದಣಿ ಮಾಡುವ ಕುರಿತು ಇಲ್ಲಿದೆ ಮಾಹಿತಿ

Posted by Vidyamaana on 2024-07-02 06:38:49 |

Share: | | | | |


ಗಮನಿಸಿ : ಗ್ರಾಮಪಂಚಾಯಿತಿಗಳಲ್ಲಿ ಜನನ-ಮರಣ ನೋಂದಣಿ ಮಾಡುವ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸುವ ಪ್ರಕ್ರಿಯೆ (ಜುಲೈ 1 ರಿಂದ) ಜಾರಿಗೆ ಬಂದಿದೆ.

ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ.

ರೈ ಕೈ ಅಭ್ಯರ್ಥಿಯಾಗಲು ಮತ್ತು ಜಯಶಾಲಿಯಾಗಲು ದೇವರ ಮೊರೆ

Posted by Vidyamaana on 2023-04-03 11:48:56 |

Share: | | | | |


ರೈ ಕೈ ಅಭ್ಯರ್ಥಿಯಾಗಲು ಮತ್ತು ಜಯಶಾಲಿಯಾಗಲು ದೇವರ ಮೊರೆ

ಪುತ್ತೂರು: ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ರೈ ಎಸ್ಟೇಟ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಯವರಿಗೆ ಅವಕಾಶ ದೊರೆಯಬೇಕು ಹಾಗೂ ಅಶೋಕ್ ಕುಮಾರ್ ರೈಯವರು ಚುನಾವಣೆಯಲ್ಲಿ ಜಯಗಳಿಸಬೇಕು ಎಂದು ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

30 ಸಾವಿರ ಲೀಟರ್ ತೈಲ ರಸ್ತೆಗೆ ಚೆಲ್ಲಿದರೂ ಯಾವುದೇ ಅನಾಹುತ ಸಂಭವಿಸಿಲ್ಲ

Posted by Vidyamaana on 2023-10-20 11:41:36 |

Share: | | | | |


30 ಸಾವಿರ ಲೀಟರ್ ತೈಲ ರಸ್ತೆಗೆ ಚೆಲ್ಲಿದರೂ ಯಾವುದೇ ಅನಾಹುತ ಸಂಭವಿಸಿಲ್ಲ

ಪುತ್ತೂರು: ರಸ್ತೆಗೆ ಬಿದ್ದ ತುಣುಕು ಇಂಧನ ದೊಡ್ಡ ಅವಘಡಕ್ಕೆ ಕಾರಣವಾದ ನಿದರ್ಶನ ನಮ್ಮ ಮುಂದಿದೆ. ಅಂತಹದ್ದರಲ್ಲಿ ಟ್ಯಾಂಕರ್ ನಲ್ಲಿದ್ದ 30 ಸಾವಿರ ಲೀಟರ್ ನಷ್ಟು ಆಯಿಲ್ ರಸ್ತೆಗೆ ಚೆಲ್ಲಿದ್ದರೂ ಗುರುವಾರ ಯಾವುದೇ ವಾಹನ ಅಪಘಾತಕ್ಕೆ ಈಡಾಗಿಲ್ಲ, ಯಾರೊಬ್ಬರಿಗೂ ತೊಂದರೆಯಾಗಿಲ್ಲ.

ಆ ಒಂದು ಟ್ಯಾಂಕರ್ ಅಪಘಾತ – ಆ ಬಳಿಕ ನಡೆಯಿತೊಂದು ಬೃಹತ್ ರಸ್ತೆ ಶುದ್ಧತಾ ಕಾರ್ಯದ ವಿಡಿಯೋ ನೋಡಿ


ಹೌದಲ್ಲ, ಇದು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ನಿಮ್ಮ ಮನದಲ್ಲಿ ಈಗ ಮೂಡಿರಬಹುದು. ಈ ಎಲ್ಲಾ ತೆರೆಮರೆಯ ಕೆಲಸದ ಹಿಂದೆ ಕಾಣದ ಕೈಗಳಿತ್ತು, ಅಪಾರ ಪರಿಶ್ರಮವಿತ್ತು, ಜಾಣ್ಮೆಯ ಕಾರ್ಯವಿತ್ತು.

ಆ ಕಾಣದ ಕೈಗಳು ಯಾರೆಂಬ ಕುತೂಹಲವೇ!! ಅದು ಪೊಲೀಸ್ ಇಲಾಖೆ, ಅಗ್ನಿಶಾಮಕ, ಮೆಸ್ಕಾಂ ಹಾಗೂ  ಸ್ಥಳೀಯರು.

ರಸ್ತೆಗೆ ಬಿದ್ದಿದ್ದ ಆಯಿಲನ್ನು ಉಜ್ಜಿ ತೆಗೆದು, ಯಾರೊಬ್ಬರಿಗೂ ತೊಂದರೆ ಆಗದಂತೆ ನೋಡಿಕೊಳ್ಳಲಾಯಿತು. ಹೀಗೆ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾನೆ 4 ಗಂಟೆಯವರೆಗೆ ಶ್ರಮ ವಹಿಸಿ ದುಡಿದರು.


ಮೊದಲಿಗೆ ವಾಹನ ಸಂಚಾರವನ್ನು ಬದಲಿ ಮಾರ್ಗಕ್ಕೆ ಸ್ಥಳಾಂತರ ಮಾಡಲಾಯಿತು. ನಂತರ ರಸ್ತೆಗೆ ಚೆಲ್ಲಿದ್ದ ಆಯಿಲ್ ಮೇಲೆ ಮಣ್ಣನ್ನು ಹಾಕಲಾಯಿತು. ಬಳಿಕ ಅಗ್ನಿಶಾಮಕ ತಂಡ ಮಣ್ಣು ಸಹಿತ ಆಯಿಲನ್ನು ನೀರಿನ ಫ್ರೆಷರ್ ಹರಿಸುವ ಮೂಲಕ ಉಜ್ಜಿ ತೆಗೆದರು. ಆ ಶ್ರಮವನ್ನು ಊಹಿಸುವುದು ಕಷ್ಟವೇ ಸರಿ.

ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್ ಸ್ವತಃ ಸ್ಥಳದಲ್ಲಿದ್ದು ಮಾರ್ಗದರ್ಶನ ನೀಡಿದರು. ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್, ಟ್ರಾಫಿಕ್ ಎಸ್ಸೈ ಉದಯ ರವಿ, ಎಎಸ್ಸೈ ಚಕ್ರಪಾಣಿ, ಪೊಲೀಸ್ ಸಿಬ್ಬಂದಿಗಳಾದ ಪ್ರಶಾಂತ್, ನವೀನ್, ಲಕ್ಷ್ಮಣ್, ಸಲೀಂ, ಲೊಕೇಶ್, ಶ್ರೀಶೈಲ, ಹರೀಶ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಶಂಕರ್, ಅಗ್ನಿಶಾಮಕ ಚಾಲಕ ರಾಜೇಶ್, ಅಗ್ನಿಶಾಮಕರಾದ ಪ್ರಸಾದ್, ಸಿದ್ಧರೂಢ, ಮೆಸ್ಕಾಂ ಸಿಬ್ಬಂದಿಗಳಾದ ವಿಶ್ವನಾಥ್, ನೆಬಿಸಾಬ್ ನದಾಫ್, ಸ್ಥಳೀಯರಾದ ಹಾರೀಶ್ ಬಪ್ಪಳಿಗೆ, ಶಯನ್ ಟ್ರಾನ್ಸ್ಪೋರ್ಟ್ ಮಾಲಕ ತೌಸೀಫ್ ಶೇಕ್ ಪಡೀಲ್  ಹಾಗೂ ಇತರರು ಶ್ರಮಿಸಿ ಅಪಘಾತದ ಕುರುಹೂ ಇಲ್ಲದಂತಾಗಿಸಿದ್ದರು‌.

ಘಟನೆ:

ಮಂಗಳೂರುನಿಂದ ಸುಳ್ಯದ ಕಡೆಗೆ ಪಾಮ್‌ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರೊಂದು ಪಲ್ಟಿಯಾಗಿ ಪಾಮ್ ಆಯಿಲ್‌ ಸೋರಿಕೆ ರಸ್ತೆಯಲ್ಲೆಲ್ಲಾ ಹರಿದು ಹೋದ ಘಟನೆ ಅ.18ರ ರಾತ್ರಿ ಬೈಪಾಸ್‌ ರಸ್ತೆ ಉರ್ಲಂಡಿಯಲ್ಲಿ ನಡೆದಿತ್ತು. ಟ್ಯಾಂಕ‌ರ್ ಪಲ್ಟಿಯಾದ ಶಬ್ದ ಕೇಳುತ್ತಲೇ ಸ್ಥಳೀಯರು ಆಗಮಿಸಿ ಇತರರಿಗೆ ಮಾಹಿತಿ ನೀಡಿದ್ದರು. ಘಟನೆಯಿಂದ ವಿದ್ಯುತ್‌ ತಂತಿ ತುಂಡರಿಸಲ್ಪಟ್ಟಿದ್ದು, ಸಂಪರ್ಕ ಕಡಿತಗೊಂಡಿತ್ತು. ಕಾರೊಂದಕ್ಕೆ ಅಪಘಾತವಾಗುವುದನ್ನು ತಪ್ಪಿಸುವ ಯತ್ನದಲ್ಲಿ ಟ್ಯಾಂಕ‌ರ್ ಪಲ್ಟಿಯಾಗಿದೆ ಎನ್ನಲಾಗಿದೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿತ್ತು.

ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

Posted by Vidyamaana on 2023-12-24 12:17:35 |

Share: | | | | |


ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ ಕಲ್ಪಿಸಿದಂತೆ ಉನ್ನತ ಶಿಕ್ಷಣದೊಂದಿಗೆ ತಡೆರಹಿತ ಏಕೀಕರಣವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತನ್ನ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ(1 nation, 1 student ID) ಉಪಕ್ರಮವನ್ನು ಶೀಘ್ರದಲ್ಲೇ ಶಾಲೆಗಳಿಗೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಉಪಕ್ರಮದ ಅಡಿಯಲ್ಲಿ, 12-ಅಂಕಿಯ ವಿಶಿಷ್ಟ ID ಯೊಂದಿಗೆ ಸ್ವಯಂಚಾಲಿತ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ (APAAR) ಕಾರ್ಡ್ ಅನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತದೆ. ಕೇಂದ್ರವು ಉನ್ನತ ಶಿಕ್ಷಣದಲ್ಲಿ ಈ ಉಪಕ್ರಮವನ್ನು ಪ್ರಾರಂಭಿಸಿದೆ ಮತ್ತು ಇದೀಗ 22 ಮಿಲಿಯನ್ ವಿದ್ಯಾರ್ಥಿಗಳಿಗೆ APAAR ID ಗಳನ್ನು ನೀಡಲಾಗುತ್ತಿದೆ.


APAAR, ಆಧಾರ್-ದೃಢೀಕರಿಸಿದ ಐಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬ್ಯಾಂಕ್ ಆಫ್ ಕ್ರೆಡಿಟ್ (ABC) ಗೆ ಗೇಟ್‌ವೇ ಆಗಿದೆ. ಇದು ಕ್ರೆಡಿಟ್‌ಗಳ ಡಿಜಿಟಲ್ ರೆಪೊಸಿಟರಿಯಾಗಿದೆ. ಅಂಕಪಟ್ಟಿಗಳು ಮತ್ತು ಪ್ರಮಾಣಪತ್ರಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಬಹುದಾದ ಡಿಜಿಟಲ್ ಲಾಕರ್ ಡಿಜಿಲಾಕರ್ ಅನ್ನು ಪ್ರವೇಶಿಸಲು ಸಹ ಇದನ್ನು ಬಳಸಲಾಗುತ್ತದೆ. APAAR ಅಂತಿಮವಾಗಿ ಪೂರ್ವ ಪ್ರಾಥಮಿಕದಿಂದ PhD ವರೆಗಿನ ವಿದ್ಯಾರ್ಥಿಗಳಿಗೆ ಜೀವಮಾನದ ID ಆಗಿರುತ್ತದೆ.ಶಿಕ್ಷಣವು ರಾಜ್ಯದ ವಿಷಯವಾಗಿರುವುದರಿಂದ, NEP 2020 ರ ಅಡಿಯಲ್ಲಿ ರಾಜ್ಯಗಳು ಯಾವುದೇ ಉಪಕ್ರಮವನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಲ್ಲ.


ಶಾಲೆಗಳಲ್ಲಿ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ಉಪಕ್ರಮದ ಅನುಷ್ಠಾನದ ಕುರಿತು ವಿವಿಧ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಶಿಕ್ಷಣ ಸಚಿವಾಲಯದ ಅಡಿಯಲ್ಲಿರುವ ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ವೇದಿಕೆಯ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಹೇಳಿದರು.


"ಇದು ವಿದ್ಯಾರ್ಥಿಗಳು, ಶಾಲೆಗಳು ಮತ್ತು ಸಂಪೂರ್ಣ ಶಿಕ್ಷಣ ವ್ಯವಸ್ಥೆಗೆ ವಿಷಯಗಳನ್ನು ಸುಲಭಗೊಳಿಸುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪತ್ತೆಹಚ್ಚಲು ಇದು ಅವರಿಗೆ ಸಹಾಯ ಮಾಡುತ್ತದೆ. ಪೋಷಕರು ವರ್ಗಾವಣೆ ಮಾಡಬಹುದಾದ ಉದ್ಯೋಗದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಸಹಾಯ ಮಾಡುತ್ತದೆ. ಅವರು ತಮ್ಮ ಶಾಲೆಗಳನ್ನು ಅಧಿವೇಶನದ ಮಧ್ಯದಲ್ಲಿ ಬದಲಾಯಿಸಿದರೆ, ಇತರ ಶಾಲೆಗಳು ತಮ್ಮ ABC ಖಾತೆಗೆ ಅನನ್ಯ ID ಯನ್ನು ಬಳಸಿಕೊಂಡು ಲಾಗ್ ಇನ್ ಮಾಡುವ ಮೂಲಕ ತಮ್ಮ ಪ್ರಗತಿಯನ್ನು ಪ್ರವೇಶಿಸಬಹುದು ಎಂದು ಹೇಳಿದರು.


ಈ ವರ್ಷ ಕೇಂದ್ರ ಸರ್ಕಾರವು ರಾಷ್ಟ್ರೀಯ ಸಾಲ ಚೌಕಟ್ಟನ್ನು (NCrF) ಪರಿಚಯಿಸಿದೆ. ಅದರಲ್ಲಿ ಶಾಲೆ ಮತ್ತು ವೃತ್ತಿಪರ ಶಿಕ್ಷಣವನ್ನು ಸೇರಿಸಲಾಗಿದೆ. NCrF ಅಡಿಯಲ್ಲಿ, ವಿದ್ಯಾರ್ಥಿಗಳು ಶಾಲೆಯಿಂದಲೇ ಕ್ರೆಡಿಟ್‌ಗಳನ್ನು ಗಳಿಸುತ್ತಾರೆ. ಅದನ್ನು ಅವರ ABC ಖಾತೆಗಳಲ್ಲಿ ಸಂಗ್ರಹಿಸಲಾಗುತ್ತದೆ.



Leave a Comment: