ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಸುದ್ದಿಗಳು News

Posted by vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಸೋಮವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಆಕೆ ಶೌಚಾಲಯಕ್ಕೆ ಹೋಗಿದ್ದಾಳೆ. ಈ ಸಮಯದಲ್ಲಿ ಮಗು ಜನನವಾಗಿದೆ. ಮಗುವಿನ ಅಳು ಸದ್ದು ಕೇಳಿ ಕಕ್ಕಾಬಿಕ್ಕಿಯಾದ ಕಾಲೇಜಿನ ಉಪನ್ಯಾಸಕಿಯರು, ಸಿಬ್ಬಂದಿ ಸ್ಥಳಕ್ಕೆ ಓಡಿ ಹೋಗಿದ್ದಾರೆ. ತಕ್ಷಣವೇ ಸಮೀಪದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಉಪನ್ಯಾಸಕರು ಬಾಲಕಿಯ ಪೋಷಕರಿಗೆ ವಿಚಾರ ಮುಟ್ಟಿಸಿದ್ದು, ಅವರೂ ಆಸ್ಪತ್ರೆಗೆ ಬಂದಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 Share: | | | | |


ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

Posted by Vidyamaana on 2024-05-24 08:11:35 |

Share: | | | | |


ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

ಗದಗ: ಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶಪ್ಪ ಕಟ್ಟಿಮನಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.ನನ್ನ ಸಾವಿಗೆ ಅಳಿಯಂದಿರು ಕಾರಣ ಎಂದು ವಿಡಿಯೋ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುತ್ತೂರು: ಅ.7ರಂದು ಶೌರ್ಯ ಜಾಗರಣ ರಥಯಾತ್ರೆ ಕಿಲ್ಲೆ ಮೈದಾನದಲ್ಲಿ ಬೃಹತ್ ಹಿಂದೂ ಶೌರ್ಯ ಸಂಗಮ

Posted by Vidyamaana on 2023-10-06 15:45:31 |

Share: | | | | |


ಪುತ್ತೂರು: ಅ.7ರಂದು ಶೌರ್ಯ ಜಾಗರಣ ರಥಯಾತ್ರೆ ಕಿಲ್ಲೆ ಮೈದಾನದಲ್ಲಿ ಬೃಹತ್ ಹಿಂದೂ ಶೌರ್ಯ ಸಂಗಮ

ಪುತ್ತೂರು: ವಿಶ್ವ ಹಿಂದೂ ಪರಿಷತಿನ 60ನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಜಾಗರಣಾ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ ಅ. 7ರಂದು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಬಜರಂಗದಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಹಿಂದೂ ಧರ್ಮವನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. 60ನೇ ವರ್ಷದ ಷಷ್ಟ್ಯಬ್ಲಿ ಆಚರಣೆ ಅಂಗವಾಗಿ ಇದೀಗ ಬೃಹತ್ ಶೌರ್ಯ ಜಾಗರಣಾ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಸನಾತನ ಧರ್ಮವನ್ನು ಈ ಪವಿತ್ರ ಭರತಭೂಮಿಯಲ್ಲಿ ಸಂರಕ್ಷಿಸುವಲ್ಲಿ ಸಾವಿರಾರು ವೀರ ಪರಾಕ್ರಮಿಗಳು ತಮ್ಮ ತ್ಯಾಗ- ಬಲಿದಾನಗಳ ಮೂಲಕ ಹೋರಾಡಿದ್ದಾರೆ. ಸತಾನದ ಧರ್ಮವನ್ನು ಮುಂದಿನ ಪೀಳಿಗೆಗೆ ಉಳಿಸುವ ಬೆಳೆಸುವ ಪ್ರತಿಯೊಬ್ಬ ಹಿಂದೂವಿನ ಕರ್ತವ್ಯವಾಗಿದ್ದು, ಹಿಂದೂಗಳನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.


ಸೆ. 25ರಂದು ಚಿತ್ರದುರ್ಗದಿಂದ ರಥಯಾತ್ರೆ ಹೊರಟಿದ್ದು, ಅ. 7ರಂದು ಬೆಳಿಗ್ಗೆ ಸುಬ್ರಹ್ಮಣ್ಯ, ಕಡಬ, ಉಪ್ಪಿನಂಗಡಿ ಮೂಲಕ ಪುತ್ತೂರಿಗೆ ಸಂಜೆ ರಥಯಾತ್ರೆ ಆಗಮಿಸಲಿದೆ. ಈ ಯಾತ್ರೆಯನ್ನು ವಿವಿಧ ಕಡೆಗಳಲ್ಲಿ ಸ್ವಾಗತಿಸಲಾಗುವುದು. ಪುತ್ತೂರಿನಲ್ಲಿ ಪುಷ್ಪಾರ್ಚನೆ ಮೂಲಕ ಸ್ವಾಗತಿಸಲಾಗುವುದು. ಇದರ ಅಂಗವಾಗಿ ಸಂಜೆ 4.30ಕ್ಕೆ ಬೃಹತ್ ಶೋಭಾಯಾತ್ರೆಗೆ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಚಾಲನೆ ನೀಡಲಾಗುವುದು. ಬಳಿಕ ಮುಖ್ಯರಸ್ತೆಯಾಗಿ ರಥಯಾತ್ರೆ ಚೆಂಡೆ, ಶಂಖನಾದದ ಜತೆಗೆ ಯುವಕರು ಹಲವಾರು ವೀರ ಪರಾಕ್ರಮಿಗಳ ವೇಷವನ್ನು ಧರಿಸಿ ಜತೆಗೂಡಿ ಸಾಗಿಬಂದು ಕಿಲ್ಲೆ ಮೈದಾನದಲ್ಲಿ ಸಮಾಪನಗೊಳ್ಳಲಿದೆ. ಬಳಿಕ ಸಂಜೆ 5.30ಕ್ಕೆ ನಡೆಯುವ ಬೃಹತ್ ಹಿಂದೂ ಶೌರ್ಯ ಸಂಗಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜೈಷ್ಠ ಪ್ರಚಾರಕ್ ಸು.ರಾಮಣ್ಣ ಅವರು ದಿಕ್ಕೂಚಿ ಭಾಷಣ ಮಾಡುವರು. ವಿಹಿಂಪ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ ಅಧ್ಯಕ್ಷತೆ ವಹಿಸುವರು. ಬಜರಂಗಳದ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಉಪಸ್ಥಿತರಿರುವರು ಎಂದು ವಿವರಿಸಿದರು.


ಸೂಚಿಸಿದಲ್ಲಿ ವಾಹನ ಪಾರ್ಕಿಂಗ್ ಮಾಡುವಂತೆ ಸಂಘಟಕರ ಮನವಿ

 ಹಿಂದೂ ಶೌರ್ಯ ಸಂಗಮ, ಹಿಂದೂ ಶೌರ್ಯ ಜಾಗರಣಾ ರಥಯಾತ್ರೆಗೆ ಆಗಮಿಸುವವರಿಗೆ ವಾಹನ ಪಾರ್ಕ್ ಮಾಡಲು ಸ್ಥಳ ಸೂಚಿಸಲಾಗಿದೆ.


ಪಾಣಾಜೆ, ಕುಂಬ್ರ, ನರಿಮೊಗರು ಭಾಗದಿಂದ ಬರುವ ವಾಹನಗಳು ಮಹಾಲಿಂಗೇಶ್ವರ ದೇವಸ್ಥಾನ ಗದ್ದೆಯಲ್ಲಿ ಮತ್ತು ಉಪ್ಪಿನಂಗಡಿ, ಕಬಕ ಭಾಗದಿಂದ ಬರುವ ವಾಹನಗಳು ಹಾರಾಡಿ ರೈಲ್ವೇ ಸೇತುವೆ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಹಿಂದೂ ಶೌರ್ಯ ಜಾಗರಣ ರಥ ಯಾತ್ರೆ ಸ್ವಾಗತ ಸಮಿತಿ ವಿನಂತಿಸಿದೆ.


ವಿಶ್ವ ಹಿಂದೂ ಪರಿಷತ್ 60ನೇ ಷಷ್ಟ್ಯಬ್ದದ ಅಂಗವಾಗಿ ನಾಳೆ ಪುತ್ತೂರಿನಲ್ಲಿ ಹಿಂದೂ ಶೌರ್ಯ ಜಾಗರಣ ರಥಯಾತ್ರೆ ಮತ್ತು ಹಿಂದೂ ಶೌರ್ಯ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಹಿಂದು ಬಾಂಧವರು ಸಹಕರಿಸುವಂತೆ ಸ್ವಾಗತ ಸಮಿತಿ ವಿನಂತಿಸಿದೆ.


ಕಬಕ ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರೌಢಶಾಲಾ ಮಟ್ಟದ ಫುಟ್ಬಾಲ್ ಪಂದ್ಯ

Posted by Vidyamaana on 2023-09-12 11:08:54 |

Share: | | | | |


ಕಬಕ ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರೌಢಶಾಲಾ ಮಟ್ಟದ ಫುಟ್ಬಾಲ್ ಪಂದ್ಯ

ಪುತ್ತೂರು: ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟ ಸೆ. 9ರಂದು ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಯ್ಯ ಅವರ ನೇತೃತ್ವದಲ್ಲಿ ನಡೆಯಿತು. 

ಕಬಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಎಂ.ಪಿ. ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು. 

ಕಬಕ ಗ್ರಾಮ  ಪಂಚಾಯತ್ ಉಪಾಧ್ಯಕ್ಷ, ಸದಸ್ಯರು, ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ., ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ ಹಾಗೂ ಗಣ್ಯರು  ಉಪಸ್ಥಿತರಿದ್ದರು. 

ಶಾಲಾ ಮುಖ್ಯಗುರು ಸುರೇಖಾ ಸ್ವಾಗತಿಸಿ, ಸುಮಿತ್ರಾ ವಂದಿಸಿದರು. ಶಿಕ್ಷಕಿ ಶಾಂತ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಹಕರಿಸಿದರು.

ಸಿದ್ದರಾಮುಲ್ಲಾ ಖಾನ್ ಶಬ್ದ ಪ್ರಯೋಗ ಜನಾಂಗೀಯ ನಿಂದನೆ: ಅಮಳ ರಾಮಚಂದ್ರ

Posted by Vidyamaana on 2022-12-15 10:55:32 |

Share: | | | | |


ಸಿದ್ದರಾಮುಲ್ಲಾ ಖಾನ್ ಶಬ್ದ ಪ್ರಯೋಗ ಜನಾಂಗೀಯ ನಿಂದನೆ: ಅಮಳ ರಾಮಚಂದ್ರ

ಪುತ್ತೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿದ್ದರಾಮುಲ್ಲಾ ಖಾನ್ ಎಂದು ಕರೆದಿರುವ ಸಿ.ಟಿ. ರವಿ ಅವರ ಹೇಳಿಕೆ, ವೈಯಕ್ತಿಕ ದ್ವೇಷದ ಜೊತೆಗೆ ಜನಾಂಗೀಯ ನಿಂದನೆ ಮತ್ತು ದೇಶದ್ರೋಹದ ಹೇಳಿಕೆಯಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಆರೋಪಿಸಿದ್ದಾರೆ

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ಸಿದ್ದರಾಮಯ್ಯ ಅವರ ಜೊತೆಗೆ ಮುಸ್ಲಿಮರನ್ನು ಗುರಿ ಮಾಡುವುದು ಸಿ.ಟಿ. ರವಿ ಅವರ ಹೇಳಿಕೆಯ ಉದ್ದೇಶವಾಗಿದೆ. ಇಂತಹ ಹೇಳಿಕೆ ನೀಡಿ ಮುಸ್ಲಿಮರು ಮತ್ತು ಹಿಂದೂಗಳನ್ನು ರೊಚ್ಚಿಗೆಬ್ಬಿಸುವ ಕೆಲಸ ಮಾಡಿದ್ದಾರೆ. ಸಿಟಿ ರವಿ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಿಂದೂಗಳ ಹತ್ಯೆ ನಡೆದಿದೆ. ಅದಕ್ಕಾಗಿ ಅವರನ್ನು ಹಾಗೆ ಕರೆದಿದ್ದೇನೆ ಎಂಬ ಹೇಳಿಕೆಯನ್ನು ನೀಡಿ ಬಳಿತ ತನ್ನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದರು.

೨೦೧೭ರಲ್ಲಿ  ಬಿಜೆಪಿಯ ಶೋಭಾ ಕರಂದ್ಲಾಜೆ ಅವರು  ಹಿಂದೂ ಕಾರ್ಯಕರ್ತರ ಹತ್ಯೆಯ ಪಟ್ಟಿಯನ್ನು ಬಿಡುಗಡೆ ಮಾಡಿ ೨೬ ಹಿಂದೂಗಳ ಹತ್ಯೆ ನಡೆದಿದೆ ಎಂದು ಆರೋಪಿಸಿದ್ದರು. ೨ ತಿಂಗಳು ಕಳೆದ ಬಳಿಕ ಬಿಜೆಪಿಯು ೨೩ ಹಿಂದೂಗಳ ಹತ್ಯೆ ನಡೆದಿದೆ ಎಂದು ತಿಳಿಸಿತ್ತು. ಆದರೆ ಬಳಿಕದ ತನಿಖೆಯಿಂದ ಈ ಪೈಕಿ ಕೇವಲ ೮ ಮಂದಿಯ ಹತ್ಯೆ ಮಾತ್ರ ಕೋಮು ಹಿಂಸಾಚಾರದಲ್ಲಿ ನಡೆದಿದೆ, ಉಳಿದ ಹತ್ಯೆಗಳು ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ನಡೆದಿದೆ ಎಂಬ ಮಾಹಿತಿ  ಬಹಿರಂಗಗೊAಡಿತ್ತು. ಕೋಮು ಹಿಂಸಾಚಾರದ ಹತ್ಯೆಯಲ್ಲಿ ಎಸ್‌ಡಿಪಿಐ ಪಿಎಫ್‌ಐ ಹೆಸರು ಕೇಳಿ ಬಂದಿತ್ತು. ಹಿಂದೂಗಳ ಮರಣವಾದರೆ ಬಿಜೆಪಿಗೆ ಸಂತೋಷವಾಗುತ್ತದೆ. ಅದಕ್ಕೆ ಅವರು ಹೆಚ್ಚು ಸೇರಿಸಿಕೊಂಡು ಹೇಳಿಕೆ ನೀಡುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಎಸ್‌ಡಿಪಿಐನ ೮ ಮಂದಿ ಮುಸ್ಲಿಮರ ಹತ್ಯೆಯೂ ನಡೆದಿದ್ದು, ಬಿಜೆಪಿ ಮತ್ತು ಎಸ್‌ಡಿಪಿಐನ ಬೀದಿಕಾಳಗ ಮತ್ತು ಕೋಮು ಹಿಂಸಾಚಾರದಿAದ ಈ ಕೊಲೆಗಳು ನಡೆದಿದೆ. ಅದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರ ಹೆಸರು ಎಳೆದು ತರಲಾಗಿದೆ ಎಂದು ಆರೋಪಿಸಿದರು.

೨೦೦೫ರಿಂದ ೨೦೨೧ರ ತನಕ ರಾಜ್ಯದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಸೇರಿದಂತೆ ಒಟ್ಟು ೯೧ ಮಂದಿಯ ಹತ್ಯೆಯಾಗಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಸೇರಿದಂತೆ ಹಲವು ಮುಖ್ಯಮಂತ್ರಿಗಳಾಗಿದ್ದರು. ಕಳೆದ ೩ ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು ೧೯೩ ಕೋಮು ಗಲಭೆಗಳು ನಡೆದಿದೆ. ಈ ಪೈಕಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ತವರು ಜಿಲ್ಲೆಯಲ್ಲಿ ೫೩ ಕೋಮು ಗಲಭೆಗಳು ನಡೆದಿದೆ. ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಫಾಝಿಲ್ ಕೊಲೆಗಳು ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆಯಿತು. ಮೋದಿ ಪ್ರದಾನಿಯಾದ ಬಳಕ ಕಾಶ್ಮೀರ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಕೋಮು ಸಂಘರ್ಷ ನಡೆಯುತ್ತಿದೆ. ಇವರನ್ನು ಹೇಗೆ ಕರೆಯಬೇಕು ಎಂಬುದನ್ನು ಸಿಟಿ ರವಿ ಅವರು ಸ್ಪಷ್ಟಪಡಿಸಬೇಕು ಎಂದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕೋಮು ಶಕ್ತಿಗಳು ಸದೃಡವಾಗುತ್ತಿದೆ. ಅವರಿಗೆ ಪೊಲೀಸರ ಬಯವಿಲ್ಲ. ಬಿಜೆಪಿಗೆ ಗಲಭೆ ನಡೆದಷ್ಟು ಹೆಚ್ಚು ಸಂತೋಷವಾಗುತ್ತಿದೆ. ಅಲ್ಲಲ್ಲಿ ಕಾರ್ನರ್ ಕೋಮು ಗಲಭೆ ನಡೆಸಿ ಅಲ್ಪಸಂಖ್ಯಾತರ ಮತ್ತು ಬಹುಸಂಖ್ಯಾತರ ನಡುವೆ ದ್ರುವೀಕರಣ ಮಾಡುತ್ತಾ ಅದರಿಂದ ಲಾಭ ಪಡೆಯುತ್ತಿದ್ದಾರೆ. ಇದೀಗ ಚುನಾವಣೆ ಸಮೀಪಿಸುತ್ತಿದ್ದ ಇಂತಹ ಕೋಮು ಶಕ್ತಿಯನ್ನು ಮಣಿಸಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್, ಸಾಮಾಜಿಕ ಜಾಲತಾಣದ ಸಿದ್ದೀಕ್ ಸುಲ್ತಾನ್ ಉಪಸ್ಥಿತರಿದ್ದರು.

ಮಂಗಳೂರು- ಪುತ್ತೂರು: ವಿದ್ಯುತ್ ಚಾಲಿತ ರೈಲು ಪ್ರಾಯೋಗಿಕ ಓಡಾಟ

Posted by Vidyamaana on 2023-07-29 03:53:35 |

Share: | | | | |


ಮಂಗಳೂರು- ಪುತ್ತೂರು: ವಿದ್ಯುತ್ ಚಾಲಿತ ರೈಲು ಪ್ರಾಯೋಗಿಕ ಓಡಾಟ

ಮಂಗಳೂರು, ಜು.28: ನಗರ ಹೊರವಲಯದ ಪಡೀಲ್‌ನಿಂದ ಪುತ್ತೂರು ತನಕದ ವಿದ್ಯುದ್ದೀಕರಣಗೊಂಡ ರೈಲು ಮಾರ್ಗದಲ್ಲಿ ವಿದ್ಯುತ್ ಚಾಲಿತ ರೈಲು ಇಂಜಿನ್‌ನ ಪ್ರಾಯೋಗಿಕ ಓಡಾಟವು ಶುಕ್ರವಾರ ನಡೆಯಿತು.


ಮಧ್ಯಾಹ್ನ ಸುಮಾರು 2:30ಕ್ಕೆ ಪಡೀಲ್‌ನಿಂದ ಹೊರಟ ರೈಲು ಸಂಜೆ 4ಕ್ಕೆ ಪುತ್ತೂರು ತಲುಪಿತು. ಹಿಮ್ಮುಖ ದಿಕ್ಕಿನಲ್ಲಿ ಚಲಿಸುವಾಗ ವೇಗ ಪ್ರಯೋಗ ನಡೆಸಲಾಯಿತು ಎಂದು ಮೈಸೂರು ವಿಭಾಗದ ಹಿರಿಯ


ವಿಭಾಗೀಯ ಇಂಜಿನಿಯರ್ (ಇಲೆಕ್ನಿಕಲ್) ಸೌಂದ‌


ರಾಜನ್ ಮಾಹಿತಿ ನೀಡಿದ್ದಾರೆ.


ಈ ಮಾರ್ಗದಲ್ಲಿ ವಿದ್ಯುದ್ದೀಕರಣ ಕಾಮಗಾರಿಯು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಆರಂಭಿಸಲಾಗಿತ್ತು. ಪ್ರಾಯೋಗಿಕ ಓಡಾಟ ನಡೆಸಿದ ವಿದ್ಯುದ್ದೀಕರ ಗೊಂಡ ಮಾರ್ಗದಲ್ಲಿ ರೈಲುಗಳನ್ನು ಓಡಿಸಲು ಟ್ರ್ಯಾಕ್ ಫಿಟ್ ಪ್ರಮಾಣಪತ್ರ ಶೀಘ್ರ ದೊರೆಯಬಹುದು ಎಂದು ರಾಜನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆನೈರುತ್ಯ ರೈಲ್ವೆ ಪ್ರಿನ್ಸಿಪಲ್ ಚೀಫ್ ಇಲೆಕ್ಟಿಕಲ್ ಇಂಜಿನಿಯರ್ ಜೈಪಾಲ್ ಸಿಂಗ್ ಪ್ರಾಯೋಗಿಕ ಓಡಾಟ ಮತ್ತು ಪರಿಶೀಲನೆಯ ನೇತೃತ್ವ ವಹಿಸಿದ್ದರು.


*ಸುಬ್ರಹ್ಮಣ್ಯ ರಸ್ತೆ ನಿಲ್ದಾಣ, ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ (ನೆಟ್ಟಣ) ವಿಭಾಗದಲ್ಲಿ (48 ಮಾರ್ಗ ಕಿ.ಮೀ) ವಿದ್ಯುದ್ದೀಕರಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ವರ್ಷದ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ಗೆ ಕಾಮಗಾರಿ ಪೂರ್ಣಗೊಳ್ಳಬಹುದು. ಸುಬ್ರಹ್ಮಣ್ಯ ರಸ್ತೆ ಮತ್ತು ಹಾಸನ ನಡುವಿನ ಮಂಗಳೂರು-ಹಾಸನ ವಿಭಾಗದ ವಿದ್ಯುದ್ದೀಕರಣಕ್ಕೆ ಇನ್ನೂ ಸ್ವಲ್ಪಸಮಯ ಬೇಕಾಗಬಹುದು ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.


ಸುಬ್ರಹ್ಮಣ್ಯ ರಸ್ತೆ ನಿಲ್ದಾಣದವರೆಗೆ ವಿದ್ಯುದ್ದೀಕರಣ ಕಾರ್ಯವು ಪೂರ್ಣಗೊಂಡಾಗ, ಸ್ಥಳೀಯ ರೈಲುಗಳನ್ನು ಇಲೆಕ್ಟಿಕಲ್ ಲೊಕೊಗಳಿಂದ ನಿರ್ವಹಿಸಬಹುದಾಗಿದೆ.


ಮೈಸೂರು-ಹಾಸನ-ಮಂಗಳೂರು ಮಾರ್ಗವು 2021ರ ಜುಲೈನಲ್ಲಿ ಅರಸೀಕೆರೆ-ಹಾಸನ (47 ಕಿಮೀ) ಸಹಿತ ಮೈಸೂರು-ಹಾಸನ- ಮಂಗಳೂರು ಮಾರ್ಗವನ್ನು (300 ಕಿಮೀ) ವಿದ್ಯುದ್ದೀಕರಿಸುವ ಗುತ್ತಿಗೆಯನ್ನುಒದಗಿಸಲಾಗಿತ್ತು. ಜೂನ್ 2024ರೊಳಗೆ ಈ ಯೋಜನೆ ಪೂರ್ಣಗೊಳಿಸಲು2018ರ ಕೇಂದ್ರ ಬಜೆಟ್‌ನಲ್ಲಿ 315 ಕೋ.ರೂ ನಿಗದಿಪಡಿಸಲಾಗಿತ್ತು

ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ ಅತ್ತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Posted by Vidyamaana on 2023-05-30 11:49:38 |

Share: | | | | |


ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ ಅತ್ತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು :  ಕಾಂಗ್ರೇಸ್  ನೀಡಿದ್ದ  ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಬೆಳಗಾವಿ: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ.ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು.ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತಾರೆ.ಹೀಗಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ ಎಂದರು. ಇನ್ನು ನಾಳೆ ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಅನುಷ್ಠಾನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದರು. ಈ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಗೃಹಲಕ್ಷ್ಮೀ ಯೋಜನೆ ಸೊಸೆಗೆ ಸಿಗುವುದಿಲ್ಲ ಎನ್ನುವ ಸುಳಿವು ನೀಡಿದ್ದಾರೆ.



Leave a Comment: