ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಬಂಟ್ವಾಳ ; ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ತಾಯಿ, ಮಗಳನ್ನು ಬೆದರಿಸಿ ದರೋಡೆ, ಮುಸುಕುಧಾರಿಗಳ ಕೃತ್ಯ, ನಗ- ನಗದು ಲೂಟಿ

Posted by Vidyamaana on 2024-01-11 14:50:55 |

Share: | | | | |


ಬಂಟ್ವಾಳ ; ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ತಾಯಿ, ಮಗಳನ್ನು ಬೆದರಿಸಿ ದರೋಡೆ, ಮುಸುಕುಧಾರಿಗಳ ಕೃತ್ಯ, ನಗ- ನಗದು ಲೂಟಿ

ಬಂಟ್ವಾಳ, ಜ.11: ನಾಲ್ವರು ಮುಸುಕುಧಾರಿಗಳು  ಮನೆಯೊಂದಕ್ಕೆ ನುಗ್ಗಿ ತಾಯಿ, ಮಗಳಿಗೆ  ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ನಗ- ನಗದನ್ನು ದರೋಡೆಗೈದ ಘಟನೆ ಬೆಳ್ಳಂಬೆಳಗ್ಗೆ ವಗ್ಗದಲ್ಲಿ ನಡೆದಿದೆ. 


ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಫ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಫ್ಲೋರಿನ್ ಪಿಂಟೊ ಮತ್ತು ಅವರ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ತಿಳಿದಿದ್ದವರೇ ರಾಬರಿ ನಡೆಸಿದ್ದಾರೆ. ಕಪಾಟಿನಲ್ಲಿರಿಸಿದ್ದ ಸುಮಾರು ಅಂದಾಜು ರೂ 3,20,000/-ಮೌಲ್ಯದ ಒಟ್ಟು 82 ಗ್ರಾಂ ತೂಕದ ವಿವಿಧ ಮಾದರಿಯ ಚಿನ್ನಾಭರಣಗಳನ್ನು, ರೂ 11,000/- ಮೌಲ್ಯದ 2 ಮೊಬೈಲ್ ಫೋನ್ ಗಳನ್ನು ಸುಲಿಗೆ, 30 ಸಾವಿರ ರೂ. ನಗದು ಹಾಗೂ ಒಟ್ಟು ಮೂರುವರೆ ಲಕ್ಷಕ್ಕೂ ಅಧಿಕ ಮೌಲ್ಯದ ನಗ- ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗ್ಗೆ ಸುಮಾರು 6.30ರ ವೇಳೆಗೆ ಕಾಲಿಂಗ್ ಬೆಲ್ ಹಾಕಿದ್ದು ಬಾಗಿಲು ತೆಗದ ಕೂಡಲೇ ನಾಲ್ವರು ಮುಸುಕುಧಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ಚಿನ್ನ, ನಗದು ತೆಗೆದು ಕೊಡುವಂತೆ ಬೆದರಿಸಿದ್ದಾರೆ.


ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದು ಕಪಾಟು ಬೀಗದ ಕೀ ಪಡೆದಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ಆಸ್ಟಿನ್ ಪಿಂಟೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆ ಇದೇ ಪರಿಸರದಲ್ಲಿ ಅಂಗಡಿಯಿಂದ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ. ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

KSRTC ಬಸ್ ಟರ್ಮಿನಲ್ ಮುಂಭಾಗದ ಬ್ಯಾರಿಕೇಡ್ ತೆರವಿಗೆ ಒತ್ತಾಯ

Posted by Vidyamaana on 2023-08-03 02:16:51 |

Share: | | | | |


KSRTC ಬಸ್ ಟರ್ಮಿನಲ್ ಮುಂಭಾಗದ ಬ್ಯಾರಿಕೇಡ್ ತೆರವಿಗೆ ಒತ್ತಾಯ

ಪುತ್ತೂರು: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮುಂಭಾಗದಲ್ಲಿ ಇರಿಸಲಾಗಿರುವ ಬ್ಯಾರಿಕೇಡ್ ಅನ್ನು ತೆರವು ಮಾಡಿ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವಂತೆ ಪುತ್ತೂರು ವರ್ತಕ ಸಂಘದಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ನೀಡಲಾಯಿತು.

ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ಟರ್ಮಿನಲಿಗೆ ಕೋಟಿ – ಚೆನ್ನಯರ ಹೆಸರು ನಾಮಕರಣ ಮಾಡುವ ದಿನದಂದು ಬಸ್ ನಿಲ್ದಾಣ ಮುಂಭಾಗದಲ್ಲಿ ಬ್ಯಾರಿಕೇಡ್’ಗಳನ್ನು ಇಡಲಾಯಿತು. ಬಳಿಕ ಬ್ಯಾರಿಕೇಡ್’ಗಳು ತೆರವು ಮಾಡುವ ಕಾರ್ಯವನ್ನು ಮಾಡಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮಾತ್ರವಲ್ಲ, ಬಸ್ ನಿಲ್ದಾಣದ ಮುಂಭಾಗದಲ್ಲಿ ಸಂಚಾರಿ ದಟ್ಟಣೆಯೂ ಉಂಟಾಗುತ್ತಿದೆ ಎಂದು ತಿಳಿಸಿದ್ದಾರೆ.

ಬಸ್ ನಿಲ್ದಾಣಕ್ಕೆ ವಿಶೇಷ ಚೇತನರು ಆಗಮಿಸುತ್ತಾರೆ. ಬ್ಯಾರಿಕೇಡ್ ಅಳವಡಿಸಿದ ಕಾರಣದಿಂದ ವಾಹನಗಳಿಂದ ರಸ್ತೆಯಲ್ಲೇ ಅವರನ್ನು ಇಳಿಸುವ ಪ್ರಸಂಗ ಎದುರಾಗುತ್ತದೆ. ಬ್ಯಾರಿಕೇಡಿನಿಂದ ವ್ಹೀಲ್ ಚೇರಿನಲ್ಲಿ ಆಗಮಿಸುವುದು ಕಷ್ಟ ಸಾಧ್ಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಬಸ್ ನಿಲ್ದಾಣದ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿರುವ ಕಾರಣದಿಂದ, ಬಸ್ ನಿಲ್ದಾಣಕ್ಕೆ ಆಗಮಿಸುವ ವಾಹನಗಳು ರಸ್ತೆಯಲ್ಲೇ ಪ್ರಯಾಣಿಕರನ್ನು ಇಳಿಸಬೇಕಾದ ಪ್ರಸಂಗ ಎದುರಾಗಿದೆ. ವಾಹನಗಳು ರಸ್ತೆಯಲ್ಲೇ ನಿಂತಿರುವುದರಿಂದ, ರಸ್ತೆಯಲ್ಲಿ ಆಗಮಿಸುವ ಬಸ್ ಮೊದಲಾದ ವಾಹನಗಳು, ಪ್ರಯಾಣಿಕರು ತೆರಳುವವರೆಗೆ ಕಾಯಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಇದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತದೆ. ನಿತ್ಯ ಸಂಚಾರಿ ಕಿರಿಕಿರಿ ಎದುರಾಗಿದೆ. ಆದ್ದರಿಂದ ಇದರ ಬಗ್ಗೆ ಗಮನ ಹರಿಸಿ, ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡುವಂತೆ ಒತ್ತಾಯಿಸಲಾಗಿದೆ.ವರ್ತಕ ಸಂಘದ ಅಧ್ಯಕ್ಷ ಜಾನ್  ಕುಟಿನ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಪೈ ಕಾರ್ಯದರ್ಶಿ ಮನೋಜ್ ಟಿವಿ ಸದಸ್ಯರಾದ ಶ್ರೀಕಾಂತ್ ಕೊಳತಾಯ ಸದಾನಂದ ನಾಯ್ಕ್ ಸತೀಶ್ ರೈ ಕಟಾವು ಉಪಸ್ಥಿತರಿದ್ದರು

ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

Posted by Vidyamaana on 2023-07-10 16:41:37 |

Share: | | | | |


ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

ಚಿಕ್ಕಮಗಳೂರು: ಜಿನುಗು ಮಳೆಯ ನಡುವೆಯೇ ಕಾಫಿನಾಡಿನ ಪ್ರವಾಸಿ ತಾಣಗಳತ್ತ ಪ್ರತಿನಿತ್ಯವೂ ಸಾಗರೋಪಾದಿಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರವಾಸಿಗರು ರಸ್ತೆಗಳ ಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ಹುಚ್ಚಾಟ ಮೆರೆಯುತ್ತಿದ್ದಾರೆ.

ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರಿಗೆ ಹೇಳೋರಿಲ್ಲ-ಕೇಳೋರಿಲ್ಲ ಎಂಬಂತಾಗಿದ್ದು, ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಪ್ರವಾಸಿಗರು ಮುಂದಾಗಿದ್ದಾರೆ. ಈ ಭಾಗದಲ್ಲಿ ಮೊದಲೇ ಕಿರಿದಾದ ರಸ್ತೆಗಳು ಇದ್ದು, ವಾಹನ ಸವಾರರಿಗೆ ಇಕ್ಕಟ್ಟು ಆದಂತಾಗಿದೆ. ಇಂತಹದ್ದರಲ್ಲೂ ಕೆಲವರು ರಸ್ತೆ ಮಧ್ಯೆಯೆ ಕಾರ್ಗಳನ್ನು ನಿಲ್ಲಿಸಿ ಪುಂಡಾಟ ಮೆರೆಯುವ ಮೂಲಕ ಇನ್ನುಳಿದ ವಾಹನ ಸವಾರರಿಗೂ ಕಿರಿಕಿರಿ ಆಗುವಂತೆ ಮಾಡುತ್ತಿದ್ದಾರೆ. ದಟ್ಟ ಮಂಜು ಕವಿದ ದಾರಿಯಲ್ಲಿ ವಾಹನ ಪಾರ್ಕಿಂಗ್ ಮಾಡಿ ಡ್ಯಾನ್ಸ್ ಮಾಡುವ ಭರದಲ್ಲಿ ಇನ್ನುಳಿದ ವಾಹನಗಳಿಗೂ ಅಡ್ಡಲಾಗಿ ನಿಲ್ಲುತ್ತಿದ್ದಾರೆ.

ಇದರಿಂದ ಅಪಾಘಾತ, ಟ್ರಾಫಿಕ್ ಜಾಮ್ಗೂ ಆಹ್ವಾನ ನೀಡಿದಂತಾಗಿದೆ. ಅಷ್ಟೇ ಅಲ್ಲದೆ ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಕೂಡ ಕೆಲವು ಪ್ರವಾಸಿಗರು ಮುಂದಾಗುತ್ತಿದ್ದಾರೆ. ಈ ಹುಚ್ಚಾಟದಿಂದ ಬೇಸತ್ತ ಸ್ಥಳೀಯರು ಜಲಪಾತಗಳ ಬಳಿ ಪೊಲೀಸರು ಬೀಟ್ ಹಾಕುವಂತೆ ಮನವಿ ಮಾಡಿದ್ದಾರೆ.

ಗಮನಿಸಿ : ಉಚಿತ ಆಧಾರ್ ಕಾರ್ಡ್ ನವೀಕರಣಕ್ಕೆ ನಾಳೆಯೇ ಕೊನೆಯ ದಿನ, ಈ ರೀತಿ ಅಪ್ ಡೇಟ್ ಮಾಡಿಕೊಳ್ಳಿ

Posted by Vidyamaana on 2024-06-13 08:07:37 |

Share: | | | | |


ಗಮನಿಸಿ : ಉಚಿತ ಆಧಾರ್ ಕಾರ್ಡ್ ನವೀಕರಣಕ್ಕೆ ನಾಳೆಯೇ ಕೊನೆಯ ದಿನ, ಈ ರೀತಿ ಅಪ್ ಡೇಟ್ ಮಾಡಿಕೊಳ್ಳಿ

ನವದೆಹಲಿ : ಆಧಾರ್ ಕಾರ್ಡ್ ಉಚಿತ ಅಪ್‌ ಡೇಟ್‌ ಗೆ ನಾಳೆಯ ಒಂದೇ ದಿನ ಮಾತ್ರ ಬಾಕಿ ಇದ್ದು, ಆಧಾರ್‌ ಕಾರ್ಡ್‌ ಉಚಿತ ನವೀಕರಣಕ್ಕೆ ಜೂನ್ 14 ರವರೆಗೆ ಅವಕಾಶ ನೀಡಲಾಗಿದೆ. 

ಯುಐಡಿಎಐ ಕೆಲವು ವಿವರಗಳನ್ನು ಉಚಿತವಾಗಿ ಬದಲಾಯಿಸಲು ಅನುಮತಿಸಿದೆ, ಒಬ್ಬ ವ್ಯಕ್ತಿಯು ಅಪ್‌ ಡೇಟ್ ಆನ್ಲೈನ್ನಲ್ಲಿ ಮಾಡುತ್ತಿದ್ದರೆ, ಆಧಾರ್ ಕೇಂದ್ರಗಳಲ್ಲಿ ಆಫ್ಲೈನ್ನಲ್ಲಿ ಮಾಡಿದ ಯಾವುದೇ ನವೀಕರಣಕ್ಕಾಗಿ, ಶುಲ್ಕಗಳು ಅನ್ವಯವಾಗುತ್ತವೆ.

ಆಧಾರ್: ಏನನ್ನು ಉಚಿತವಾಗಿ ನವೀಕರಿಸಬಹುದು

ಮೈ ಆಧಾರ್ ಪೋರ್ಟಲ್ ಸಹಾಯದಿಂದ, ಆಧಾರ್ ವಿವರಗಳನ್ನು ನವೀಕರಿಸಬಹುದು, ಆಧಾರ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕವೂ ಇದನ್ನು ಮಾಡಬಹುದು. ಆಧಾರ್ನಲ್ಲಿ ಬದಲಾವಣೆಗಳನ್ನು ಮಾಡಲು ಗ್ರಾಹಕರ ಜನಸಂಖ್ಯಾ ಡೇಟಾ, ವಿಳಾಸ, ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ ಮುಂತಾದ ಪ್ರಮುಖ ಮಾಹಿತಿಯನ್ನು ಒದಗಿಸಬೇಕಾಗುತ್ತದೆ. ಆಧಾರ್ನ ಜನಸಂಖ್ಯಾ ಡೇಟಾವನ್ನು ಆನ್ಲೈನ್ನಲ್ಲಿ ನವೀಕರಿಸಬಹುದು, ಆದರೆ ಆಧಾರ್ ಕೇಂದ್ರಕ್ಕೆ ಹೋಗುವ ಮೂಲಕ ಮಾತ್ರ ಹಲವಾರು ಕೆಲಸಗಳನ್ನು ಮಾಡಬಹುದು. ಉದಾಹರಣೆಗೆ, ಐರಿಸ್ ಅಥವಾ ಬಯೋಮೆಟ್ರಿಕ್ ಡೇಟಾದ ನವೀಕರಣವು ಆಧಾರ್ ಕೇಂದ್ರದಲ್ಲಿ ಮಾತ್ರ ಸಾಧ್ಯ.‌

ಏಪ್ರಿಲ್ 26ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು,ಹೈಕೋರ್ಟ್ ನ್ಯಾಯಪೀಠಗಳಿಗೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಮಾಹಿತಿ

Posted by Vidyamaana on 2024-04-24 15:31:52 |

Share: | | | | |


ಏಪ್ರಿಲ್ 26ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು,ಹೈಕೋರ್ಟ್ ನ್ಯಾಯಪೀಠಗಳಿಗೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್ 24: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ (Lok Sabha elections Phase 2 polling) ಏಪ್ರಿಲ್ 26ರಂದು ನಡೆಯಲಿದೆ. ಕರ್ನಾಟಕವೂ ಸೇರಿದಂತೆ 13 ರಾಜ್ಯಗಳಲ್ಲಿ ಶುಕ್ರವಾರ ಮತದಾರರು ಮತ ಚಲಾಯಿಸಲಿದ್ದಾರೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳೂ ಒಳಗೊಂಡಿವೆ. ಮತದಾನದ ದಿನದಂದು ಮತದಾನವನ್ನು ಕಡ್ಡಾಯವಾಗಿ ಮಾಡಬೇಕೆಂಬ ಅಲಿಖಿತ ನಿಯಮ ಇದೆ. ಅದರಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಂದು ರಜೆ ಇರುತ್ತದೆ.

ಏಪ್ರಿಲ್ 26ರಂದು ಕರ್ನಾಟಕದಲ್ಲಿ ಯಾವುದಕ್ಕೆ ರಜೆ?

ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಏಪ್ರಿಲ್ 26, ಶುಕ್ರವಾರ ರಜೆ ಇರುತ್ತದೆ.

ಬ್ಯಾಂಕುಗಳಿಗೆ ರಜೆ

ಶಾಲೆ, ಕಾಲೇಜುಗಳಿಗೆ ರಜೆ

ಹೈಕೋರ್ಟ್ ನ್ಯಾಯಪೀಠಗಳಿಗೆ ರಜೆ

ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

Posted by Vidyamaana on 2024-03-18 16:52:23 |

Share: | | | | |


ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

ಪುತ್ತೂರು  ಕರ್ನಾಟಕ ಸರಕಾರವು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಮತ್ತು ಆನ್ಲೈನ್ ಮೂಲಕ ಲಿಖಿತ ಪರೀಕ್ಷಾ ತರಬೇತಿಯನ್ನು ಪ್ರಾರಂಭಿಸಲಿದ್ದು 18/03/2024 ಸೋಮವಾರದಿಂದ ಪ್ರವೇಶಾತಿ ಪ್ರಾರಂಭಗೊಳ್ಳಲಿದೆ.


ತರಬೇತಿ ಅವಧಿ ಎರಡುವರೆ ತಿಂಗಳು. ಕಳೆದ ಎರಡುವರೆ ವರ್ಷದಿಂದ ಪೊಲೀಸ್ ,ಅರಣ್ಯ ಇಲಾಖೆ, ಬ್ಯಾಂಕಿಂಗ್, ಕೆ.ಎಂ.ಎಫ್ ,ಶಿಕ್ಷಕರ ನೇಮಕಾತಿ ಸೇರಿದಂತೆ 116 ಎಷ್ಟು ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಸರಕಾರಿ ಹುದ್ದೆಗಳನ್ನು ಏರಿರುತ್ತಾರೆ. ಕರ್ನಾಟಕ ಸರಕಾರವು ಇತ್ತೀಚೆಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿರುವ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳಿಗೂ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭವಾಗಿದ್ದು, ಸದ್ಯ ಕರೆದಿರುವ ಪಿಡಿಓ ಹುದ್ದೆಗಳಿಗೆ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.


ನೇರ ತರಗತಿಗಳು – ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:00 ರವರೆಗೆ (ವಾರದ 5 ದಿನ) ಆನ್ಲೈನ್ ತರಗತಿಗಳು – ರಾತ್ರಿ 7:00 ರಿಂದ 8:00 ರವರೆಗೆ (ವಾರದ ಎಲ್ಲಾ ದಿನ) ಉದ್ಯೋಗಸ್ಥರಿಗೆ, ವಿದ್ಯಾರ್ಥಿಗಳಿಗೆ , ಗೃಹಿಣಿಯರಿಗಾಗಿ ಅನುಕೂಲವಾಗುವಂತೆ ನಡೆಯುತ್ತವೆ.


ಪಿಡಿಓ ನೇಮಕಾತಿಯ ಅರ್ಹತೆಗಳು :-

ವಿದ್ಯಾರ್ಹತೆ : ಯಾವುದೇ ಪದವಿ

ವೇತನ : 70,000 ವರೆಗೆ

ಹುದ್ದೆಗಳು :150

ವಯಸ್ಸಿನ ಮಿತಿ :18 ರಿಂದ 40 (ಸಾಮಾನ್ಯ 35 , ಒ.ಬಿ.ಸಿ 38 , SC,ST 40)

ನೇಮಕಾತಿ ಪ್ರಕ್ರಿಯೆ : ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ

ಅರ್ಜಿ ಪ್ರಾರಂಭ ದಿನಾಂಕ : 15/04/2024 ರಿಂದ 15/05/2024

ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ ,ಅಂಕಪಟ್ಟಿ ,ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ,ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ.


ತರಬೇತಿಗಾಗಿ ಪ್ರವೇಶಾತಿ ಪಡೆಯಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ :

ವಿದ್ಯಾಮಾತಾ ಅಕಾಡೆಮಿ – ಹಿಂದೂಸ್ತಾನ್ ಕಾಂಪ್ಲೆಕ್ಸ್,1 ನೇ ಮಹಡಿ ,ಎ.ಪಿ.ಎಂ.ಸಿ ರಸ್ತೆ ಪುತ್ತೂರು.

9620468869/ 9148935808

ಸುಳ್ಯ ಶಾಖೆ : TAPCMS ಬಿಲ್ಡಿಂಗ್ ,ಕಾರ್ ಸ್ಟ್ರೀಟ್

9448527606



Leave a Comment: