ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಮರ ಕಡಿಯುವಾಗ ಮೈ ಮೇಲೆ ಮರ ಬಿದ್ದು ರಾಮಣ್ಣ ಗೌಡ ಮೃತ್ಯು

Posted by Vidyamaana on 2023-09-23 15:19:22 |

Share: | | | | |


ಮರ ಕಡಿಯುವಾಗ ಮೈ ಮೇಲೆ ಮರ ಬಿದ್ದು ರಾಮಣ್ಣ ಗೌಡ ಮೃತ್ಯು

ಬೆಳ್ತಂಗಡಿ : ಮನೆಯ ಪಕ್ಕದಲ್ಲಿದ್ದ ಮರ ಕಡಿಯುವ ಸಂಧರ್ಭದಲ್ಲಿ ಆಕಸ್ಮಿಕವಾಗಿ ಮರ ವ್ಯಕ್ತಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆರಿಯದಲ್ಲಿ ಸ.23 ರಂದು ಬೆಳಗ್ಗೆ 10-30ಕ್ಕೆ ನಡೆದಿದೆ.


ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಂಜಲ್ಪಳಿಕೆ ನಿವಾಸಿ ರಾಮಣ್ಣ ಗೌಡ(58) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ.ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ಪ್ರಯೋಜವಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.


ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಅನಿಲ್ ಕುಮಾರ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮೃತದೇಹವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆ ಗೆ ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯ

Posted by Vidyamaana on 2024-01-31 16:02:09 |

Share: | | | | |


ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆ ಗೆ ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯ

ಜ್ಞಾನವಾಪಿ ಮಸೀದಿಯಲ್ಲಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಮಸೀದಿಯ ಕೆಳಗಿರುವ 10 ಮೊಹರು ನೆಲಮಾಳಿಗೆಗಳಲ್ಲಿ ಹಿಂದೂ ಪೂಜೆಗಳು ಇನ್ನು 7 ದಿನಗಳಲ್ಲಿ ಪ್ರಾರಂಭವಾಗಲಿವೆ. ಇದಕ್ಕೆ ಬೇಕಾದ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ.

“ಹಿಂದೂ ಕಡೆಯವರು ‘ವ್ಯಾಸ್ ಕಾ ತೆಖಾನಾ’ದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದ್ದಾರೆ. ಏಳು ದಿನಗಳಲ್ಲಿ ಪೂಜೆ ಪ್ರಾರಂಭವಾಗಲಿದೆ. ಎಲ್ಲರಿಗೂ ಪೂಜೆ ಮಾಡುವ ಹಕ್ಕಿದೆ. ಜಿಲ್ಲಾಡಳಿತ 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕಿದೆ” ಎಂದು ಹಿಂದೂ ಪರ ಅರ್ಜಿದಾರರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ಪುರಾತತ್ವ ಇಲಾಖೆ ಮಸೀದಿಯಲ್ಲಿ ಸರ್ವೆ ನಡೆಸಿತ್ತು. ಅದರ ವರದಿಯು ಕೆಲ ದಿನಗಳ ಹಿಂದೆಯಷ್ಟೇ ಬಿಡುಗಡೆಯಾಗಿತ್ತು.

ನಾನು ಬುತ್ತಿ ತಂದಿದ್ದೆನೆ ನಿಮಗೆ ಊಟ ರೆಡಿಯಾಗಿದೆ. ಮನೆಯೂಟ ಸವಿದ ಶಾಸಕರು

Posted by Vidyamaana on 2023-06-21 11:16:20 |

Share: | | | | |


ನಾನು ಬುತ್ತಿ ತಂದಿದ್ದೆನೆ ನಿಮಗೆ ಊಟ ರೆಡಿಯಾಗಿದೆ. ಮನೆಯೂಟ ಸವಿದ ಶಾಸಕರು

ಪುತ್ತೂರು: ‘ನಾನು ಬುತ್ತಿ ತಂದಿದ್ದೇನೆ ನಿಮಗೆ ಊಟ ರೆಡಿಯಾಗಿದೆ.. ಮೀನಿನ ಪರಿಮಳ ಮೂಗಿಗೆ ಹೊಡಿಯುತ್ತಿದೆ’ ಎಂದು ಹೇಳಿ ತನ್ನ ಮನೆಯಿಂದ ತಂದಿದ್ದ ಬುತ್ತಿ ಊಟವನ್ನು ಮಾಡುವ ಮೂಲಕ ಪುತ್ತೂರು ಶಾಸಕರಾದ ಅಶೋಕ್ ರೈ ಸಿಂಪ್ಲಿಸಿಟಿ ಮೆರೆದಿದ್ದಾರೆ. ಶಾಸಕರ ಈ ಸಿಂಪ್ಲಿಸಿಟಿಗೆ ಅಲ್ಲಿದ್ದ ಅಧಿಕಾರಿ ವರ್ಗದವರು ಬೆರಗಾಗಿದ್ದಾರೆ.

ಜೂ.20ರ ಮಂಗಳವಾರ ಪುತ್ತೂರಿನ ಪ್ರವಾಸಿ ಬಂಗ್ಲೆಯಲ್ಲಿ ಕೆಎಂಎಫ್ ಅಧಿಕಾರಿಗಳ ಸಭೆ ಆಯೋಜನೆಗೊಂಡಿತ್ತು. ಈ ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಸಹಿತ ಕೆಎಂಎಫ್ ಅಧಿಕಾರಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಭೆ ಮುಗಿದ ಕೂಡಲೇ ಶಾಸಕರು `ಊಟ ರೆಡಿ ಉಂಟ.. ಯಾರೂ ಊಟ ಮಾಡದೆ ಹೋಗಬೇಡಿ, ವೆಜ್ ಮತ್ತು ನಾನ್ ವೆಜ್ ಎರಡೂ ವ್ಯವಸ್ಥೆ ಮಾಡಿದ್ದೇನೆ. ನಾನು ಬುತ್ತಿ ತಂದಿದ್ದು ಅದನ್ನು ಊಟ ಮಾಡುತ್ತೇನೆ..’ ಎಂದು ಹೇಳಿ ಮನೆಯಿಂದ ತಂದಿದ್ದ ಬುತ್ತಿಯನ್ನು ತೆರೆದು ಊಟ ಮಾಡಲು ಆರಂಭಿಸಿದರು.

ಶಾಸಕರ ಬುತ್ತಿಯಲ್ಲಿ ಚಪಾತಿ, ತೊಂಡೆ ಕಾಯಿ ಪಲ್ಯ ಮತ್ತು ಮಾಂಜಿ ಮೀನು ತವಾ ಫ್ರೈ ಇತ್ತು. ಮಾಂಜಿ ತವಾ ಫ್ರೈಯನ್ನು ತನ್ನ ಸುತ್ತ ಕುಳಿತಿದ್ದವವರಿಗೆ ಹಂಚಿ ತಾನೂ ತಿಂದರು. ಶಾಸಕರು ಬುತ್ತಿಯಲ್ಲಿ ಊಟ ಮಾಡುತ್ತಿರುವಾಗ ಸುತ್ತ ಮುತ್ತ ಕುಳಿತವರು ಶಾಸಕರ ಮುಖವನ್ನೇ ನೋಡುತ್ತಿದ್ದ ದೃಶ್ಯ ವಿಶೇಷವಾಗಿತ್ತು.

SDPI ಅಭ್ಯರ್ಥಿ ಶಾಫಿ ಬೆಳ್ಳಾರೆ ಪರ ಮಹಿಳಾ ಘಟಕದಿಂದ ಮತಯಾಚನೆ

Posted by Vidyamaana on 2023-04-27 15:59:41 |

Share: | | | | |


SDPI ಅಭ್ಯರ್ಥಿ ಶಾಫಿ ಬೆಳ್ಳಾರೆ ಪರ ಮಹಿಳಾ ಘಟಕದಿಂದ ಮತಯಾಚನೆ

ಪುತ್ತೂರು: ಕೂರ್ನಡ್ಕ ಪರಿಸರದಲ್ಲಿ SDPI ಅಭ್ಯರ್ಥಿ ಶಾಫಿ ಬೆಳ್ಳಾರೆ ಪರವಾಗಿ ಮಹಿಳಾ ಘಟಕದಿಂದ ಮತಯಾಚನೆ ನಡೆಯಿತು.

ಪ್ರತಿ ಮನೆಮನೆಗೆ ತೆರಳಿದ ಮಹಿಳಾ ಘಟಕದ ಪ್ರಮುಖರು ಅಭ್ಯರ್ಥಿ ಪರ ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ಶಾಫಿ ಬೆಳ್ಳಾರೆ ನಿರಪರಾಧಿಯಾಗಿದ್ದು, ಸುಳ್ಳು ಆರೋಪದ ಮೇಲೆ ಜೈಲಿಗಟ್ಟಲಾಗಿದೆ. ಆದ್ದರಿಂದ ನೊಂದವರ ಧ್ವನಿಯಾಗಿ ಮತ ಚಲಾಯಿಸುವಂತೆ ವಿನಂತಿಸಿಕೊಂಡರು.

ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ ಸಾಧ್ಯತೆ : ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

Posted by Vidyamaana on 2023-08-29 11:09:32 |

Share: | | | | |


ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ ಸಾಧ್ಯತೆ : ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ.



ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಕಂಪನಿಗಳಿಗೆ ಸಬ್ಸಿಡಿ ಹಣ ಸಿಗಲಿದೆ.


ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್‌ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್‌ ಸಿಗಲಿದೆ.


ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

Posted by Vidyamaana on 2024-02-07 14:56:48 |

Share: | | | | |


ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.


ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದರು. ‘ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಿದು. ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.



Leave a Comment: