ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ನನ್ನ ಮತ ನನ್ನ ಹಕ್ಕು - ಅಬುದಾಬಿ To ಕುಂತೂರು

Posted by Vidyamaana on 2024-04-26 18:34:04 |

Share: | | | | |


ನನ್ನ ಮತ ನನ್ನ ಹಕ್ಕು - ಅಬುದಾಬಿ To ಕುಂತೂರು

ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ಮತದಾನ ಮಾಡುವಂತೆ ಚುನಾವಣಾ ಆಯೋಗ ಎಷ್ಟೇ ಜಾಗೃತಿ ಮೂಡಿಸಿದ್ರೂ ಜನರು ಮಾತ್ರ ಅದೆಷ್ಟು ನಿರ್ಲಕ್ಷ್ಯವಹಿಸಿದ್ದಾರೆಂದರೆ ಅವರು ತಮ್ಮೂರಲ್ಲೇ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುತ್ತಿಲ್ಲ. ಕೆಲವರು ಬಿಸಿಲು ಝಳಕ್ಕೆ ಹೆದರಿ ಮನೆಯಲ್ಲಿ ಉಳಿದರೆ ಇನ್ನು ಕೆಲವರು ಮತದಾನದ ದಿನದಂದು ರಜೆ ಸಿಕ್ಕಿದ್ದಕ್ಕೆ ಟ್ರಿಪ್ ಹೋಗುತ್ತಿರೋ ಜನರ ನಡುವೆ ಕುಂತೂರು ಎಮಿರೇಟ್ಸ್ ಕ್ಲಬ್ ಇದರ ಗೌರವಾಧ್ಯಕ್ಷ ಸತ್ತಾರ್ ಯು ಕೆ ಮತದಾನ ಮಾಡುವ ಸಲುವಾಗಿಯೇ 

ಉಡುಪಿ: ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿಯ ಪರೋಲ್ ಅರ್ಜಿ ತಿರಸ್ಕೃತ

Posted by Vidyamaana on 2024-02-10 21:50:12 |

Share: | | | | |


ಉಡುಪಿ: ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿಯ  ಪರೋಲ್ ಅರ್ಜಿ ತಿರಸ್ಕೃತ

ಉಡುಪಿ : ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿರುವ ಪರೋಲ್ ಅರ್ಜಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಿರಸ್ಕರಿಸಿ ಆದೇಶ ನೀಡಿದೆ.ಫೆಬ್ರವರಿ 1ರಂದು ನಿಧನರಾದ ತನ್ನ ಸಹೋದರ ನಿತಿನ್ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪರೋಲ್ ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಆರೋಪಿ ಫೆಬ್ರವರಿ 8ರಂದು ಅರ್ಜಿ ಸಲ್ಲಿಸಿದ್ದನು.ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗೆ ಪರೋಲ್ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅಲ್ಲದೆ ಆರೋಪಿಯ ಮೇಲೆ ದಾಳಿಯಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಆರೋಪಿ ತನ್ನ ಸಹೋದರ ಮೃತಪಟ್ಟ ಬಗ್ಗೆ ಯಾವುದೇ ಮರಣ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸದೆ ಇರುವುದರಿಂದ ಆತನಿಗೆ ಪರೋಲ್ ನೀಡಬಾರದು ಎಂದು ವಾದ ಮಂಡಿಸಿದ್ದರು. ಕೋರ್ಟ್ ಈ ವಾದವನ್ನು ಪುರಸ್ಕರಿಸಿತ್ತು.

ಅರ್ಧ ಗಂಟೆಯ ದೃಶ್ಯಕ್ಕೆ 50 ಕೋಟಿ ರೂಪಾಯಿ ಸುರಿದ ಪುಷ್ಪ 2 ನಿರ್ಮಾಪಕರು

Posted by Vidyamaana on 2024-02-29 16:05:29 |

Share: | | | | |


ಅರ್ಧ ಗಂಟೆಯ ದೃಶ್ಯಕ್ಕೆ 50 ಕೋಟಿ ರೂಪಾಯಿ ಸುರಿದ ಪುಷ್ಪ 2 ನಿರ್ಮಾಪಕರು

       ಕೆಲವು ವರದಿಗಳ ಪ್ರಕಾರ ಪುಷ್ಪ 2 ಚಿತ್ರದಲ್ಲಿ ಇಂಟರ್​ವಲ್​ಗೂ ಮೊದಲು 30 ನಿಮಿಷಗಳ ದೃಶ್ಯವೊಂದು ಬರಲಿದೆ. ಇದಕ್ಕಾಗಿ ಬರೋಬ್ಬರಿ 35 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಈ ದೃಶ್ಯ ಸೆರೆಹಿಡಿಯಲು ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ಪುಷ್ಪ 2 ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾನ ಅಂದುಕೊಂಡ ದಿನಾಂಕದಂದು ರಿಲೀಸ್ ಮಾಡಬೇಕು ಎಂಬ ನಿಟ್ಟಿನಲ್ಲಿ ನಿರ್ದೇಶಕ ಸುಕುಮಾರ್ ಅವರು ಕೆಲಸ ಮಾಡುತ್ತಿದ್ದಾರೆ. ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆ ಆಗಲಿದೆ. ಈಗ ಸಿನಿಮಾ ಬಗ್ಗೆ ಭರ್ಜರಿ ಅಪ್​​ಡೇಟ್ ಒಂದು ಸಿಕ್ಕಿದೆ. ಈ ಚಿತ್ರದ ಒಂದು ಪ್ರಮುಖ ದೃಶ್ಯಕ್ಕೆ ತಂಡ ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.


ಪುಷ್ಪ ಸಿನಿಮಾ 2021ರ ಡಿಸೆಂಬರ್ ತಿಂಗಳಲ್ಲಿ ರಿಲೀಸ್ ಆಗಿ ಬರೋಬ್ಬರಿ 300 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಹಿನ್ನೆಲೆಯಲ್ಲಿ ಎರಡನೇ ಪಾರ್ಟ್ ಬಗ್ಗೆ ಪ್ರೇಕ್ಷಕರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಕೂಡ ಒಳ್ಳೆಯ ಬಿಸ್ನೆಸ್ ಮಾಡುವ ಬಗ್ಗೆ ತಂಡಕ್ಕೆ ನಿರೀಕ್ಷೆ ಇದೆ. ಬಜೆಟ್ ವಿಚಾರದಲ್ಲಿ ಮೈತ್ರಿ ಮೂವೀ ಮೇಕರ್ಸ್ ಯಾವುದೇ ರಾಜಿ ಮಾಡಿಕೊಳ್ಳುತ್ತಿಲ್ಲ.ನಿರ್ದೇಶಕರು ಕೇಳಿದಷ್ಟು ಹಣವನ್ನು ಚೆಲ್ಲುತ್ತಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ.


ಕೆಲವು ವರದಿಗಳ ಪ್ರಕಾರ ಪುಷ್ಪ 2 ಸಿನಿಮಾದಲ್ಲಿ ಇಂಟರ್​ವಲ್​ಗೂ ಮೊದಲು 30 ನಿಮಿಷಗಳ ದೃಶ್ಯವೊಂದು ಬರಲಿದೆ. ಇದಕ್ಕಾಗಿ ಬರೋಬ್ಬರಿ 35 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಈ ದೃಶ್ಯ ಸೆರೆಹಿಡಿಯಲು ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ 30 ನಿಮಿಷಗಳು ಕಥೆಗೆ ಪ್ರಮುಖ ಟ್ವಿಸ್ಟ್ ನೀಡಲಿವೆಯಂತೆ.ಪುಷ್ಪ ಕಥೆ ತಿರುಪತಿಯಲ್ಲಿ ಸಾಗಿತ್ತು. ಈ ಕಾಡಿನಲ್ಲಿ ಸಿಗುವ ರಕ್ತಚಂದನದ ಕಳ್ಳ ಸಾಗಣೆ ಬಗ್ಗೆ ಹೇಳಲಾಗಿತ್ತು. ಎರಡನೇ ಭಾಗದಲ್ಲಿ ತಿರುಪತಿಯ ಗಂಗಮ್ಮ ಜಾತ್ರೆಯೂ ಇರಲಿದೆಯಂತೆ. ಮಧ್ಯಂತರಕ್ಕೂ ಮೊದಲ 30 ನಿಮಿಷಗಳ ಕಥೆ ಇದೇ ಜಾತ್ರೆಯಲ್ಲಿ ಸಾಗಲಿದೆ ಎನ್ನಲಾಗಿದೆ. ಇದಕ್ಕಾಗಿ ದೊಡ್ಡ ದೊಡ್ಡ ಸೆಟ್​ಗಳನ್ನು ಹಾಕಲಾಗಿದೆ.

ಏನೆಲ್ಲ ಇರಲಿದೆ?

30 ನಿಮಿಷಗಳಲ್ಲಿ ಒಂದು ಸಾಂಗ್, ಫೈಟ್ ಹಾಗೂ ಭಾವನಾತ್ಮಕ ದೃಶ್ಯಗಳು ಇರಲಿವೆ. ಈ ಚಿತ್ರದ ಬಜೆಟ್ 500 ಕೋಟಿ ರೂಪಾಯಿ ಎನ್ನಲಾಗಿದೆ. ಸದ್ಯದ ಮಟ್ಟಿಗೆ ಇವೆಲ್ಲವೂ ಅಂತೆ-ಕಂತೆ ಹಂತದಲ್ಲಿದೆ. ಸಿನಿಮಾ ನೋಡಿದ ಬಳಿಕವೇ ಇದಕ್ಕೆ ಉತ್ತರ ಸಿಗಲಿದೆ.


ಮೊದಲ ಭಾಗದಲ್ಲಿ


ಸಾಮಾನ್ಯ ಕೂಲಿಯವನಾಗಿದ್ದ ಪುಷ್ಪರಾಜ್ (ಅಲ್ಲು ಅರ್ಜುನ್) ರಕ್ತಚಂದನದ ಕಳ್ಳ ಸಾಗಣೆ ದಂಧೆ ಸೇರಿಕೊಳ್ಳುತ್ತಾನೆ. ಅಲ್ಲಿಂದ ಆತ ಬೆಳೆಯುತ್ತಾ ಹೋಗುತ್ತಾನೆ. ಮೊದಲ ಭಾಗದ ಕೊನೆಯಲ್ಲಿ ಆತ ಡಾನ್ ಆಗಿ ನಿಲ್ಲುತ್ತಾನೆ. ಸಂಪೂರ್ಣ ದಂಧೆಯನ್ನು ತನ್ನ ವಶಕ್ಕೆ ಪಡೆಯುತ್ತಾನೆ. ಎರಡನೇ ಭಾಗದಲ್ಲಿ ಆತ ಏನು ಮಾಡುತ್ತಾನೇ ಅನ್ನೋದೆ ಕಥೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಜೊತೆಗೆ ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ.

ಖಾಸಗಿ‌ ಬಸ್- ಬೈಕ್ ಡಿಕ್ಕಿ; ಗೋಳ್ತಮಜಲು ನಿವಾಸಿ ಲತೀಶ್ ಮೃತ್ಯು

Posted by Vidyamaana on 2023-07-30 15:16:23 |

Share: | | | | |


ಖಾಸಗಿ‌ ಬಸ್- ಬೈಕ್ ಡಿಕ್ಕಿ;  ಗೋಳ್ತಮಜಲು ನಿವಾಸಿ ಲತೀಶ್ ಮೃತ್ಯು

ಬಂಟ್ವಾಳ: ಖಾಸಗಿ‌ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ( 28) ಮೃತಪಟ್ಟ ಯುವಕ .


ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ, ಇಂದು ರವಿವಾರ ರಜಾದಿನವಾದ ಕಾರಣ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕ ದಲ್ಲಿ ಅಪಘಾತ ನಡೆದಿದೆ .


ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿ ಯಾಗಿದೆ.ಡಿಕ್ಕಿಯ ರಭಸಕ್ಕೆ ಲತೀಶ್ ಗೆ ಗಂಭೀರವಾಗಿ ಗಾಯವಾಗಿತ್ತು.ಈತನನ್ನು ಕೂಡಲೇ ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.


ಚಿಂತಾಜನಕ ಸ್ಥಿತಿಯಲ್ಲಿದ್ದ ಈತ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಆದರೆ ಗಂಭೀರ ಸ್ಥಿತಿಯಲ್ಲಿದ್ದ ಲತೀಶ್ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.


ಟ್ರಾಫಿಕ್ ಎಸ್. ಐ.ಸುತೇಶ್ ಸ್ಥಳಕ್ಕೆ ಬೇಟಿ ನೀಡಿದ್ದು,ಪ್ರಕರಣ ದಾಖಲಾಗಿದೆ.

ಬೈಕ್ ಸ್ಕಿಡ್ ನಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಸಾದ್ - ಚಿಕಿತ್ಸೆ ಫಲಕಾರಿಯಾಗದೆ ನಿಧನ

Posted by Vidyamaana on 2024-03-06 16:35:52 |

Share: | | | | |


ಬೈಕ್ ಸ್ಕಿಡ್ ನಲ್ಲಿ ಗಂಭೀರ   ಗಾಯಗೊಂಡಿದ್ದ ಪ್ರಸಾದ್ - ಚಿಕಿತ್ಸೆ ಫಲಕಾರಿಯಾಗದೆ ನಿಧನ

ಪುತ್ತೂರು : ಪರ್ಲಡ್ಕ ಬೈಪಾಸ್ ಬಳಿ ಫೆ.29 ರಂದು ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಮೆಕ್ಯಾನಿಕ್ ಶಾಂತಿಗೋಡಿನ ಯುವಕ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೆ ಮಾ 06 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಶಾಂತಿಗೋಡು ಗ್ರಾಮದ ಬೀರ್ಮಕಜೆ ನಿವಾಸಿ ಪುತ್ತೂರು ಬೈಪಾಸ್‌ ರಸ್ತೆಯ ಗ್ಯಾರೆಜೊಂದರಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ (27) ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದರು.

BREAKING: ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಖಾತೆ ತೆರೆದ ಬಿಜೆಪಿ: ಸೂರತ್ ನಲ್ಲಿ ಅಭ್ಯರ್ಥಿ ಅವಿರೋಧ ಆಯ್ಕೆ

Posted by Vidyamaana on 2024-04-22 16:11:35 |

Share: | | | | |


BREAKING: ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಖಾತೆ ತೆರೆದ ಬಿಜೆಪಿ: ಸೂರತ್ ನಲ್ಲಿ ಅಭ್ಯರ್ಥಿ ಅವಿರೋಧ ಆಯ್ಕೆ

ನವದೆಹಲಿ: ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆದ್ದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) 2024 ರ ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆಗೆ ಮುಂಚಿತವಾಗಿ ತನ್ನ ಖಾತೆಯನ್ನು ತೆರೆದಿದೆ.ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರ ನಾಮಪತ್ರಕ್ಕೆ ಸಹಿ ಹಾಕಿಲ್ಲ ಎಂದು ಅವರ ಪ್ರಸ್ತಾಪಕರು ಹೇಳಿದ ನಂತರ ಚುನಾವಣಾ ಆಯೋಗ ಅವರ ನಾಮಪತ್ರವನ್ನು ತಿರಸ್ಕರಿಸಿತ್ತು.ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಪಡ್ಸಾಲ ಅವರಿಗೂ ಇದೇ ಗತಿಯಾಗಿದ್ದು, ಈ ಪ್ರಮುಖ ನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಚುನಾವಣಾ ಸ್ಪರ್ಧೆಯಿಂದ ಪರಿಣಾಮಕಾರಿಯಾಗಿ ತೆಗೆದುಹಾಕಲಾಗಿದೆ.



Leave a Comment: