ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಅರಣ್ಯಾಧಿಕಾರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ; ಧರ್ಮಸ್ಥಳ ಠಾಣೆಯಲ್ಲಿ ಎಫ್ಐಆರ್ ದಾಖಲು

Posted by Vidyamaana on 2023-10-18 11:54:37 |

Share: | | | | |


ಅರಣ್ಯಾಧಿಕಾರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ; ಧರ್ಮಸ್ಥಳ ಠಾಣೆಯಲ್ಲಿ ಎಫ್ಐಆರ್ ದಾಖಲು

ಬೆಳ್ತಂಗಡಿ: ಅರಣ್ಯ ಭೂಮಿ ಅತಿಕ್ರಮಣ ತೆರವಿಗೆ ಬಂದಿದ್ದ ಅರಣ್ಯಾಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 


ಕರ್ತವ್ಯಕ್ಕೆ ಅಡ್ಡಿಪಡಿಸಿ ಸಾರ್ವಜನಿಕರ ಮಧ್ಯೆ ಸರ್ಕಾರಿ ಅಧಿಕಾರಿಯನ್ನು ನಿಂದಿಸಿದ್ದಾಗಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು ಅದರಂತೆ ಐಪಿಸಿ ಸೆಕ್ಷನ್ 143, 353, 504, 149 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಲೋಲಾಕ್ಷ ಯಾನೆ ಅನಂತು ಎಂಬವರು ಅರಣ್ಯ ಇಲಾಖೆಯ ಜಾಗ ಅತಿಕ್ರಮಿಸಿ ಮನೆ ಕಟ್ಟಲು ಮುಂದಾಗಿದ್ದ ಬಗ್ಗೆ ಮಂಗಳೂರು ಅರಣ್ಯ ವಿಭಾಗಕ್ಕೆ ದೂರು ಬಂದಿತ್ತು. ಅದರಂತೆ, ಅ.6 ರಂದು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿದ ಸಿಬಂದಿ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು.‌


ಆದರೆ ಮರುದಿನ ಸ್ಥಳಕ್ಕೆ ಬಂದ ಶಾಸಕ ಹರೀಶ್ ಪೂಂಜ ಹೈಡ್ರಾಮಾ ಮಾಡಿದ್ದು ಪ್ರತಿಭಟನೆ ನಡೆಸಿ ಸಾರ್ವಜನಿಕರ ಗಮನ ಸೆಳೆಯುವ ಯತ್ನ ಮಾಡಿದ್ದರು. ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅವಾಚ್ಯವಾಗಿ ನಿಂದಿಸಿದ್ದ ವಿಡಿಯೋಗಳು ಜಾಲತಾಣದಲ್ಲಿ ಹರುದಾಡಿದ್ದವು. ಈ ವಿಡಿಯೋವನ್ನು ಕರ್ನಾಟಕ ಕಾಂಗ್ರೆಸ್ ತನ್ನ ಜಾಲತಾಣದಲ್ಲಿ ಪ್ರಕಟಿಸಿ, ಬೆಳ್ತಂಗಡಿ ಬಿಜೆಪಿ ಶಾಸಕರ ನಡೆಯನ್ನು ಖಂಡಿಸಿತ್ತು. ಇದೇ ವೇಳೆ, ಅರಣ್ಯ ಇಲಾಖೆ ಭೂಮಿ ಒತ್ತುವರಿ ಮಾಡಿದ ಬಗ್ಗೆ 11 ಜನರ ವಿರುದ್ಧ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಧರ್ಮಸ್ಥಳ ಠಾಣೆಯಲ್ಲಿ ಅ.7ರಂದು ದೂರು ನೀಡಿದ್ದರು. ಇವೆಲ್ಲದರ ನಡುವೆಯೇ ಶಾಸಕ ಪೂಂಜ ಮತ್ತು ಬಿಜೆಪಿ ನಾಯಕರು ಸ್ಥಳದಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿ ಅರಣ್ಯ ಇಲಾಖೆಗೆ ಸಡ್ಡು ಹೊಡೆದಿದ್ದರು. 


ಅ.9ರಂದು ಮೇಲಧಿಕಾರಿಗಳ ಸೂಚನೆಯಂತೆ ಎಸಿಎಫ್ ಸುಬ್ಬಯ್ಯ ನಾಯ್ಕ್ ಮತ್ತು ಆರ್ ಎಫ್ ಓ ಜಯಪ್ರಕಾಶ್ ಸ್ಥಳಕ್ಕೆ ಪೊಲೀಸರ ಜೊತೆಗೆ ಬಂದು ಮನೆಯ ಶೆಡ್ ತೆರವುಗೊಳಿಸಲು ಮುಂದಾಗಿದ್ದರು. ಬಿಜೆಪಿ ಶಾಸಕ ಪೂಂಜ ಜೊತೆಗೆ ಬಂಟ್ವಾಳ, ಸುಳ್ಯದ ಶಾಸಕರು, ಎಂಎಲ್ಸಿ ಪ್ರತಾಪಸಿಂಹ ನಾಯಕ್ ಸ್ಥಳಕ್ಕೆ ಬಂದು ಹೋರಾಟಕ್ಕೆ ಕೈಜೋಡಿಸಿದ್ದು ಶೆಡ್ ತೆರವು ಮಾಡದಂತೆ ಜಟಾಪಟಿ ನಡೆಸಿದ್ದರು. ಇದೇ ವೇಳೆ, ಶಾಸಕ ಹರೀಶ್ ಪೂಂಜ, ಆರ್ ಎಫ್ ಓ ಜಯಪ್ರಕಾಶ್ ಅವರನ್ನು ಲೋಫರ್ ಎಂದು ಅವಾಚ್ಯವಾಗಿ ನಿಂದಿಸಿದ್ದ ಘಟನೆ ನಡೆದಿತ್ತು. ಈ ಬಗ್ಗೆ ಅ.13ರಂದು ಜಯಪ್ರಕಾಶ್ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸುಳ್ಯ- ಪಾಣತ್ತೂರು ರಸ್ತೆಯಲ್ಲಿ ಗುಡ್ಡ ಕುಸಿತ

Posted by Vidyamaana on 2023-07-06 11:57:42 |

Share: | | | | |


ಸುಳ್ಯ- ಪಾಣತ್ತೂರು ರಸ್ತೆಯಲ್ಲಿ ಗುಡ್ಡ ಕುಸಿತ

ಸುಳ್ಯ: ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಸುಳ್ಯದಿಂದ ಕೇರಳದ ಪಾಣತ್ತೂರು ಸಂಪರ್ಕಿಸುವ ಕಲ್ಲಪಳ್ಳಿಯಲ್ಲಿ ಗುಡ್ಡದಿಂದ ಮಣ್ಣು ಕುಸಿದು ರಸ್ತೆ ಸಂಚಾರದಲ್ಲಿ ತಡೆ ಉಂಟಾಗಿರುವುದಾಗಿ ಘಟನೆ ಜು ೬ ರಂದು ಸಂಭವಿಸಿದೆ.

 ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಇನ್ನೂ ಮಳೆ ಮುಂದುವರಿದರೆ ಗುಡ್ಡ ಇನ್ನಷ್ಟು ಕುಸಿಯುವ ಅಪಾಯ ಎದುರಾಗಿದ್ದು ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎಚ್ಚರಿಕೆಯಿಂದ ಪ್ರಯಾಣಿಸಬೇಕು ಎಂದು ತಿಳಿಸಲಾಗಿದೆ .

ಸುಳ್ಳು ಭರವಸೆಯನ್ನು ಕೊಡುವುದಿಲ್ಲ. ಕೊಟ್ಟ ಮಾತಿಗೆ ತಪ್ಪಲಾರೆ: ಅಶೋಕ್ ರೈ

Posted by Vidyamaana on 2023-05-04 11:51:21 |

Share: | | | | |


ಸುಳ್ಳು ಭರವಸೆಯನ್ನು ಕೊಡುವುದಿಲ್ಲ. ಕೊಟ್ಟ ಮಾತಿಗೆ ತಪ್ಪಲಾರೆ: ಅಶೋಕ್ ರೈ

ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು.

ಬಿಜೆಪಿ ಸೇರಿದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್

Posted by Vidyamaana on 2024-04-20 16:57:34 |

Share: | | | | |


ಬಿಜೆಪಿ ಸೇರಿದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ಬೆಂಗಳೂರು ಕಂಬಳ : ವಿರೋಧ ವ್ಯಕ್ತವಾಗುತ್ತಿದ್ದಂತೆ ಕಂಬಳದಿಂದ ಬ್ರಿಜ್ ಭೂಷಣ್ ಆಹ್ವಾನ ರದ್ದು

Posted by Vidyamaana on 2023-11-21 14:39:51 |

Share: | | | | |


ಬೆಂಗಳೂರು ಕಂಬಳ : ವಿರೋಧ ವ್ಯಕ್ತವಾಗುತ್ತಿದ್ದಂತೆ ಕಂಬಳದಿಂದ ಬ್ರಿಜ್ ಭೂಷಣ್ ಆಹ್ವಾನ ರದ್ದು

ಮಂಗಳೂರು, ನ.21: ಇದೇ ಮೊದಲ ಬಾರಿಗೆ ನಡೆಯಲಿರುವ ಕರಾವಳಿಯ ಪ್ರಸಿದ್ಧ ಕಂಬಳಕ್ಕೆ (Kambala)ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿದೆ. ಆದರೆ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ (Brij Bhushan Sharan Singh) ಅವರನ್ನು ಆಹ್ವಾನಿಸಲಾಗಿದ್ದು ಈ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕುಸ್ತಿ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರನ್ನು ಇಂತಹ ಕಾರ್ಯಕ್ರಮಕ್ಕೆ ಕರೆದಿರುವುದು ಎಷ್ಟು ಸರಿ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿದ್ದವು. ಸದ್ಯ ಈಗ ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಬ್ರಿಜ್ ಭೂಷಣ್ ಪತ್ರ ಬರೆದು ತಿಳಿಸಿದ್ದಾರೆ.ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾರತದ ಕುಸ್ತಿ ಫೆಡರೇಷನ್ ಮಾಜಿ ಆಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು. ಅತಿಥಿಯಾಗಿ ಆಹ್ವಾನ ನೀಡಲು ಕುಸ್ತಿ ಅಸೋಸಿಯೇಷನ್ ಹಾಗೂ ಸಿದ್ದಿ ಜನಾಂಗ ಮನವಿ ಮಾಡಿತ್ತು. ಮನವಿ ಮೇರೆಗೆ ಕಂಬಳ ಸಮಿತಿ ಆಹ್ವಾನ ನೀಡಿತ್ತು. ಈ ಸಂಬಂಧ ವಿರೋಧ ಹಿನ್ನಲೆ ಬ್ರಿಜ್ ಭೂಷಣ್ ಅವರಿಗೆ ಕರೆ ಮಾಡಿ ಕಂಬಳ ಸಮಿತಿ ವಿವರ ನೀಡಿದ್ದು ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಪತ್ರ ಬರೆದು ಬ್ರಿಜ್ ಭೂಷಣ್ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ಕಂಬಳ ಸಮಿತಿ ಮುಖ್ಯಸ್ಥ ಅಶೋಕ್ ರೈ  ಮಾಹಿತಿ‌ ನೀಡಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನಲೆ ಬ್ರಿಜ್ ಅವರ ಆಹ್ವಾನ ರದ್ದುಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಹರಿದ ಚಿಕ್ಕಪ್ಪನ ಕಾರು; ಪುಟ್ಟ ಕಂದಮ್ಮ ದುರ್ಮರಣ

Posted by Vidyamaana on 2023-11-13 17:19:15 |

Share: | | | | |


ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಹರಿದ ಚಿಕ್ಕಪ್ಪನ ಕಾರು; ಪುಟ್ಟ ಕಂದಮ್ಮ ದುರ್ಮರಣ

ಕಾಸರಗೋಡು: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಚಿಕ್ಕಪ್ಪನ ಕಾರು ಹರಿದು ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಕಾಸರಗೋಡಿನ ಸೋಂಕಾಲ್ ಎಂಬಲ್ಲಿ ಈ ದುರಂತ ಸಂಭವಿಸಿದೆ. ಮನೆಯ ಅಂಗಳದಲ್ಲಿ ಇಬ್ಬರು ಮಕ್ಕಳು ಆಟವಾಡುತ್ತಿದ್ದರು.ದೊಡ್ದ ಮಗು ಸೈಕಲ್ ನ್ನು ಬದಿಗೆ ಇಡುತ್ತಿತ್ತು. ಈ ವೇಳೆ ಚಿಕ್ಕಪ್ಪನ ಕಾರು ಆಗಮಿಸಿದೆ. ಪುಟ್ಟ ಮಗು ಅಂಗಳದಲ್ಲಿ ಕಾರನ್ನು ನೋಡುತ್ತಾ ನಿಂತಿದೆ. ಕಾರು ನಿಲ್ಲಿಸುತ್ತಿದ್ದ ಚಿಕ್ಕಪ್ಪನಿಗೆ ಮಗು ನಿಂತಿದ್ದು ಕಾಣಿಸಿಲ್ಲ.


ಈ ವೇಳೆ ಕಾರಿನ ಮುಂದಿನ ಚಕ್ರಕ್ಕೆ ಸಿಲುಕಿ ಮಗು ಸಾವನ್ನಪ್ಪಿದೆ. ಮಗು ಕಾರಿನಡಿ ಸಿಲುಕುತ್ತಿದ್ದಂತೆ ದೊಡ್ಡ ಮಗು ಮಗುವನ್ನು ಎಳೆದು ಎತ್ತಿಕೊಂಡಿದೆ. ಆದರೆ ಅಷ್ಟರಲ್ಲೇ ಮಗು ಉಸಿರು ಚಲ್ಲಿದೆ.


ಮನೆಯ ಸಿಸಿ ಕ್ಯಾಮರಾದಲ್ಲಿ ಈ ಹೃದಯ ವಿದ್ರಾವಕ ದೃಶ್ಯ ಸೆರೆಯಾಗಿದೆ.



Leave a Comment: