ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಫೆ 13 :ಕರ್ನಾಟಕ ಬ್ಯಾಂಕ್ ದರೋಡೆ ಹಿನ್ನೆಲೆ:ಎಸ್ ಪಿ ನೇತೃತ್ವದಲ್ಲಿ ಬ್ಯಾಂಕ್ ಸೊಸೈಟಿ ಸೆಕ್ಯೂರಿಟಿ ಆಡಿಟ್ ಆಫೀಸರ್ ಗಳ ಸಭೆ

Posted by Vidyamaana on 2024-02-12 16:01:10 |

Share: | | | | |


ಫೆ 13 :ಕರ್ನಾಟಕ ಬ್ಯಾಂಕ್ ದರೋಡೆ ಹಿನ್ನೆಲೆ:ಎಸ್ ಪಿ ನೇತೃತ್ವದಲ್ಲಿ  ಬ್ಯಾಂಕ್ ಸೊಸೈಟಿ ಸೆಕ್ಯೂರಿಟಿ ಆಡಿಟ್ ಆಫೀಸರ್ ಗಳ ಸಭೆ

ಮಂಗಳೂರು: ದ.ಕ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಎಲ್ಲ ಬ್ಯಾಂಕ್ ಗಳು, ಸಹಕಾರಿ ಬ್ಯಾಂಕ್ ಗಳ ಮ್ಯಾನೇಜರ್ ಹಾಗೂ ಸೆಕ್ಯೂರಿಟಿ ಆಡಿಟ್ ಆಫೀಸರ್ಸ್ (Security Audit officer) ಗಳಿಗೆ ಫೆ. 13ರಂದು ಬೆಳಿಗ್ಗೆ 10 ಗಂಟೆಗೆ ಸಭೆ ಕರೆಯಲಾಗಿದೆ.

ಎಸ್.ಪಿ. ರಿಷ್ಯಂತ್ ಅವರು ಸಭೆ ಕರೆದಿದ್ದು, ಬಿ.ಸಿ.ರೋಡ್ ಲಯನ್ಸ್ ಕ್ಲಬ್ ಹಾಲ್ ನಲ್ಲಿ ಸಭೆ ನಡೆಯಲಿದೆ. ಎಲ್ಲಾ ಬ್ಯಾಂಕ್ / ಸಹಕಾರಿ ಬ್ಯಾಂಕ್ ಗಳ ಮ್ಯಾನೇಜರ್ ಹಾಗೂ ಸೆಕ್ಯೂರಿಟಿ ಆಡಿಟ್ ಆಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

ಅಡ್ಯನಡ್ಕದಲ್ಲಿ ನಡೆದಿರುವ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಎಸ್ಪಿ ನೇತೃತ್ವದ ಸಭೆ ಮಹತ್ವ ಪಡೆದುಕೊಂಡಿದೆ.

ಫೆ.11ರಂದು ಕಡಬದಲ್ಲಿ ಸ್ಪಂದನಾ ಸಮುದಾಯ ಸಹಕಾರಿ ಸಂಘ ಶುಭಾರಂಭ

Posted by Vidyamaana on 2024-02-08 21:58:54 |

Share: | | | | |


ಫೆ.11ರಂದು ಕಡಬದಲ್ಲಿ ಸ್ಪಂದನಾ ಸಮುದಾಯ ಸಹಕಾರಿ ಸಂಘ ಶುಭಾರಂಭ

ಕಡಬ: ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಅನುಗ್ರಹ ಕಾಂಪ್ಲೆಕ್ಸ್‌ನಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಪ್ರವರ್ತಿತ ಸ್ಪಂದನಾ ಸಮುದಾಯ ಸಹಕಾರ ಸಂಘ ಶುಭಾರಂಭಗೊಳ್ಳಲಿದ್ದು, ಇದರ ಸಭಾ ಕಾರ್ಯಕ್ರಮವು ಕಡಬ ಒಕ್ಕಲಿಗ ಸಮುದಾಯ ಭವನದಲ್ಲಿ ಫೆ.11ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೇಶವ ಅಮೈ ಕಲಾಯಿಗುತ್ತು ಹೇಳಿದ್ದಾರೆ.


ಅವರು ಫೆ.8ರಂದು ಕಡಬದ ಸ್ಪಂದನಾ ಸಮುದಾಯ ಸಹಕಾರಿ ಸಂಘದ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇವಲ ಗೌಡ ಸಮುದಾಯದ ಏಳಿಗೆ ಅಲ್ಲದೆ ಇತರ ಸಮುದಾಯದೊಂದಿಗೆ ವ್ಯವಹಾರ, ಪರಸ್ಪರ ಸಹಕಾರ ಇಟ್ಟುಕೊಳ್ಳುವ ಇರಾದೆಯಿಂದ ಸಮುದಾಯದ ವತಿಯಿಂದ ಸಹಕಾರಿ ಸಂಘವನ್ನು ಸ್ಥಾಪಿಸಲು ಉದ್ದೇಶಿಸಿ 2023ರ ಸಪ್ಟೆಂಬರ್ ನಲ್ಲಿ ಕೆಲಸ ಪ್ರಾರಂಭಿಸಿ ಎರಡು ತಿಂಗಳಿನಲ್ಲಿ ಸಹಕಾರ ನಿಬಂಧನೆಗಳ ಪ್ರಕಾರ ಠೇವಣಿ ಹಾಗೂ ಸದಸ್ವತ್ವ ನೊಂದಾಣಿ ಕಾರ್ಯಗಳನ್ನು ಪೂರ್ಣಗೊಳಿಸಲಾಯಿತು. ಬಳಿಕ ಡಿ.26ರಂದು ಆದಿ ಚುಂಚನಗಿರಿ ಮಠದ ನಿರ್ಮಾಲನಂದನಾಥ ಸ್ವಾಮೀಜಿ ಹಾಗೂ ಕಾವೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿಯವರು ಉದ್ಘಾಟನೆ ನಡೆಸಿದ್ದರು. ತಾಲೂಕು ಕೇಂದ್ರ ಕಡಬದ ಜನರ ಆರ್ಥಿಕ ಸಬಲೀಕರಣ, ಸಮುದಾಯದ ಸ್ವಸಹಾಯ ಮತ್ತು ಸೇವೆಯ ಧೈಯವನ್ನು ಹೊಂದಿರುವ ಸಹಕಾರಿ ಸಂಘದ ಶುಭಾರಂಭ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು, ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್, ಕಡಬ ತಾಲೂಕು ತಹಶೀಲ್ದಾರ್ ಪ್ರಭಾಕರ ಖಜೂರೆ, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ ಇ, ಕರ್ನಾಟಕ ರಾಜ್ಯ ಕೆಪಿಸಿಸಿ ಸದಸ್ಯ ಕೃಷ್ಣಪ್ಪ, ಜಿಲ್ಲಾ ಪರಿಷತ್‌ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಶೆಟ್ಟಿ,ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಕಡಬ ಶಾಖೆಯ ವ್ಯವಸ್ಥಾಪಕಿ ಅಮಿತಾ ಶೆಟ್ಟಿ, ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ಕಡಬ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸಲಹಾ ಸಮಿತಿ ಅಧ್ಯಕ್ಷ ಸುದರ್ಶನ ಗೌಡ ಕೋಡಿಂಬಾಳ, ವೆಂಕಟರಮಣ ಕ್ರೆಡಿಟ್ ಕೋ ಅಪರೇಷವ್ ಸೊಸೈಟಿ ಅಧಕ್ಷ ಗಣೇಶ್ ಕೈಕುರೆ ಮೊದಲಾವರು ಉಪಸ್ಥಿತರಿರಲಿದ್ದಾರೆ ಎಂದು ಕೇಶವ ಅಮೈ ಹೇಳಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಚೇತನ್ ಆನೆಗುಂಡಿ, ಒಕ್ಕಲಿಗ ಗೌಡ ಸೇವಾ ಸಂಘದ ಉಪಾಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ, ನಿರ್ದೇಶಕರಾದ ನಾಗೇಶ್‌ ಕೆಡೆಂಜಿ, ಗೀತಾ ಅಮೈ ಕೇವಳ, ಗೋಪಾಲ ಎಣ್ಣೆಮಜಲು, ಹಿರಿಯಣ್ಣ ಗೌಡ ಎ. ಆಶಾ ತಿಮ್ಮಪ್ಪ ಗೌಡ, ಲೋಕೇಶ್ ಬಿ.ಎನ್.ಉಪಸ್ಥಿತರಿದ್ದರು.

ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!

Posted by Vidyamaana on 2023-12-25 12:55:35 |

Share: | | | | |


ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!

ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ.ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ನಿತ್ಯಾ (19) ಹೇಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ. ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿ ನಿತ್ಯಾ, ಹನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು.ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ನಿತ್ಯಾ ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲೇ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ ನೀಡಿದ್ದು,ನಿತ್ಯಾ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು :ಹೈವೇಯಲ್ಲಿರುವ ಅಪಾಯಕಾರಿ ತಿರುವು ತೆರವಿಗೆ ಶಾಸಕರ ಸೂಚನೆ

Posted by Vidyamaana on 2024-04-13 17:59:15 |

Share: | | | | |


ಪುತ್ತೂರು :ಹೈವೇಯಲ್ಲಿರುವ ಅಪಾಯಕಾರಿ ತಿರುವು ತೆರವಿಗೆ ಶಾಸಕರ ಸೂಚನೆ

ಮಾಣಿ - ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು ಮೃತಪಟ್ಟ ಘಟನೆಯೂ ನಡೆದಿತ್ತು. ಇಲ್ಲಿರುವ ಅಪಾಯಕಾರಿ ಧರೆಯನ್ನು ತೆರವು ಮಾಡಿ ವಾಹನ ಸಂಚಾರ ಗೋಚರಿಸುವಂತೆಬಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಶಾಸಕರಿಗೆ ಅನೇಕ ಮಂದಿ ಮನವಿ ಯನ್ನು ಮಾಡಿದ್ದರು.‌ಈ‌ಮನವಿಗೆ ಸ್ಪಂದಿಸಿದ ಶಾಸಕರು ಸ್ಥಳ ವೀಕ್ಷಣೆ ಮಾಡಿ ಅಫಾಯಕಾರಿ‌ಧರೆಯನ್ನು ತೆರವು‌ಮಾಡುವಂತೆ ರಾ. ಹೆದ್ದಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಕಿತ್ತೋಯ್ದ ಆರೋಪಿಗಳು

Posted by Vidyamaana on 2024-06-24 06:31:55 |

Share: | | | | |


ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಕಿತ್ತೋಯ್ದ ಆರೋಪಿಗಳು

ಮಡಿಕೇರಿ: ಕೋಟೆಬೆಟ್ಟ (Kotebetta) ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ (Tourists) ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ನಡೆದಿದೆ.ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ್ದರು.

ರಾಜ್ಯದಲ್ಲಿ ಜ.17 ರಿಂದ ಲಾರಿ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ!

Posted by Vidyamaana on 2024-01-15 22:09:59 |

Share: | | | | |


ರಾಜ್ಯದಲ್ಲಿ ಜ.17 ರಿಂದ ಲಾರಿ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ!

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಡರೇಷನ್‌ ಆಫ್‌ ಕರ್ನಾಟಕ ಲಾರಿ ಓನರ್ಸ್‌ ಅಸೋಸಿಯೇಷನ್‌ ಜ.17ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ (Lorry Drivers Protest) ಕರೆ ಕೊಟ್ಟಿದೆ. ಕೇಂದ್ರದ ಹಿಟ್‌ ಆ್ಯಂಡ್‌ ರನ್‌ ಕಾನೂನು (Hit And Run Law) ವಿರೋಧಿಸಿ ಲಾರಿ ಚಾಲಕರು ಪ್ರತಿಭಟನೆಗೆ (Lorry strike) ನಡೆಸಲಿದ್ದಾರೆ.ಉದ್ದೇಶಿತ ಕಾನೂನನ್ನು ಸಾರಿಗೆ ವಲಯದ ಪ್ರತಿನಿಧಿಗಳೊಂದಿಗೆ ಯಾವುದೇ ಸಮಲೋಚನೆಯಿಲ್ಲದೆ ಪರಿಚಯಿಸಲಾಗಿದೆ. ಪ್ರಸ್ತಾವಿತ ಕಾನೂನಿನಲ್ಲಿ ಕೆಲ ಲೋಪಗಳಿವೆ. ದೇಶದಲ್ಲಿ ಸಾರಿಗೆ ಉದ್ಯಮವು ಶೇ.27ರಷ್ಟು ಚಾಲಕರ ಕೊರತೆಯನ್ನು ಎದುರಿಸುತ್ತಿದೆ. ಹೀಗಿರುವಾಗ ಕಠಿಣ ಕಾನೂನಿನ ಭೀತಿಗೆ ಚಾಲಕ ವೃತ್ತಿಗೆ ಪ್ರವೇಶಿಸಲು ಹಿಂದೆಟ್ಟು ಹಾಕುತ್ತಿದ್ದಾರೆ. ಇದು ದೇಶದ ಪೂರೈಕೆ ಸರಪಳಿಯಲ್ಲಿ ಅಡಚಣೆಗಳಿಂದ ಕಾರಣವಾಗಬಹುದು.


10ವರ್ಷ ಜೈಲು ಶಿಕ್ಷೆ!

ಅಪಘಾತವಾದರೆ 10 ವರ್ಷಗಳ ಜೈಲು ಶಿಕ್ಷೆ ಸೇರಿದಂತೆ ಕಟ್ಟುನಿಟ್ಟಾದ ನಿಬಂಧನೆಗಳು ಚಾಲಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ದೇಶದಲ್ಲಿ ಅಪಘಾತ ತನಿಖಾ ಪ್ರೋಟೋಕಾಲ್‌ನ ಸಂಪೂರ್ಣ ಕೊರತೆ ಇದೆ. ಅಪಘಾತದ ಸಮಯದಲ್ಲಿ ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ಪರಿಗಣಿಸದೇ ಭಾರಿ ವಾಹನಗಳು ಎಂಬ ಕಾರಣಕ್ಕೆ ಸುಖಾಸುಮ್ಮನೆ ದೂಷಿಸಲಾಗುತ್ತಿದೆ ಎಂದು ಚಾಲಕರು ಆರೋಪಿಸಿದ್ದಾರೆ.

ಅನೇಕ ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳಲ್ಲಿ ಚಾಲಕರು ಪರಾರಿ ಆಗಿಬಿಡುತ್ತಾರೆ ಎಂಬ ಅಪವಾದವಿದೆ. ಆದರೆ ಬಹುತೇಕ ಸಂದರ್ಭದಲ್ಲಿ ಸ್ಥಳೀಯರ ಬೆದರಿಕೆ ಕಾರಣಕ್ಕೆ, ಜೀವ ಭಯಕ್ಕೆ ಚಾಲಕರು ಅಪಘಾತ ಸ್ಥಳದಿಂದ ಕಾಲ್ಕಿತ್ತಿರುತ್ತಾರೆ. ಬಳಿಕ ಸ್ವಇಚ್ಛೆಯಿಂದ ಪೊಲೀಸರಿಗೆ ಶರಣಾಗಿದ್ದಾರೆ. ಹೀಗಿರುವ ಕಾನೂನೂ ತೊಡಕುಗಳನ್ನು ಪರಿಹರಿಸದೇ ಕಠಿಣ ಕಾನೂನು ಮೊರೆ ಹೋಗುವುದು ಸಮಂಜಸವಲ್ಲ ಎಂದಿದ್ದಾರೆ.


ಸದ್ಯದ ಹೊಸ ಕಾನೂನು ಭಾರತ ಸಾರಿಗೆ ಕ್ಷೇತ್ರಕ್ಕೆ ವಿರುದ್ಧವಾಗಿದೆ. ದೇಶದಾದ್ಯಂತ ಟ್ರಕ್‌ ಚಾಲಕರ ಸಮುದಾಯದಲ್ಲಿ ಅಶಾಂತಿ ಮೂಡಿ ಉದ್ಯೋಗವನ್ನು ತ್ಯಜಿಸಬಹುದು. ಸಾರಿಗೆ ಉದ್ಯಮದ ದೃಷ್ಟಿಕೋನದಿಂದ ಗಣನೆಗೆ ತೆಗೆದುಕೊಂಡು ಹೊಸ ಕಾನೂನನ್ನು ಮರುಪರಿಶೀಲಿಸುವಂತೆ ಲಾರಿ ಮಾಲೀಕರು ಮನವಿಯನ್ನು ಮಾಡಿದ್ದಾರೆ.


ಹೊಸ ಕಾನೂನಿನಲ್ಲಿ ಏನಿದೆ?


ಅಪಘಾತ ನಡೆಸಿ ಪರಾರಿಯಾದ (ಹಿಟ್‌ ಆ್ಯಂಡ್‌ ರನ್‌) ಪ್ರಕರಣ, ಅತಿವೇಗದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ವ್ಯಕ್ತಿಯ ಸಾವಿಗೆ ಕಾರಣವಾದರೆ, ಯಾವುದೇ ಚಾಲಕ ಅಪಘಾತದ ಬಗ್ಗೆ ಅಧಿಕಾರಿಗಳಿಗೆ ವರದಿ ಮಾಡದೆ. ಸ್ಥಳದಿಂದ ಪಲಾಯನ ಮಾಡುವವರಿಗೆ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡವನ್ನು ವಿಧಿಸಲಾಗುತ್ತದೆ.


ಹಿಂದೆ  ಕಾನೂನು ಏನಿತ್ತು?


ಹಳೆಯ, ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ (IPC)ಯಲ್ಲಿ ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳಿಗೆ ನಿರ್ದಿಷ್ಟ ನಿಬಂಧನೆಯನ್ನು ಹೊಂದಿರಲಿಲ್ಲ. ಐಪಿಸಿಯ ಸೆಕ್ಷನ್ 304 ಎ ಅಡಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿತ್ತು. ಆ ಪ್ರಕಾರ ಉದ್ದೇಶಪೂರ್ವಕವಲ್ಲದ ಮತ್ತು ನಿರ್ಲಕ್ಷ್ಯದ ಕೃತ್ಯದಿಂದ ಸಾವಿಗೆ ಕಾರಣ ಎಂದು IPC ಯ ಸೆಕ್ಷನ್ 304 A ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿತ್ತು. ಅದರಡಿ 2 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ / ದಂಡ ವಿಧಿಸಬಹುದಿತ್ತು.


ಈಗ ವಿರೋಧ ಯಾಕೆ?

ದೊಡ್ಡ ವಾಹನ ಮತ್ತು ಚಿಕ್ಕ ವಾಹನಗಳ ನಡುವೆ ಅಪಘಾತ ನಡೆದಾಗ ತನಿಖೇ ನಡೆಸದೆ ಭಾರಿ ಗಾತ್ರದ ವಾಹನಗಳದ್ದೇ ತಪ್ಪೆಂದು ಕೇಸ್ ಹಾಕಬಹುದು. ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಚಾಲಕರಿಗೆ 10 ವರ್ಷದವರೆಗೆ ಜೈಲು ಶಿಕ್ಷೆ ಆಗಬಹುದು. ಜತೆಗೆ ದೊಡ್ಡ ಮೊತ್ತದ ದಂಡವನ್ನು ಕೂಡ ಕೋರ್ಟ್‌ ವಿಧಿಸಬಹುದು. ಹೀಗಾಗಿ ಲಾರಿ ಹಾಗೂ ಟ್ರಕ್ ಚಾಲಕರು ಆತಂಕಕ್ಕೆ ಒಳಗಾಗಿದ್ದಾರೆ.


ಅಪಘಾತ ನಡೆದಾಗ ಲಾರಿಯನ್ನು ವಶಕ್ಕೆ ಪಡೆಯಲಾಗುತ್ತದೆ. ನಂತರ ಇಂತಹ ಲಾರಿಗಳನ್ನು ಹಿಂದಿರುಗಿಸಲು ಸತಾಯಿಸುತ್ತಾರೆ. ಸಂಚಾರ ದಟ್ಟಣೆ ನೆಪವೊಡ್ಡಿ ಲಾರಿಗಳಿಗೆ ಹೆಚ್ಚು ದಂಡ ವಿಧಿಸಲಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರದ ಈ ಕಾನೂನಿಗೆ ಹೆದರಿ ಹೊಸಬರು ಈ ವೃತ್ತಿಗೆ ಬರಲು ಹಿಂದೇಟು ಹಾಕುತ್ತಾರೆ. ಆದ್ದರಿಂದ ಕೇಂದ್ರ ಸರ್ಕಾರ ಈ ನಿಯಮವನ್ನು ಸಡಿಲಗೊಳಿಸಬೇಕೆಂದು ಜ.17ವರೆಗೆ ಲಾರಿ ಸಂಘವು ಗಡುವು ನೀಡಿದೆ.


ಲಾರಿ ಚಾಲಕರ ಬೇಡಿಕೆಗಳೇನು?

-ಗಡಿ ಭಾಗದ ಸಾರಿಗೆ ಇಲಾಖೆ ಚೆಕ್‌ಪೋಸ್ಟ್ ತೆರವು.

-ಹೆಚ್ಚುವರಿ ಪ್ರೊಜೆಕ್ಷನ್ ದಂಡ ಇಳಿಕೆ.

-ಕಪ್ಪುಪಟ್ಟಿಯಲ್ಲಿರುವ ವಾಣಿಜ್ಯ ವಾಹನಗಳಿಗೆ ಎಫ್ಸಿ ಮತ್ತು ಪರ್ಮಿಟ್ ನವೀಕರಣಕ್ಕೆ ಅನುಮತಿ.

-ಅಪಘಾತದ ವೇಳೆ ಪೊಲೀಸರು ಚಾಲನಾ ಪತ್ರ ವಶಪಡಿಸಿಕೊಳ್ಳಬಾರದು.

-ಹೊರರಾಜ್ಯ ವಾಹನಗಳ ಅಪಘಾತವಾದಾಗ ಬಿಡುಗಡೆಗೆ ಸ್ಥಳೀಯ ವ್ಯಕ್ತಿಗಳ ಭದ್ರತೆ ಹಾಗೂ ಜಾಮೀನು ಕೇಳಬಾರದು.



Leave a Comment: