ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಚಂದ್ರಯಾನ 3 ಯಶಸ್ವಿ ಹಿನ್ನೆಲೆ:ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-08-24 07:40:44 |

Share: | | | | |


ಚಂದ್ರಯಾನ 3 ಯಶಸ್ವಿ ಹಿನ್ನೆಲೆ:ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದರು.


ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸಿಎಂ ಅಭಿನಂದಿಸಿದರು.


ಇಸ್ರೋ ಅಧ್ಯಕ್ಷ ಸೋಮನಾಥ್ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.


ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎಸ್.ಎನ್. ಬೋಸರಾಜು ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆಗಿದ್ದರು.


ನಿನ್ನೆ ರಾತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದು, ಶನಿವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಶಾಸಕರ ಇಂದಿನ ಕಾರ್ಯಕ್ರಮ ಜು 02

Posted by Vidyamaana on 2023-07-02 02:13:16 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 02

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 2 ರಂದು..

ಬೆಳಿಗ್ಗೆ 10 ಗಂಟೆಗೆ ಬನ್ನೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಳ ವೀಕ್ಷಣೆ

10.30 ಬನ್ನೂರು ಕುಂಟ್ಯಾನ ದೇವಳದ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆಯಲ್ಲಿ 

 ಭಾಗವಹಿಸಲಿದ್ದಾರೆ.

Video | ಔಟ್ ಮಾಡಲು ಈ ಆಟಗಾರರು ಪಟ್ಟ ಪಡಿಪಾಟಲು ಕಂಡು ಬಿದ್ದು ಬಿದ್ದು ನಗ್ತಿರಾ..!

Posted by Vidyamaana on 2024-05-30 06:24:38 |

Share: | | | | |


Video | ಔಟ್ ಮಾಡಲು ಈ ಆಟಗಾರರು ಪಟ್ಟ ಪಡಿಪಾಟಲು ಕಂಡು ಬಿದ್ದು ಬಿದ್ದು ನಗ್ತಿರಾ..!

ಆಟವಾಡುವ ಸಂದರ್ಭದಲ್ಲಿ ಹಲವು ತಮಾಷೆಯ ಘಟನೆಗಳು ನಡೆಯುತ್ತಿರುತ್ತವೆ. ಅಂತಹ ಕ್ಷಣಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮೂಲಕ ನೋಡುಗರಿಗೆ ಮನರಂಜನೆ ನೀಡುತ್ತವೆ. ಅಂತವುದೇ ಒಂದು ವಿಡಿಯೋ ಈಗ ಫುಲ್ ವೈರಲ್ ಆಗಿದೆ.ಮೈದಾನದಲ್ಲಿ ಹುಡುಗರು ಕ್ರಿಕೆಟ್ ಆಡುತ್ತಿರುತ್ತಾರೆ.

ಅವರೆಲ್ಲರೂ ಬಿಳಿ ಬಣ್ಣದ ಪ್ಯಾಂಟ್ – ಶರ್ಟ್ ಹಾಕಿದ್ದು ನೋಡಿದರೆ ಯಾವುದೋ ಪ್ರಮುಖ ಟೂರ್ನಮೆಂಟ್ ನಡೆಯುತ್ತಿರುವಂತೆ ಕಾಣುತ್ತದೆ.

ಮುಕ್ರಂಪಾಡಿ: ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆ

Posted by Vidyamaana on 2024-05-11 20:03:17 |

Share: | | | | |


ಮುಕ್ರಂಪಾಡಿ: ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆ

ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆಯು ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. ೧೦೦ ಪಲಿತಾಂಶ ಬಂದಿದ್ದು ಇದಕ್ಕಾಗಿ ಶಿಕ್ಷಕ ವೃಂದವನ್ನು , ಅಭಿವೃದ್ದಿ ಸಮಿತಿಯವರನ್ನು ಶಾಸಕರು ಅಭಿನಂದಿಸಿದರು. ಕಾಲೇಜಿನಲ್ಲಿ ಮೂಲಭೂತ ಸೌಕರ್ಯದ ಕೊರತೆ ಇರುವ ಬಗ್ಗೆ ಪ್ರಾಂಶುಪಾಲರು ಶಾಸಕರ ಗಮನಕ್ಕೆ ತಂದರು.

ಅಮೆರಿಕದಲ್ಲಿ ಕಾರು ಅಪಘಾತ: ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತ್ಯು

Posted by Vidyamaana on 2024-05-22 14:53:49 |

Share: | | | | |


ಅಮೆರಿಕದಲ್ಲಿ ಕಾರು ಅಪಘಾತ: ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತ್ಯು

ಜಾರ್ಜಿಯಾ: ಕಾರು ಅಪಘಾತದಲ್ಲಿ ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಮೆರಿಕಾದ ಜಾರ್ಜಿಯಾದಲ್ಲಿ ನಡೆದಿದೆ.

ಈ ಅಪಘಾತದಲ್ಲಿ ಆರ್ಯನ್ ಜೋಶಿ ಹಾಗೂ ಶ್ರೀಯಾ ಅವಸರಲ ಎಂಬ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಅನ್ವಿ ಶರ್ಮ ಎಂಬ ವಿದ್ಯಾರ್ಥಿಯು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ

ಜ.22ರಂದು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ: ಸರ್ಕಾರದ ನಡೆ ಸ್ವಾಗತಿಸಿದ ಬಿಜೆಪಿ

Posted by Vidyamaana on 2024-01-08 16:05:43 |

Share: | | | | |


ಜ.22ರಂದು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ: ಸರ್ಕಾರದ ನಡೆ ಸ್ವಾಗತಿಸಿದ ಬಿಜೆಪಿ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ. ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಟಿ ರವಿಯವರು, ಇದು ಉತ್ತಮ ನಿರ್ಧಾರ. ಇದಕ್ಕೆ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳುತ್ತೇವೆ. ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಬುದ್ಧಿ ಬಂದಿದೆ. ರಾಮ ಎಲ್ಲರಿಗೂ ಸೇರಿದವನಾಗಿದ್ದಾನೆ.


ರಾಮನನ್ನು ತೊರೆದಿದ್ದ ಕಾಂಗ್ರೆಸ್ ಇದೀಗ ರಾಮನ ಬಳಿಗೆ ಬರುತ್ತಿದೆ. ಇದು ಒಳ್ಳೆಯದು. ದೇಶಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ.ಕೇಂದ್ರ ಸಚಿವರ ಪ್ರಹ್ಲಾದ್ ಜೋಶಿಯವರು ಪ್ರತಿಕ್ರಿಯಿಸಿ, ಕಾಂಗ್ರೆಸ್ಗೆ ಇದೀಗ ಬುದ್ಧಿ ಬಂದಿದೆ ಎಂದು ತಿಳಿಸಿದ್ದಾರೆ.


ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥನಾರಾಯಣ್ ಅವರು ಮಾತನಾಡಿ, ಸರ್ಕಾರ ಉತ್ತಮ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದಾದ್ಯಂತ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ನಾನು ಪ್ರಶಂಸಿಸುತ್ತೇನೆಂದು ಹೇಳಿದ್ದಾರೆ.



Leave a Comment: