ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ರಾಜ್ಯದಲ್ಲಿ ಇನ್ಮುಂದೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ ; ನಿಯಮ ಮೀರಿದ್ರೆ ಭಾರೀ ದಂಡ

Posted by Vidyamaana on 2024-02-21 17:42:45 |

Share: | | | | |


ರಾಜ್ಯದಲ್ಲಿ ಇನ್ಮುಂದೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ ; ನಿಯಮ ಮೀರಿದ್ರೆ ಭಾರೀ ದಂಡ

ಬೆಂಗಳೂರು : ರಾಜ್ಯಾದ್ಯಂತ ಹುಕ್ಕಾ ಬಾರ್ಗಳನ್ನು ನಿಷೇಧಿಸುವ ಮಸೂದೆಯನ್ನ ರಾಜ್ಯ ಸರ್ಕಾರ ಬುಧವಾರ ಅಂಗೀಕರಿಸಿದ್ದು, ನಿಷೇಧವನ್ನ ಉಲ್ಲಂಘಿಸುವವರಿಗೆ ಒಂದರಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ಗಳವರೆಗೆ ದಂಡ ಸೇರಿದಂತೆ ಕಠಿಣ ದಂಡ ವಿಧಿಸಲಾಗುವುದು.ಅಧಿಸೂಚನೆಯ ಪ್ರಕಾರ, ತನ್ನ ನಾಗರಿಕರ ಆರೋಗ್ಯವನ್ನು ರಕ್ಷಿಸಲು ಮತ್ತು ತಂಬಾಕು ಸಂಬಂಧಿತ ರೋಗಗಳ ಉಬ್ಬರವಿಳಿತವನ್ನ ತಡೆಗಟ್ಟುವ ಸಲುವಾಗಿ ಅಸ್ತಿತ್ವದಲ್ಲಿರುವ ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ (COTPA)ಗೆ ತಿದ್ದುಪಡಿ ಮಾಡಿದ ನಂತರ ನಿಷೇಧವನ್ನ ವಿಧಿಸಲಾಗಿದೆ.


ಹೆಚ್ಚುವರಿಯಾಗಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನ ಸಹ ರಾಜ್ಯವು ನಿಷೇಧಿಸಿದೆ.


ತಿದ್ದುಪಡಿ ಮಾಡಿದ ಮಸೂದೆಯು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯ ಮೇಲೆ ಸಂಪೂರ್ಣ ನಿಷೇಧವನ್ನು ಜಾರಿಗೊಳಿಸುತ್ತದೆ, ಹೊಗೆ ಮುಕ್ತ ವಾತಾವರಣವನ್ನ ಸೃಷ್ಟಿಸುವ ಬದ್ಧತೆಯನ್ನ ಒತ್ತಿಹೇಳುತ್ತದೆ.ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನ ನಿಷೇಧಿಸಿದೆ. ನಿಯಮವನ್ನು ಉಲ್ಲಂಘಿಸಿದರೆ 1,000 ರೂ.ಗಳ ದಂಡ ವಿಧಿಸಬಹುದು.

ಉಪ್ಪಿನಂಗಡಿ ಕಂಬಳೋತ್ಸವದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಭ್ಯರ್ಥಿ

Posted by Vidyamaana on 2024-03-31 14:05:26 |

Share: | | | | |


ಉಪ್ಪಿನಂಗಡಿ ಕಂಬಳೋತ್ಸವದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಭ್ಯರ್ಥಿ

ಉಪ್ಪಿನಂಗಡಿ: ಇಲ್ಲಿನ ವಿಜಯ - ವಿಕ್ರಮ ಜೋಡುಕರೆ ಕಂಬಳೋತ್ಸವದಲ್ಲಿ ಪಾಲ್ಗೊಂಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು, ಕಲಹ ಕನ್ನಡ ಸಿನಿಮಾದ ಪೋಸ್ಟರ್ ಅನಾವರಣಗೊಳಿಸಿದರು.

ಪುತ್ತೂರು ಶಾಸಕ, ಉಪ್ಪಿನಂಗಡಿ ವಿಜಯ - ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರೂ ಆಗಿರುವ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು.

ಕಂಬಳಕ್ಕೆ ತನ್ನದೇ ಆದ ವಿಶೇಷ ಕೊಡುಗೆ ನೀಡಿರುವ ವಲೇರಿಯನ್ ಡಯಾಸ್ (ಅಪ್ಪಣ್ಣ) ಅವರನ್ನು ಇದೇ ಸಂದರ್ಭ ಸನ್ಮಾನಿಸಿ, ಗೌರವಿಸಲಾಯಿತು.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 4

Posted by Vidyamaana on 2023-09-03 22:55:04 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 4

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 4 ರಂದು


ಬೆಳಿಗ್ಗೆ 11 ಗಂಟೆಗೆ ಪಶು ಆಸ್ಪತ್ರೆಯಲ್ಲಿ ಕೌ ಮ್ಯಾಟ್ ವಿತರಣೆ

12 ಗಂಟೆಗೆ ಉಪ್ಪಳಿಗೆ ಶಾಲೆಯಲ್ಲಿ ಆಂಗ್ಲ‌ಮಾಧ್ಯಮ ಎಲ್ ಕೆ ಜಿ ತರಗತಿ ಉದ್ಘಾಟನೆ


ಅಪರಾಹ್ನ ಮಂಗಳೂರಿನಲ್ಲಿ‌ಸಭೆಯಲ್ಲಿ  ಭಾಗವಹಿಸಲಿದ್ದಾರೆ

ಮೈಸೂರು ರಾಜ್ಯ ಕರ್ನಾಟಕ ವಾದದ್ದು ಹೇಗೆ ? ಇಲ್ಲಿದೆ ಕನ್ನಡ ರಾಜ್ಯೋತ್ಸವ ದ ಸಂಪೂರ್ಣ ಇತಿಹಾಸ

Posted by Vidyamaana on 2023-11-01 07:46:21 |

Share: | | | | |


ಮೈಸೂರು ರಾಜ್ಯ ಕರ್ನಾಟಕ ವಾದದ್ದು ಹೇಗೆ ? ಇಲ್ಲಿದೆ ಕನ್ನಡ ರಾಜ್ಯೋತ್ಸವ ದ ಸಂಪೂರ್ಣ ಇತಿಹಾಸ

ಬೆಂಗಳೂರು : ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956 ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.ರಾ ಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಇತಿಹಾಸ:

ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.ಕನ್ನಡ ಧ್ವಜ


1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.


ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು “ಮೈಸೂರು” ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ 1, 1973 ರಂದು “ಕರ್ನಾಟಕ” ಎಂದು ಬದಲಾಯಿತು.ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ (“ಜಯ ಭಾರತ ಜನನಿಯ ತನುಜಾತೆ”)ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.


ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ.


ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.

ಕನ್ನಡಾಂಬೆಗೆ ನುಡಿ ನಮನ:

ಕರ್ನಾಟಕಕ್ಕೆ 50 ರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷವಾಗಿ ಈ ನಾಡಿನ ಹೆಸರಾಂತ 05 ಕವಿಗಳು ರಚಿಸಿರುವ ಗೀತೆಗಳನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.ಇದರನ್ವಯ ಹುಯಿಲಗೋಳ ನಾರಾಯಣರಾಯರು ರಚಿಸಿರುವ "ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು", ಕುವೆಂಪು ರಚಿತ "ಎಲ್ಲಾದರು ಇರು ಎಂತಾದರು ಇರು", ದ.ರಾ.ಬೇಂದ್ರ ರಚಿಸಿರುವ "ಒಂದೇ ಒಂದೇ ಕರ್ನಾಟಕ ಒಂದೇ", ಸಿದ್ದಯ್ಯ ಪುರಾಣಿಕರು ರಚಿಸಿರುವ "ಹೊತ್ತಿತೋ ಹೊತ್ತಿತು ಕನ್ನಡದ ದೀಪ", ಹಾಗೂ ಚನ್ನವೀರ ಕಣವಿ ಅವರು ಬರೆದಿರುವ "ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ" ಎಂಬ 05 ಗೀತೆಗಳನ್ನು ಕಡ್ಡಾಯವಾಗಿ ಹಾಡುವಂತೆ ಸೂಚನೆ ನೀಡಲಾಗಿದೆ.

ಕಂಪನಿಯ ರಜತ ಮಹೋತ್ಸವ ವೇದಿಕೆಯಲ್ಲಿ ಅವಘಡ: ಸಿಇಒ ಮೃತ್ಯು

Posted by Vidyamaana on 2024-01-20 16:45:29 |

Share: | | | | |


ಕಂಪನಿಯ ರಜತ ಮಹೋತ್ಸವ ವೇದಿಕೆಯಲ್ಲಿ ಅವಘಡ: ಸಿಇಒ ಮೃತ್ಯು

ಹೈದರಬಾದ್: ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಸಿಇಓ ಹಾಗೂ ಬಹುರಾಷ್ಟ್ರೀಯ ಸಾಫ್ಟ್ ವೇರ್ ಕಂಪನಿಯ ಸಂಸ್ಥಾಪಕ ಕಂಪನಿಯ ರಜತ ಮಹೋತ್ಸವದ ಸಂದರ್ಭದಲ್ಲಿ ಸಮಾರಂಭದ ವೇಳೆ ವೇದಿಕೆಯಲ್ಲಿ ನಡೆದ ದುರಂತದಲ್ಲಿ ಮೃತಪಟ್ಟಿದ್ದಾರೆ.


ಇಲಿನೊಯಿಸ್ ಮೂಲದ ಸಿಇಓ ಸಂಜಯ್ ಶಾ (56) ಮೃತರು ಎಂದು ಗುರುತಿಸಲಾಗಿದೆ.


ರಜತ ಮಹೋತ್ಸವವ ಸಮಾರಂಭವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಆಯೋಜಿಸಲಾಗಿತ್ತು.


ಸಮಾರಂಭಕ್ಕೆ ಚಾಲನೆ ನೀಡಲು ಶಾ ಹಾಗೂ ರಾಜು ಕಬ್ಬಿಣದ ಗೂಡಿನಿಂದ ಕೆಳಗಿಳಿದು ವೇದಿಕೆಗೆ ಬರಬೇಕಿತ್ತು. ಅವರನ್ನು ರೋಪ್ ಬಳಸಿ ಕಬ್ಬಿಣದ ಗೂಡಿನ ಮೂಲಕ ಕೆಳಗಿದ್ದ ವೇದಿಕೆಗೆ ಕರೆತರಲು ಉದ್ದೇಶಿಸಲಾಗಿತ್ತು. ಸಂಗೀತದ ಹಿಮ್ಮೇಳದಲ್ಲಿ ಶಾ ಹಾಗೂ ರಾಜು ಸಿಬ್ಬಂದಿಗೆ ಕೈಬೀಸುತ್ತಾ ಇಳಿಯುತ್ತಿದ್ದರು. ಆದರೆ ದಿಢೀರನೇ ಈ ಕಬ್ಬಿಣದ ಗೂಡಿಗೆ ಜೋಡಿಸಿದ್ದ ಎರಡು ವೈರ್ ಗಳ ಪೈಕಿ ಒಂದು ತುಂಡಾಯಿತು. ಇಬ್ಬರೂ 15 ಅಡಿ ಕೆಳಕ್ಕೆ ಬಿದ್ದು, ಕಾಂಕ್ರಿಟ್ ವೇದಿಕೆಗೆ ಅಪ್ಪಳಿಸಿದರು. ಗಂಭೀರ ಗಾಯಗೊಂಡ ಇವರನ್ನು ತಕ್ಷಣ ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಲಾಯಿತಾದರೂ ಶಾ ಮೃತಪಟ್ಟಿದ್ದಾರೆ.

ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅರುಣ್ ಕುಮಾ‌ರ್ ಪುತ್ತಿಲ

Posted by Vidyamaana on 2024-03-17 09:58:27 |

Share: | | | | |


ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅರುಣ್ ಕುಮಾ‌ರ್ ಪುತ್ತಿಲ

ಪುತ್ತೂರು: ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಬಿಜೆಪಿ ಕಚೇರಿಗೆ ಮಾ 17 ರಂದು ಭೇಟಿ ನೀಡಿದರು.

ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಪ್ರಮುಖರು ಅವರನ್ನು ಸ್ವಾಗತಿಸಿದರು. ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ರವಿ ಕುಮಾರ್, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಅರುಣ್ ಕುಮಾ‌ರ್ ಪುತ್ತಿಲ ಜೊತೆಗಿದ್ದರು.

ಸಂದರ್ಭ ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್, ಜಿಲ್ಲಾ ಬಿಜೆಪಿ ಪ್ರಮುಖರಾದ ಬುಡಿಯಾರು ರಾಧಾಕೃಷ್ಣ ರೈ, ವಿದ್ಯಾ ಆರ್ ಗೌರಿ,ಆರ್ ಸಿ ನಾರಾಯಣ್ ಸಹಜ್ ರೈ,ಸುರೇಶ್ ಕಣ್ಣರಾಯ, ಸುಧೀ‌ರ್ ಶೆಟ್ಟಿ, ಜ್ಯೋತಿ ಆರ್ ನಾಯಕ್, ರಾಧಾಕೃಷ್ಣ ನಂದಿಲ, ಇಂದುಶೇಖ‌ರ್, ಲೋಹಿತ್ ಅಮ್ಮಿನಡ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.



Leave a Comment: