ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಸಿಂಹ, ಶ್ರೀವತ್ಸ ಮನೆಗೆ ಬಂದರೂ ಭೇಟಿ ಮಾಡದ ರಾಮದಾಸ್ ಬಂಡಾಯ?

Posted by Vidyamaana on 2023-04-17 19:03:28 |

Share: | | | | |


ಸಿಂಹ, ಶ್ರೀವತ್ಸ ಮನೆಗೆ ಬಂದರೂ ಭೇಟಿ ಮಾಡದ ರಾಮದಾಸ್ ಬಂಡಾಯ?

ಮೈಸೂರು: ಕೆ.ಆರ್. ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಕಾರಣ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ಆಕ್ರೋಶಗೊಂಡಿದ್ದು ಸೋಮವಾರ ರಾತ್ರಿ ಮನೆಗೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ ಮತ್ತು ಅಭ್ಯರ್ಥಿ ಶ್ರೀವತ್ಸ ಅವರ ಭೇಟಿ ನಿರಾಕರಿಸಿ ಆಕ್ರೋಶ ಹೊರ ಹಾಕಿದ್ದಾರೆ.ಟಿಕೆಟ್ ಕೈ ತಪ್ಪಿದ ಬಳಿಕ ಮನೆಯ ಒಂದು ಹಾಲ್ ನಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದ ರಾಮದಾಸ್ ಅವರು ಇಬ್ಬರನ್ನು ಭೇಟಿಯಾಗಲು ನಿರಾಕರಿಸಿದ್ದಾರೆ. ಮನೆಯ ಮತ್ತೊಂದು ಬಾಗಿಲಿನಿಂದ ಹೊರನಡೆದಿದ್ದಾರೆ.ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಮದಾಸ್, 30 ವರ್ಷಗಳಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕೋ ಬೇಡವೋ ಎಂಬುದುನ್ನು ನಾಳೆ ಸಂಜೆ ತಿಳಿಸುತ್ತೇನೆ.ಯಾವ ನಿರ್ಧಾರ ಮಾಡಬೇಕು ಅಂತ ನಾಳೆ ಹೇಳುತ್ತೇನೆ.ನಾನು ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೇವು. ಟಿಕೆಟ್ ತಪ್ಪಿರುವ ಕಾರಣ ರಾಮದಾಸ್ ಅವರಿಗೆ ನೋವಾಗಿದೆ.30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರೋದು ಸಹಜ. ನಾಳೆ ನಿಮ್ಮನ್ನು ಭೇಟಿ ಮಾಡುತ್ತೇನೆ. ಪಕ್ಷದ ಜೊತೆ ಇರುತ್ತೇನೆ ಎಂದು ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಮಾತನಾಡಿ, ಪಕ್ಷವನ್ನು ತಾಯಿ ಎಂದು ಭಾವಿಸಿರುವವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ. 30 ವರ್ಷದಿಂದ ಜತೆ ಇದ್ದೇವು. ಅವರು ನನ್ನ ವಿರುದ್ದ ಕೆಲಸ ಮಾಡಲ್ಲ.ಆ ವಿಶ್ವಾಸ ನನಗೆ ಇದೆ ಎಂದರು.

ಐ.ಎ.ಎಸ್ ಪರೀಕ್ಷೆ: ಯೂನಿವರ್ಸಲ್ ಕೋಚಿಂಗಿನ ವಿದ್ಯಾರ್ಥಿನಿಗೆ 2ನೇ ರ್ಯಾಂಕ್

Posted by Vidyamaana on 2023-05-24 14:01:39 |

Share: | | | | |


ಐ.ಎ.ಎಸ್ ಪರೀಕ್ಷೆ: ಯೂನಿವರ್ಸಲ್ ಕೋಚಿಂಗಿನ ವಿದ್ಯಾರ್ಥಿನಿಗೆ 2ನೇ ರ್ಯಾಂಕ್

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಬಾರಿ 10 ಮಂದಿ ಉತ್ತೀರ್ಣರಾಗಿದ್ದಾರೆ.

ಗರೀಮಾ ಲೋಹಿಯಾ 2ನೇ ಸ್ಥಾನ ಪಡೆದಿದ್ದರೆ, ವೈಷ್ಣವಿ ಪೌಲ್ 62ನೇ ಸ್ಥಾನ, ವಿಶ್ವಜೀತ್ ಸೌರ್ಯನ್ 126ನೇ ಸ್ಥಾನ, ಪಿ.ಶ್ರವಣ್ ಕುಮಾರ್ 222ನೇ ಸ್ಥಾನ, ಶಿವಾಂಗ್ ರಸ್ತೋಗಿ 307ನೇ ಸ್ಥಾನ, ಶುಭ್ರತೋಷ್ ಶರ್ಮ 358 ನೇ ಸ್ಥಾನ, ಸ್ವಸ್ಥಿಕಾ ಆರ್.ಪಿ. 456ನೇ ಸ್ಥಾನ, ಪ್ರಣಯ್ ಕುಮಾರ್ ಸಿಂಗ್ 602ನೇ ಸ್ಥಾನ, ಮನ್ ಪ್ರೀತ್ ಸಿಂಗ್ 616ನೇ ಸ್ಥಾನ ಹಾಗೂ ರಾಮ್ ದೇನಿ ಸಾಯಿನಾಥ್ 743ನೇ ಸ್ಥಾನ ಗಳಿಸಿದ್ದಾರೆ.

23 ವರ್ಷಗಳ ಹಿಂದೆ ಬೆಂಗಳೂರಿನ ವಿಜಯನಗರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಪ್ರಾರಂಭವಾದ ಯೂನಿವರ್ಸಲ್  ಕೋಚಿಂಗ್ ಸೆಂಟರ್ ನಲ್ಲಿ ವ್ಯಾಸಂಗ ಮಾಡಿದ ಸಾವಿರಾರು ಮಂದಿ ಈಗಾಗಲೇ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಈ ಬಾರಿಯೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಂಸ್ಥೆ ಇದೀಗ ಕೆಂಗೇರಿ ಸಮೀಪದ ರಾಮೋಹಳ್ಳಿಯಲ್ಲೂ ಇಂಟಿಗ್ರೇಟೆಡ್ ಪದವಿ ಶಿಕ್ಷಣ ನೀಡುತ್ತಿದೆ ಎಂದು ಸಂಸ್ಥೆಯ ನಿರ್ದೇಶಕ ಉಪೇಂದ್ರ ಶೆಟ್ಟಿ ತಿಳಿಸಿದ್ದಾರೆ.

WhatsAppನಲ್ಲಿ ಸ್ಟೋರೇಜ್ ಸಮಸ್ಯೆ ಉಂಟಾಗುತ್ತದೆ? ಹೇಗೆ ಸರಿಪಡಿಸುವುದು ಎಂಬುದು ಇಲ್ಲಿದೆ

Posted by Vidyamaana on 2024-01-09 04:59:00 |

Share: | | | | |


WhatsAppನಲ್ಲಿ ಸ್ಟೋರೇಜ್ ಸಮಸ್ಯೆ ಉಂಟಾಗುತ್ತದೆ? ಹೇಗೆ ಸರಿಪಡಿಸುವುದು ಎಂಬುದು ಇಲ್ಲಿದೆ

HATSAPP ವಿಶ್ವದ ಅತ್ಯಂತ ಜನಪ್ರಿಯ ಎಂಡ್-ಟು-ಎಂಡ್ ಎನ್‌ಕ್ರಿಪ್ಟೆಡ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ. ಆದರೆ ನೀವು ಏನು ಹೇಳುತ್ತಿದ್ದೀರಿ ಎಂಬುದರ ಕುರಿತು ಇತರ ಜನರು ಸ್ನೂಪ್ ಮಾಡಲು ಸಾಧ್ಯವಾಗದಿದ್ದರೂ, ಇತರ WhatsApp ಡೇಟಾವನ್ನು ಪ್ರಕ್ರಿಯೆಗೊಳಿಸಲಾಗುತ್ತಿಲ್ಲ ಎಂದರ್ಥವಲ್ಲನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಸೇವ್ ಆಗುತ್ತದೆ. ಇದರಿಂದ ಅವರ ಫೋನಿನ ಮೆಮೋರಿ ಕೂಡ ಬೇಗನೆ ಫುಲ್ ಆಗಿ ಸ್ಟೋರೇಜ್ ಸಮಸ್ಯೆ ಉಂಟಾಗುತ್ತದೆ. ಈರೀತಿ ಸ್ಟೋರೇಜ್ ಫುಲ್ ಆಗದಂತೆ ತಡೆಯಲು ಒಂದು ಟ್ರಿಕ್ ಇದೆ.


ವಾಟ್ಸ್​ಆಯಪ್​ನಲ್ಲಿ ನಿಮಗೆ ಯಾವುದೇ ಮಿಡಿಯಾ ಬಂದರೆ ಅದು ಅಟೋಮೆಟಿಕ್ ಡೌನ್​ಲೋಡ್ ಆಗಿ ಫೋನ್ ಗ್ಯಾಲರಿಯಲ್ಲಿ ಸೇವ್ ಆಗುತ್ತದೆ. ಇದನ್ನು ತಡೆಯಲು ವಾಟ್ಸ್​ಆಯಪ್ ಸೆಟ್ಟಿಂಗ್ಸ್​ನಲ್ಲಿರುವ ಸ್ಟೋರೇಜ್-ಡೇಟಾ ಆಯ್ಕೆಗೆ ತೆರಳಿ ಮಿಡಿಯಾ ಅಟೋ-ಡೌನ್​ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ಹೀಗೆ ಮಾಡಿದರೆ ಫೋಟೋ, ವಿಡಿಯೋ ಅಥವಾ ಯಾವುದೇ ಫೈಲ್​ಗಳು ನೀವು ಡೌನ್​ಲೋಡ್ ಕೊಟ್ಟರೆ ಮಾತ್ರ ಆಗುತ್ತದೆ.


ಇಂದು 16GB, 32GB, 128GB ಮೆಮೊರಿ ಹೊಂದಿರುವ ಸ್ಮಾರ್ಟ್​ಫೋನುಗಳು ಹೆಚ್ಚು ಜನರ ಬಳಕೆಯಲ್ಲಿವೆ. ಹಾಗೆಂದು 16GB, 32GB, 128GB ಮೆಮೊರಿ ತುಂಬಿಸಿಕೊಳ್ಳಬಹುದು ಎಂದುಕೊಳ್ಳದಿರಿ. ಏಕೆಂದರೆ ಹೆಚ್ಚು ಸ್ಟೋರೇಜ್ ನಿಂದಾಗಿ ಫೋನುಗಳು ನಿಧಾನವಾಗುತ್ತವೆ. ಅಂತೆಯೆ ಫೋನ್​ನಲ್ಲಿರುವ ಅಪ್ಲಿಕೇಷನ್​ಗಳನ್ನು ತೆರೆದಂತೆ ಮೊಬೈಲ್​ನಲ್ಲಿ ಅದು ಸ್ಟೋರ್ ಆಗುತ್ತಾ ಹೋಗುತ್ತದೆ.


ಮೊಬೈಲ್​ನಲ್ಲಿ ಹೆಚ್ಚಿನ ಸ್ಥಳ ತಿನ್ನುವುದು ಫೋಟೋ ಮತ್ತು ವಿಡಿಯೋಗಳು. ಈ ತೊಂದರೆಯಿಂದ ದೂರವಾಗಲು ಫೋಟೋ ಮತ್ತು ವಿಡಿಯೋವನ್ನು ಮೊಬೈಲ್​ನಲ್ಲಿ ಸೇವ್ ಮಾಡುವ ಬದಲು ಕ್ಲೌಡ್ ಸ್ಟೊರೇಜ್​ನಲ್ಲಿ ಸೇವ್ ಮಾಡಬಹುದು.


WhatsApp ಡೌನ್‌ಲೋಡ್ ಸೆಟ್ಟಿಂಗ್‌ಗಳಿಗಾಗಿ ಕೆಲವು ಆಯ್ಕೆಗಳನ್ನು ಹೊಂದಿದೆ-ಅವು ಡೇಟಾ ಮತ್ತು ಸಂಗ್ರಹಣೆಯ ಬಳಕೆಯ ಮೆನುವಿನಲ್ಲಿ ಕಂಡುಬರುತ್ತವೆ. Android ಮತ್ತು iOS ಎರಡರಲ್ಲೂ ಆಯ್ಕೆಗಳು ಒಂದೇ ಆಗಿರುತ್ತವೆ. ನೀವು ಮೊಬೈಲ್ ಡೇಟಾವನ್ನು ಅವಲಂಬಿಸಿದ್ದರೆ, ವೈ-ಫೈ ನೆಟ್‌ವರ್ಕ್‌ಗೆ ಸಂಪರ್ಕಗೊಂಡಿದ್ದರೆ ಅಥವಾ ಎಂದಿಗೂ ಮಾಧ್ಯಮವು ಸ್ವಯಂಚಾಲಿತವಾಗಿ ಡೌನ್‌ಲೋಡ್ ಆಗುತ್ತದೆಯೇ ಎಂಬುದನ್ನು ನೀವು ಆಯ್ಕೆ ಮಾಡಬಹುದು. ನೀವು ರೋಮಿಂಗ್‌ನಲ್ಲಿರುವಾಗ ಸ್ವಯಂಚಾಲಿತ ಡೌನ್‌ಲೋಡ್‌ಗಳನ್ನು ಮಿತಿಗೊಳಿಸುವ ಆಯ್ಕೆಯನ್ನು ಆಂಡ್ರಾಯ್ಡ್ ಹೊಂದಿದೆ.


ಡೀಫಾಲ್ಟ್ ಆಗಿ, ನೀವು ಮೊಬೈಲ್ ಡೇಟಾ ಸಂಪರ್ಕವನ್ನು ಹೊಂದಿರುವಾಗ WhatsApp ಚಿತ್ರಗಳನ್ನು ಮತ್ತು ನೀವು Wi-Fi ನೆಟ್‌ವರ್ಕ್‌ಗೆ ಸಂಪರ್ಕಗೊಂಡಾಗ ವೀಡಿಯೊವನ್ನು ಡೌನ್‌ಲೋಡ್ ಮಾಡುತ್ತದೆ. ಈ ಆಯ್ಕೆಗಳನ್ನು ಎಂದಿಗೂ ಅಥವಾ Wi-Fi ನಲ್ಲಿ ಎಲ್ಲವನ್ನೂ ಡೌನ್‌ಲೋಡ್ ಮಾಡಲು ಮಾತ್ರ ಬದಲಾಯಿಸುವುದು ಕೆಲವು ಮೊಬೈಲ್ ಡೇಟಾವನ್ನು ಉಳಿಸಲು ಸಹಾಯ ಮಾಡುತ್ತದೆ ಆದರೆ ನೀವು ಅದನ್ನು ಡೌನ್‌ಲೋಡ್ ಮಾಡಲು ಬಯಸಿದಾಗ ಪ್ರತಿ ಚಿತ್ರ ಅಥವಾ ವೀಡಿಯೊವನ್ನು ಟ್ಯಾಪ್ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯೊಂದಿಗೆ ಬರುತ್ತದೆ.

SSLC Result : ಕರ್ನಾಟಕ ಎಸ್‌ಎಸ್ ಎಲ್‌ಸಿ ಫಲಿತಾಂಶ ಪ್ರಕಟ ಶೇ 76.91ರ ಮಂದಿ ಉತ್ತೀರ್ಣ; ಈ ಜಿಲ್ಲೆಗೆ ಮೊದಲನೇ ಸ್ಥಾನ

Posted by Vidyamaana on 2024-05-09 11:21:42 |

Share: | | | | |


SSLC Result : ಕರ್ನಾಟಕ ಎಸ್‌ಎಸ್ ಎಲ್‌ಸಿ ಫಲಿತಾಂಶ ಪ್ರಕಟ ಶೇ 76.91ರ ಮಂದಿ ಉತ್ತೀರ್ಣ; ಈ ಜಿಲ್ಲೆಗೆ ಮೊದಲನೇ ಸ್ಥಾನ

ಬೆಂಗಳೂರು : ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಮಾತನಾಡಿ 2023-24 ನೇ ಸಾಲಿನಲ್ಲಿ ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಅಂತ ತಿಳಿಸಿದರು.ಇನ್ನೂ ಈ ಬಾರಿ ಮೂರು ಬಾರಿ ಎಕ್ಸಾಂ ಬರೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಅಂತಿಮವಾಗಿ ಹೆಚ್ಚಿನ ಅಂಕ ತೆಗೆದುಕೊಂಡದನ್ನು ಅಂತಿಮವಾಗಿ ಗಣನೆಗೆ ತೆಗೆದುಕೊಳ್ಳಲಾಗುವುದು ಅಂತ ಹೇಳಿದರು.

ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆ

Posted by Vidyamaana on 2023-06-26 17:14:25 |

Share: | | | | |


ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆ

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ (17) ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿ ನಿವಾಸಿ, ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ (17) ನಾಪತ್ತೆಯಾಗಿದ್ದ ಬಾಲಕ. ಭಾನುವಾರ ಸಂಜೆಯಿಂದ ಬಾಲಕ ನಾಪತ್ತೆಯಾಗಿದ್ದು, ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಾಲಕ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಪುತ್ತೂರಿಗೆ ಬಂತುMost Expected ಹ್ಯುಂಡೈ ಎಕ್ಸ್ ಟರ್

Posted by Vidyamaana on 2023-07-14 06:18:39 |

Share: | | | | |


ಪುತ್ತೂರಿಗೆ ಬಂತುMost Expected  ಹ್ಯುಂಡೈ ಎಕ್ಸ್ ಟರ್

ಪುತ್ತೂರು: ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ತನ್ನ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಕಾರನ್ನು ಪುತ್ತೂರಿನ ಜನರಿಗೆ ಪರಿಚಯಿಸುವ ಹಿನ್ನೆಲೆಯಲ್ಲಿ ಜುಲೈ 14 ಶುಕ್ರವಾರ ಸಂಜೆ  4 ಗಂಟೆಗೆ ದರ್ಬೆಯಲ್ಲಿರುವ ಕಾಂಚನ‌ ಹುಂಡೈ ಶೋರೂಂನಲ್ಲಿ ಖ್ಯಾತ ಯೂಟ್ಯೂಬರ್ ಧನ್ರಾಜ್ ಆಚಾರ್ ಬಿಡುಗಡೆಗೊಳಿಸಲಿದ್ದಾರೆ.

ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5,99,900 ಆಗಿದೆ. ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಇತ್ತೀಚೆಗೆ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಹ್ಯುಂಡೈನ ಘಟಕದಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಲಾಗಿದೆ. ಹೊಸದಾಗಿ ಬಿಡುಗಡೆಯಾದ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ ಕುರಿತು ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿಗಳು ಇಲ್ಲಿದೆ.


ಬೆಲೆ ರೂಪಾಂತರಗಳು: ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ-ಎಸ್‌ಯುವಿಯು EX , EX(O) , S , S (O) , SX , SX(O), ಮತ್ತು SX(O) Connect ಎಂಬ 7  ಟ್ರಿಮ್ ಹಂತಗಳಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಯ ಆರಂಭಿಕ ಬೆಲೆಯು ರೂ.5,99,900 ಆದರೆ, ಇದರ ಟಾಪ್ ಸ್ಪೆಕ್ ಮಾದರಿಗೆ ರೂ.9.31,990 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.ಎಂಜಿನ್: ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 1.2-ಲೀಟರ್, 4-ಸಿಲಿಂಡರ್ ಎಂಜಿನ್‌ನೊಂದಿಗೆ ಬಂದಿದೆ. ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯನಿರ್ವಹಿಸುತ್ತದೆ. ಪೆಟ್ರೋಲ್ ರೂಪದಲ್ಲಿ, ಹುಂಡೈ ಎಕ್ಸ್‌ಟರ್‌ನ ಎಂಜಿನ್ 83 bhp ಪವರ್ ಮತ್ತು 114 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.ಎಕ್ಸ್‌ಟರ್ ಕಾರಿನ CNG ಆವೃತ್ತಿಯು 69bhp ಪವರ್ ಮತ್ತು 95 Nm ನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎಕ್ಸ್‌ಟರ್ ಪೆಟ್ರೋಲ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‌ಟಿ ಗೇರ್‌ಬಾಕ್ಸ್‌ನೊಂದಿಗೆ ನೀಡಲಾಗುತ್ತದೆ. ಆದರೆ ಸಿಎನ್‌ಜಿ ಆವೃತ್ತಿಯಲ್ಲಿ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ನೀಡಲಾಗಿದೆ. ಎಕ್ಸ್‌ಟರ್ ಪೆಟ್ರೋಲ್ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಿದರೆ, AMT ಮಾದರಿ 19.2 ಕಿ.ಮೀ ಮೈಲೇಜ್ ನೀಡುತ್ತದೆ.ಇನ್ನು CNG ಆವೃತ್ತಿಯು 27.1 ಕಿ.ಮೀ ಮೈಲೇಜ್ ನೀಡುತ್ತದೆ.


ವಿನ್ಯಾಸ:ಈ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಕಾರಿನ ಮುಂಭಾಗ ಪ್ಯಾರಾಮೆಟ್ರಿಕ್ ಫ್ರಂಟ್ ಗ್ರಿಲ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಕ್ಲಾಮ್‌ಶೆಲ್ ಬಾನೆಟ್ ಮತ್ತು ಎಚ್ ಆಕಾರದ ಎಲ್‌ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿವೆ. ಇನ್ನು ಈ ಮೈಕ್ರೋ ಎಸ್‍ಯುವಿಗೆ ಸುಲಭವಾಗಿ ಪ್ರವೇಶಿಸಲು ಮತ್ತು ಹೊರಬರಲು ಡೋರುಗಳು ವಿಶಾಲವಾಗಿ ತೆರೆದುಕೊಳ್ಳುತ್ತವೆ.ಬಣ್ಣಗಳ ಆಯ್ಕೆ: ಹ್ಯುಂಡೈ ಎಕ್ಸ್‌ಟರ್ ಕಾರ 6 ಮೊನೊಟೋನ್ ಮತ್ತು 3 ಡ್ಯುಯಲ್-ಟೋನ್ ಬಾಹ್ಯ ಬಣ್ಣ ಆಯ್ಕೆಗಳಲ್ಲಿ ನೀಡುತ್ತಿದೆ. ಈ ಬಣ್ಣದ ಆಯ್ಕೆಗಳಲ್ಲಿ, ರೇಂಜ್ ಕಾಫಿ ಮತ್ತು ಕಾಸ್ಮಿಕ್ ಬ್ಲೂ ಬಣ್ಣದ ಆಯ್ಕೆಗಳು ಹೊಸದಾಗಿ ಪರಿಚಯಿಸಲಾಗಿವೆ. ಗ್ರಾಹಕರು ತಮ್ಮ ಮೆಚ್ಚಿನ ಬಣ್ಣದ ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದು.


ಫಿಚರ್ಸ್: ಈ ಎಕ್ಸ್‌ಟರ್ ಕಾರಿನಲ್ಲಿ ಕೆಲವು ವಿಭಾಗ-ಮೊದಲ ಫೀಚರ್ಸ್ ಗಳಲ್ಲಿ, ಅಂತರ್ನಿರ್ಮಿತ ಡ್ಯಾಶ್‌ಕ್ಯಾಮ್, ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ. ಇತರ ಗಮನಾರ್ಹ ವೈಶಿಷ್ಟ್ಯಗಳೆಂದರೆ 4.2-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, Apple CarPlay ಮತ್ತು Android Auto ಜೊತೆಗಿನ 8-ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಅನ್ನು ಹೊಂದಿದೆ.


ಇದರೊಂದಿಗೆ ಪುಶ್-ಬಟನ್ ಸ್ಟಾರ್ಟ್, ಕೂಲ್ಡ್ ಗ್ಲೋವ್‌ಬಾಕ್ಸ್, ಹಿಂಭಾಗದ AC ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ. ಈ ಮಾದರಿಯು ಡ್ರೈವರ್, ಪ್ಯಾಸೆಂಜರ್, ಕರ್ಟನ್ ಮತ್ತು ಸೈಡ್ ಏರ್‌ಬ್ಯಾಗ್‌ಗಳು ಸೇರಿದಂತೆ ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವ ದೇಶದ ಮೊದಲ ಸಬ್-ಫೋರ್-ಮೀಟರ್ ಎಸ್‌ಯುವಿ ಆಗಲಿದೆ. ಒಟ್ಟಾರೆಯಾಗಿ, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), VSM ಮತ್ತು HAC (ಹಿಲ್ ಅಸಿಸ್ಟ್ ಕಂಟ್ರೋಲ್) ಸೇರಿದಂತೆ 26 ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ.

ಹೆಚ್ಚಿನ ವಿವರ /ಮಾಹಿತಿಗಾಗಿ ಸಂಪರ್ಕಿಸಿ.....

RANJITH

Branch Manager

+91 97408 73450

Afwan

Sales Consultant M +91 9480389310

Kanchana Automobiles Private Limited. Opp St. Philomena School, Darbe, Puttur-574201 www.kanchana.hyundaimotor.in Hyundai Helpline :1800-1024645, 1800-114645



Leave a Comment: