ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಮುಂಬೈ ಗ್ಯಾರೇಜ್‌ ನಲ್ಲಿ ವಾಸವಿದ್ದ ನಟ; ಈಗ ದುಬೈ ಲಂಡನ್‌ ಅಮೆರಿಕಾದಲ್ಲೂ ಮನೆ, ಹತ್ತು ಕಾರುಗಳ ಒಡೆಯ

Posted by Vidyamaana on 2023-12-25 20:23:26 |

Share: | | | | |


ಮುಂಬೈ ಗ್ಯಾರೇಜ್‌ ನಲ್ಲಿ ವಾಸವಿದ್ದ ನಟ; ಈಗ ದುಬೈ ಲಂಡನ್‌ ಅಮೆರಿಕಾದಲ್ಲೂ ಮನೆ, ಹತ್ತು ಕಾರುಗಳ ಒಡೆಯ

ಬಾಲಿವುಡ್ ಜಗತ್ತಿನಲ್ಲಿ 80 ಹಾಗೂ 90ರ ದಶಕಗಳಲ್ಲಿ ಬಹುಬೇಡಿಕೆಯ ಸ್ಟಾರ್ ನಟರಾಗಿದ್ದವರ ಕಥೆಯಿದು. ಅವರಿನ್ನೂ ಆಗತಾನೇ ಇಂಡಸ್ಟ್ರಿಗೆ ಬಂದ ದಿನಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡಿಕೊಂಡು ಜೀವನೋಪಾಯಕ್ಕಾಗಿ ಭಾರಿ ಕಷ್ಟಪಡುತ್ತಿದ್ದರು. ಅದರೆ, ಇಂದು ಬಾಲಿವುಡ್‌ನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಅವರ ಹೆಸರೂ ಕೂಡ ಕಾಣಿಸುತ್ತಿದೆ.ಅವರು ಯಾರು ಬಲ್ಲಿರೇನು?


ಈ ಸ್ಟಾರ್ ನಟರ ಇಂದಿನ ಒಟ್ಟೂ ಅಸ್ತಿಯ ಮೌಲ್ಯ ಬರೋಬ್ಬರಿ 134 ಕೋಟಿ ರೂಪಾಯಿಗಳು. ಪ್ರತಿ ವರ್ಷ ಸಿನಿಮಾ ಹಾಗು ಬಿಸಿನೆಸ್‌ಗಳಿಂದ 12 ಕೋಟಿಗೂ ಹೆಚ್ಚು ಸಂಪಾದನೆ ಮಾಡುತ್ತಾರಂತೆ. ಒಂದು ಸಿನಿಮಾಗೆ ಈಗ 2-4 ಕೋಟಿ ರೂಪಾಯಿಗಳವರೆಗೆ ಸಂಭಾವನೆ ಪಡೆಯುವ ಇವರು, ಸ್ಟಾರ್ ಆಗಿದ್ದ ಕಾಲದಲ್ಲಿ ಅಂದಿನ ಲೆಕ್ಕದಲ್ಲಿ ಚೆನ್ನಾಗಿಯೇ ಸಂಪಾದಿಸುತ್ತಿದ್ದರು. ಇವರು ಬ್ರಾಂಡ್ ಎಂಡಾರ್ಸ್‌ಮೆಂಟ್‌ಗೆ 55 ಲಕ್ಷ ರೂ ಚಾರ್ಜ್ ಮಾಡುತ್ತಾರೆ. ಇನ್ನು ಮುಂಬೈನ ಜುಹುದಲ್ಲಿ ಐಷಾರಾಮಿ ಬಂಗಲೆ ಹೊಂದಿದ್ದು, ಇದರ ಮೌಲ್ಯ 30 ಕೋಟಿ ರೂಪಾಯಿಗಳು.


ಕಳೆದ ನಾಲ್ಕು ದಶಕಗಳಿಂದ ತಮ್ಮ ನಟನೆಯ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಆದರೆ ಈ ಹಂತವನ್ನು ತಲುಪಲು ಅವರ ಪಟ್ಟ ಪಾಡು ಅಂತಿಂಥದಲ್ಲ. ಕಳೆದ ದಿನವಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಈ ಬಾಲಿವುಡ್ ನಟ. ಹಾಗಿದ್ದರೆ ಇವರು ಯಾರು? ಅವರು ಬೇರಾರೂ ಅಲ್ಲ, ಬೇಟಾ (Beta)ಖ್ಯಾತಿಯ ಅನಿಲ್ ಕಪೂರ್.ಮುಂಬೈಗೆ ಬಂದ ಹೊಸದರಲ್ಲಿ ನಟ ಅನಿಲ್ ಕಪೂರ್ ಹಾಗೂ ಅವರ ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಕೂಡ ಇರಲಿಲ್ಲ. ಇ ಟೈಮ್ಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಮುಂಬೈನ ಪೃಥ್ವಿರಾಜ್ ಕಪೂರ್ ಅವರ ಗ್ಯಾರೇಜ್‌ನಲ್ಲಿ ಅನಿಲ್ ಕಪೂರ್ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ವೃತ್ತಿಜೀವನದ ಆರಂಭದಲ್ಲಿ ಮನೆಯ ಖರ್ಚುಗಳನ್ನು ನಿಭಾಯಿಸಲೆಂದು ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಅನಿಲ್, 1979 ರಲ್ಲಿ ಹಮಾರೆ ತುಮ್ಹಾರೆ ಮೂಲಕ ತಮ್ಮ ವೃತ್ತಿಜೀವನವನ್ನು ಶುರು ಮಾಡಿದರು. ಬಳಿಕ, 1980 ರಲ್ಲಿ ತೆಲುಗು ಚಿತ್ರ ವಂಶ ವೃಕ್ಷಂನಲ್ಲಿ ಕೆಲಸ ಮಾಡಿದರು.1983 ರಲ್ಲಿ ಅನಿಲ್ ಕಪೂರ್ ಅವರ ವೋ ಸಾತ್ ದಿನ್ ಚಿತ್ರ ಬಿಡುಗಡೆಯಾಯಿತು. ಇದರಲ್ಲಿ ಅವರು ಮೊದಲ ಬಾರಿಗೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಬಳಿಕ, ಅನಿಲ್ ಕಪೂರ್ ಹಿಂತಿರುಗಿ ನೋಡಲೇ ಇಲ್ಲ. ಬೇಟಾ, ಮಿಸ್ಟರ್ ಇಂಡಿಯಾ, ಮೇರಿ ಜಂಗ್, ಕರ್ಮ, ತೇಜಾಬ್, ಕಸಂ, ರಾಮ್ ಲಖನ್, ಹಮಾರಾ ದಿಲ್ ಆಪ್ಕೆ ಪಾಸ್ ಹೈ, ಲಾಡ್ಲಾ, ಮತ್ತು ನಾಯಕ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಜತೆಗೆ, ಹಾಲಿವುಡ್ ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.ನಟ ಅನಿಲ್ ಕಪೂರ್ ಸಿನಿಮಾ ಪಟ್ಟಿಯಲ್ಲಿ ಸ್ಲಮ್‌ ಡಾಗ್ ಮಿಲಿಯನೇರ್ ಮತ್ತು ಮಿಷನ್ ಇಂಪಾಸಿಬಲ್ ಹಾಗೂ ಘೋಸ್ಟ್ ಪ್ರೋಟೋಕಾಲ್ ಸಹ ಸೇರಿವೆ. ಈ ಸಿನಿಮಾಗಳ ಮೂಲಕ ಅನಿಲ್ ಕಪೂರ್ ತಮ್ಮ ಹೆಸರನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದಾರೆ.ನಟ ಅನಿಲ್ ಕಪೂರ್ ದುಬೈನಲ್ಲಿ 2 ಬೆಡ್ ರೂಂ ಅಪಾರ್ಟ್ ಮೆಂಟ್ ಹೊಂದಿದ್ದು, ಲಂಡನ್‌ ನಲ್ಲಿಯೂ ಒಂದು ಮನೆಯನ್ನು ಹೊಂದಿದ್ದಾರೆ. ಕ್ಯಾಲಿಪೋರ್ನಿಯಾದಲ್ಲೂ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಅನಿಲ್ ಕಪೂರ್ ಅವರು BMW, Bentley,Jaguar, Audi Mercedes Benz S Class ಮುಂತಾದ ದುಬಾರಿ ಮತ್ತು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಒಟ್ಟಿನಲ್ಲಿ, ಅಂದು ಜೀವನೋಪಾಯಕ್ಕೆ ಗ್ಯಾರೇಜ್ ಆಶ್ರಯಿಸಿದ್ದ ನಟ ಇಂದು ಕೋಟ್ಯಾಧಿಪತಿಯಾಗಿ ಬಾಳುತ್ತಿದ್ದಾರೆ.

ಇಂದು ಜು.8 ದ.ಕ. ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಮುಲ್ಲೈ ಮುಗಿಲನ್

Posted by Vidyamaana on 2023-07-07 23:11:51 |

Share: | | | | |


ಇಂದು ಜು.8 ದ.ಕ. ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡುಬರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುತ್ತೈ ಮುಗಿಲನ್  ತಿಳಿಸಿದ್ದಾರೆ.


ಸೂಕ್ತವಾದ ರೀತಿಯಲ್ಲಿ ಎಚ್ಚರಿಕೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಶೀಲಿಸಿಕೊಂಡು ಶಾಲೆ, ಕಾಲೇಜು ನಡೆಸಲು ಜಿಲ್ಲಾಧಿಕಾರಿ ಸೂಚಿಸಿರುತ್ತಾರೆ

ಪುತ್ತೂರು : ಶಾಲಾ ಪರಿಸರದ ಸೇತುವೆಯ ಕೆಳಗೆ ಕೊಳೆತ ಕುರಿಗಳ ಶವ ಪತ್ತೆ

Posted by Vidyamaana on 2024-05-17 12:15:08 |

Share: | | | | |


ಪುತ್ತೂರು : ಶಾಲಾ ಪರಿಸರದ ಸೇತುವೆಯ ಕೆಳಗೆ ಕೊಳೆತ ಕುರಿಗಳ ಶವ ಪತ್ತೆ

ಪುತ್ತೂರು:ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತೆಂಕಿಲ ವಿವೇಕಾನಂದ ಶಾಲಾ ಪರಿಸರದ ಸಮೀಪದ ಸೇತುವೆಯ ಕೆಳಗೆ ಕೊಳೆತ ಸ್ಥಿತಿಯಲ್ಲಿ ಕುರಿಗಳ ಶವಪತ್ತೆಯಾಗಿದೆ.

ನಿಡ್ಪಳ್ಳಿ ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

Posted by Vidyamaana on 2023-07-26 04:57:12 |

Share: | | | | |


ನಿಡ್ಪಳ್ಳಿ ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

ಪುತ್ತೂರು: ನಿಡ್ಪಳ್ಳಿ 1ನೇ ವಾರ್ಡಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಎರಡನೇ ಸ್ಥಾನ ಪಡೆದುಕೊಂಡಿದ್ದು, ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ನಿಡ್ಪಳ್ಳಿಯ ವಾರ್ಡ್ 1ರಲ್ಲಿ ಒಟ್ಟು 607 ಮತದಾರರಿದ್ದು, ಒಟ್ಟು 529 ಮತ ಚಲಾವಣೆಯಾಗಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಜಯ ಗಳಿಸಿದ್ದರೆ, ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಎರಡನೇ ಸ್ಥಾನ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ. ಚಂದ್ರಶೇಖರ್ ಪ್ರಭು ಗೋಳಿತ್ತಡಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ನಿಡ್ಪಳ್ಳಿ ಗ್ರಾಪಂನ ಚುನಾವಣಾಧಿಕಾರಿಯಾಗಿದ್ದ ತಾ.ಪಂ. ಯೋಜನಾಧಿಕಾರಿ ಸುಕನ್ಯಾ, ಸಹಾಯಕ ಚುನಾವಣಾಧಿಕಾರಿಯಾಗಿದ್ದ ಪಿಡಿಓ ಸಂಧ್ಯಾಲಕ್ಷ್ಮೀ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.

ಮಂಗಳೂರು : ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

Posted by Vidyamaana on 2024-01-01 21:35:09 |

Share: | | | | |


ಮಂಗಳೂರು : ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಇಂದು (ಸೋಮವಾರ) ಅಧಿಕಾರ ಸ್ವೀಕರಿಸಿದರು.ಈ ಕುರಿತು ಮಾತನಾಡಿದ ಅವರು ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.ಈ ಮೊದಲು ಡಿಐಜಿಯಾಗಿದ್ದ ಚಂದ್ರಗುಪ್ತ ಅವರು ಬೆಂಗಳೂರಿಗೆ ವರ್ಗಾವಣೆ ಗೊಂಡಿದ್ದಾರೆ.


ದಕ್ಷಿಣಕನ್ನಡ ಎಸ್ ಪಿಸಿಬಿ ರಿಷ್ಯಂತ್, ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಉಪಸ್ಥಿರಿದ್ದರು.

ಬೆಳ್ಳಂಬೆಳಿಗ್ಗೆ ಯುವಕನ ಪಾಲಿಗೆ ಮೃತ್ಯುವಾದ ತರಕಾರಿ ಸಾಗಾಟದ ವಾಹನ

Posted by Vidyamaana on 2024-02-25 11:00:13 |

Share: | | | | |


ಬೆಳ್ಳಂಬೆಳಿಗ್ಗೆ ಯುವಕನ ಪಾಲಿಗೆ ಮೃತ್ಯುವಾದ ತರಕಾರಿ ಸಾಗಾಟದ ವಾಹನ

ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಭಾನುವಾರ ಮುಂಜಾನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.

    ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು - ಆಲಡ್ಕ ವಾಸ್ತವ್ಯವಿರುವ  ಆಶ್ರಫ್ (32) ಮೃತಪಟ್ಟ ಯುವಕ.

     ಆಲಡ್ಕ ನಿವಾಸಿ ತನ್ವೀರ್ ಆಶ್ರಫ್ ಅವರ ಸ್ನೇಹಿತರಾಗಿದ್ದು, ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತನಿಗೆ ಡ್ರಾಫ್ ಕೊಡುವ ಉದ್ದೇಶದಿಂದ ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡಿಗೆ ತೆರಳಿದ್ದು ಬೆಳಿಗ್ಗೆ ಸುಮಾರು 5.30 ರ ವೇಳೆ ಆಶ್ರಫ್ ಅವರು ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತ ತನ್ವೀರ್ ನ್ನು ಇಳಿಸಬೇಕು ಎನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸು ಹೋಗುವ ಲಾರಿಯ ಚಾಲಕ ಲಾರಿಯನ್ನು ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.


    ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡ ಆಶ್ರಫ್ ನನ್ನು ತಕ್ಷಣ  ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

    ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Recent News


Leave a Comment: