ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ಸಂಪ್ಯ ಠಾಣೆ ಎಸ್.ಐ. ಉದಯರವಿ, ಟ್ರಾಫಿಕ್ ಎಸ್.ಐ. ರಾಮ ನಾಯ್ಕ್ ವರ್ಗ

Posted by Vidyamaana on 2023-01-21 03:51:45 |

Share: | | | | |


ಸಂಪ್ಯ ಠಾಣೆ ಎಸ್.ಐ. ಉದಯರವಿ, ಟ್ರಾಫಿಕ್ ಎಸ್.ಐ. ರಾಮ ನಾಯ್ಕ್ ವರ್ಗ

ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಉದಯರವಿ ಅವರು ಪುತ್ತೂರು ನಗರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ತೆರವಾದ ಸ್ಥಾನಕ್ಕೆ ಶ್ರೀನಾಥ್ ರೆಡ್ಡಿ ಅವರನ್ನು ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ.

       ಸಂಚಾರ ಪೊಲೀಸ್ ಠಾಣೆಯ ಪಿ.ಎಸ್.ಐ. ರಾಮ ನಾಯ್ಕ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. 

         ಕಳೆದ 3 ವರ್ಷಗಳಿಂದ ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉದಯರವಿ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದ್ದರು. ಮಾತ್ರವಲ್ಲ, ಸಾರ್ವಜನಿಕರಿಂದಲೂ ಪ್ರಶಂಸೆಗೆ ಪಾತ್ರವಾಗಿದ್ದರು.

ಇದೀಗ ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಚುನಾವಣೆಗೆ ಪೂರ್ವಭಾವಿಯಾಗಿ ಈ ವರ್ಗಾವಣೆ ಪ್ರಕ್ರಿಯೆ ನಡೆದಿದೆ ಎಂದು ಹೇಳಲಾಗಿದೆ.

ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಎಫ್ಐಆರ್ ದಾಖಲು ಕಡ್ಡಾಯ: ಹೈಕೋರ್ಟ್ ಆದೇಶ

Posted by Vidyamaana on 2023-08-04 02:03:39 |

Share: | | | | |


ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಎಫ್ಐಆರ್ ದಾಖಲು ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಎಫ್ಐಆರ್ ದಾಖಲು ಕಡ್ಡಾಯ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಲಲಿತಾ ಕುಮಾರಿ ಕೇಸ್​ನ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಬಗ್ಗೆ ಮಾರ್ಗಸೂಚಿ, ಸುತ್ತೋಲೆ ಹೊರಡಿಸಲು ಡಿಜಿ ಮತ್ತು ಐಜಿಪಿಗೆ ಸೂಚನೆ ನೀಡಲಾಗಿದೆ.


ಲಲಿತಾ ಕುಮಾರಿ ಪ್ರಕರಣದಲ್ಲಿ ಎಫ್​ಐಆರ್​ ದಾಖಲಿಸುವ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ತೀರ್ಪಿನ 120ನೇ ಪ್ಯಾರಾವನ್ನು ಕನ್ನಡ, ಆಂಗ್ಲ ಭಾಷೆಯಲ್ಲಿ ಸುತ್ತೋಲೆ ಹೊರಡಿಸಬೇಕು. ಎಫ್ಐಆರ್ ದಾಖಲಿಸಲು ವಿಳಂಬ ಮಾಡದಂತೆ ತಾಕೀತು ಮಾಡಲಾಗಿದೆ.


ಗಂಭೀರ ಅಪರಾಧದ ದೂರು ಬಂದಾಗ ಪ್ರಾಥಮಿಕ ತನಿಖೆ ಅಗತ್ಯವಿಲ್ಲ. ಅದೇ ರೀತಿಯಾಗಿ ಗಂಭೀರವಲ್ಲದ ಪ್ರಕರಣಗಳಲ್ಲಿ ಮಾತ್ರ ಪ್ರಾಥಮಿಕ ತನಿಖೆ ನಡೆಸಬಹುದು. 7 ದಿನದೊಳಗೆ ಪ್ರಾಥಮಿಕ ತನಿಖೆ ಮುಕ್ತಾಯಗೊಳಿಸಬೇಕು. ಗಂಭೀರ ಅಪರಾಧ ಕಂಡುಬಂದಾಗ ಎಫ್ಐಆರ್ ದಾಖಲಿಸಬೇಕು. ಪೊಲೀಸ್​ ಠಾಣೆಯ ಡೈರಿಯಲ್ಲಿ ತನಿಖೆಯ ಮಾಹಿತಿ ಉಲ್ಲೇಖಿಸಬೇಕು ಎಂದು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ

ಕಾಂಗ್ರೆಸ್ ಲೂಟಿಕೋರ, ಭ್ರಷ್ಟರ ಸರ್ಕಾರ ; ಕಾವೂರು ಬಿಜೆಪಿ ಪ್ರತಿಭಟನೆಯಲ್ಲಿ ನಳಿನ್ ಕುಮಾರ್

Posted by Vidyamaana on 2023-10-18 17:07:06 |

Share: | | | | |


ಕಾಂಗ್ರೆಸ್ ಲೂಟಿಕೋರ, ಭ್ರಷ್ಟರ ಸರ್ಕಾರ ; ಕಾವೂರು ಬಿಜೆಪಿ ಪ್ರತಿಭಟನೆಯಲ್ಲಿ ನಳಿನ್ ಕುಮಾರ್

ಮಂಗಳೂರು: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ನಗರದ ಕಾವೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ. 


ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು ಗುತ್ತಿಗೆದಾರರ ಮನೆಯಲ್ಲಿ ರಾಶಿ ರಾಶಿ ಹಣ ಸಿಕ್ಕಿದ್ದು ಸರ್ಕಾರದ ಖಜಾನೆಯ ಹಣ ನೇರವಾಗಿ ಸಿದ್ದರಾಮಯ್ಯ ಮತ್ತು‌ ಡಿಕೆಶಿ ಮನೆಗೆ ಹೋಗಿದೆ.‌ ಇದು ಖಜಾನೆ ಖಾಲಿ‌ ಮಾಡಿದ ಲೂಟಿಕೋರ ಸರ್ಕಾರ.‌ ಡಿಕೆ‌ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗುತ್ತಿದ್ದಾರೆ. ನಿನ್ನೆ ಸಿಕ್ಕ ಹಣ ಡಿಕೆಶಿಯದ್ದು ಅಂತ ಪತ್ರಿಕೆಗಳು, ಟಿವಿಗಳು ಹೇಳ್ತಾ ಇದೆ. ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಹೊಟೇಲ್ ಗಳಲ್ಲಿ ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಗಳಲ್ಲಿ ರೇಟ್ ಫಿಕ್ಸ್ ಆಗಿದೆ. ವರ್ಗಾವಣೆ ಸೇರಿದಂತೆ ಯಾವುದೇ ಕೆಲಸ ಆಗಬೇಕಿದ್ದರೂ ಇಂತಿಷ್ಟು ರೇಟ್ ಕೊಡಬೇಕು. ಹೀಗಾಗಿ ಸಿದ್ದರಾಮಯ್ಯರ ಸರ್ಕಾರ 80% ಪರ್ಸಂಟೇಜ್ ಸರ್ಕಾರ ಎನ್ನುವಂತಾಗಿದೆ. ತಾಲೂಕು ಕಚೇರಿಗಳಲ್ಲಿ ತಹಶಿಲ್ದಾರ್ ರು ಲಂಚ ಕೇಳ್ತಾರೆ. ಗ್ರಾಮಗಳಲ್ಲಿ ವಿಎಗಳು ಲಂಚ ಕೇಳ್ತಾರೆ, ಪಿಡಿಓಗಳು ಲಂಚ ಕೇಳ್ತಾ‌ ಇದಾರೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ ಎಂದು ನಳಿನ್ ಕುಮಾರ್ ಹೇಳಿದರು.

ಮಾ.23 ಗುರುವಾರ ಪವಿತ್ರ ರಂಝಾನ್ ಉಪವಾಸ ಆರಂಭ

Posted by Vidyamaana on 2023-03-22 15:07:52 |

Share: | | | | |


ಮಾ.23 ಗುರುವಾರ ಪವಿತ್ರ ರಂಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಬುಧವಾರ ಆಗಿರುವುದರಿಂದ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಬ್ರೈಟ್ ಭಾರತ್ ಸಂಸ್ಥೆ ವತಿಯಿಂದ ಪ್ರಜ್ಞಾ ಆಶ್ರಮಕ್ಕೆ ವೀಲ್ ಚಯರ್ ಹಸ್ತಾಂತರ ಅಕ್ಕಿ ವಿತರಣೆ

Posted by Vidyamaana on 2023-10-29 10:46:39 |

Share: | | | | |


ಬ್ರೈಟ್ ಭಾರತ್ ಸಂಸ್ಥೆ ವತಿಯಿಂದ ಪ್ರಜ್ಞಾ ಆಶ್ರಮಕ್ಕೆ ವೀಲ್ ಚಯರ್ ಹಸ್ತಾಂತರ ಅಕ್ಕಿ ವಿತರಣೆ

ಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ವತಿಯಿಂದ, ಪುತ್ತೂರಿನ ಬಿರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮಕ್ಕೆ ವೀಲ್ ಚಯರ್ ಹಸ್ತಾಂತರ ಹಾಗೂ ಆಶ್ರಮದ ಭಿನ್ನ ಸಾಮರ್ಥ್ಯದ ರೋಗಿಗಳಿಗೆ ಸಿಹಿತಿಂಡಿ ಹಾಗೂ ಅಕ್ಕಿ ವಿತರಣಾ ಕಾರ್ಯಕ್ರಮ ಅ. 28ರಂದು ಆಶ್ರಮದ ವಠಾರದಲ್ಲಿ ನಡೆಯಿತು.


  ಆಶ್ರಮಕ್ಕೆ ತೆರಳಿದ ಬ್ರೈಟ್ ಭಾರತ್ ಸಂಸ್ಥೆಯ ಪಾಲುದಾರರು, ಅಲ್ಲಿನ ಭಿನ್ನ ಸಾಮರ್ಥ್ಯದ ರೋಗಿಗಳೊಂದಿಗೆ, ಒಂದಿಷ್ಟು ಸಮಯ ಕಳೆದು, ಆಶ್ರಮಕ್ಕೆ ಬೇಕಾದ ಅಕ್ಕಿ, ವೀಲ್ ಚೆಯರ್ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಸಮಾಜ ಸೇವಕ ಅಲಿ ಪರ್ಲಡ್ಕ, ಸಂತೋಷ್ ಗೋಳಿಕಟ್ಟೆ, ಮೂರ್ತಿ ಕಲಾವಿದರಾದ ತಾರಾನಾಥ ಆಚಾರ್ಯ, ಆಶ್ರಮದ ಮುಖ್ಯಸ್ಥರಾದ ಅಣ್ಣಪ್ಪ, ಹಾಗೂ ಅವರ ಪತ್ನಿ ಜ್ಯೋತಿ ಮತ್ತು  ಬ್ರೈಟ್ ಭಾರತ್ ಸಂಸ್ಥೆಯ ಪಾಲುದಾರರು ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Posted by Vidyamaana on 2023-06-19 02:09:24 |

Share: | | | | |


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು ( 6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.*ಹತ್ತು ಸಾವಿರದಂತೆ* ದಂತೆ ಪ್ರೊತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.

ಅರ್ಜಿದಾರರು 2022-23 ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು 6 ನೇ ರಿಂದ 10 ನೇ ತರಗತಿಯಲ್ಲಿ ಓದುತ್ತಿರಬೇಕು.ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ನೊಂದಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ  1-04-2022 ರಿಂದ 31-03-2023 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಅಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸರಬೇಕು.ಅಂದರೆ ದಿನಾಂಕ 1-04-2022 ರಿಂದ 31-03-2023 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ  ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನ ಮೊತ್ತಕ್ಕೆ ಮಾತ್ರ ಅರ್ಹರಾಗಿರುತ್ತಾರೆ.ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಹರು ಇರುವ ಕ್ರೀಡಾಪಟುಗಳು http://sevasindhuservices.karnataka.gov in ಮೂಲಕ ಆನ್ ಲೈನ್ ನಲ್ಲಿ ದಿನಾಂಕ  31-07-2023 ಅರ್ಜಿಗಳನ್ನು ಸಲ್ಲಿಸುವಂತೆ ಪುತ್ತೂರು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಶ್ರೀಕಾಂತ್ ಪೂಜಾರಿ ಬಿರಾವು ಪ್ರಕಟಣೆ ನೀಡಿದ್ದಾರೆ ಹೆಚ್ಚಿನ ಮಾಹಿತಿಗಾಗಿ 9164502107 ನಂಬರನ್ನು ಸಂಪರ್ಕಿಸಬಹುದಾಗಿದೆ.

Recent News


Leave a Comment: