ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


BIG NEWS : ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್‌ ನೂತನ ಸಂಸದ ಇ.ತುಕಾರಾಂ

Posted by Vidyamaana on 2024-06-14 18:14:17 |

Share: | | | | |


BIG NEWS : ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್‌ ನೂತನ ಸಂಸದ ಇ.ತುಕಾರಾಂ

ಬೆಂಗಳೂರು : ಬಳ್ಳಾರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್ಸಿನ ಇ.ತುಕಾರಾಂ ಅವರು ಇಂದು ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಗೆ ಇ. ತುಕಾರಾಮ್ ಅವರು ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಉದ್ಘಾಟನೆಗೆ ಸಿದ್ಧಗೊಳ್ಳುತ್ತಿದೆ ಉಭಯ ತಾಲೂಕುಗಳ ಏಕೈಕ ಡಯಾಲಿಸಿಸ್ ಕೇಂದ್ರ

Posted by Vidyamaana on 2022-11-29 16:47:29 |

Share: | | | | |


ಉದ್ಘಾಟನೆಗೆ ಸಿದ್ಧಗೊಳ್ಳುತ್ತಿದೆ ಉಭಯ ತಾಲೂಕುಗಳ ಏಕೈಕ ಡಯಾಲಿಸಿಸ್ ಕೇಂದ್ರ

 ಇನ್ನೂ ೬ ಡಯಾಲಿಸಿಸ್ ಯಂತ್ರಗಳ ಅವಶ್ಯಕತೆ 

ದಾನಿಗಳ ನೆರವು ಪಡೆಯಲು ಆರೋಗ್ಯ ರಕ್ಷಾ ಸಮಿತಿ ತೀರ್ಮಾನ


ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆ ಸಂದರ್ಭದಲ್ಲಿ ಅವಶ್ಯಕತೆ ಇರುವ ಇನ್ನೂ ೬ ಡಯಾಲಿಸಿಸ್ ಯಂತ್ರಗಳನ್ನು ದಾನಿಗಳ ನೆರವಿನಿಂದ ಹೊಂದಿಸಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಸಮಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುತ್ತೂರು ಹಾಗೂ ಕಡಬ ತಾಲೂಕಿಗೆ ಏಕೈಕ ಡಯಾಲಿಸಿಸ್ ಕೇಂದ್ರ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿದೆ. ಇದು ಸಾಕಾಗುತ್ತಿಲ್ಲ. ಆದ್ದರಿಂದ ಮಂಗಳೂರು ಸೇರಿದಂತೆ ಇತರ ಕಡೆಗಳಿಗೆ ಜನರು ಹೋಗಬೇಕಾದ ಪರಿಸ್ಥಿತಿ ಇದೆ. ಆದ್ದರಿಂದ ಉದ್ಘಾಟನೆಗೆ ಸಿದ್ಧವಾಗಿರುವ ಡಯಾಲಿಸಿಸ್ ಕೇಂದ್ರದ ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ಮುಕ್ತವಾಗುವಂತೆ ಮಾಡಲು ಒತ್ತಡ ಬರುತ್ತಿದೆ. ಉದ್ಘಾಟನೆಯ ಸಂದರ್ಭದಲ್ಲಿ ಅವಶ್ಯಕತೆ ಇರುವ ಇನ್ನೂ ೬ ಡಯಾಲಿಸಿಸ್ ಮೆಷಿನ್‌ಗಳನ್ನು ಹೊಂದಿಸಿಕೊಳ್ಳುವ ಅಗತ್ಯವಿದೆ. ಇದಕ್ಕಾಗಿ ರೋಟರಿ ಮೊದಲಾದ ಸಂಸ್ಥೆ ಹಾಗೂ ದಾನಿಗಳ ಸಹಾಯ ಪಡೆದುಕೊಳ್ಳಬೇಕಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳ ವತಿಯಿಂದ ೪ ಡಯಾಲಿಸಿಸ್ ಮೆಷಿನ್ ಕೊಡಿಸುವುದಾಗಿ ಹಿಂದಿನ ಜಿಲ್ಲಾಧಿಕಾರಿಗಳು ತಿಳಿಸಿದ್ದರು ಎಂದು ನೆನಪಿಸಿದ ಅವರು, ಆರ್.ಓ. ಪ್ಲಾಂಟ್‌ಗೆ ಅಗತ್ಯವಿರುವ ೧೦ ಲಕ್ಷ ರೂ.ವನ್ನು ಸರಕಾರದಿಂದ ಮಂಜೂರುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಆಸ್ಪತ್ರೆ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಮಾಹಿತಿ ನೀಡಿ, ಈಗಾಗಲೇ ಪುತ್ತೂರು ಡಯಾಲಿಸಿಸ್ ಕೇಂದ್ರದಲ್ಲಿ ೫೪ ಮಂದಿಗೆ ನಿರಂತರವಾಗಿ ಡಯಾಲಿಸಿಸ್ ನೀಡಲಾಗುತ್ತಿದೆ. ೪೮ ಮಂದಿ ಇನ್ನೂ ವೈಟಿಂಗ್‌ನಲ್ಲಿದ್ದಾರೆ. ಆದ್ದರಿಂದ ಈ ಬೇಡಿಕೆಯನ್ನು ಪೂರೈಸಲು ಒಟ್ಟು ೧೨ ಡಯಾಲಿಸಿಸ್ ಯಂತ್ರಗಳ ಅಗತ್ಯವಿದೆ. ಆದರೆ ಆಸ್ಪತ್ರೆಯಲ್ಲಿ ಇರುವುದು ೬ ಡಯಾಲಿಸಿಸ್ ಯಂತ್ರಗಳು ಮಾತ್ರ. ಆದ್ದರಿಂದ ಉಳಿದ ೬ ಯಂತ್ರಗಳನ್ನು ಜೋಡಿಸಿಕೊಳ್ಳಬೇಕಾದ ಅಗತ್ಯವಿದೆ. ಇದಕ್ಕೆ ಅಗತ್ಯವಿರುವ ಡಯಾಲಿಸಿಸ್ ಕೇಂದ್ರದ ಕಾಮಗಾರಿಯನ್ನು ಸುಮಾರು ೬೦ ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆಲುಕ್ಕಾಸ್ ಸ್ವರ್ಣ ಮಳಿಗೆಯವರು ಒಂದು ಯಂತ್ರವನ್ನು ಕೊಡುಗೆಯಾಗಿ ನೀಡುವುದಾಗಿ ತಿಳಿಸಿದ್ದಾರೆ. ಹೊಸ ಯಂತ್ರದ ಕೇಂದ್ರಕ್ಕೆ ಹೊಸದಾಗಿ ಆರ್.ಓ. ಪ್ಲಾಂಟ್ ನಿರ್ಮಿಸಲು ೧೦ ಲಕ್ಷ ರೂ. ಅಗತ್ಯವಿದೆ. ಇದರೊಂದಿಗೆ ಕೊಠಡಿಗೆ ಹವಾನಿಯಂತ್ರಿಣ ಅಳವಡಿಸಲು ೩ ಲಕ್ಷ ರೂ. ಬೇಕಾಗಿದೆ. ೬ ಡಯಾಲಿಸಿಸ್ ಯಂತ್ರ ಖರೀದಿಗೆ ಒಟ್ಟು ೬೦ ಲಕ್ಷ ರೂ. ವೆಚ್ಚ ತಗುಲಲಿದೆ ಎಂದು ಮಾಹಿತಿ ನೀಡಿದರು.

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿರುವಂತೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿಯೂ ಬ್ಲಡ್ ಬ್ಯಾಂಕ್ ತೆರೆಯುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಆಸ್ಪತ್ರೆಯಲ್ಲಿ ರಕ್ತ ಸಂಗ್ರಹಣಾ ವ್ಯವಸ್ಥೆಯಿದೆ. ಬ್ಲಡ್ ಬ್ಯಾಂಕ್ ಮಾಡುವುದಾದಲ್ಲಿ ಅದಕ್ಕೆ ಬೇಕಾದಂತೆ ಕೊಠಡಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳಿವೆ. ಅದರೆ ಬ್ಲಡ್ ಬ್ಯಾಂಕ್ ಮಾಡಿದಲ್ಲಿ ಅದಕ್ಕೆ ಸಿಬ್ಬಂದಿಗಳ ನೇಮಕಗೊಳಿಸಬೇಕು. ಇದಕ್ಕೂ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗೆ ಈ ಬಗ್ಗೆ ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದರು.  

ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಒಂದು ವರ್ಷಗಳಾಗಿದೆ. ಅದಕ್ಕೆ ಪೂರಕವಾಗಿ ೫.೧೬ ಎಕ್ರೆ ಜಮೀನು ಮೀಸಲಿಟ್ಟು, ಆಸ್ಪತ್ರೆಯ ಹೆಸರಿನಲ್ಲಿ ಪಹಣಿ ಪತ್ರವನ್ನು ಮಾಡಲಾಗಿದೆ. ಈ ಬಗ್ಗೆ ತಾಂತ್ರಿಕ ವರದಿಯನ್ನು ನೀಡುವಂತೆ ಇಂಜಿನಿಯರ್ ಅವರಿಗೆ ಶಾಸಕರು ಸೂಚನೆ ನೀಡಿದರು.

ಸಭೆಯಲ್ಲಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಪೌರಾಯುಕ್ತ ಮಧು ಎಸ್. ಮನೋಹರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಫೀಕ್ ದರ್ಬೆ, ಡಾ. ಕೃಷ್ಣ ಪ್ರಸನ್ನ, ದಿನೇಶ್ ಜೈನ್, ಕೃಷ್ಣ ನಾಯ್ಕ ಉಪಸ್ಥಿತರಿದ್ದರು. ಡಾ. ಜಯದೀಪ್ ಸ್ವಾಗತಿಸಿದರು.


ಬೆಟ್ಟಂಪಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Posted by Vidyamaana on 2024-06-07 11:55:37 |

Share: | | | | |


ಬೆಟ್ಟಂಪಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಸೆ. 7,8 ರಂದು ನಡೆಯಲಿರುವ 39 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಮಿತಿಯ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕರವರ ಅಧ್ಯಕ್ಷತೆಯಲ್ಲಿ ಬೆಟ್ಟಂಪಾಡಿ ದೇವಾಲಯದ ವಠಾರದಲ್ಲಿ ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಉದ್ಯಮಿ ಮನಮೋಹನ ರೈ ಚೆಲ್ಯಡ್ಕ, ಅಧ್ಯಕ್ಷರಾಗಿ ಪತ್ರಕರ್ತ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ಉಮೇಶ್ ಮಿತ್ತಡ್ಕ,

ನಿಲ್ಲದ ಮಣಿಪುರ ಹಿಂಸಾಚಾರ -ಇಂದು ಮಣಿಪುರ ಶಾಸಕರಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ

Posted by Vidyamaana on 2023-06-18 03:09:25 |

Share: | | | | |


ನಿಲ್ಲದ ಮಣಿಪುರ ಹಿಂಸಾಚಾರ -ಇಂದು ಮಣಿಪುರ ಶಾಸಕರಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಣಿಪುರ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರಕ್ಕೆ ಕೊನೆಯೇ ಇಲ್ಲದಂತಾಗಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಿಜೆಪಿ ನಾಯಕರ ನಿವಾಸಗಳಿಗೆ ಬೆಂಕಿ ಹಚ್ಚುವ ಘಟನೆ ನಡೆದಿದ್ದರೆ, ಕಿಡಿಗೇಡಿಗಳ ಜತೆಗಿನ ಘರ್ಷಣೆಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಕೇಂದ್ರ ವಿದೇಶಾಂಗ ಖಾತೆ ಸಹಾಯಕ ಸಚಿವ ಆರ್‌.ಕೆ.ರಂಜನ್‌ ಸಿಂಗ್‌ ನಿವಾಸಕ್ಕೆ ಬೆಂಕಿ ಹಚ್ಚಿ ದಾಂಧಲೆ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ.ಬಿಷ್ಣುಪುರ ಜಿಲ್ಲೆಯ ಕ್ವಾಕ್ತಾ ಎಂಬಲ್ಲಿ ಬಿಜೆಪಿ ನಾಯಕರೊಬ್ಬರ ಮನೆಗೆ ನುಗ್ಗಿ ದಾಂಧಲೆ ಎಬ್ಬಿಸುವ ಯತ್ನ ನಡೆದಿದೆ. ಇದರ ಜತೆಗೆ ಶನಿವಾರ ಬೆಳಗ್ಗಿನ ಜಾವದವರೆಗೆ ಸ್ವಯಂಚಾಲಿತ ರೈಫ‌ಲ್‌ಗ‌ಳಿಂದ ಗುಂಡು ಹಾರಾಟವೂ ನಡೆದಿದೆ. ಇದಲ್ಲದೆ ಚುರಾಚಾಂದ್‌ಪುರ್‌ ಜಿಲ್ಲೆಯ ಕಂಗಾವಿ ಎಂಬಲ್ಲಿ ಸ್ಥಳೀಯ ಶಾಸಕರ ಮನೆಗೆ ನುಗ್ಗಲು ಯತ್ನಿಸಲಾಗಿದೆ.ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಅಧಿಕಾರಿಮರಿಯುಂ ಶಾರದಾ ದೇವಿ ಅವರ ನಿವಾಸಕ್ಕೆ ಅಕ್ರಮವಾಗಿ ನುಗ್ಗುವ ಪ್ರಯತ್ನ ಮಾಡಲಾಗಿದೆ. ಆದರೆ, ಭೂಸೇನೆ ಮತ್ತು ಆರ್‌ಎಎಫ್ನ ಯೋಧರು ಅದನ್ನು ತಡೆದಿದ್ದಾರೆ. ಮಣಿಪುರ ವಿವಿ ಕ್ಯಾಂಪಸ್‌ ಸೇರಿದಂತೆ ಹಲವು ಸ್ಥಳಗಳಲ್ಲಿ ಜನರು ಗುಂಪು ಸೇರಿದ್ದ ಹಲವು ಘಟನೆಗಳು ನಡೆದಿವೆ. ಇಂಫಾಲ್‌ನ ಆಸ್ಪತ್ರೆಯೊಂದರ ಸಮೀಪ 1 ಸಾವಿರಕ್ಕೂ ಅಧಿಕ ಮಂದಿ ಸೇರಿ ದೊಂಬಿ ಎಬ್ಬಿಸಲು ಮುಂದಾಗುತ್ತಿರುವ ಬಗ್ಗೆ ಸುಳಿವು ಸಿಕ್ಕಿದ ಕೂಡಲೇ ಭೂಸೇನೆ, ಆರ್‌ಎಎಫ್ ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿವೆ.


ಶಸ್ತ್ರಾಸ್ತ್ರ ಲೂಟಿಗೆ ಯತ್ನ: ಇಂಫಾಲ ಪಶ್ಚಿಮ ಜಿಲ್ಲೆಯ ಪೊಲೀಸ್‌ ಠಾಣೆಗೆ ನುಗ್ಗಿದ 300ರಿಂ0ದ 400 ಮಂದಿ ಜನರು ಅಲ್ಲಿ ಇದ್ದ ಶಸ್ತ್ರಾಸ್ತ್ರಗಳನ್ನು ದೋಚಲು ಪ್ರಯತ್ನ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ ಕ್ಷಿಪ್ರ ಕಾರ್ಯಾಚರಣೆ ಪಡೆಯ ಯೋಧರು, ಜನರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆಶಸ್ತ್ರಾಸ್ತ್ರ ಲೂಟಿಗೆ ಯತ್ನ: ಇಂಫಾಲ ಪಶ್ಚಿಮ ಜಿಲ್ಲೆಯ ಪೊಲೀಸ್‌ ಠಾಣೆಗೆ ನುಗ್ಗಿದ 300ರಿಂ0ದ 400 ಮಂದಿ ಜನರು ಅಲ್ಲಿ ಇದ್ದ ಶಸ್ತ್ರಾಸ್ತ್ರಗಳನ್ನು ದೋಚಲು ಪ್ರಯತ್ನ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ ಕ್ಷಿಪ್ರ ಕಾರ್ಯಾಚರಣೆ ಪಡೆಯ ಯೋಧರು, ಜನರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.ಇಂದು ಪ್ರಧಾನಿ ಭೇಟಿ:

ಮಣಿಪುರ ವಿಧಾನಸಭೆಯ ಸ್ಪೀಕರ್‌ ತಾಕ್‌ಚೋಮ್‌ ಸತ್ಯವ್ರತ ಸಿಂಗ್‌ ನೇತೃತ್ವದಲ್ಲಿ ಹಲವು ಶಾಸಕರು ಭಾನುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂಫಾಲಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಚಿಸಲಾಗಿದ್ದ ಶಾಂತಿ ಸಮಿತಿಯ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆಪರಿಸ್ಥಿತಿ ಸುಧಾರಿಸದಿದ್ದರೆ…

ಮಣಿಪುರದಲ್ಲಿ ಹಿಂಸಾ ಸ್ಥಿತಿಯನ್ನು ಸುಧಾರಿಸಲು ಬಿಜೆಪಿ ಮತ್ತು ಕೇಂದ್ರ ಸರ್ಕಾರ ಆದ್ಯತೆ ನೀಡಲೇಬೇಕು. ಇಲ್ಲದಿದ್ದರೆ, ಆ ಪಕ್ಷದ ಜತೆಗೆ ಹೊಂದಿರುವ ಮೈತ್ರಿಯನ್ನು ಮರು ಪರಿಶೀಲಿಸಬೇಕಾಗುತ್ತದೆ ಎಂದು ನ್ಯಾಷನಲ್‌ ಪೀಪಲ್‌ ಪಾರ್ಟಿ (ಎನ್‌ಪಿಪಿ)ಯ ಉಪಾಧ್ಯಕ್ಷ ಮತ್ತು ನಿವೃತ್ತ ಡಿಜಿಪಿ ಯುಮ್‌ನಾಮ್‌ ಜಯಕುಮಾರ್‌ ಸಿಂಗ್‌ ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಮೌನ ಪ್ರೇಕ್ಷಕರಾಗಿ ಇರಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ. ರಾಜ್ಯದಲ್ಲಿನ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ರಾಜ್ಯ ಸರ್ಕಾರ ಜನರ ರಕ್ಷಣೆ ಮಾಡುವಲ್ಲಿ ವಿಫ‌ಲಗೊಂಡಿದೆ ಎಂದು ದೂರಿದ್ದಾರೆ

ಕುರಿಯ ಹಿ ಪ್ರಾ ಶಾಲೆ ನೂತನ ವಿವೇಕ ಕೊಠಡಿ ಉದ್ಗಾಟನೆ

Posted by Vidyamaana on 2023-12-26 20:17:28 |

Share: | | | | |


ಕುರಿಯ ಹಿ ಪ್ರಾ ಶಾಲೆ  ನೂತನ ವಿವೇಕ ಕೊಠಡಿ ಉದ್ಗಾಟನೆ

ಪುತ್ತೂರು: ಕುರಿಯ ಸರಕಾರಿ ಹಿ ಪ್ರಾ ಶಾಲೆ ಇಲ್ಲಿ‌ನಿರ್ಮಾಣವಾದ ನೂತನ ವಿವೇಕ ಕೊಠಡಿಯನ್ನು ಶಾಸಕರಾದ ಅಶೋಕ್ ರೈ ಉದ್ಘಾಟಿಸಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚು ಪ್ರತಿಭಾವಂತರಾಗಿದ್ದು ಸೂಕ್ತ ಅವಕಾಶ ಕಲ್ಪಿಸಿದ್ದಲ್ಲಿ ಅವರು ದೊಡ್ಡ ಸಾಧಕರಾಗಬಹುದು ಎಂದು ಶಾಸಕರು ಹೇಳಿದರು.

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಣಣವನ್ನು ನೀಡಲಾಗುತ್ತದೆ. ಮಕ್ಕಳಿಗೆ ಶಾಲೆ ಮತ್ತು ಮನೆಯಲ್ಲಿ ಉತ್ತಮ ವಾತಾವರಣ‌ನಿರ್ಮಾಣವಾಗಬೇಕು.ಶಾಲೆಯಲ್ಲಿರುವ ಶಿಕ್ಷಕರು ಸಮನ್ವಯತೆಯಿಂದ ಕೆಲಸವನ್ನು ಮಾಡಬೇಕು. ಸಮನ್ವಯತೆ ಕೊರತೆಯ ಬಗ್ಗೆ ಅನೇಕ‌ದೂರುಗಳು ಕೇಳಿ ಬರುತ್ತಿದ್ದು ಆ ರೀತುಯಾಗದಂತೆ ಶಿಕ್ಷಕರುಗಳು ಎಚ್ಚರವಹಿಸಬೇಕಿದೆ ಎಂದು ಹೇಳಿದರು.


ಗ್ಯಾರಂಟಿ ಯೋಜನೆ ಮಕ್ಕಳ ಶಿಕ್ಣಣಕ್ಕೆ ಬಳಕೆ

ಸರಕಾರದ ಐದು ಗ್ಯಾರಂಟಿ ಯೋಜನೆಯು ಮಕ್ಕಳ ಶಿಕ್ಷಣಕ್ಕೆ ಬಳಕೆಯಾಗುತ್ತಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಮಹಿಳೆಯರ ಕೈ ಗಟ್ಟಿ ಮಾಡುವ ಉದ್ದೇಶ ಈ ಗ್ಯಾರಂಟಿ ಯೋಜನೆಯ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ಗ್ರಾಪಂ ಸದಸ್ಯರಾದ ಬೂಡಿಯಾರ್ ಪುರುಷೋತ್ತಮ ರೈಯವರು ಮಾತನಾಡಿ ಸರಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸುವ ಮೂಲಕ ಸರಕಾರಿ ಶಾಲೆಯನ್ನು ಉಳಿಸುವ ಕೆಲಸವನ್ನು ಮಾಡಬೇಕು. ಮನೆಯೊಂದರಲ್ಲಿ ಆರಂಭವಾದ ಕುರಿಯ ಸರಕಾರಿ ಶಾಲೆ ಆ ಬಳಿಕ ಮುಳಿ ಹುಲ್ಲಿನ ಮಾಡಿನ ಶಾಲೆಯಾಗಿ ರೂಪುಗೊಂಡು ಆ ಬಳಿಕ ಉತ್ತರೋತ್ತರ ಅಭಿವೃದ್ದಿ ಹೊಂದಿದೆ. ಸಾವಿರಾರು ಮಕ್ಕಳು ವಿದ್ಯೆ ಕಲಿತ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವುದು ಬೇಸರದ ವಿಚಾರವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ, ಗ್ರಾಪಂ ಸದಸ್ಯರುಗಳಾದ ಬೂಡಿಯಾರ್ ಪುರುಷೋತ್ತಮ ರೈ, ಯಾಕೂಬ್ ಕುರಿಯ, ನಾಗೇಶ್ ಎಂ, ಕಲಾವತಿ, ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ಜಬ್ಬಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ,ಕ್ಲಸ್ಟರ್ ಸಿಆರ್ ಪಿ ಪರಮೇಶ್ವರಿ, ನಿವೃತ್ತ ಬ್ಯಾಂಕ್ ಮೆನೆಜರ್ ನಾರಾಯಣ ರೈ, ಶಿಕ್ಷಕಿಯರಾದ  ಮಮತಾ, ರಶ್ಮಿತಾ ,ರಮ್ಯ, ಸಮದ್ ಕುರಿಯಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರಾದ ನವೀನ್ ಕುಮಾರ್ ಕೆ ಸ್ವಾಗತಿಸಿದರು. ಶಿಕ್ಷಕಿ ಕುಮಾರಿ ಕವಿತಾ ವಂದಿಸಿದರು. ದಿವ್ಯಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ: 13 ಮಂದಿ ಬಂಧನ

Posted by Vidyamaana on 2023-10-16 13:47:12 |

Share: | | | | |


ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ: 13 ಮಂದಿ ಬಂಧನ

ಬೆಳಗಾವಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ನಡೆದಿದ್ದು, ಘಟನೆ ಸಂಬಂಧ ಪೊಲೀಸರು 13 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.


ಅರ್ಜುನ ಗಂಡವ್ವಗೋಳ, ಲಕ್ಷ್ಮಿ ಮಸ್ಕಿ, ಶೋಭಾ ಮಾಳಗಿ, ಮಾರ್ಕಂಡೇಶ್ವರ ಮಹಿಮಗೋಳ, ರಾಘವೇಂದ್ರ ಚಿಂಚಲಿ, ಸರಸ್ವತಿ ಕೋಳಿ, ಸಾವಿತ್ರಿ ಪೂಜೇರಿ, ಕಮಲವ್ವ ಭಜಂತ್ರಿ, ಮಾರುತಿ ದೊಡಮನಿ, ಉದಯ ಗಂಡವ್ವಗೋಳ, ಕೃಷ್ಣಾ ಗಂಡವ್ವಗೋಳ, ಸುಧೀರ ಜೋಡಟ್ಟಿ, ಶಾಲವ್ವ ದೊಡಮನಿ ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶುಕ್ರವಾರ ರಾತ್ರಿ ರಾತ್ರಿ 9ರ ಸುಮಾರಿಗೆ ಇಲ್ಲಿನ ಮೃತ್ಯುಂಜಯ ಸರ್ಕಲ್ನಲ್ಲಿ ಸೇರಿದ ಕೆಲವು ಮಹಿಳೆಯರು ಹಾಗೂ ಪುರುಷರ ಗುಂಪು ಹಣದ ವಿಚಾರವಾಗಿ, ಶ್ರೀದೇವಿ ಎಂಬ ಮಹಿಳೆಯೊಂದಿಗೆ ಮಾತಿನ ಚಕಮಕಿ ನಡೆಸಿದ್ದರು. ಆ ಬಳಿಕ ಚಪ್ಪಲಿ, ಬೂಟುಗಳನ್ನು ಕಟ್ಟಿ ಹಾರ ಮಾಡಿ ಕೊರಳಿಗೆ ಹಾಕಿ ರಸ್ತೆ ಮಧ್ಯೆ ಮೆರವಣಿಗೆ ಮಾಡಿದ್ದರು. ಈ ಅಮಾನವೀಯ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಪ್ರಕರಣದಡಿ ಘಟಪ್ರಭಾ ಮಹಿಳಾ ಠಾಣೆಯಲ್ಲಿ 13ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ದಾಖಲಾಗಿದೆ.

Recent News


Leave a Comment: