ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಆರ್ಯಾಪು: ಅಮೃತ ಉದ್ಯಾನವನ ಬಿಕೋನ್ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

Posted by Vidyamaana on 2023-10-18 17:11:54 |

Share: | | | | |


ಆರ್ಯಾಪು: ಅಮೃತ ಉದ್ಯಾನವನ ಬಿಕೋನ್ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಪುತ್ತೂರು: ಆರ್ಯಾಪು ಪಂಚಾಯತ್

ಕಚೇರಿ ಮಾದರಿ ಪಂಚಾಯತ್ ಆಗಿದೆ. ಒಳ್ಳೆಯ ಪಂಚಾಯತ್ ನೋಡುವ ಅವಕಾಶ ಆಗಿದೆ. ಸರಕಾರಿ ಕಚೇರಿ ಅದರಲ್ಲಿಯೂ ಪಂಚಾಯತ್ ಕಚೇರಿಯೊಂದು ಈ ರೀತಿಯ ಅಚ್ಚುಕಟ್ಟಿನ ವ್ಯವಸ್ಥೆಯಲ್ಲಿರುವುದನ್ನು ನೋಡಿ ಅತೀವ ಸಂತೋಷವಾಯಿತು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಆರ್ಯಾಪು ಗ್ರಾ.ಪಂ. ಅಮೃತ ಉದ್ಯಾನವನ ಹಾಗೂ ತಾಲೂಕಿನ ಏಕೈಕ ಬೀಕೊನ್ ಡಿಜಿಟಲ್ ಗ್ರಂಥಾಲಯವನ್ನು ಅ. 17ರಂದು ಉದ್ಘಾಟಿಸಿ ಅವರು ಮಾತನಾಡಿದರು.


ಕಾನೂನಿನ ಹಿಂದೆ ನಾವು ಹೋಗುವುದಲ್ಲ. ಜನಪ್ರತಿನಿಧಿಗಳಾದ ನಾವು ಕಾನೂನು ತೊಡಕು ಪರಿಹರಿಸಿಕೊಂಡು ಜನರ ಕೆಲಸ ಮಾಡಿಕೊಡಬೇಕು. ಬಡವರಿಗೆ ಮಾಹಿತಿ ಕೊರತೆಯಿರುತ್ತದೆ. ಅವರಿಗೆ ಸರಿಯಾದ ಮತ್ತು ಪ್ರಾಮಾಣಿಕ ಸೇವೆಯನ್ನು ಜನಪ್ರತಿನಿಧಿಗಳು ಮತ್ತು ಪಂಚಾಯತ್‌ ಸಿಬ್ಬಂದಿಗಳು ಮಾಡಬೇಕು? ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.


ಹೋರಾಟದ ರೂವಾರಿಯಾಗಲಿದ್ದೇನೆ: ಪ್ರತೀ ಹಳ್ಳಿಯ ಜನರೂ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಮತ್ತು ವಿದ್ಯುತ್‌ನಿಂದ ವಂಚಿತರಾಗಬಾರದು. ಇದಕ್ಕಾಗಿ ನಾನು ಹೋರಾಟ ಮಾಡಲೂ ಸಿದ್ಧನಿದ್ದೇನೆ. ಈ ಹೋರಾಟಗಳಿಗೆ ನಾನೇ ರೂವಾರಿಯಾಗಲಿದ್ದೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಒಂದೂವರೆ ವರ್ಷದಲ್ಲಿ ಬಹುಗ್ರಾಮ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ. ಈಗಾಗಲೇ 230 ಕೋಟಿ ರೂ. ಟೆಂಡ‌ರ್ ಆಗಿ ಕಾಮಗಾರಿ ಪ್ರಕ್ರಿಯೆ ಆರಂಭಗೊಂಡಿದೆ. ಇದರಿಂದ ಪುತ್ತೂರು ಹಾಗೂ ಸುಳ್ಯ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಶುದ್ದೀಕರಿಸಿದ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಶಾಸಕರು ಹೇಳಿದರು.


ಅಭಿವೃದ್ಧಿಯಲ್ಲಿ ರಾಜಕೀಯವಿಲ್ಲ : 5 ವರ್ಷದಲ್ಲಿ ಏನಾದರೂ ಜನರ


ಸೇವೆ ಮಾಡಿ ಸಾಧನೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವಿಲ್ಲ. ಬಡವರು ಯಾರೂ ಬೇಕಾದರೂ ಸಹಾಯ, ಸರಕಾರದ ಸವಲತ್ತು ಪಡೆಯುವಲ್ಲಿ ಮುಚ್ಚುಮರೆಯಲ್ಲಿದೇ ನನ್ನ ಬಳಿ ಬನ್ನಿ ಎಂದು ಶಾಸಕರು ಹೇಳಿದರು.


ಸಾರ್ವಜನಿಕ ಮಾಹಿತಿ ಯಂತ್ರ ಜಿಲ್ಲೆಯಲ್ಲೇ ಪ್ರಥಮ ಬಿಕೋನ್ ಡಿಜಿಟಲ್ ಗ್ರಂಥಾಲಯ ವು ವಿಶೇಷ ಚೇತನರಿಗಾಗಿ ಇರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಪುತ್ತೂರು ತಾಲೂಕಿನ ಪ್ರಥಮ ಗ್ರಂಥಾಲಯವಾಗಿದೆ. ಅಲ್ಲದೇ ಈ ಗ್ರಂಥಾಲಯದೊಳಗೆ ಸಾರ್ವಜನಿಕರಿಗೆ ವಿವಿಧ ಇಲಾಖೆಗಳ ಮಾಹಿತಿ ಒದಗಿಸಬಲ್ಲ ಸಾರ್ವಜನಿಕ ಮಾಹಿತಿ ಪರದೆ ಡಿಜಿಟಲ್ ಇನ್‌ಫಾರ್ಮೆಶನ್ ಡಿಸ್‌ಪ್ಲೇ ಯಂತ್ರವನ್ನೂ ಅಳವಡಿಸಲಾಗಿದೆ. ಇದು ಜಿಲ್ಲೆಯಲ್ಲೇ ಪ್ರಥಮ ఎనిసిండిదే.


ಅಮೃತ ಉದ್ಯಾನವನ ಉದ್ಘಾಟನೆ

ಕಾನೂನು ತೊಡಕು ನಿವಾರಿಸಿ ಜನರ ಸೇವೆ ಮಾಡಬೇಕು ನಿರ್ವಹಣೆ ಮುಖ್ಯ

 ಸದಸ್ಯರೆಲ್ಲರೂ ಸೇರಿ ಉದ್ಯಾನವನ ನಿರ್ವಹಣೆ ಮಾಡಬೇಕು. ನಿರ್ವಹಣೆ ಮಾಡದಿದ್ದಲ್ಲಿ ಅದರ ಪ್ರಯೋಜನವಿಲ್ಲ. ಪರಿಸರಕ್ಕೆ ಪ್ರಯೋಜನ ಕೊಡುವ ಕೆಲಸವಾಗಬೇಕು. ಪ್ರಾಣಿ ಪಕ್ಷಿಗಳಿಗೆ ತಿನ್ನುವುದಕ್ಕಾದರೂ ಜಾಗ ಸಿಕ್ಕಲ್ಲಿ ಒಂದಷ್ಟು ಹಣ್ಣಿನ ಗಿಡಗಳನ್ನು ನೆಡಬೇಕು. ಆ ವಿಶೆಯಲ್ಲಿ ಆರ್ಯಾವು ಪಂಚಾಯತ್ ಒಂದು ಹೆಜ್ಜೆ ಮುಂದಿದೆ ಎಂದು ಶಾಸಕರು ಪ್ರಶಂಸೆ ವ್ಯಕ್ತಪಡಿಸಿದರು.


ಪುಸ್ತಕ ಓದಿ ಆರೋಗ್ಯ ಹೆಚ್ಚಿಸಿಕೊಳ್ಳಿ: ಜನಸಮೂಹವನ್ನು ಜ್ಞಾನದ ರೂಪಕ್ಕೆ ಪರಿವರ್ತಿಸಬೇಕಾದರೆ ಜ್ಞಾನ ಭಂಡಾರ ಅಗತ್ಯ. ಲೈಬ್ರರಿ ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ. ಸಾರ್ವಜನಿಕರು ಈ ವ್ಯವಸ್ಥೆಯ ಪ್ರಯೋಜನ ಪಡೆಯಿರಿ, ಪುಸ್ತಕ ಓದಿ. ಜ್ಞಾನದ ಜೊತೆಗೆ ಆರೋಗ್ಯ ಸುಧಾರಿಸಿಕೊಳ್ಳಲು ಇದು ಅನುಕೂಲವಾಗುತ್ತದೆ ಎಂದು ಅಶೋಕ್ ರೈಯವರು ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.


ಸಭಾಧ್ಯಕ್ಷತೆ ವಹಿಸಿದ್ದ ಪಂಚಾಯತ್ ಅಧ್ಯಕ್ಷೆ ಗೀತಾರವರು ಮಾತನಾಡಿ ಮೂಲಸೌಕರ್ಯಕ್ಕಾಗಿ ಹೆಚ್ಚಿನ ಅನುದಾನ ಒದಗಿಸಲು, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೇರಿದಂತೆ ಹಲವು ರೀತಿಯ ಅನುದಾನಕ್ಕಾಗಿ ಶಾಸಕರಿಗೆ ಮನವಿ ಸಲ್ಲಿಸಿದರು.


ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುಕನ್ಯಾರವರು ಮಾತನಾಡಿ ಗ್ರಂಥಾಲಯ ನಾಮಕೇವಾಸ್ತೆಯಾಗಿ ಉಳಿಯಬಾರದು. ಬಳಕೆ, ನಿರ್ವಹಣೆ, ಸ್ವಚ್ಛತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಆಸ್ತಿಯನ್ನು ಸಂರಕ್ಷಿಸಿಕೊಳ್ಳಬೇಕಾದದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.


ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಅಶೋಕ್ ಕುಮಾರ್ ಉಪಸ್ಥಿತರಿದ್ದರು.


ಅಭಿನಂದನೆ: ಆರ್ಯಾಪು ಕುರಿಯ ಗ್ರಾಮಸ್ಥರ ಪರವಾಗಿ ಶಾಸಕ ಅಶೋಕ್ ಕುಮಾರ್ ರೈ ಯವರನ್ನು ಇದೇ ವೇಳೆ ಸನ್ಮಾನಿಸಿ ಅಭಿನಂದಿಸಲಾಯಿತು.


ಪಿಡಿಒ ನಾಗೇಶ್ ರವರು ಪ್ರಸ್ತಾವನೆಗೈದು ಸ್ವಾಗತಿಸಿ, ಸ್ವಾತಂತ್ರೋತ್ಸವದ 75 ವರ್ಷಗಳ ನೆನಪಿಗಾಗಿ ಅಮೃತ ಗ್ರಾಮ ಪಂಚಾಯತ್ ಗೆ ಆಯ್ಕೆಯಾಗಿರುವ ರಾಜ್ಯದ 750 ಗ್ರಾ.ಪಂ. ಗಳಲ್ಲಿ ಆರ್ಯಾಪು ಕೂಡಾ ಒಂದಾಗಿದೆ. ಇದರ ಅಂಗವಾಗಿ ಡಿಜಿಟಲ್ ಬಿಕೊನ್ ಗ್ರಂಥಾಲಯ ನಿರ್ಮಾಣಗೊಂಡಿದೆ ಎಂದರು. ಮಹಾತ್ಮ ಗಾಂಧಿಯವರ ಕನಸಿನಂತೆ ಹಳ್ಳಿಯ ವಿಧಾನಸಭೆ ಅಭಿವೃದ್ಧಿಯಾಗಬೇಕು. ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಹಂತ ಹಂತಗಳ ಯೋಜನೆಗಳಿಗೆ ಬೆಂಬಲವಾಗಿ ನಿಂತದ್ದು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಾಗಿದೆ. ಗ್ರಾಮೀಣ ಭಾಗದ ಜನರಿಗೆ ವಿಹಾರ ಕಲ್ಪಿಸಿಕೊಡುವ ನಿಟ್ಟಿನಲ್ಲಿ ರೂ. 5 ಲಕ್ಷ ಉದ್ಯೋಗ ಖಾತ್ರಿ ಮತ್ತು ರೂ. 1.5 ಲಕ್ಷ ಅಮೃತ ಗ್ರಾಮ ಪಂಚಾಯತ್ ಯೋಜನೆಯಲ್ಲಿ ಸಂಟ್ಯಾರ್ ಬಳಿ ಆಮೃತ ಉದ್ಯಾನವನ ನಿರ್ಮಿಸಲಾಗಿದೆ. ರೂ. 4 ಲಕ್ಷ ಅಮೃತ ಗ್ರಾಮ ಪಂಚಾಯತ್ ಯೋಜನೆ, ರೂ. 1 ಲಕ್ಷ ಗ್ರಾ.ಪಂ. ಗ್ರಂಥಾಲಯ ಉಪಕರಣ ಹಾಗೂ ರೂ. 1 ಲಕ್ಷ 15ನೇ ಹಣಕಾಸು ಯೋಜನೆಯಲ್ಲಿ ತಾಲೂಕಿನ ಏಕೈಕ ಬಿಕೋನ್ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗಿದೆ ಎಂದು ನಾಗೇಶ್ ಹೇಳಿದರು.


ಮೊದಲ ಡಿಜಿಟಲ್ ಇನ್‌ಫಾರ್ಮೇಶನ್ ಡಿಸ್‌ಪ್ಲೇ ಮೆಷಿನ್: ಉದ್ಯಮಿ


ಅಶ್ರಫ್ ಕಮ್ಮಾಡಿಯವರ ಕೊಡುಗೆಯ ರೂ. 1.20 ಲಕ್ಷ ವೆಚ್ಚದ ಡಿಜಿಟಲ್ ಇನ್ಸಾರ್ಮೇಶನ್ ಡಿಸ್‌ಪ್ಲೇ ಯಂತ್ರವನ್ನು ಗ್ರಂಥಾಲಯದಲ್ಲಿ ಅಳವಡಿಸಲಾಗಿದೆ. ಸರಕಾರದ ಎಲ್ಲಾ ಇಲಾಖೆಗಳ ಮಾಹಿತಿಯನ್ನು ಸಾರ್ವಜನಿಕರು ನೇರವಾಗಿ ಇದರಲ್ಲಿ ಪಡೆಯಬಹುದಾಗಿದೆ.


ಇದು ಜಿಲ್ಲೆಯಲ್ಲೇ ಪ್ರಥಮವಾಗಿದೆ. ಈ ವೇಳೆ ಕೊಡುಗೈ ದಾನಿ ಆಶ್ರಫ್ ಕಮ್ಮಾಡಿಯವರಿಗೆ

ಕೃತಜ್ಞತೆ ಸಲ್ಲಿಸಲಾಯಿತು.


ಗೌರವಾರ್ಪಣೆ: ಗ್ರಂಥಾಲಯದ ಕಾಮಗಾರಿ ವಹಿಸಿಕೊಂಡ ಗುತ್ತಿಗೆದಾರ ಸುರೇಂದ್ರ ರೈ ಬಳ್ಳಮಜಲು, ಮನರೇಗಾ ಸಾಮಾಗ್ರಿ ಪೂರೈಕೆ ಮಾಡಿದ ಪವನ್ ಶೆಟ್ಟಿ, ನರೇಗಾ ಇಂಜಿನಿಯರ್ ಪ್ರಶಾಂತಿ ಹಾಗೂ ಶ್ರೀಲಕ್ಷ್ಮಿಯವರಿಗೆ ಗೌರವ ಸ್ಮರಣಿಕೆ ನೀಡಲಾಯಿತು.


ಬಹುಮಾನ ವಿತರಣೆ: ಗ್ರಂಥಪಾಲಕರ ದಿನಾಚರಣೆಯ ಅಂಗವಾಗಿ ನಡೆದ ಮಕ್ಕಳ ಪ್ರಬಂಧ ಸ್ಪರ್ಧಾ ವಿಜೇತರಾದ ಪೂಜಾ ಶ್ರೀ, ದೀಕ್ಷಾ ಎಂ., ಧನ್ಯ ಶ್ರೀ ಯವರಿಗೆ ಬಹುಮಾನ ವಿತರಿಸಲಾಯಿತು. ಸದಸ್ಯೆ ಪವಿತ್ರ ಎನ್. ವಂದಿಸಿದರು. ಸದಸ್ಯ ನೇಮಾಕ್ಷ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಅತಿಥಿಗಳನ್ನು ತಾಂಬೂಲ, ಶಾಲು ನೀಡಿ ಪಂಚಾಯತ್ ಸದಸ್ಯರಾದ ಬೂಡಿಯಾರ್ ಪುರುಷೋತ್ತಮ ರೈ ಮಾಜಿ ಅಧ್ಯಕ್ಷೆ ಸರಸ್ವತಿ, ಮಾಜಿ ಉಪಾಧ್ಯಕ್ಷೆ ಪೂರ್ಣಿಮಾ ರೈ, ಸದಸ್ಯರಾದ ವಸಂತ ಶ್ರೀದುರ್ಗಾ, ಯಾಕೂಬ್ ಯಾನೆ ಸುಲೈಮಾನ್ ಗೌರವಿಸಿದರು. ಪಂಚಾಯತ್ ಸದಸ್ಯರು, ಉದ್ಯೋಗ ಖಾತ್ರಿ ಇಂಜಿನಿಯರ್ ಗಳು, ಆರೋಗ್ಯ ಕಾರ್ಯಕರ್ತೆಯರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮಧ್ಯಾಹ್ನ ಪಂಚಾಯತ್ ವತಿಯಿಂದ ಭೋಜನ ವ್ಯವಸ್ಥೆ ಮಾಡಲಾಗಿತ್ತು.


ಉದ್ಘಾಟನೆ: ಸಭಾ ಕಾರ್ಯಕ್ರಮಕ್ಕೂ ಮೊದಲು ಸಂಟ್ಯಾರ್ ಬಳಿ ನಿರ್ಮಾಣಗೊಂಡಿರುವ ಅಮೃತ ಉದ್ಯಾನವನವನ್ನು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದ ಶಾಸಕರು ಬಳಿಕ ಉದ್ಯಾನವನದೊಳಗೆ ಗಿಡಗಳಿಗೆ ನೀರೆರೆದರು. ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿಗಳ ಜೊತೆಗೆ ಗಾರ್ಡನ್‌ ನಲ್ಲಿ ಫೋಟೋ ತೆಗೆಸಿಕೊಂಡರು. ಬಳಿಕ ಪಂಚಾಯತ್ ಕಚೇರಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಬಿಕೋನ್ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಿದರು. ಇರ್ದೆ ಶ್ರೀ ವಿಷ್ಣು ಚೆಂಡೆ ಮೇಳದವರಿಂದ ಚೆಂಡೆ ಮೇಳ ಆಕರ್ಷಣೆಯಾಗಿತ್ತು.

ಮೂಡಿಗೆರೆಯಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು

Posted by Vidyamaana on 2023-12-12 20:34:29 |

Share: | | | | |


ಮೂಡಿಗೆರೆಯಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು

ಚಿಕ್ಕಮಗಳೂರು, ಡಿ 12: ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮನೆಯಲ್ಲಿ ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.


ಮೃತ ಮಹಿಳೆಯನ್ನು ಶ್ವೇತಾ(31) ಎಂದು ಗುರುತಿಸಲಾಗಿದೆ. ಶ್ವೇತಾ ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಮಧ್ಯ ಪ್ರವೇಶಿಸಿದ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ, ಅಂತ್ಯ ಕ್ರಿಯೆಯನ್ನು ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.


ಶ್ವೇತಾ ಅವರ ಪತಿ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆತನೇ ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.


ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಶ್ವೇತಾ ಹಾಗೂ ದರ್ಶನ್ ಬೆಂಗಳೂರಿನಲ್ಲಿ ನೆಲೆಸಿದ್ದು, ನಾಲ್ಕು ದಿನಗಳ ಹಿಂದೆ ದೇವವೃಂದಕ್ಕೆ ಬಂದಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ನಿಂದ ಶ್ವೇತಾ ಮೃತಪಟ್ಟಿದ್ದಾಳೆಂದು ಪತಿ ದರ್ಶನ್ ಆಕೆಯ ಕುಟುಂಬಕ್ಕೆ ತಿಳಿಸಿದ್ದ.


ದರ್ಶನ್ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾದ ಹಿನ್ನಲೆ ಇಂಜಕ್ಷನ್ ನೀಡಿ ಕೊಲೆ ಮಾಡಿರಬಹುದೆಂದು ಆರೋಪಿಸಿರುವ ಶ್ವೇತಾ ಕುಟುಂಬದವರು ತಾರತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದವರನ್ನು ತಡೆದು ಶವ ಪರೀಕ್ಷೆಗೆ ಚಿಕ್ಕಮಗಳೂರು ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಗೃಹ ಜ್ಯೋತಿ ಸ್ಕೀಮ್ ಯೋಜನೆ ನೋಂದಣಿಗೆ ಹಣ ಪಡೆದ ಆರೋಪ: ಗ್ರಾಮ ಒನ್ ಕೇಂದ್ರ ಸೀಜ್

Posted by Vidyamaana on 2023-07-29 12:22:10 |

Share: | | | | |


ಗೃಹ ಜ್ಯೋತಿ ಸ್ಕೀಮ್ ಯೋಜನೆ ನೋಂದಣಿಗೆ ಹಣ ಪಡೆದ ಆರೋಪ: ಗ್ರಾಮ ಒನ್ ಕೇಂದ್ರ ಸೀಜ್

ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಜನರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಅವರಖೋಡ ಗ್ರಾಮದಲ್ಲಿನ ಗ್ರಾಮ ಒನ್ ಕೇಂದ್ರವನ್ನು ಸೀಜ್ ಮಾಡಲಾಗಿದೆಫಲಾನುಭವಿಗಳ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ಅಥಣಿ ತಾಲ್ಲೂಕಿನ ಅವರಖೋಡ ಗ್ರಾಮದಲ್ಲಿರುವ ಗ್ರಾಮ‌ ಒನ್ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ,


ಸಂಬಂಧಿಸಿದ ವ್ಯಕ್ತಿಯ ವಿರುದ್ಧ ದೂರು ಕೂಡ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಉಳ್ಳಾಲ :ವಿದ್ಯಾರ್ಥಿ ಮಹಮ್ಮದ್ ಹುಝೈಫ್ ನಾಪತ್ತೆ

Posted by Vidyamaana on 2023-10-30 18:11:05 |

Share: | | | | |


ಉಳ್ಳಾಲ :ವಿದ್ಯಾರ್ಥಿ ಮಹಮ್ಮದ್ ಹುಝೈಫ್ ನಾಪತ್ತೆ

ಉಳ್ಳಾಲ : ಮಾಸ್ತಿ ಕಟ್ಟೆ ಆಝಾದ್ ನಗರದ ನಿವಾಸಿ ಉಸ್ಮಾನ್  ಫಯಾಜ್ ಎಂಬವರ  ಮಗ ವಿದ್ಯಾರ್ಥಿ  ಮೊಹಮ್ಮದ್ ಹುಝೈಫ್ (16ವ ) ಆಗಸ್ಟ್ 29 ರಂದು ಸಂಜೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ

 ಹುಡುಗನ ಬಗ್ಗೆ ಮಾಹಿತಿ ದೊರೆತಲ್ಲಿ ಉಳ್ಳಾಲ  ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಅಥವಾ ಕೆಳಗಿನ  ಮೊಬೈಲ್ ನಂಬರಿಗೆ  ಮಾಹಿತಿ ಕೊಟ್ಟು ಸಹಕರಿಸಬೇಕಾಗಿ ವಿನಂತಿ.

9845227231  9886588985

ಮೋದಿ 3.0 : ದೇವರ ಹೆಸರಲ್ಲಿ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ

Posted by Vidyamaana on 2024-06-09 21:35:34 |

Share: | | | | |


ಮೋದಿ 3.0 : ದೇವರ ಹೆಸರಲ್ಲಿ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ

ನವದೆಹಲಿ : ಈ ಬಾರಿ ಚಿಕ್ಕಮಂಗಳೂರು ಉಡುಪಿ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಶೋಭಾ ಕರಂದ್ಲಾಜೆ ಅವರು 2004ರಲ್ಲಿ ಬಿಜೆಪಿ ಎಂಎಲ್ಸಿಯಾಗಿ ಆಯ್ಕೆಯಾಗಿದ್ದಾರೆ. 2014ರಲ್ಲಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 2019 ರಲ್ಲಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಶಾಸಕಿ,ಎಂಎಲ್ಸಿ ಹಾಗೂ ಸಂಸದರಾಗಿ ಆಯ್ಕೆಯಾಗಿದ್ದಾರೆ. 2018 ರಲ್ಲಿ ಬೆಂಗಳೂರಿನ ಯಶವಂತಪುರದ ಶಾಸಕಿಯಾಗಿದ್ದಾರೆ.

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

Posted by Vidyamaana on 2024-04-16 12:19:46 |

Share: | | | | |


ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.


ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ದ್ವಾರಕೀಶ್ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ದ್ವಾರಕೀಶ್, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದ್ದರು.



Leave a Comment: