ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುದ್ದಿಗಳು News

Posted by vidyamaana on 2024-07-05 17:03:24 |

Share: | | | | |


ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ. 5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

 Share: | | | | |


ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು

Posted by Vidyamaana on 2023-12-07 04:27:34 |

Share: | | | | |


ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು

ವಿಟ್ಲ: ಸಾಲೆತ್ತೂರಿನ ತೋಟವೊಂದರಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಅಡಿಕೆ ಮರ ಮುರಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.


ಗುಲಾಬಿ(48) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.


ಇವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದಿದ್ದು, ಇದರಿಂದ ತಲೆಗೆ ತೀವ್ರ ಪೆಟ್ಟಾಗಿದೆ. ಮಹಿಳೆಯನ್ನು ಕೂಡಲೇ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.


ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ

Posted by Vidyamaana on 2023-07-07 06:01:53 |

Share: | | | | |


ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ

ಪುತ್ತೂರು; ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ವೈದರನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿಧಾನಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ವಿಷಯ ಪ್ರಸ್ತಾಪಿಸಿದ್ದು ಸರಕಾರಿ ಆಸ್ಪತ್ರೆಯ ಸಮಸ್ಯೆಯಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದಾರೆ.

ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಅಗತ್ಯವಾಗಿ ಬೇಕಾಗಿದ್ದು , ಆಸ್ಪತ್ರೆಯಲ್ಲಿ ಒಬ್ಬರು ಪ್ರಸೂತಿ ತಜ್ಞರಿದ್ದು ಅವರು ಹೆಸರಿಗೆ ರಜೆ ಮೆಲೆ ತೆರಳಿದ ಕಾರಣ ಹೆರಿಗೆ ಮಾಡಿಸಲುವೈದ್ಯರು ಇಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿರುತ್ತದೆ. ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿರುವ ಏಕೈಕ ದೊಡ್ಡ ಸರಕಾರಿ ಆಸ್ಪತ್ರೆಯಗಿರುವ ಕಾರಣ ಸರಕಾರಿ ಆಸ್ಪತ್ರೆಗೆ ಹೆರಿಗೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು ವೈದ್ಯರಿಲ್ಲದ ಕಾರಣ ಸಮಸ್ಯೆ ಉಂಟಾಗಿದೆ. ಸರಕಾರ ತಕ್ಷಣವೇ ನೇಮಕ ವೈದ್ಯರನ್ನು ನೇಮಕ ಮಾಡುವ ಮೂಲಕ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಅದಿವೇಶನ ಶೂನ್ಯ ವೇಳೆಯಲ್ಲಿ ಶಾಸಕರು ಈ ಪ್ರಸ್ತಾಪವನ್ನು ಮಾಡಿದ್ದರು.

BREAKING:ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ

Posted by Vidyamaana on 2024-06-05 15:25:31 |

Share: | | | | |


BREAKING:ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯ ಸೋಲಿನ ಜವಾಬ್ದಾರಿಯನ್ನು ಹೊತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಬುಧವಾರ ರಾಜೀನಾಮೆ ನೀಡಿದ್ದಾರೆ. ಪಕ್ಷದ ಕಳಪೆ ಪ್ರದರ್ಶನದ ನಂತರ ಅವರು ರಾಜ್ಯದ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರೋದಾಗಿ ತಿಳಿದು ಬಂದಿದೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ತಮ್ಮನ್ನು ಉಪಮುಖ್ಯಮಂತ್ರಿ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ನಾಯಕತ್ವವನ್ನು ವಿನಂತಿಸಲು ಸಜ್ಜಾಗಿದ್ದಾರೆ.

ಕಡಬ: ಟ್ಯೂಶನ್ ಗೆ ತೆರಳಿದ ಬಾಲಕ ನಾಪತ್ತೆ ಪ್ರಕರಣ ಕುಮಾರಧಾರ ನದಿಯಲ್ಲಿ ಅದ್ವೈತ್ ಮೃತದೇಹ ಪತ್ತೆ

Posted by Vidyamaana on 2023-03-30 07:51:57 |

Share: | | | | |


ಕಡಬ: ಟ್ಯೂಶನ್ ಗೆ ತೆರಳಿದ ಬಾಲಕ ನಾಪತ್ತೆ ಪ್ರಕರಣ  ಕುಮಾರಧಾರ ನದಿಯಲ್ಲಿ ಅದ್ವೈತ್ ಮೃತದೇಹ ಪತ್ತೆ

ಕಡಬ: ಟ್ಯೂಷನ್ ಗೆಂದು, ಮನೆಯಿಂದ ತೆರಳಿದ್ದ ಹತ್ತನೇ ತರಗತಿಯ ಬಾಲಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕುಮಾರಧಾರ ನದಿಯ ನಾಕೂರು ಗಯದಲ್ಲಿ ಪತ್ತೆಯಾಗಿದ್ದು ಅಗ್ನಿ ಶಾಮಕ ದಳದವರು ಶವ ಮೇಲಕ್ಕೆತ್ತಿದ್ದಾರೆ.ಕಡಬದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ ಅದ್ವೈತ್ ಎಂಬಾತ ಮಾ.29ರಂದು ಟ್ಯೂಷನ್ ಗೆಂದು ತೆರಳಿದ್ದು ಬಳಿಕ ಮನೆಗೆಬಾರದೆ ನಾಪತ್ತೆಯಾಗಿದ್ದ.

ಮನೆಯವರು ಹಾಗೂ ಊರವರು ಸೇರಿಕೊಂಡು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ನಾಕೂರು ಗಯ ಎಂಬಲ್ಲಿಪತ್ತೆಯಾಗಿದ್ದು ಅನುಮಾನಕ್ಕೆಕಾರಣವಾಗಿತ್ತು.

ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

Posted by Vidyamaana on 2024-01-04 15:38:51 |

Share: | | | | |


ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

ನವದೆಹಲಿ: ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್‌ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ನಂತರ ಮೃತ ದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನದಲ್ಲಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.


ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.ಕೊಲೆಯಾದ ಗಡೋಲಿಯನ್ನು ತನ್ನ ಮೋಹದ ಬಲೆಗೆ ಬೀಳಿಸಿಕೊಂಡಿದ್ದ ದಿವ್ಯಾ ಪಹುಜಾ ನಕಲಿ ಎನ್‌ಕೌಂಟರ್‌ಗೆ ಸಹಕರಿಸಿದ್ದರು ಎಂದು ಮುಂಬೈ ಪೊಲೀಸರು ತಮ್ಮ ವರದಿಯಲ್ಲಿ ಹೇಳಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅಭಿಜಿತ್, ಯುವತಿ ಮತ್ತು ಇನ್ನೊಬ್ಬ ವ್ಯಕ್ತಿ ಜನವರಿ 2 ರಂದು (ಮಂಗಳವಾರ) ಮುಂಜಾನೆ 4 ಗಂಟೆಗೆ ಹೋಟೆಲ್‌ಗೆ ಆಗಮಿಸಿ ಕೊಠಡಿಯೊಂದಕ್ಕೆ ಹೋಗುತ್ತಿರುವ ದೃಶ್ಯವನ್ನು ತೋರಿಸುತ್ತದೆ. ನಂತರ ರಾತ್ರಿ ಅಭಿಜಿತ್ ಮತ್ತು ಇತರರು ದಿವ್ಯಾಳ ದೇಹವನ್ನು ಎಳೆದುಕೊಂಡು ಹೋಗುವುದು ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೊ ಚಿತ್ರೀಕರಣ ಪ್ರಕರಣ: ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನ

Posted by Vidyamaana on 2023-08-05 10:51:31 |

Share: | | | | |


ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೊ ಚಿತ್ರೀಕರಣ ಪ್ರಕರಣ: ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನ

ಮಂಗಳೂರು: ಮಹಿಳೆಯೊಬ್ಬರು ಸ್ನಾನ ಮಾಡುವಾಗ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದವ ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬುಧವಾರ ನಡೆದಿದ್ದು, ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನವಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ, ಘಟನೆಗೆ ಸಂಬಂಧಿಸಿ ಪ್ರಜ್ವಲ್ ಎಂಬವರು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸುಮಂತ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಸುಮಂತ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮೊಬೈಲ್ ಫೋನ್ ನ್ನು ಎಫ್ಎಸ್ಎಲ್ ತನಿಖೆಗೆ ಕಳುಹಿಸಲಾಗಿದ್ದು, ವರದಿಯ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ

Recent News


Leave a Comment: