ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಬ್ಯಾಂಕ್‌ನಿಂದ ಕಿರುಕುಳ ಆರೋಪ; ವಿಕಾಸಸೌಧದೆದುರು ದಂಪತಿಯಿಂದ ಆತ್ಮಹತ್ಯೆ ಹೈಡ್ರಾಮಾ

Posted by Vidyamaana on 2024-01-10 20:26:23 |

Share: | | | | |


ಬ್ಯಾಂಕ್‌ನಿಂದ ಕಿರುಕುಳ ಆರೋಪ; ವಿಕಾಸಸೌಧದೆದುರು ದಂಪತಿಯಿಂದ ಆತ್ಮಹತ್ಯೆ ಹೈಡ್ರಾಮಾ

ಬೆಂಗಳೂರು: ಖಾಸಗಿ ಬ್ಯಾಂಕ್‌ನಲ್ಲಿ (Private Bank) ಪಡೆದುಕೊಂಡಿದ್ದ ಸಾಲಕ್ಕೆ ದುಪ್ಪಟ್ಟು ಹಣ ಕಟ್ಟಿದರೂ ಕಿರುಕುಳ ನಿಂತಿಲ್ಲ ಎಂದು ಆರೋಪಿಸಿ ಕುಟುಂಬವೊಂದು ವಿಕಾಸಸೌಧದ ಮುಂದೆ ಆತ್ಮಹತ್ಯೆಗೆ (Self Harming) ಯತ್ನಿಸಿದೆ. ಕೂಡಲೇ ಅವರನ್ನು ಸ್ಥಳದಲ್ಲಿದ್ದ ಪೊಲೀಸರು ತಡೆದಿದ್ದಾರೆ.ವಿಕಾಸಸೌಧದ ಮುಂದೆ ಬಂದಿದ್ದ ಶಾಯಿಸ್ತಾ ಬಾನು ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿ ಏಕಾಏಕಿ ಸೀಮೆಎಣ್ಣೆಯನ್ನು ಮೈಮೇಲೆ ಸುರಿದುಕೊಂಡಿದ್ದಾರೆ.

ತಮಗೆ ಅನ್ಯಾಯವಾಗಿದೆ, ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕೂಗಿಕೊಡಿದ್ದಾರೆ. ಆದರೆ, ಅಷ್ಟರಲ್ಲಿ ವಿಕಾಸಸೌಧದ ಕಾವಲಿಗೆ ಇದ್ದ ಪೊಲೀಸರು ಅವರನ್ನು ತಡೆದಿದ್ದು, ರಕ್ಷಣೆ ಮಾಡಿದ್ದಾರೆ.


ಏನಿದು ಪ್ರಕರಣ?

ಜೆಜೆ ನಗರದಲ್ಲಿ ಶಾಯಿಸ್ತಾ ಬಾನು ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿಯ ಮನೆಯ ಇದೆ. ಈ ಮನೆ ಮೇಲೆ 50 ಲಕ್ಷ ರೂಪಾಯಿ ಸಾಲವನ್ನು ಈ ಕುಟುಂಬವು ಪಡೆದಿದೆ ಎನ್ನಲಾಗಿದೆ. ಈ ಸಾಲಕ್ಕೆ ಈಗ ಬಡ್ಡಿ ಸೇರಿ ಒಟ್ಟು 97 ಲಕ್ಷ ರೂಪಾಯಿಯನ್ನು ಕಟ್ಟಿದರೂ ಬ್ಯಾಂಕ್‌ನಿಂದ ಕಿರುಕುಳ ತಪ್ಪಿಲ್ಲ ಎಂದು ಆರೋಪ ಮಾಡಿದ್ದಾರೆ. ಹೀಗಾಗಿ ತಮಗೆ ಬೇರೆ ದಾರಿ ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಮೇಲೆ ಕೇಸ್ ದಾಖಲು

ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಮೇಲೆ ಈಗ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಐಪಿಸಿ 309 (ಆತ್ಮಹತ್ಯೆಗೆ ಯತ್ನ) ಹಾಗೂ ಐಪಿಸಿ 290 (ಸಾರ್ವಜನಿಕ ಸ್ಥಳಗಳಲ್ಲಿ ದುರ್ವರ್ತನೆ ) ಅಡಿ ಕೇಸ್ ದಾಖಲಾಗಿದೆ. ಶಾಯಿಸ್ತಾ ಬಾನು ಹಾಗು ಮೊಹಮದ್ ಮುನಾಯಿದ್ ಉಲ್ಲಾ ಇಬ್ಬರ ಮೇಲೂ ಪ್ರಕರಣ ದಾಖಲಾಗಿದೆ. ಆ ಬಳಿಕ ಮುಚ್ಚಳಿಕೆ ಬರೆಸಿಕೊಂಡು ಠಾಣಾ ಜಾಮೀನಿನ ಮೇಲೆ ಅವರನ್ನು ಪೊಲೀಸರು ಬಿಡುಗಡೆ ಮಾಡಿ ಕಳುಹಿಸಿದ್ದಾರೆ

ಬೆಳ್ಳಾರೆಯ ಬಾಡಿಗೆ ಮನೆ ಮೇಲೆ ಬೆಳ್ಳಂಬೆಳಗ್ಗೆ NIA ದಾಳಿ

Posted by Vidyamaana on 2024-03-05 16:13:39 |

Share: | | | | |


ಬೆಳ್ಳಾರೆಯ ಬಾಡಿಗೆ ಮನೆ ಮೇಲೆ ಬೆಳ್ಳಂಬೆಳಗ್ಗೆ NIA ದಾಳಿ

ಬೆಳ್ಳಾರೆ : ಎನ್.ಐ.ಎ ಅಧಿಕಾರಿಗಳ ತಂಡ ಪ್ರಕರಣವೊಂದರ ಸಂಬಂಧ ಮಾ‌.5 ರಂದು ಬೆಳ್ಳಾರೆಯ ಬಾಡಿಗೆ ಮನೆಗೆ ಬೆಳಗ್ಗೆ ದಾಳಿ ಮಾಡಿ ಮನೆಯನ್ನು ಶೋಧ ನಡೆಸಿ ನಂತರ ಬೀಜು ಎಂಬಾತನಿಗೆ ಸಮನ್ಸ್ ನೀಡಿ ಮೊಬೈಲ್ ಫೋನ್ ವಶಕ್ಕೆ ಪಡೆದು ಮಹಜರು ನಡೆಸಿ ಹೋಗಿರುವ ಅಧಿಕಾರಿಗಳು. 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಿಂತಿಕಲ್ಲು ಬಳಿಯ ಕಲ್ಮಡ್ಕ ನಿವಾಸಿ ಚಿದಾನಂದ ಎಂಬವರ ಬಾಡಿಗೆ ಮನೆ ಮೇಲೆ ಬೆಂಗಳೂರು ಬ್ರಾಂಚ್ ನ ಎನ್.ಐ.ಎ ಅಧಿಕಾರಿಗಳಾದ ಡಿವೈಎಸ್ಪಿ ರಾಜನ್ ಪಿ.ವಿ , ಸಬ್ ಇನ್ಸ್ಪೆಕ್ಟರ್ ಮಂಜಪ್ಪ , ಕಾನ್ಟೇಬಲ್ ಸುರೇಶ್.ಸಿ ನೇತೃತ್ವದ ಮೂರು ಜನರ ತಂಡ ಬೆಳ್ಳಾರೆ ಪೊಲೀಸರ ಸಹಕಾರದಲ್ಲಿ ಮಾ.5 ರಂದು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿ ಮನೆಯನ್ನು ಪರಿಶೀಲನೆ ನಡೆಸಿದ್ದಾರೆ‌.


*ಪ್ರಕರಣದ ವಿವರ:* 25-10-2023 ರಂದು RC-28/2023/NIA/DLI ಯಲ್ಲಿ 120B,121,121A&122 ಜೊತೆಗೆ 3,25 ಆರ್ಮ್ಸ್ 13 ,18 ಮತ್ತು UA(P) ಅಡಿಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿದಂತೆ ಬೆಳ್ಳಾರೆಯ ಚಿದಾನಂದ ಎಂಬವರ ಬಾಡಿಗೆ ಮನೆಗೆ ಎರಡು ದಿನದ ಹಿಂದೆ ಬಂದ ಕೇರಳ ರಾಜ್ಯದ ಇಡುಕ್ಕಿಯ ಬಿಜು ಅಬ್ರಾಹಂ @ ಬಿಜು ಎಮ್.ಎ (45) ಎಂಬಾತನ ವಾಸವಾಗಿದ್ದ ಮನೆಗೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ ನಂತರ ಬಿಜುಗೆ  ಸಮನ್ಸ್ ನೀಡಿದ್ದಾರೆ‌.


*ಮೊಬೈಲ್ ವಶಕ್ಕೆ:* ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ ಬಳಿಕ ಬಿಜು ಬಳಸುತ್ತಿದ್ದ ಮೊಬೈಲ್ ಫೋನ್‌ ಮತ್ತು ಅದರಲ್ಲಿದ್ದ ಜಿಯೋ ಕಂಪನಿಯ ಸಿಮ್ ಕಾರ್ಡ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸರ ಸಹಕಾರದಲ್ಲಿ ಮಹಜರು ನಡೆಸಿ ಹೋಗಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ Ad-Lab ನಲ್ಲಿ ಬೆಂಕಿ : ತಪ್ಪಿದ ಬಾರಿ ದುರಂತ ಲಕ್ಷಾಂತರ ರೂ ನಷ್ಟ

Posted by Vidyamaana on 2023-10-17 17:21:46 |

Share: | | | | |


ಶಾರ್ಟ್ ಸರ್ಕ್ಯೂಟ್ ನಿಂದ Ad-Lab ನಲ್ಲಿ ಬೆಂಕಿ : ತಪ್ಪಿದ ಬಾರಿ ದುರಂತ ಲಕ್ಷಾಂತರ ರೂ ನಷ್ಟ

ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಮಂಗಳವಾರ ಮಧ್ಯಾಹ್ನ ಬಂದ ಸಿಡಿಲಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ.ಸರಣಿ ಸಿಡಿಲು ಬಂದಿದ್ದು, ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿ ಕಂಪ್ಯೂಟರ್ ಸೇರಿ ಎಲ್ಲಾ ಉಪಕರಣಗಳು ಸುಟ್ಟು ಹೋಗಿದ್ದು ಲಕ್ಷಾಂತರ ರೂ ನಷ್ಟ ಉಂಟಾಗಿದೆ 

ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಯವರು ಬೆಂಕಿ ಶಮನ ಮಾಡುವ ಕಾರ್ಯ ಮಾಡಿದ್ದು, ಅಗ್ನಿಶಾಮಕ ದಳ ಆಗಮಿಸಿ ಸುಟ್ಟವಸ್ತುಗಳನ್ನು ಹಾಗೂ ಬೆಂಕಿಗೆ ತೀವ್ರ ಗೊಳ್ಳಲು ಸಹಕರಿಸುವ ವಸ್ತುಗಳನ್ನು ಹೊರ ಹಾಕುವ ಕಾರ್ಯ ಮಾಡಿದರಿಂದ ಬಾರಿ ದುರಂತ ತಪ್ಪಿದೆ.

HSRP ನಂಬರ್ ಪ್ಲೇಟ್ : ವಾಹನ ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

Posted by Vidyamaana on 2024-04-29 08:11:43 |

Share: | | | | |


HSRP ನಂಬರ್ ಪ್ಲೇಟ್ : ವಾಹನ ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ವಾಹನಗಳಿಗೆ ಹೈಸೆಕ್ಯುರಿಟಿ ನಂಬ‌ರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಲಾಗಿರುವ ಗಡುವನ್ನು ಮತ್ತೆ ವಿಸ್ತರಣೆ ಮಾಡುವ ಅವಕಾಶ ಇಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ.ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್ರವರಿಯಲ್ಲಿ ಎಚ್‌ಎಸ್‌ಆರ್‌ಪಿ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ್ದು ಇನ್ನು ಮುಂದೆ ಆದನ್ನು ವಿಸ್ತರಿಸಲು ಚಿಂತನೆ ನಡೆಸಿಲ್ಲ ಎಂದು ವರದಿಯಾಗಿದೆ.2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ಎರಡು ಗಡುವಿನ ವಿಸ್ತರಣೆಗಳ ಹೊರತಾಗಿಯೂ, ರಾಜ್ಯದಲ್ಲಿ ಕೇವಲ 34 ಲಕ್ಷ ಎಚ್‌ಎಸ್‌ಆರ್ಪಿಗಳು ಮಾತ್ರ ನೋಂದಾಯಿಸಲ್ಪಟ್ಟಿವೆ. ಹೆಚ್ಚುವರಿ ಸಾರಿಗೆ ಆಯುಕ್ತ (ಜಾರಿ) ಸಿ.ಮಲ್ಲಿಕಾರ್ಜುನ ಮಾತನಾಡಿ, ಫೆಬ್ರವರಿಯಿಂದ ಸುಮಾರು 18 ಲಕ್ಷ ನೋಂದಣಿಗಳು ನಡೆದಿವೆ ಮತ್ತು ಹೆಚ್ಚಿನ ವಾಹನಗಳು ಇನ್ನೂ ಎಚ್‌ಎಸ್‌ಆರ್ಪಿಯನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ.

ಆಡ್ವಾಣಿ ಮುರಳಿ ಮನೋಹರ ಜೋಷಿ ಮಂದಿರ ಉದ್ಘಾಟನೆಗೆ ಬರದಂತೆ ಮನವಿ ಮಾಡಿದ್ದೇವೆ ; ಚಂಪತ್ ರಾಯ್

Posted by Vidyamaana on 2023-12-19 20:47:58 |

Share: | | | | |


ಆಡ್ವಾಣಿ ಮುರಳಿ ಮನೋಹರ ಜೋಷಿ ಮಂದಿರ ಉದ್ಘಾಟನೆಗೆ  ಬರದಂತೆ ಮನವಿ ಮಾಡಿದ್ದೇವೆ ; ಚಂಪತ್ ರಾಯ್

ಅಯೋಧ್ಯೆ, ಡಿ.19: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಪಾಲಿನ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರು ವಯಸ್ಸು ಮತ್ತು ಆರೋಗ್ಯಸಮಸ್ಯೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗುವ ಸಾಧ್ಯತೆಗಳಿವೆ ಎಂದು ರಾಮ ಮಂದಿರ ಟ್ರಸ್ಟ್ ಹೇಳಿದೆ.


"ಕುಟುಂಬದ ಅತ್ಯಂತ ಹಿರಿಯರಾಗಿರುವ ಇಬ್ಬರು ಮುಖಂಡರ ವಯಸ್ಸಿನ ಹಿನ್ನೆಲೆಯಲ್ಲಿ ಅವರು ಸಮಾರಂಭಕ್ಕೆ ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ" ಎಂದು ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ. 


ಅಡ್ವಾಣಿಗೆ 96 ವರ್ಷ ವಯಸ್ಸಾಗಿದ್ದು, ಮುರಳಿ ಮನೋಹರ ಜೋಶಿಯವರು ಮುಂದಿನ ತಿಂಗಳು 90ಕ್ಕೆ ಕಾಲಿಡಲಿದ್ದಾರೆ. ಜನವರಿ 22ರಂದು ನಡೆಯುವ ಪ್ರತಿಷ್ಠೆ ಕಾರ್ಯಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸುತ್ತಿದ್ದಾರೆ ಎಂದು ರಾಯ್ ಸ್ಪಷ್ಟಪಡಿಸಿದರು.


ಜನವರಿ 15ರ ವೇಳೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಪ್ರಾಣ ಪ್ರತಿಷ್ಠೆಯ ಪೂಜಾ ವಿಧಿವಿಧಾನಗಳು ಜನವರಿ 16ರಂದು ಆರಂಭಗೊಂಡು 22ರ ವರೆಗೂ ಮುಂದುವರಿಯಲಿವೆ ಎಂದು ವಿವರಿಸಿದರು. ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಕರೆಸಲು ಮೂರು ಮಂದಿಯ ತಂಡವನ್ನು ನೇಮಕ ಮಾಡಲಾಗಿದೆ. ಇದಲ್ಲದೆ, ದೇಶದ ವಿವಿಧೆಡೆಯಿಂದ ನಾಲ್ಕು ಸಾವಿರ ಸಾಧು ಸಂತರು, 2200 ಅತಿಥಿಗಳು ಆಗಮಿಸಲಿದ್ದಾರೆ ಎಂದು ಚಂಪತ್ ರಾಯ್ ತಿಳಿಸಿದ್ದಾರೆ. 


ಉದ್ಘಾಟನಾ ಕಾರ್ಯಕ್ರಮದ ನಂತರ ಜನವರಿ 24ರಿಂದ 48 ದಿವಸಗಳ ಮಂಡಲ ಪೂಜೆ ಆರಂಭಗೊಳ್ಳಲಿದ್ದು ಜನವರಿ 23ರಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದಿದ್ದಾರೆ.

ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ವಜಾ

Posted by Vidyamaana on 2023-10-24 20:27:34 |

Share: | | | | |


ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ವಜಾ

ಬೀಜಿಂಗ್: ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ಅವರನ್ನು ಚೀನಾ ಸರ್ಕಾರ ತೆಗೆದುಹಾಕಿದೆ. ಇದಕ್ಕೆ ಯಾವುದೇ ವಿವರಣೆಯನ್ನು ನೀಡಲಾಗಿಲ್ಲ. ಚೀನಾ ರಾಜ್ಯ ಪ್ರಸಾರಕ ಸಿಸಿಟಿವಿ ವರದಿ ಮಾಡಿದ್ದು, ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಸಚಿವರನ್ನು ಸರಕಾರ ವಜಾ ಮಾಡಿದೆ ಎಂದಿದೆ.


ಯಾವುದೇ ವಿವರಣೆಯನ್ನು ನೀಡದೆ ಜುಲೈನಲ್ಲಿ ಅಧಿಕಾರದಿಂದ ತೆಗೆದುಹಾಕಲ್ಪಟ್ಟ ಮಾಜಿ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಬಳಿಕ  ಅದೇ ರೀತಿಯ ಕ್ರಮ ಎದುರಿಸಿದ ಎರಡನೇ ವ್ಯಕ್ತಿ ಲಿ ಅವರಾಗಿದ್ದಾರೆ.


ಮಾರ್ಚ್‌ನಲ್ಲಿ ಕ್ಯಾಬಿನೆಟ್ ಪುನರ್ರಚನೆಯ ಸಮಯದಲ್ಲಿ ರಕ್ಷಣಾ ಸಚಿವ ಆದ ಲಿ  ಆಗಸ್ಟ್ 29 ರಂದು ಭಾಷಣವೊಂದನ್ನು ಮಾಡಿದ ನಂತರ ಜನರ ಜೊತೆ ಕಾಣಿಸಿಕೊಂಡಿರಲಿಲ್ಲ. ಆವರು ಕಾಣೆಯಾಗಿರುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದು, ಅವರ ಎಲ್ಲಿದ್ದಾರೆ ಏನ್‌ ಮಾಡ್ತಿದಾರೆ ಅಂತ ತಿಳುದು ಬಂದಿರಲಿಲ್ಲ.ಅಧ್ಯಕ್ಷ ಮತ್ತು ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ನಾಯಕ ಕ್ಸಿ ಜಿನ್‌ಪಿಂಗ್ ಅವರ ಅಧಿಕಾರ ಮುಂದುವರಿಯುವ ಬಗ್ಗೆ ಪ್ರಶ್ನೆಗಳನ್ನು ಲಿ ಎತ್ತಿದ್ದರು. ಅಪಾರ ದೇಶ ನಿಷ್ಠೆ ತೋರುತ್ತಿದ್ದ ಆವರು ಸಾರ್ವಜನಿಕ ಮತ್ತು ಖಾಸಗಿ ಭ್ರಷ್ಟಾಚಾರದ ವಿರುದ್ಧ ಪಟ್ಟುಬಿಡದೆ ದನಿ ಎತ್ತುತ್ತಿದ್ದರು.


ಇದು ಜಿನ್‌ಪಿಂಗ್ ಅವರಿಗೆ ಮುಜುಗರ ತರುತ್ತಿತ್ತು. ರಾಜಕೀಯ ಪ್ರತಿಸ್ಪರ್ಧಿಗಳನ್ನು ಮಟ್ಟ ಹಾಕಬೇಕು, ಹದಗೆಡುತ್ತಿರುವ ಆರ್ಥಿಕತೆಯ ನಡುವೆ ಅಮೆರಿಕಾದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ತಮ್ಮ ಮಾತು ಕೇಳುವವರನ್ನು ಆ ಸ್ಥಾನಕ್ಕೆ ತರಬೇಕೆಂಬುದು ಅಧ್ಯಕ್ಷ ಜಿನ್‌ಪಿಂಗ್ ಯೋಚಿಸುತ್ತಿದ್ದರು ಎನ್ನಲಾಗಿದೆ.



Leave a Comment: