ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ವಿಟ್ಲ:ಸಹೋದರಿಬ್ಬರು ವಿಷ ಸೇವನೆ -ಗಂಭೀರ

Posted by Vidyamaana on 2023-09-13 16:21:22 |

Share: | | | | |


ವಿಟ್ಲ:ಸಹೋದರಿಬ್ಬರು ವಿಷ ಸೇವನೆ -ಗಂಭೀರ

ವಿಟ್ಲ: ಕುದ್ದುಪದವು ನಿವಾಸಿ ಸಹೋದರರಿಬ್ಬರು

ವಿಷ ಸೇವನೆ ಮಾಡಿ ಗಂಭೀರವಾಗಿ ಅಸ್ವಸ್ಥಗೊಂಡು ವಿಟ್ಲ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿ ರಾಜ್ ವಿಷ ಸೇವನೆ ಮಾಡಿದವರು ಎಂದು ತಿಳಿದು ಬಂದಿದೆ. ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬಳಿಕ ಅಲ್ಲಿಂದ ಹೆಚ್ಚುವರಿ ಚಿಕಿತ್ಸೆಗಾಗಿ ವರ್ಗಾವಣೆ ಮಾಡಲಾಗಿದೆ.

ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು: ದೇವೇಗೌಡ

Posted by Vidyamaana on 2024-02-03 11:59:56 |

Share: | | | | |


ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು: ದೇವೇಗೌಡ

ನವದೆಹಲಿ: ‘ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ತೆರವು ವಿರೋಧಿಸಿ ಪ್ರತಿಭಟನೆ ಸಂದರ್ಭದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು. ಅವರು ನಮ್ಮ ಪಕ್ಷದ ಶಾಲು ಹಾಕಬಹುದಿತ್ತು‍’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದರು. 


ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನಾನು ಖಂಡಿತವಾಗಿಯೂ ಕೇಸರಿ ಶಾಲು ಹಾಕುವುದಿಲ್ಲ. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ವೇದಿಕೆ ಹಂಚಿಕೊಂಡರೂ ನನ್ನ ಪಕ್ಷದ ಶಾಲು ಹಾಕಿಕೊಳ್ಳುತ್ತೇನೆ’ ಎಂದು ಸ್ಪಷ್ಟಪಡಿಸಿದರು. 


‘ಸೀಟು ಹಂಚಿಕೆ ಏನೇ ಇರಲಿ, ಇಬ್ಬರೂ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಪ್ರತಿಭಟನೆ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿದ್ದಾರೆ. ಆಯಾ ಸಂದರ್ಭಕ್ಕೆ ತಕ್ಕಂತೆ ಹಾಕಿದ್ದಾರೆ. ಅದಕ್ಕೆ ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯ ಇಲ್ಲ’ ಎಂದೂ ಹೇಳಿದರು.

ಬಿಜೆಪಿ ಜತೆಗೆ ಸೀಟು ಹಂಚಿಕೆ ಬಗ್ಗೆ ನಾನು ಮಾತನಾಡುವುದಿಲ್ಲ. ಕುಮಾರಸ್ವಾಮಿ ಮತ್ತು ಅಮಿತ್ ಶಾ ಚರ್ಚೆ ಮಾಡಲಿದ್ದಾರೆ’ ಎಂದರು.


ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ: ರಿಕ್ಷಾ ಪ್ರಯಾಣಿಕ ನಾಗೇಶ್ ಸ್ಥಳದಲ್ಲೇ ಮೃತ್ಯು

Posted by Vidyamaana on 2023-10-24 07:31:12 |

Share: | | | | |


ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ: ರಿಕ್ಷಾ ಪ್ರಯಾಣಿಕ ನಾಗೇಶ್ ಸ್ಥಳದಲ್ಲೇ ಮೃತ್ಯು

ವಿಟ್ಲ: ಪೆರುವಾಯಿ–ಬೆರಿಪದವು ರಸ್ತೆಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ರಿಕ್ಷಾದಲ್ಲಿದ್ದ ಮೂವರ ಪೈಕಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಪೆರುವಾಯಿ–ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ರಿಕ್ಷಾದಲ್ಲಿದ್ದ ಬಾಯಾರು ಪೆರುವೋಡಿ ನಿವಾಸಿ ನಾಗೇಶ್ ಭಟ್ (47) ಎಂಬವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಉಳಿದವರು ಗಂಭೀರ ಗಾಯ ಗೊಂಡಿದ್ದು, ಸ್ಥಳದಲ್ಲಿ ಸೇರಿದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಫೆಲಸ್ತೀನ್ ಗೆ ಬೆಂಬಲ ಸೂಚಿಸಿ ಎಸ್.ಡಿ.ಪಿ.ಐ ವತಿಯಿಂದ ಪುತ್ತೂರು ತಾಲೂಕಿನ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Posted by Vidyamaana on 2023-10-20 16:35:47 |

Share: | | | | |


ಫೆಲಸ್ತೀನ್ ಗೆ ಬೆಂಬಲ ಸೂಚಿಸಿ ಎಸ್.ಡಿ.ಪಿ.ಐ ವತಿಯಿಂದ ಪುತ್ತೂರು ತಾಲೂಕಿನ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

ಪುತ್ತೂರು: ಮಾತೃ ಭೂಮಿಗಾಗಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಫೆಲೆಸ್ತೀನಿಗೆ ಭಾರತದ ಬೆಂಬಲ ಮುಂದುವರಿಸಬೇಕು ಮತ್ತು ಫೆಲಸ್ತೀನ್ ಹೋರಾಟಕ್ಕೆ ಭಾರತೀಯರಾದ ನಮ್ಮ ಬೆಂಬಲವಿದೆ ಎಂದು ಸೂಚಿಸಿ ತಾಲೂಕಿನ ವಿವಿಧ ಕಡೆಗಳಲ್ಲಿ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು. ಕೂರ್ನಡ್ಕ, ಪರ್ಲಡ್ಕ, ಬನ್ನೂರು, ಸಾಲ್ಮರ, ಕಬಕ, ಬೀಟಿಕೆ ಮುರ,ಉರಿಮಜಲು, ಉಪ್ಪಿನಂಗಡಿ, ನೆಕ್ಕಿಲಾಡಿ, ಹಿರೇಬಂಡಾಡಿ, ಕೊಲ್ಪೆ ವಲಯದ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಲಾಯಿತು.

BIG NEWS : ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

Posted by Vidyamaana on 2024-06-03 07:05:40 |

Share: | | | | |


BIG NEWS : ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

ಬೆಂಗಳೂರು : ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ರ ಹಿನ್ನಲೆಯಲ್ಲಿ ನಾಳೆ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜೂ.04 ರ ಬೆಳಿಗ್ಗೆ 06 ಗಂಟೆಯಿಂದ ಜೂ.05 ರ ಬೆಳಿಗ್ಗೆ 06 ಗಂಟೆಯವರೆಗೆ ಸಿಆರ್‍ಪಿಸಿ 1973 ರ ಸೆಕ್ಷನ್ 144 ರಡಿ ರಾಜ್ಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ-ಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದೂ ಚುನಾವಣಾ ಆಯೋಗ ಆದೇಶಿಸಿದೆ.

ಮತ ಎಣಿಕೆ ನಂತರ ವಿಜಯ ಹೊಂದಿದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಸಭೆ ಮತ್ತು ಇತರೆ ಕಾರ್ಯಕ್ರಮಗಳನ್ನು ನಡೆಸಿದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾಗುವ ಸಾಧ್ಯತೆಗಳಿರುವುದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಹಿತದೃಷ್ಠಿಯಿಂದ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಜಾರಿಗೊಳಿಸಲಾಗಿದೆ.

ಷರತ್ತುಗಳು:

ಪ್ರತಿಬಂಧಕಾಜ್ಞೆ ಅನ್ವಯ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ ಸಮಾರಂಭ, ವಾಹನ ಜಾಥಾ, ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಪೋಟಕ, ದಹನ ವಸ್ತುಗಳು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಅಥವಾ ಬೆಂಬಲಿಗರು ಸೇರಿ ಐದು ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ.

ಮತ ಎಣಿಕೆ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿ ವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ. ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿದೆ.

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಎಸ್.ಡಿ.ಎಮ್ ನ ವಿದ್ಯಾರ್ಥಿ ಚಂದ್ರಿಕಾ ಅಯ್ಕೆ

Posted by Vidyamaana on 2023-12-24 16:34:55 |

Share: | | | | |


ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಎಸ್.ಡಿ.ಎಮ್ ನ ವಿದ್ಯಾರ್ಥಿ ಚಂದ್ರಿಕಾ ಅಯ್ಕೆ

ಬೆಳ್ತಂಗಡಿ : 2023-24 ಸಾಲಿನ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಕ್ಯಾಲಿಕಟ್ ನಲ್ಲಿ ಡಿ.28 ರಂದು ನಡೆಯುತ್ತಿರುವ ಸೌತ್‌ ಜೋನ್ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಚಂದ್ರಿಕಾ (20) ಆಯ್ಕೆಯಾಗಿದ್ದಾರೆ. 

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ದಿ.ಮೋಹನ್ ಮತ್ತು ಯಶೋಧ ದಂಪತಿಗಳ ಮೊದಲ ಪುತ್ರಿ ಚಂದ್ರಿಕಾ‌ ಹಲವು ಕ್ರೀಡಾಕುಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.


ಇವರು 2022-23 ಸಾಲಿನ ಕೇರಳ ಕೊಚ್ಚಿಯಲ್ಲಿ ನಡೆದ ಹ್ಯಾಂಡ್ವಾಲ್ ಪಂದ್ಯಾಟದಲ್ಲಿ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ಸೌತ್‌ ಜೋನ್‌ ಆಡಿದ್ದಾರೆ‌.2022-23 ಸಾಲಿನ ಬೆಂಗಳೂರಿನಲ್ಲಿ ನಡೆದ ಅಮೇಚೂರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾಳೆ.2022-23ಸಾಲಿನ ಉಡುಪಿಯಲ್ಲಿ ನಡೆದ ಮಂಗಳೂರು ಯೂನಿವರ್ಸಿಟಿ ಗೇಮ್ ನಲ್ಲಿ  400 ಮೀಟರ್ hardals ನಲ್ಲಿ ದ್ವಿತೀಯ ಸ್ಥಾನ ಮತ್ತು 4.400 ಮೀಟರಿನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.2022-23 ಸಾಲಿನಲ್ಲಿ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾರೆ.2023-24ಸಾಲಿನಲ್ಲಿ ನಡೆದ ಮಂಗಳೂರುನಲ್ಲಿ ನಡೆದ  ರಾಜ್ಯ ಮಟ್ಟದ ಅಮೇಚುರ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾರೆ.2023-24 ಸಾಲಿನಲ್ಲಿ  ಮಂಗಳೂರಿನಲ್ಲಿ ನಡೆದ ಮಂಗಳೂರು ಯೂನಿವರ್ಸಿಟಿ  ರೇಸಿಂಗ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.



Leave a Comment: