ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಉಡುಪಿ: ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿಯ ಪರೋಲ್ ಅರ್ಜಿ ತಿರಸ್ಕೃತ

Posted by Vidyamaana on 2024-02-10 21:50:12 |

Share: | | | | |


ಉಡುಪಿ: ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿಯ  ಪರೋಲ್ ಅರ್ಜಿ ತಿರಸ್ಕೃತ

ಉಡುಪಿ : ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿರುವ ಪರೋಲ್ ಅರ್ಜಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಿರಸ್ಕರಿಸಿ ಆದೇಶ ನೀಡಿದೆ.ಫೆಬ್ರವರಿ 1ರಂದು ನಿಧನರಾದ ತನ್ನ ಸಹೋದರ ನಿತಿನ್ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪರೋಲ್ ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಆರೋಪಿ ಫೆಬ್ರವರಿ 8ರಂದು ಅರ್ಜಿ ಸಲ್ಲಿಸಿದ್ದನು.ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗೆ ಪರೋಲ್ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅಲ್ಲದೆ ಆರೋಪಿಯ ಮೇಲೆ ದಾಳಿಯಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಆರೋಪಿ ತನ್ನ ಸಹೋದರ ಮೃತಪಟ್ಟ ಬಗ್ಗೆ ಯಾವುದೇ ಮರಣ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸದೆ ಇರುವುದರಿಂದ ಆತನಿಗೆ ಪರೋಲ್ ನೀಡಬಾರದು ಎಂದು ವಾದ ಮಂಡಿಸಿದ್ದರು. ಕೋರ್ಟ್ ಈ ವಾದವನ್ನು ಪುರಸ್ಕರಿಸಿತ್ತು.

ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

Posted by Vidyamaana on 2024-04-11 07:34:41 |

Share: | | | | |


ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.‌ ಪೂಜಾರಿ ಭೇಟಿ ನೀಡಿದರು.

ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅವರು ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೌರವಿಸಿ, ಹಾರೈಸಿದರು.

ಕೊನೆಗೂ ಪುತ್ತೂರಿಗೆ ವರುಣಾಗಮನ ; ಖುಷಿ ತಂದ ಮೊದಲ ಮಳೆಯ ಸಿಂಚನ

Posted by Vidyamaana on 2023-05-05 07:52:47 |

Share: | | | | |


ಕೊನೆಗೂ ಪುತ್ತೂರಿಗೆ ವರುಣಾಗಮನ ; ಖುಷಿ ತಂದ ಮೊದಲ ಮಳೆಯ ಸಿಂಚನ

ಪುತ್ತೂರು: ಬಿರುಬಿಸಿಲಿನಿಂದ ಕಂಗಾಲಾಗಿದ್ದ ಪುತ್ತೂರಿನ ಜನತೆಗೆ ಇಂದು ಮಳೆಯ ಆಗಮನ ಸಂತೋಷವನ್ನು ನೀಡಿದೆ. ಪುತ್ತೂರು ಜಾತ್ರೆಗೆ ನಾಲ್ಕು ಹನಿ ಮಳೆಯಾದರೂ ಸುರಿಯುತ್ತದೆ ಎಂಬ ನಿರೀಕ್ಷೆ ಈ ಬಾರಿ ಹುಸಿಯಾಗಿತ್ತು. ಮಾತ್ರವಲ್ಲದೇ ತಾಲೂಕಿನ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದರೂ ಪುತ್ತೂರು ಭಾಗದಲ್ಲಿ ಮಳೆ ಇಲ್ಲದೆ ಜನ ಪರಿತಪಿಸುವಂತಾಗಿತ್ತು.

ಗಾಜಾದಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಇಸ್ರೇಲ್‌ ಕೂಡಲೇ ನಿಲ್ಲಿಸಿ : ಸೌದಿ ದೊರೆ

Posted by Vidyamaana on 2023-10-21 09:54:38 |

Share: | | | | |


ಗಾಜಾದಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಇಸ್ರೇಲ್‌ ಕೂಡಲೇ ನಿಲ್ಲಿಸಿ : ಸೌದಿ ದೊರೆ

ರಿಯಾದ್‌: ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಸೌದಿ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಆಗ್ರಹಿಸಿದರು. ರಿಯಾದ್‌ನಲ್ಲಿ ನಡೆದ ಗಲ್ಫ್ ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳ ಸಮಾವೇಶದಲ್ಲಿ ಮಾತನಾಡಿದ ಅವರು, “ಗಾಜಾದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತೀವ್ರ ದುಃಖವಾಗಿದೆ. ಘರ್ಷಣೆಯಲ್ಲಿ ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಮಿಲಿಟರಿ ಕಾರ್ಯಾಚರಣೆಯನ್ನು ಇಸ್ರೇಲ್‌ ಕೂಡಲೇ ನಿಲ್ಲಿಸಬೇಕು. ಶಾಶ್ವತ ಶಾಂತಿ ಸಾಧಿಸುವ ನಿಟ್ಟಿನಲ್ಲಿ ಪ್ರತ್ಯೇಕ ಪ್ಯಾಲೆಸ್ತೀನ್‌ ರಾಷ್ಟ್ರ ಸ್ಥಾಪನೆಯಾಗಬೇಕು’ ಎಂದು ಒತ್ತಾಯಿಸಿದರು.


ಯಾವುದೇ ಸಂದರ್ಭದಲ್ಲಿ ಹಾಗೂ ಯಾವುದೇ ರೀತಿಯಲ್ಲೂ ನಾಗರಿಕರನ್ನು ಗುರಿಯಾಗಿ ನಡೆಸುವ ದಾಳಿಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಮೊಹಮ್ಮದ್‌ ಬಿನ್‌ ಸಲ್ಮಾನ್‌ ಪ್ರತಿಪಾದಿಸಿದರು.

ಗಮನಿಸಿ : ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ!

Posted by Vidyamaana on 2024-06-21 14:41:56 |

Share: | | | | |


ಗಮನಿಸಿ : ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ!

ಬೆಂಗಳೂರು  : ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದವರ ಪಟ್ಟಿ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಸಿದವರು ಅಧಿಕೃತ ವೆಬ್‌ ಸೈಟ್‌ ಭೇಟಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದು.

ಕರ್ನಾಟಕ ಪಡಿತರ ಚೀಟಿಯ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:-

ಮೊದಲಿಗೆ, ಇಲ್ಲಿ ನೀಡಲಾದ ಅಧಿಕೃತ ವೆಬ್ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ

11 ತಿಂಗಳ ಮಗುವನ್ನು ಬಿಟ್ಟು ಪ್ರಿಯಕರನಬಳಿ ಬಂದ ಹುಬ್ಬಳ್ಳಿ ಮಹಿಳೆ

Posted by Vidyamaana on 2023-06-14 08:48:13 |

Share: | | | | |


11 ತಿಂಗಳ ಮಗುವನ್ನು ಬಿಟ್ಟು ಪ್ರಿಯಕರನಬಳಿ ಬಂದ ಹುಬ್ಬಳ್ಳಿ ಮಹಿಳೆ

ಪುತ್ತೂರು: ತವರು ಮನೆಗೆ ತೆರಳಿದ್ದ ಮಹಿಳೆಯೋರ್ವರು ಅಲ್ಲಿ ತನ್ನ ೧೧ ತಿಂಗಳ ಮಗುವನ್ನು ಬಿಟ್ಟು ಪುತ್ತೂರಿನಲ್ಲಿದ್ದ ತನ್ನ ಪ್ರಿಯತಮನನ್ನು ಸೇರಿಕೊಂಡಿದ್ದು ಆಕೆಯನ್ನು ಹುಡುಕಿಕೊಂಡು ಮನೆಯವರು ತಡ ರಾತ್ರಿ ಪುತ್ತೂರಿನ ಕೋಡಿಂಬಾಡಿಯಲ್ಲಿ ಹುಡುಕಾಟ ನಡೆಸಿದ್ದು ಆದರೆ ಅಲ್ಲಿಂದ ಅವರಿಬ್ಬರು ತಪ್ಪಿಸಿಕೊಂಡಿದ್ದು ಪೊಲೀಸರು ಹುಡುಕಾಟ ನಡೆಸಿದ ಘಟನೆ ಜೂ. ೧೩ ರಂದು ತಡ ರಾತ್ರಿ ನಡೆದಿದೆ.

ಹುಬ್ಬಳ್ಳಿಯ ಮಹಿಳೆಯೋರ್ವರು ಅದೇ ಊರಿನ ಯುವಕನೋರ್ವನನ್ನು ಪ್ರೀತಿಸುತ್ತಿದ್ದು ಆತ ಕೋಡಿಂಬಾಡಿ ಭಾಗದಲ್ಲಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾನೆ ಎಂಬ ಮಾಹಿತಿ ಮನೆಯವರಿಗೆ ಮೊದಲೇ ಇತ್ತು. ತವರು ಮನೆಯಲ್ಲಿದ್ದ ಆಕೆ ದಿಡೀರನೆ ತನ್ನ ಮಗುವನ್ನು ತೊರೆದು ನಾಪತ್ತೆಯಾಗಿದ್ದಳು. ಫೋನ್ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ. ಆಕೆ ತಪ್ಪಿಸಿಕೊಂಡು ಆತನ ಬಳಿಗೆ ಬಂದಿರಬಹುದು ಎಂದು ಭಾವಿಸಿ ಆಕೆಯ ತವರು ಮನೆಯವರು ಪುತ್ತೂರಿಗೆ ಬಂದಿದ್ದಾರೆ. ರಾತ್ರಿ ಸುಮಾರು ೧೧ ಗಂಟೆಯ ವೇಳೆ ಕೋಡಿಂಬಡಿಗೆ ಬಂದಿದ್ದಾರೆ. ಪರಿಚಯವಿಲ್ಲದ ಜನರು ವ್ಯಕ್ತಿಯೋರ್ವನನ್ನು ಹುಡುಕಾಟ ನಡೆಸುತ್ತಿದ್ದಾರೆ ಎಂಬ ವಿಚಾರ ತಿಳಿದ ಕೋಡಿಂಬಾಡಿ ಗ್ರಾಪಂ ಸದಸ್ಯ ಜಯಪ್ರಕಾಶ್ ಬದಿನಾರ್ ರವರು ಅವರಿಂದ ಮಾಹಿತಿ ಪಡೆದುಕೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿತಿ ನೀಡಿದ ಕೆಲವೇ ನಿಮಿಷದಲ್ಲಿ ಸ್ಥಳಕ್ಕೆ ಪೊಲಿಸರು ಬಂದಿದ್ದು ಪೊಲೀಸರು ಅವರ ಜೊತೆ ಹುಡುಕಾಟ ಆರಂಭಿಸಿದ್ದಾರೆ. ಆದರೆ ಕೋಡಿಂಬಾಡಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಆತ ಅಲ್ಲಿಂದ ಪರಾರಿಯಾಗಿದ್ದ. ಹುಡುಕಾಟ ನಡೆಸಿದ ಅವರು ಕೊನೆಗೆ ಪುತ್ತೂರಿಗೆ ಬಂದು ನಗರ ಠಾಣೆಯಲ್ಲಿ ಸೇರಿಕೊಂಡಿದ್ದರು. ಬಳಿಕ ಪೊಲೀಸರು ಟವರ್ ಲೊಕೇಶನ್ ಪತ್ತೆ ಮಾಡಿದಾಗ ಅವರಿಬ್ಬರೂ ಸಿದ್ದಕಟ್ಟೆಯಲ್ಲಿರುವುದಾಗಿ ಮಾಹಿತಿ ಲಬ್ಯವಾಗಿದ್ದು ಸಿದ್ದಕಟ್ಟೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಗ್ರಾಪಂ ಸದಸ್ಯನ ಕಾಳಜಿಗೆ ಪ್ರಶಂಸೆ

ಪರವೂರಿಂದ ಮಗಳನ್ನು ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ತಕ್ಷಣಕ್ಕೆ ನೆರವಿಗೆ ಸಿಕ್ಕಿದ್ದು ಕೋಡಿಂಬಾಡಿ ಗ್ರಾಪಂ ಸದಸ್ಯ ಜಯಪ್ರಕಾಶ್ ಬದಿನಾರ್. ತಡ ರಾತ್ರಿ ಯಾರೂ ಇಲ್ಲದ ವೇಳೆ ಊರು ಕೇರಿ ಗೊತ್ತಿಲ್ಲದ ಆ ಕುಟುಂಬಕ್ಕೆ ಗ್ರಾಪಂ ಸದಸ್ಯ ನೆರವಾಗಿದ್ದಾರೆ. ನಾಪತ್ತೆಯಾಗಿದ್ದ ಮಗಳನ್ನು ಹುಡುಕುವಲ್ಲಿ ಸಹಕಾರ ನೀಡಿದ್ದಲ್ಲದೆ ಪೊಲೀಸರನ್ನು ಕರೆಸಿ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಿದ್ದು ಹುಬ್ಬಳ್ಳಿಯಿಂದ ಬಂದ ಕುಟುಂಬ ಗ್ರಾಪಂ ಸದಸ್ಯ ಜಯಪ್ರಕಾಶ್ ಬದಿನಾರ್ ಅವರ ಸಹಾಯಕ್ಕೆ ಅಭಿನಂದಿಸಿದ್ದಾರೆ.

ಉಚಿತ ಬಸ್ಸಿನಲ್ಲಿ ಬಂದಿದ್ದಳು

ಕೈಯಲ್ಲಿ ನಯಾ ಪೈಸೆ ಇಲ್ಲದಿದ್ದರೂ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬಂದಿದ್ದ ಮಹಿಳೆ ಹುಬ್ಬಳ್ಳಿಯಿಂದ ಪುತ್ತೂರು ತನಕವೂ ಉಚಿತವಾಗಿಯೇ ಪ್ರಯಣ ಬೆಳೆಸಿದ್ದಳು ಎನ್ನಲಾಗಿದೆ. ಪುತ್ತೂರಿಗೆ ಬರಲು ಹಣ ಇಲ್ಲ ಎಂದು ಆಕೆ ಹೇಳಿದಾಗ ಬಸ್ಸು ಫ್ರೀ ಇದೆ ಬಾ ಎಂದು ಆತ ತಿಳಿಸಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆದರೆ ಆಕೆ ಅಷ್ಟು ಬೇಗ ನಮ್ಮ ಕಣ್ಣು ತಪ್ಪಿಸಿ ಬರುತ್ತಾಳೆ ಎಂದು ನಾವು ಗ್ರಹಿಸಿಯೇ ಇರಲಿಲ್ಲ ಎಂದು ಮಹಿಳೆಯ ತಾಯಿ ಕಣ್ಣೀರು ಹಾಕುತ್ತಿದ್ದರು.



Leave a Comment: