ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

Posted by Vidyamaana on 2024-05-24 08:11:35 |

Share: | | | | |


ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

ಗದಗ: ಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶಪ್ಪ ಕಟ್ಟಿಮನಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.ನನ್ನ ಸಾವಿಗೆ ಅಳಿಯಂದಿರು ಕಾರಣ ಎಂದು ವಿಡಿಯೋ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೋ ಬಾಲ್‌ ಕೊಟ್ಟ ಅಂಪೈರ್ ನನ್ನು ಚಾಕುವಿನಿಂದ ಇರಿದ ಆಟಗಾರ

Posted by Vidyamaana on 2023-04-03 08:48:19 |

Share: | | | | |


ನೋ ಬಾಲ್‌ ಕೊಟ್ಟ ಅಂಪೈರ್ ನನ್ನು ಚಾಕುವಿನಿಂದ ಇರಿದ ಆಟಗಾರ

ಭುವನೇಶ್ವರ್: ಕ್ರಿಕೆಟ್‌ ಆಡುವಾಗ ಸಣ್ಣಪುಟ್ಟ ವಿಚಾರಕ್ಕೆ ವಾಗ್ವಾದ ನಡೆಯುವುದು ಸಾಮಾನ್ಯ. ಆದರೆ ಇಲ್ಲೊಂದು ಘಟನೆ ಒಡಿಶಾ ರಾಜ್ಯವನ್ನು ಬೆಚ್ಚಿ ಬೀಳಿಸಿದೆಭಾನುವಾರ (ಏ. 2 ರಂದು) ಒಡಿಶಾದ ಕಟಕ್‌ ನಲ್ಲಿ ಬ್ರಹ್ಮಪುರ ಮತ್ತು ಶಂಕರಪುರ ಎಂಬ ಎರಡು ತಂಡಗಳ ನಡುವೆ ಕ್ರಿಕೆಟ್‌ ಮ್ಯಾವ್‌ ನಡೆಯುತ್ತಿತ್ತು. ಈ ಪಂದ್ಯಕ್ಕೆ 22 ವರ್ಷದ ಲಕ್ಕಿ ರಾವುತ್ ತೀರ್ಪುಗಾರನಾಗಿ ನಿಂತಿದ್ದರು. ಪಂದ್ಯ ನಡೆಯುತ್ತಿದ್ದ ವೇಳೆ ಎಸೆತವೊಂದಕ್ಕೆ ʼನೋ ಬಾಲ್‌ʼ ಎಂದು ಅಂಪೈರ್ ತೀರ್ಪು ನೀಡಿದ್ದಾರೆ. ಈ ವೇಳೆ ಇದು ನೋ ಬಾಲ್‌ ಅಲ್ಲ ಎಂದು ಸ್ಮೃತಿ ರಂಜನ್ ರೌತ್ ಎಂಬಾತ ಅಂಪೈರ್  ನೊಂದಿಗೆ ವಾದಕ್ಕೆ ಇಳಿದಿದ್ದಾನೆ.ವಾದ ಜಗಳಕ್ಕೆ ತಿರುಗಿ ಚೂರಿಯಿಂದ ತೀರ್ಪುಗಾರನಾಗಿ ನಿಂತಿದ್ದ ಲಕ್ಕಿ ರಾವುತ್ ಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಕ್ಕಿ ರಾವುತ್‌ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸುವಾಗಲೇ ಆತ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ.

ಗೋವಾದ ಹೊಟೇಲಿನಲ್ಲಿ ಹೆತ್ತ ಮಗುವನ್ನೇ ಹತ್ಯೆ ಮಾಡಿದ ಮಹಿಳಾ ಉದ್ಯಮಿ

Posted by Vidyamaana on 2024-01-09 15:24:41 |

Share: | | | | |


ಗೋವಾದ ಹೊಟೇಲಿನಲ್ಲಿ ಹೆತ್ತ ಮಗುವನ್ನೇ ಹತ್ಯೆ ಮಾಡಿದ ಮಹಿಳಾ ಉದ್ಯಮಿ

ಬೆಂಗಳೂರು, ಜ.9: ಗೋವಾದ ಹೋಟೆಲ್​ ಒಂದರಲ್ಲಿ ಮಗುವಿನ ಹತ್ಯೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಉದ್ಯಮಿ, ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪೊಲೀಸರು ಬಂಧಿಸಿದ್ದಾರೆ. ಗೋವಾಗೆ ತೆರಳಿದ್ದಾಗ ಹೋಟೆಲ್​ನಲ್ಲಿ ತಂಗಿದ್ದ ಸುಚನಾ ಸೇಠ್ ಕೊಠಡಿಯಲ್ಲಿ ತನ್ನ ಮಗನ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. 


ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್ ಅಪ್ ಮೈಂಡ್‌ಫುಲ್ (ಎಐ) ಲ್ಯಾಬ್‌ ಎಂಬ ಸಂಸ್ಥೆಯ ಸಿಇಓ ಆಗಿರುವ ಸುಚನಾ ಸೇಠ್ ಸೋಮವಾರ ರಾತ್ರಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋವಾದಿಂದ ಬೆಂಗಳೂರಿಗೆ ಟ್ಯಾಕ್ಸಿ ಮಾಡಿಕೊಂಡು ಬಂದಿದ್ದ ಆರೋಪಿಯನ್ನು ಗೋವಾ ಪೊಲೀಸರ ಸೂಚನೆ ಮೇರೆಗೆ ಐಮಂಗಲದಲ್ಲಿ ಬಂಧಿಸಲಾಗಿದೆ. 




ಹೋಟೆಲ್​ನಿಂದ ಬೆಂಗಳೂರಿಗೆ ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ ಹೊರಟಾಗ ಹೋಟೆಲ್ ಸಿಬ್ಬಂದಿ ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಅವರು ಸಂಬಂಧಿಕರ ಮನೆಗೆ ಕಳಿಸಿದ್ದೇನೆಂದು ಸುಳ್ಳು ಹೇಳಿ ಟ್ಯಾಕ್ಸಿ ಮೂಲಕ ಬೆಂಗಳೂರಿನತ್ತ ತೆರಳಿದ್ದರು. ಈ ವೇಳೆ ಅನುಮಾನಗೊಂಡ ಹೋಟೆಲ್​ನವರು ರೂಮ್ ಸ್ವಚ್ಛಗೊಳಿಸಲು ಹೋಗಿದ್ದು ಅಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ, ಪೊಲೀಸರು ಟ್ಯಾಕ್ಸಿ ಡ್ರೈವರ್‌ ಸಂಪರ್ಕ ಮಾಡಿ, ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.


ಇದರಂತೆ, ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಪೊಲೀಸ್ ಠಾಣೆ ಬಳಿ ಟ್ಯಾಕ್ಸಿ ಚಾಲಕ ಕಾರು ನಿಲ್ಲಿಸಿದ್ದು ಪೊಲೀಸರು ಆರೋಪಿ ಸುಚನಾ ಸೇಠ್‌ ರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ, ಕಾರಿನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್‌ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಸುಚನಾ ಸೇಠ್‌ ಪತಿ ವೆಂಕಟ ರಾಮನ್‌ ಚಿತ್ರದುರ್ಗಕ್ಕೆ ಆಗಮಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸುಚನಾ ಸೇಠಳನ್ನು ಹೆಚ್ಚಿನ ತನಿಖೆಗಾಗಿ ಗೋವಾಕ್ಕೆ ಕರೆದೊಯ್ಯಲಾಗಿದೆ. 


ತನ್ನ ಮಾಜಿ ಪತಿಯ ಮೇಲಿನ ವಿರಸದಿಂದಾಗಿಯೇ ಮಗುವನ್ನು ಕೊಂದಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ತನ್ನ ಪತಿ ಮಗುವಿನ ಜತೆ ಮಾತನಾಡಬಾರದು ಎಂಬ ಕಾರಣಕ್ಕಾಗಿ ಸುಚನಾ ಸೇಠ್‌ ಮಗುವನ್ನೇ ಹತ್ಯೆಗೈದಿರುವುದಾಗಿ ತಿಳಿದುಬಂದಿದೆ. 2010ರಲ್ಲಿ ವಿವಾಹವಾಗಿದ್ದ ಸೇಠ್ ದಂಪತಿಗೆ 2019ರಲ್ಲಿ ಗಂಡು ಮಗು ಜನಿಸಿತ್ತು. ಇಬ್ಬರ ನಡುವಿನ ವಿರಸದಿಂದಾಗಿ 2020ರಲ್ಲಿ ವಿವಾಹ ವಿಚ್ಛೇದನ ಪಡೆದಿದ್ದರು. ಆದರೆ ಪ್ರತಿ ಭಾನುವಾರ ಮಗುವನ್ನು ಭೇಟಿಯಾಗಲು ತಂದೆಗೆ ಕೋರ್ಟ್‌ ಅನುಮತಿ ನೀಡಿದ್ದರಿಂದ ಇದೇ ವಿಚಾರ ಗಲಾಟೆಗೆ ಕಾರಣವಾಗಿತ್ತು.

BREAKING: ಬಿಜೆಪಿ ವಿರುದ್ಧ ಅಪಪ್ರಚಾರ:ರಾಹುಲ್‌ಗಾಂಧಿ ಗೆ ಜಾಮೀನು ಮಂಜೂರು...

Posted by Vidyamaana on 2024-06-07 11:19:08 |

Share: | | | | |


BREAKING: ಬಿಜೆಪಿ ವಿರುದ್ಧ ಅಪಪ್ರಚಾರ:ರಾಹುಲ್‌ಗಾಂಧಿ ಗೆ ಜಾಮೀನು ಮಂಜೂರು...

ಬೆಂಗಳೂರು  : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿಗೆ ಜಾಮೂನು ಮಂಜೂರಾಗಿದೆ. 

2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆ ವಿರುದ್ಧ ಕಾರ್ಯಾಗಾರ.

Posted by Vidyamaana on 2023-09-09 17:14:11 |

Share: | | | | |


ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆ ವಿರುದ್ಧ ಕಾರ್ಯಾಗಾರ.

ಬಂಟ್ವಾಳ :  ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಇದರ ಆಶ್ರಯದಲ್ಲಿ "ಮಾದಕ ವಸ್ತುಗಳ ಬಳಕೆ ವಿರುದ್ಧ ಕಾರ್ಯಾಗಾರ" ವು ಪಾಣೆಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ  ಶುಕ್ರವಾರ  ನಡೆಯಿತು.

   

  ಕಾರ್ಯಾಗಾರವನ್ನು ಉದ್ಘಾಟಿಸಿದ ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ ಎಂ.ಎನ್. ಮಾತನಾಡಿ ಮಕ್ಕಳ ಮೇಲೆ ಅತಿಯಾದ ಒತ್ತಡ, ಅತಿಯಾದ ನಿರೀಕ್ಷೆ ಅಥವಾ ಮಕ್ಕಳ ಮೇಲಿನ ಕಾಳಜಿ ರಹಿತ ಪೋಷಕತ್ವ  ಕೆಲವೊಮ್ಮೆ ಮಕ್ಕಳ ನೈಜ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ, ಮಗುವಿನ ಪರಿಪೂರ್ಣ ಬೆಳವಣಿಗೆಗೆ ಪೂರಕವಾದ ಪ್ರಾಥಮಿಕ ಶಿಕ್ಷಣ ನೀಡಬೇಕಾಗಿದೆ ಎಂದ ಅವರು ವ್ಯಸನಿಗಳಿಗೆ ಯಾವುದೇ ಧರ್ಮವಿಲ್ಲ ಅವರಿಗೆ ವ್ಯಸನವೇ ಧರ್ಮ, ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತೀ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.


     ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಾತನಾಡಿ ದೇಶದ ಸಾಧಕರ ಪಟ್ಟಿಯಲ್ಲಿ ಇರಬೇಕಾದ ಯುವಜನತೆ ಕ್ಷಣಿಕ ಸುಖಕ್ಕಾಗಿ ಅಮಲು ಪದಾರ್ಥಗಳ ದಾಸರಾಗುತ್ತಿರುವುದು ದುರಂತ. ಇದನ್ನು ನಿವಾರಿಸಲು ಮನೆ ಮನೆಗಳಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಉಂಟಾಗಬೇಕಾದ ಅವಶ್ಯಕತೆ ಇದೆ ಎಂದರು.

 

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಯುಕ್ತ ಜಮಾಅತ್ ಅಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಇಂತಹ ಕಾರ್ಯಕ್ರಮಗಳು ಕಾಲದ ಅವಶ್ಯಕತೆಯಾಗಿದ್ದು ಪ್ರತೀ ಜಮಾಅತ್ ಮಟ್ಟದಲ್ಲಿ ಹಮ್ಮಿಕೊಳ್ಳುವರೇ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. 


ಬಂಟ್ವಾಳ ತಾಲೂಕು ಉಪ ತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಮಾತನಾಡಿದರು. ಸಂಯುಕ್ತ ಜಮಾಅತ್ ಕೋಶಾಧಿಕಾರಿ ಹಾಜಿ ಪಿ.ಎಸ್.ಅಬ್ದುಲ್ ಹಮೀದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


    ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್ ಸ್ವಾಗತಿಸಿ,  ಕಾರ್ಯದರ್ಶಿ ನೋಟರಿ ಕೆ. ಅಬೂಬಕರ್ ವಿಟ್ಲ  ವಂದಿಸಿದರು. ಆಶಿಕ್ ಕುಕ್ಕಾಜೆ ಕಿರಾಅತ್ ಪಠಿಸಿದರು, ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕಾದ್ಯಕ್ಷ ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಸಿಂಗಾಪುರದಲ್ಲಿ ಮಾದಕವಸ್ತು ಕಳ್ಳಸಾಗಣೆ: ಭಾರತ ಮೂಲದ ತಂಗರಾಜುಗೆ ಇಂದು ಗಲ್ಲು

Posted by Vidyamaana on 2023-04-26 02:22:55 |

Share: | | | | |


ಸಿಂಗಾಪುರದಲ್ಲಿ ಮಾದಕವಸ್ತು ಕಳ್ಳಸಾಗಣೆ: ಭಾರತ ಮೂಲದ ತಂಗರಾಜುಗೆ ಇಂದು ಗಲ್ಲು

ಸಿಂಗಾಪುರ: ಸಿಂಗಾಪುರದಲ್ಲಿ ಮಾದಕವಸ್ತು ಕಳ್ಳಸಾಗಣೆ ಉತ್ತೇಜಿಸಿದ್ದಲ್ಲದೇ, 1 ಕೆಜಿ ಗಾಂಜಾವನ್ನು ಅಕ್ರಮವಾಗಿ ಸಾಗಿಸಿರುವ ಅಪರಾಧದ ಮೇರೆಗೆ ಭಾರತ ಮೂಲದ ವ್ಯಕ್ತಿ ತಂಗರಾಜು ಸುಪ್ಪಯ್ಯನನ್ನು ಬುಧವಾರ ಗಲ್ಲಿಗೇರಿಸಲು ಸರ್ಕಾರ ನಿರ್ಧರಿಸಿದೆ.

ನಾರ್ವೆ, ಸ್ವಿಜರ್ಲೆಂಡ್‌ ಸೇರಿದಂತೆ ಕೆಲ ರಾಷ್ಟ್ರಗಳು ಹಾಗೂ ಸ್ಥಳೀಯ ಮರಣದಂಡನೆ ವಿರೋಧಿ ಸಂಘಟನೆಗಳು ತಂಗರಾಜು ಗಲ್ಲು ಶಿಕ್ಷೆಯನ್ನು ಆಕ್ಷೇಪಿಸಿದ ಹೊರತಾಗಿಯೂ, ಸಿಂಗಾಪುರ ಸರ್ಕಾರ ಬುಧವಾರ ಗಲ್ಲಿಗೇರಿಸಲು ನಿರ್ಧರಿಸಿದೆ. ಅಲ್ಲದೇ, ದೇಶದ ಕಾನೂನು ವ್ಯವಸ್ಥೆ ಹಾಗೂ ನ್ಯಾಯಾಧೀಶರ ತೀರ್ಮಾನ ಗೌರವಿಸುವುದು ಅಗತ್ಯವಾಗಿದೆ ಎಂದು ತಿಳಿಸಿದೆ



Leave a Comment: