ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


SDPI ಚುನಾವಣಾ ಏಜೆಂಟ್ ಆಗಿ ಅಬ್ದುಲ್ ರಹಿಮಾನ್

Posted by Vidyamaana on 2023-04-24 10:53:46 |

Share: | | | | |


SDPI ಚುನಾವಣಾ ಏಜೆಂಟ್ ಆಗಿ ಅಬ್ದುಲ್ ರಹಿಮಾನ್

ಪುತ್ತೂರು: ಎಸ್.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಏಜೆಂಟ್ ಆಗಿ ಅಬ್ದುಲ್ ರಹಿಮಾನ್ ನೇಮಕಗೊಂಡಿದ್ದಾರೆ.

ಎಸ್.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿರುವ ಅಬ್ದುಲ್ ರಹಿಮಾನ್ ಅವರು, ಶಾಫಿ ಬೆಳ್ಳಾರೆ ಅವರ ಪರವಾಗಿ ಚುನಾವಣಾ ಏಜೆಂಟ್ ಆಗಿ ನೇಮಕಗೊಳಿಸಿ ಆದೇಶಿಸಿಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪದಲ್ಲಿ ಶಾಫಿ ಬೆಳ್ಳಾರೆ ಜೈಲಿನಲ್ಲಿದ್ದು, ಅವರ ಪರವಾಗಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಿದ್ದರು.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನಾಳೆಯಿಂದಲೇ ಜಾರಿ

Posted by Vidyamaana on 2023-05-30 10:16:01 |

Share: | | | | |


ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನಾಳೆಯಿಂದಲೇ ಜಾರಿ

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ (Womens) ಉಚಿತ ಬಸ್ ಪಾಸ್ (Free Bus Pass) ವಿತರಣೆ ಸಂಬಂಧ ಇಂದು (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಕಾರ್ಡ್​ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಘೋಷಣೆ ಮಾಡಿದರು. ಇದರೊಂದಿಗೆ ಕಾಂಗ್ರೆಸ್​ನ 5 ಗ್ಯಾರೆಂಟಿಗಳಲ್ಲಿ ಒಂದು ಈಡೇರಿದಂತಾಗಿದೆ.ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ (ಮೇ.29) ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದರು.ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ ಸಂಸ್ಥೆಯಾಗಿದೆ. 4 ಸಾರಿಗೆ ನಿಗಮಗಳಿಗೆ 350ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ. 4 ಸಾರಿಗೆ ನಿಗಮಗಳಲ್ಲಿ 240 ಘಟಕಗಳು ಕಾರ್ಯನಿರ್ವಹಣೆ ಮಾಡುತ್ತಿವೆ. 23,978 ವಾಹನಗಳಿವೆ, 1,04,450 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ನಿತ್ಯ ರಾಜ್ಯಾದ್ಯಂತ 82,51 ಲಕ್ಷ ಪ್ರಯಾಣಿಕರು ಓಡಾಡ್ತಾರೆ. ನಾಲ್ಕು ನಿಗಮಗಳ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂ. ಇದೆ ಎಂದು ತಿಳಿಸಿದ್ದಾರೆ.

ಅಕ್ರಮ ಸಂಬಂಧ ಇದೆಯೆಂದು ಹಲ್ಲೆ

Posted by Vidyamaana on 2023-08-23 16:26:59 |

Share: | | | | |


ಅಕ್ರಮ ಸಂಬಂಧ ಇದೆಯೆಂದು ಹಲ್ಲೆ

ಮಂಗಳೂರು: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 


ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.‌


ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ.‌ ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. 


ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ.‌ ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.

ಭಾರತದಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದ ಮಲಯಾಳಂನ 2018 ಸಿನಿಮಾ

Posted by Vidyamaana on 2023-09-27 13:38:48 |

Share: | | | | |


ಭಾರತದಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದ ಮಲಯಾಳಂನ 2018 ಸಿನಿಮಾ

ಮುಂಬಯಿ: 96ನೇ ಆಸ್ಕರ್‌ ಅವಾರ್ಡ್ಸ್‌ಗೆ ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆಯುವ ಸಿನಿಮಾವಾಗಿ ಮಾಲಿವುಡ್‌ ಸಿನಿಮಾ 2018 ಆಯ್ಕೆ ಆಗಿದೆ ಎಂದು ಘೋಷಿಸಲಾಗಿದೆ.

ಇತ್ತೀಚೆಗೆ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ 17 ಸದಸ್ಯರ ತೀರ್ಪುಗಾರರನ್ನು ಒಳಗೊಂಡಿರುವ ಆಯ್ಕೆ ಸಮಿತಿಗೆ ಭಾರತದಾದ್ಯಂತ ತೆರೆಕಂಡ 22 ಸಿನಿಮಾಗಳು ಅಧಿಕೃತ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿತ್ತು.


ಇದರಲ್ಲಿ “ಬಾಲಗಮ್”, “ದಿ ಕೇರಳ ಸ್ಟೋರಿ”, “ಜ್ವಿಗಾಟೊ” “ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ”ಅನಂತ್ ಮಹದೇವನ್ ಅವರ ಸ್ಟೋರಿ ಟೇಲರ್ (ಹಿಂದಿ), ಮ್ಯೂಸಿಕ್‌ ಸ್ಕೂಲ್ (ಹಿಂದಿ), ಮಿಸಸ್ ಚಟರ್ಜಿ vs ನಾರ್ವೆ (ಹಿಂದಿ), 12th ಫೇಲ್‌ (ಹಿಂದಿ) ವಿದುತಲೈ ಭಾಗ 1 (ತಮಿಳು), ಘೂಮರ್ (ಹಿಂದಿ), ಮತ್ತು ದಸರಾ (ತೆಲುಗು) ಸಿನಿಮಾಗಳು ಆಸ್ಕರ್‌ ನ ಅಧಿಕೃತ ಪ್ರವೇಶ ಪಡೆಯುವ ಸಾಲ್ಲಿನಲ್ಲಿತ್ತು.


ಅಂತಿಮವಾಗಿ ಜೂಡ್‌ ಆಂಟನಿ ಜೋಸೆಫ್‌ ನಿರ್ದೇಶನದ ಮಲಯಾಳಂ ಸಿನಿಮಾ “2018” ಆಸ್ಕರ್‌ ಸ್ಪರ್ಧೆಗೆ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ. ಇದೇ ವರ್ಷದ ಮೇ.5 ರಂದು ರಿಲೀಸ್‌ ಆಗಿದ್ದ ಈ ಸಿನಿಮಾದಲ್ಲಿ ಟೊವಿನೋ ಥಾಮಸ್ ಸೇರಿದಂತೆ ಕುಂಚಾಕೋ ಬೋಬನ್, , ಆಸಿಫ್ ಅಲಿ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ಕೇರಳದಲ್ಲಿ ಬಂದ ಪ್ರವಾಹದ ನೈಜ ಕಥೆಯನ್ನೊಳಗೊಂಡಿದೆ. ಬಾಕ್ಸ್‌ ಆಫೀಸ್‌ 100 ಕೋಟಿ ಕಮಾಯಿ ಮಾಡಿ, ದೊಡ್ಡ ಹಿಟ್‌ ಆಗಿತ್ತು.

ಪೆರ್ನೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-04-29 15:04:31 |

Share: | | | | |


ಪೆರ್ನೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಪುತ್ತೂರಿನ ಜನತೆಯ ಆಶೀರ್ವಾದದಿಂದ ನಾನು ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಶಾಸಕನಾಗಿ ಆಯ್ಕೆಯಾದಲ್ಲಿ ಶಾಸಕನಾದವನಿಗೆ ಸಿಗುವ ಸರಕರಿ ವೇತನ ಹಾಗೂ ಎಲ್ಲಾ ಭತ್ಯೆಯನ್ನು ತಾನು ಸಮಾಜ ಸೇವೆಗೆ ಬಳಸುತ್ತೇನೆ, ಜನರು ಮತ ಹಾಕಿ ನನ್ನನ್ನು ಗೆಲ್ಲಿಸಿದ್ದರಿಂದ ನನಗೆ ಸಿಗುವ ಆ ಮೊತ್ತವನ್ನು ಜನರಿಗೆ ಬಳಸುತ್ತೇನೆ, ಬಡವರಿಗಾಗಿಯೇ ಖರ್ಚು ಮಾಡುತ್ತೇನೆ ಅದರಲ್ಲಿ ಒಂದು ರುಪಾಯಿಯನ್ನೂ ತನ್ನ ಸ್ವಂತ ಬಳಕೆಗೆ ಬಳಸುವುದೇ ಇಲ್ಲ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ರದ್ದಾದ ವಿಜಯೋತ್ಸವದ ಬಗ್ಗೆ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ಸ್ಪಷ್ಟನೆ

Posted by Vidyamaana on 2023-06-02 09:17:05 |

Share: | | | | |


ರದ್ದಾದ ವಿಜಯೋತ್ಸವದ ಬಗ್ಗೆ  ನಗರ ಕಾಂಗ್ರೆಸ್ ಅಧ್ಯಕ್ಷ  ಮಹಮ್ಮದಾಲಿ ಸ್ಪಷ್ಟನೆ

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಗೆದ್ದು ಶಾಸಕರಾಗಿ ಆಯ್ಕೆಯಾಗಿರುವುದರಿಂದ ಪಕ್ಷದ ವತಿಯಿಂದ ಸಂಭ್ರಮದ ವಿಜಯೋತ್ಸವ ಆಚರಿಸಬೇಕೆಂದು ಕಾರ್ಯಕರ್ತರ ಬಯಕೆ ಸಹಜವಾಗಿರುತ್ತದೆ.

ಕಳೆದ ಸೋಮವಾರ ನಡೆದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಬೊಲ್ವಾರ್ ನಿಂದ - ದರ್ಬೆಯವರೆಗೆ ವಿಜಯೋತ್ಸವದ ಮೆರವಣಿಗೆ ನಡೆಸುವುದೆಂದು ತೀರ್ಮಾನಕ್ಕೆ ಬರಲಾಗಿತ್ತು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ತಿಳಿಸಿದ್ದಾರೆ.


ಜೂನ್ 3ರಂದು ಶನಿವಾರ ನಡೆಯಲಿರುವ ವಿಜಯೋತ್ಸವ ಕಾರ್ಯಕ್ರಮದ ಬಗ್ಗೆ ನಡೆದ ಪೂರ್ವಬಾವಿ ಸಭೆಯಲ್ಲಿ ಹವಾಮಾನ ವರದಿಯಂತೆ ಶುಕ್ರವಾರವೇ ಮುಂಗಾರು ಮಳೆ ಪ್ರಾರಂಭವಾಗುವ ಮುನ್ಸೂಚನೆ ಇರುವುದರಿಂದ ವಿಜಯೋತ್ಸವದ ಮೆರವಣಿಗೆಗೆ ಮಳೆ ಅಡ್ಡಿಯಾದೀತು ಎಂಬ ಸಂಶಯ ಹಾಗೂ ಈಗಾಗಲೇ ನಾಮಪತ್ರ ಸಲ್ಲಿಸುವ ದಿನ ದರ್ಬೆಯಿಂದ - ಕಿಲ್ಲೆ ಮೈದಾನವರೆಗೆ ಮೆರವಣಿಗೆ ನಡೆಸಲಾಗಿದೆ,

ಬಹಿರಂಗ ಪ್ರಚಾರದ ಅಂತಿಮ ದಿನ ಬೊಲ್ವಾರ್ ನಿಂದ - ದರ್ಬೆಯವರೆಗೆ  ಭ್ರಹತ್ ರೋಡ್ ಶೋ,ನಡೆಸಲಾಗಿದೆ,

ಚುನಾವಣ ಪಲಿತಾಂಶದ ದಿನ  ಅಶೋಕ್ ಕುಮಾರ್ ರೈ ಯವರು ಶಾಸಕರಾಗಿ ಆಯ್ಕೆಯಾಗಿ ಬಂದ ಸಂದರ್ಭದಲ್ಲಿ ಮಾಣಿಯಿಂದ - ಪುತ್ತೂರಿನ ದರ್ಬೆಯ ಚುನಾವಣ ಕಚೇರಿ ತನಕ ಬ್ರಹತ್ ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಲಾಗಿದೆ,

ಪುನ್ಹ ಮೆರವಣಿಗೆ ಮಾಡಿ ವಿಜಯೋತ್ಸವ ಆಚರಿಸುವುದು ಅಬಾಸವಾಗಿ ಕಾಣುತ್ತದೆ,  ಮೆರವಣಿಗೆ ನಡೆಸಿದಾಗ ಟ್ರಾಫಿಕ್ ಜಾಮ್ ಆಗಿ ಜನರಿಗೆ ತೊಂದರೆ ಆಗುತ್ತದೆ,

ಮೆರವಣಿಗೆ ನಡೆಸಿ ದರ್ಬೆಯಲ್ಲಿ ಕೊನೆಗೊಳಿಸಿದರೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಅವಕಾಶವಾಗುವುದಿಲ್ಲ, ಹಾಲ್ ನಲ್ಲಿ ಸಭೆ ನಡೆಸಿದರೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಒಳ್ಳೆಯ ಭೋಜನ ನೀಡಬಹುದು ಎಂಬ ಕಾರಣಕ್ಕಾಗಿ ವಿಜಯೋತ್ಸವ ಮೆರವಣಿಗೆ ಕಾರ್ಯಕ್ರಮ ರದ್ದುಪಡಿಸಿ, ಪುತ್ತೂರು ಪುರಭವನದಲ್ಲಿ ಶಾಸಕರಿಗೆ ಅಭಿನಂದನೆ, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಕೃತಜ್ಞತ ಸಮರ್ಪಣೆ ಕಾರ್ಯಕ್ರಮ ನಡೆಸುವ ತೀರ್ಮಾನವು ಪಕ್ಷದ ಪ್ರಮುಖರ ತೀರ್ಮಾನವೇ ಹೊರತು ಶಾಸಕ ಅಶೋಕ್ ಕುಮಾರ್ ರೈ ಯವರ ಒಬ್ಬರ ತೀರ್ಮಾನವಲ್ಲ ಎಂಬುದರ ಬಗ್ಗೆ ಕಾರ್ಯಕರ್ತರಿಗೆ ಅರಿಕೆ ಮಾಡಿಕೊಳ್ಳುತ್ತಾ ಶನಿವಾರ ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇನೆ.

Recent News


Leave a Comment: