ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಸುದ್ದಿಗಳು News

Posted by vidyamaana on 2024-06-30 19:50:01 |

Share: | | | | |


ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು. 


ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

 Share: | | | | |


ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಅಹ್ವಾನ

Posted by Vidyamaana on 2024-04-13 17:38:35 |

Share: | | | | |


ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಅಹ್ವಾನ

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಅಹ್ವಾನಿಸಲಾಗಿದೆ


ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಆಂಗ್ಲ ಮಾಧ್ಯಮದಲ್ಲಿ ರಾಜ್ಯಪಠ್ಯಕ್ರಮವನ್ನು ಅಳವಡಿಸಿಕೊಂಡು 6 ರಿಂದ 10 ನೇ ತರಗತಿಯವರೆಗೆ ಕಾರ್ಯನಿರ್ವಹಿಸುತ್ತಿರುತ್ತವೆ.

ಆಂಟಿಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್

Posted by Vidyamaana on 2023-09-29 07:31:53 |

Share: | | | | |


ಆಂಟಿಯ  ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್

ಕಾರವಾರ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ದೇವಾಲಯ ಹಿತರಕ್ಷಣಾ ವೇದಿಕೆಯ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಎಂಬಾತನನ್ನು ಕಾರವಾರ ಪೋಲಿಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಪ್ರಕರಣದ ವಿವರ :

    ದೂರುದಾರ ವಿವಾಹಿತ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಉಳ್ಳವಳಾಗಿದ್ದು, ಮೊಬೈಲ್ ನಲ್ಲಿರುವ ಕ್ಲಬ್ ಹೌಸ್ ಅಪ್ಲಿಕೇಷನ್ ನಲ್ಲಿ ಆಗಾಗ ಹಾಡು ಹಾಡುತ್ತಿದ್ದಳು. ಕಳೆದ 2020 ರಲ್ಲಿ ಕ್ಲಬ್ ಹೌಸ್ ಅಪ್ಲಿಕೇಶನ್ ಮೂಲಕ ಈಕೆಗೆ ಆರೋಪಿ ಪ್ರಶಾಂತ ಭಟ್ ಮಾಣಿಲ, ಪ್ರಾಯ: 35 ವರ್ಷ, ವೃತ್ತಿ: ಮನೆಕೆಲಸ, ಸಾ, ಅರ್ಲಪದವು, ತಾ: ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆ ಈತನ ಪರಿಚಯ ಆಗಿದ್ದು, ಇದರ ಆ್ಯಪ್‌ನಲ್ಲಿ ಇಬ್ಬರೂ ಚಾಟ್ ಮಾಡುತ್ತಾ ಇದ್ದವರು, ನಂತರ ಫೇಸ್ ಬುಕ್ ನಲ್ಲಿ ಇಬ್ಬರೂ ಫ್ರೆಂಡ್ ಆಗಿದ್ದರು.ಇದಾದ ಬಳಿಕ ಕ್ರಮೇಣ ಇಬ್ಬರೂ ಇಷ್ಟಪಡುತ್ತಿದ್ದು, ನಂತರದ ದಿನಗಳಲ್ಲಿ ಆರೋಪಿ ದೂರುದಾರಳಿಗೆ ನಿನಗೆ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ಆಸೆ ಹುಟ್ಟಿಸಿದ್ದು, ನಂತರ ದೂರುದಾರಳು ತನ್ನ ಮೊಬೈಲ್ ನಂಬರನ್ನು ಕೂಡ ಆರೋಪಿಗೆ ನೀಡಿ, ಇಬ್ಬರೂ ಪರಸ್ಪರ 2 ವರ್ಷಗಳ ತನಕ ಫೋನ್ ನಲ್ಲಿ ಮೆಸೇಜ್ ಹಾಗೂ ಕಾಲ್ ದಲ್ಲಿ ಸಂಪರ್ಕದಲ್ಲಿ ಇದ್ದರು ಎನ್ನಲಾಗಿದೆ


   ಆರೋಪಿಯು ದೂರುದಾರಳಿಗೆ ನಿನ್ನನ್ನು ಭೇಟಿಯಾಗಬೇಕು ಎಂದು ತನಗೆ ಅನಿಸುತ್ತಿದೆ ಎಂದು ಮನವೊಲಿಸಿ ಕಳೆದ 2023 ಜನವರಿ ಕೊನೆಯ ವಾರದಲ್ಲಿ ಒಂದು ದಿನದಂದು ಶಿರಸಿ ಮಾರಿಗುಡಿ ದೇವಸ್ಥಾನದಲ್ಲಿ ಭೇಟಿಯಾಗಿ, ಅಲ್ಲಿಂದ ಶಿರಸಿಯ ಖಾಸಗಿ ಲಾಡ್ಜ್ ಗೆ ಆರೋಪಿಯು ದೂರುದಾರಳನ್ನು ಕರೆದುಕೊಂಡು ಹೋಗಿದ್ದು, ಅಲ್ಲಿ ರೂಮ್ ಮಾಡಿ ಆ ದೂರುದಾರಳ ಮೇಲೆ ಬಲಾತ್ಕಾರದಿಂದಲೈಂಗಿಕ ಸಂಭೋಗ ಮಾಡಿದ್ದ ಎನ್ನಲಾಗಿದೆ.

ಇದಾದ ನಂತರ 2023 ರ ಫೆಬ್ರುವರಿ ಮೊದಲನೇ ವಾರದಲ್ಲಿ ಮತ್ತೆ ಅದೇ ಶಿರಸಿಯ ಖಾಸಗಿ ಲಾಡ್ಜ್‌ಗೆ ಆರೋಪಿಯು ದೂರುದಾರಳನ್ನು ಕರೆದುಕೊಂಡು ಹೋಗಿ, ಅಲ್ಲಿ ದೂರುದಾರಳ ಮೇಲೆ ಬಲಾತ್ಕಾರದಿಂದ ಲೈಂಗಿಕ ಸಂಭೋಗ ಮಾಡಿದ್ದಲ್ಲದೇ ಈ ಎರಡೂ ಘಟನೆಯ ವೇಳೆ ಆರೋಪಿ ದೂರುದಾರಳೊಂದಿಗೆ ತನ್ನ ಫೋಟೋಗಳನ್ನು ತೆಗೆದುಕೊಂಡಿದ್ದವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಬಳಿಕ ಆರೋಪಿಯು ಪ್ರತಿ ದಿನ ವಾಟ್ಸಪ್‌ನಲ್ಲಿ ಮೆಸೆಜ್ ಮಾಡಿ, ನನ್ನ ನಿನ್ನ ಇಬ್ಬರ ಫೋಟೋ ಹಾಗೂ ನಿನ್ನ ಖಾಸಗಿ ವೀಡಿಯೋ ಹಾಗೂ ಫೋಟೋಗಳನ್ನು ನಿನ್ನ ತಾಯಿ ಹಾಗೂ ನಿನ್ನ ಗಂಡನಿಗೆ ಕಳುಹಿಸುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದು, ನಂತರ ದೂರುದಾರಳಿಗೆ ಆರೋಪಿಯು ವೀಡಿಯೋ ಕಾಲ್ ಮಾಡಿ, ಬೆತ್ತಲೆ ದೇಹವನ್ನು ತೋರಿಸುವಂತೆ ಹೆದರಿಸಿ, ಅದರ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಬಳಿಕ ಆರೋಪಿಯು ಪ್ರತಿ ದಿನ ವಾಟ್ಸಪ್‌ನಲ್ಲಿ ಮೆಸೆಜ್ ಮಾಡಿ, ನನ್ನ ನಿನ್ನ ಇಬ್ಬರ ಫೋಟೋ ಹಾಗೂ ನಿನ್ನ ಖಾಸಗಿ ವೀಡಿಯೋ ಹಾಗೂ ಫೋಟೋಗಳನ್ನು ನಿನ್ನ ತಾಯಿ ಹಾಗೂ ನಿನ್ನ ಗಂಡನಿಗೆ ಕಳುಹಿಸುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದು, ನಂತರ ದೂರುದಾರಳಿಗೆ ಆರೋಪಿಯು ವೀಡಿಯೋ ಕಾಲ್ ಮಾಡಿ, ಬೆತ್ತಲೆ ದೇಹವನ್ನು ತೋರಿಸುವಂತೆ ಹೆದರಿಸಿ, ಅದರ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದಇದಾದ ಬಳಿಕ ನನಗೆ ಹಣದ ಸಮಸ್ಯೆ ಇದೆ, ನೀನು ನನಗೆ ಹಣ ನೀಡು, ಇಲ್ಲವಾದಲ್ಲಿ ನಾನು ನಿನ್ನ ಬೆತ್ತಲೆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪಲೋಡ್ ಮಾಡುವೆ ಎಂದು ಪ್ರತಿ ದಿನ ಮಾನಸಿಕ ಕಿರುಕುಳ ನೀಡಿದ್ದ. ಆದ್ದರಿಂದ ದೂರುದಾರ ಮಹಿಳೆ ಹೆದರಿಕೊಂಡು ಈ ವಿಷಯವನ್ನು ತನ್ನ ಗಂಡನಿಗೆ ತಿಳಿಸಿ, ರೂ. 25,000/- ಗಳನ್ನು ಆರೋಪಿಯ ಮೊಬೈಲ್ ನಂಬರಿಗೆ ಗೂಗಲ್ ಪೇ ಮಾಡಿಸಿರುತ್ತಾಳೆ. ಆದರೂ ಆರೋಪಿ ಪ್ರಶಾಂತ್ ಭಟ್ ಮಾಣಿಲ ತನಗೆ ಇನ್ನೂ ಹಣ ಬೇಕು ಎಂದು ದೂರುದಾರಳಿಗೆ ಬ್ಲ್ಯಾಕ್‌ ಮೇಲ್ ಮಾಡುತ್ತಾ, ಆಕೆಯ ಖಾಸಗಿ ಫೋಟೋಗಳನ್ನು ಹಾಗೂ ತನ್ನ ಜೊತೆ ಇರುವ ಫೋಟೋಗಳನ್ನು ದೂರುದಾರಳ ತಾಯಿಯ ಮೊಬೈಲಿಗೆ ವಾಟ್ಸಪ್ ಮೂಲಕ ಕಳಿಸಿದ್ದ ಎನ್ನಲಾಗಿದೆ.ಅಷ್ಟೇ ಅಲ್ಲದೇ ನಂತರ ಫೇಸ್ ಬುಕ್ ನಲ್ಲಿ ದೂರುದಾರ ಮಹಿಳೆಯ ಸ್ನೇಹಿತರಿಗೂ ಕಳುಹಿಸಿದ್ದಾನೆ. ನಂತರ ದೂರುದಾರಳ ಗಂಡನಿಗೆ ನಿನ್ನ ಹೆಂಡತಿಯ ಮರ್ಯಾದೆ ಉಳಿಯಬೇಕೆಂದರೆ, 7 ಲಕ್ಷ ರೂಪಾಯಿ ನೀಡಿ, ಮರ್ಯಾದೆ ಉಳಿಸಿಕೋ ಎಂದು ಆತನಿಗೆ ಬ್ಯಾಕ್‌ಮೇಲ್ ಮಾಡಿದ್ದು ಹಾಗೂ ದೂರುದಾರಳಿಗೆ ಅವಾಚ್ಯ ಶಬ್ದಗಳಿಂದ ಬೈದು, ದುಡ್ಡು ನೀಡದಿದ್ದರೆ ನಿಮ್ಮನ್ನು ಜೀವಸಹಿತ ಬಿಡುವುದಿಲ್ಲ ಎಂದು ಜೀವದ ಬೆದರಿಕೆ ಹಾಕಿದ್ದಾನೆಂದು‌ ಆರೋಪಿಸಲಾಗಿದೆನೊಂದ ದೂರುದಾರ ಮಹಿಳೆ ತನ್ನ ಮನೆಯವರಲ್ಲಿ ಈ ಬಗ್ಗೆ ಚರ್ಚಿಸಿ ಪೋಲಿಸ್ ದೂರು ನೀಡಲು ವಿಳಂಬವಾಗಿದ್ದು, ಮನೆ ಜನರ ಮರ್ಯಾದೆಗೆ ಅಂಜಿ ಇಷ್ಟು ದಿನ ದೂರು ನೀಡಿದೇ ಇದ್ದಿದ್ದನ್ನೇ ಚಾನ್ಸ್ ಎಂದು ಭಾವಿಸಿ ಬ್ಲ್ಯಾಕ್ ಮೇಲ್ ಗೆ ಇಳಿದಿದ್ದ ಆರೋಪಿ ಪ್ರಶಾಂತ ಭಟ್ ಮಾಣಿಲನ ವಿರುದ್ಧ ಸದ್ಯ ಕಾರವಾರ ಮಹಿಳಾ ಪೋಲಿಸ್ ಠಾಣೆಯಲ್ಲಿ ಐಪಿಸಿ 376,376(N), 504,506,503,384 ಮತ್ತು IT Act 2008ರ 67(A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದುಆರೋಪಿಯನ್ನು ಬಂಧಿಸಿ ಜೈಲಿಗೆ ರವಾನಿಸಲಾಗಿದೆ

ಉಳ್ಳಾಲ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ

Posted by Vidyamaana on 2023-09-29 20:51:37 |

Share: | | | | |


ಉಳ್ಳಾಲ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ

ಉಳ್ಳಾಲ: ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. 


ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ ಸಮೀರ್ ಬಂಧಿತರು. ಇಬ್ಬರು ಆರೋಪಿಗಳು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ತೂಕದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಬಂಧಿತರಿಂದ 14 ಗ್ರಾಂ ಎಂಡಿಎಂಎ ,ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು ಒಂದು ಲಕ್ಷ ಹದಿನೆಂಟುವರೆ ಸಾವಿರ ಮೌಲ್ಯದ ಸೊತ್ತುಗಳನ್ನ ವಶಪಡಿಸಿ ಕೊಳ್ಳಲಾಗಿದೆ. ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ ಐ ಶೀತಲ್ ಹಾಗೂ ಸಿಬ್ಬಂದಿಗಳಾದ ಅಕ್ಬರ್, ಅಶೋಕ್,  ಮಂಜು, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ದಿವ್ಯಪ್ರಭಾ ಗೌಡ ಚಿಲ್ತಡ್ಕ ಕಾಂಗ್ರೆಸ್ ಗೆ ರಾಜೀನಾಮೆ.

Posted by Vidyamaana on 2023-04-14 04:15:49 |

Share: | | | | |


ದಿವ್ಯಪ್ರಭಾ ಗೌಡ ಚಿಲ್ತಡ್ಕ ಕಾಂಗ್ರೆಸ್ ಗೆ ರಾಜೀನಾಮೆ.

ಪುತ್ತೂರು: ಕಾಂಗ್ರೆಸ್ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದ, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆಯಾಗಿದ್ದ ದಿವ್ಯಪ್ರಭಾ ಚಿಲ್ತಡ್ಕ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಗೆ ಏ‌ ೧೪ರಂದು  ಸೇರ್ಪಡೆಗೊಳ್ಳಲಿದ್ದಾರೆ.

ಕಾಂಗ್ರೆಸ್ ಮುಖಂಡೆಯಾಗಿ ಸಮಾಜಮುಖಿಯಾಗಿ ಗುರುತಿಸಿಕೊಂಡಿದ್ದ ದಿವ್ಯಪ್ರಭಾ ಅವರು ಕಾಂಗ್ರೆಸಿನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ಟಿಕೇಟ್ ಕೈತಪ್ಪುವ ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಕಾಂಗ್ರೆಸಿಗೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ರವರು ಎಂಎಲ್ಎ ರಘು ಆಚಾರ್ ಹಾಗೂ ಇತರ ಕಾಂಗ್ರೆಸ್ ಮುಖಂಡರ ಜೊತೆ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಪುತ್ತೂರಿಗೆ ಬಹುಭಾಷಾ ನಟಿ ಪ್ರಿಯಾಮಣಿ

Posted by Vidyamaana on 2024-02-22 04:38:02 |

Share: | | | | |


ಇಂದು ಪುತ್ತೂರಿಗೆ ಬಹುಭಾಷಾ ನಟಿ ಪ್ರಿಯಾಮಣಿ

ಪುತ್ತೂರು: ಬಹುಭಾಷಾ ನಟಿ ಪ್ರಿಯಾಮಣಿ ಅವರು ಇಂದು (ಫೆ. 22) ಪುತ್ತೂರಿಗೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಸುಲ್ತಾನ್ ಡೈಮಂಡ್ ಅಂಡ್ ಗೋಲ್ಡ್ನ ಪುತ್ತೂರು ಶೋರೂಂ ಅನ್ನು ಉದ್ಘಾಟಿಸಲಿದ್ದಾರೆ.

ಗ್ರಾಹಕರ ವಿಶ್ವಾಸ ಗಳಿಸಿ ವಿಶ್ವಾಸಾರ್ಹ ಅಭರಣ ಬ್ರಾಂಡ್ ಎನಿಸಿಕೊಂಡಿರುವ ಸುಲ್ತಾನ್ ಡೈಮಂಡ್ಸ್ ಅಂಡ್ ಗೋಲ್ಡ್ ಪುತ್ತೂರು ಶಾಖೆ ಎಳ್ಮುಡಿಯಲ್ಲಿ ಭವ್ಯವಾಗಿ ನಿರ್ಮಾಣಗೊಂಡಿದೆ.

ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಯಾಗಿರುವರು. ಮಾಜಿ ಶಾಸಕ ಸಂಜೀವ ಮಠಂದೂರು ಅವರು ವೈವಿಧ್ಯಮಯದ ವಜ್ರದ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. 

ನಗರಸಭೆ ಸದಸ್ಯೆ ವಿದ್ಯಾ ಗೌರಿ ಅವರು ಜೆಮ್ ಸ್ಟೋನ್ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಪುತ್ತೂರಿನ ಎಸ್.ಡಿ.ಪಿ.ಐ. ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಅವರು "ಆಂಟಿಕ್" ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. 

ಮೌಂಟನ್ ವ್ಯೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆಪಿ ಅಹಮದ್ ಹಾಜಿ ಆಕರ್ಷಣ್ ಅವರು ಚಿನ್ನಾಭರಣದ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಸುದಾನ ವಸತಿಯುತ ಶಾಲಾ ಸಂಚಾಲಕ ರೆವರೆಂಡ್ ವಿಜಯ್ ಹಾರ್ವಿನ್ ಅವರು ಮಕ್ಕಳ ಚಿನ್ನಾಭರಣದ ಮತ್ತು ಬೆಳ್ಳಿಯ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಲಯನ್ಸ್ 317D ಅಧ್ಯಕ್ಷೆ  ಡಾಕ್ಟರ್ ರಂಜಿತಾ ಶೆಟ್ಟಿ ಅವರು CAIA - ಲೈಫ್ ಸ್ಟೈಲ್ ಜ್ಯುವೆಲ್ಲರಿಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕರುನಾಡಿನ ಗಂಧದ ಗುಡಿ ಯಲ್ಲೇ ಶ್ರೀಗಂಧದ ಎಣ್ಣೆಗೆ ಬರ

Posted by Vidyamaana on 2023-12-19 07:21:41 |

Share: | | | | |


ಕರುನಾಡಿನ ಗಂಧದ ಗುಡಿ ಯಲ್ಲೇ ಶ್ರೀಗಂಧದ ಎಣ್ಣೆಗೆ ಬರ

ಬೆಂಗಳೂರು, ಡಿಸೆಂಬರ್ 19: ಶತಮಾನದ ಇತಿಹಾಸ ಹೊಂದಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL)ಸ್ಯಾಂಡಲ್​ ಸೋಪ್​ (Sandal Soap) ತಯಾರಿಕೆಗೂ ಈಗ ಶ್ರೀಗಂಧದ ಎಣ್ಣೆಯ ಕೊರತೆ ಉಂಟಾಗಿದೆ! ನೈಸರ್ಗಿಕವಾದ ಶ್ರೀಗಂಧದ ಎಣ್ಣೆಯನ್ನು ಬಳಸಿ ಸಾಬೂನು ತಯಾರಿಸುವ ಕೆಎಸ್​ಡಿಎಲ್​ಗೆ ಇದೀಗ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಶ್ರೀಗಂಧದ ಮರಗಳ ಅತಿಯಾದ ಕಡಿಯುವಿಕೆ, ಕಳ್ಳಸಾಗಾಣಿಕೆಯ ಪರಿಣಾಮ ಇದೀಗ ಸಾಕಷ್ಟು ಪ್ರಮಾಣದಲ್ಲಿ ಶ್ರೀಗಂಧದ ಎಣ್ಣೆ ದೊರೆಯದಾಗಿದೆ. ಹೀಗಾಗಿ ಕಂಪನಿಯು ಆಸ್ಟ್ರೇಲಿಯಾದಿಂದ ಶ್ರೀಗಂಧದ ಎಣ್ಣೆ ಆಮದು ಮಾಡಿಕೊಳ್ಳಲು ಆರಂಭಿಸಿದೆ ಎಂದು ವರದಿಯಾಗಿದೆ.


ಕೆಎಸ್​ಡಿಎಲ್ 500 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಉತ್ಪಾದನೆ ಮತ್ತು ಮಾರುಕಟ್ಟೆ ಕಾರ್ಯತಂತ್ರವನ್ನು ಮರುರೂಪಿಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.


ನೈಸರ್ಗಿಕ ಶ್ರೀಗಂಧದ ಎಣ್ಣೆಯನ್ನು ಬಳಸುವ ಮೂಲಕ ಸಾಬೂನು ತಯಾರಿಸುವ ಜಾಗತಿಕ ಮಟ್ಟದ ಏಕೈಕ ಸಂಸ್ಥೆ ಕೆಎಸ್​ಡಿಎಲ್ ಎಂದು ಕಂಪನಿ ಹೇಳಿಕೊಂಡಿದೆ. ಇದೀಗ ಸಾಬೂನು ತಯಾರಿಕೆಗೆ ಬೇಕಾಗಿರುವ ಪ್ರಮುಖ ಕಚ್ಚಾ ವಸ್ತುವಾದ ಶ್ರೀಗಂಧದ ಎಣ್ಣೆಗಾಗಿ ಬೇರೆ ದೇಶದ ಮೊರೆ ಹೋಗಬೇಕಾಗಿ ಬಂದಿದೆ. ಕಂಪನಿಯು ಆಸ್ಟ್ರೇಲಿಯಾದಿಂದ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಕಳೆದ ವರ್ಷ 4,000 ಕೆಜಿ ಶ್ರೀಗಂಧದ ಎಣ್ಣೆ ಆಮದು ಮಾಡಿಕೊಂಡಿದೆ. ಈ ವರ್ಷ 7,000 ಕೆಜಿ ಶ್ರೀಗಂಧದ ಎಣ್ಣೆಯನ್ನು ಆಮದುಮಾಡಿಕೊಳ್ಳಲು ಉದ್ದೇಶಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಮಾಡಿದೆ.


ಈ ಮಧ್ಯೆ, ಶ್ರೀಗಂಧದ ಗಿಡಗಳನ್ನು ನೆಟ್ಟು ಬೆಳೆಸುವ ವಿಚಾರವಾಗಿ ರಾಜ್ಯ ಸರ್ಕಾರವು ಅಭಿಯಾನ ಹಮ್ಮಿಕೊಂಡಿದೆ. 700 ರೈತರೊಂದಿಗೆ ಒಪ್ಪಂದವನ್ನೂ ಮಾಡಿಕೊಂಡಿದೆ. ಶ್ರೀಗಂಧವನ್ನು ಬೆಳೆಯಲು 4,000 ಎಕರೆ ಭೂಮಿಯನ್ನು ಗುರುತಿಸಲಾಗಿದೆ.


ಈ ಹಿಂದೆ ಶ್ರೀಗಂಧವನ್ನು ಎಲ್ಲಿ ಬೆಳೆದರೂ ಅದು ರಾಜ್ಯದ ಆಸ್ತಿಯಾಗಿತ್ತು. ಈಗ ಸರ್ಕಾರ ಆ ಷರತ್ತನ್ನು ತೆಗೆದು ರೈತರಿಗೆ ತಮ್ಮ ಹೊಲಗಳಲ್ಲಿ ಗಿಡ ನೆಟ್ಟು ಬೆಳೆಸಲು ಅನುಕೂಲ ಮಾಡಿಕೊಟ್ಟಿದೆ. ಅವರು ಮರಗಳನ್ನು 20 ವರ್ಷಗಳ ಅವಧಿಯ ನಂತರ ಅರಣ್ಯ ಇಲಾಖೆ ಅಥವಾ ಕೆಎಸ್‌ಡಿಎಲ್‌ಗೆ ಮಾರಾಟ ಮಾಡಬಹುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.


ಕಂಪನಿಯು 2026 ರ ಮಾರ್ಚ್ ವೇಳೆಗೆ 4,000 ಕೋಟಿ ರೂಪಾಯಿ ವಹಿವಾಟು ನಡೆಸುವ ಗುರಿ ಹೊಂದಿದೆ ಎಂದು ಅವರು ಹೇಳಿದ್ದಾರೆ. ಯೋಜನೆಯು ಹೊಸ ಕೊಡುಗೆಗಳೊಂದಿಗೆ ಇತರ ಮಾರುಕಟ್ಟೆಗಳಿಗೆ ವಿಸ್ತರಿಸುವುದು, ದೃಢವಾದ ಕಚ್ಚಾ ವಸ್ತುಗಳ ಪೂರೈಕೆ ಸರಪಳಿ ಮತ್ತು ಉತ್ಪಾದನಾ ನೆಲೆಯನ್ನು ಬೆಳೆಸುವುದು ಮತ್ತು ಹೊಸ ಉತ್ಪನ್ನ ವಿಭಾಗಗಳನ್ನು ಆರಂಭಿಸುವುದನ್ನು ಒಳಗೊಂಡಿದೆ ಎನ್ನಲಾಗಿದೆ.

Recent News


Leave a Comment: