ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಮೃತ್ಯು

ಸುದ್ದಿಗಳು News

Posted by vidyamaana on 2024-07-03 20:52:26 |

Share: | | | | |


ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಮೃತ್ಯು

ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಗರದ ಬಲ್ಮಠ ಬಳಿ ಬುಧವಾರ ಸಂಭವಿಸಿದೆ.ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ತಿಳಿದು ಬಂದಿದೆ.ಮಧ್ಯಾಹ್ನ ಕಟ್ಟಡದ ಕಾಮಗಾರಿ ನಡೆಯುತಿದ್ದ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದರು.

ಘಟನೆ ನಡೆದ ವಿಚಾರ ತಿಳುಯುತ್ತಲೇ ಸ್ಥಳಕ್ಕೆ ಅಗ್ನಿಶಾಮಕ ದಳ , ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದಾರೆ ಇದಾದ ಕೆಲವು ಗಂಟೆಗಳ ಬಳಿಕ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ನಡುವೆ ಮಣ್ಣಿನಡಿ ಸಿಲುಕಿದ್ದ ಚಂದನ್ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿತ್ತು.

ರಿಟೇನಿಂಗ್ ವಾಲ್ ಮತ್ತು ಶೀಟ್ ಗಳ ಮಧ್ಯೆ ಸಿಲುಕಿದ್ದ ಕಾರ್ಮಿಕನ ರಕ್ಷಣೆಗಾಗಿ ರಾತ್ರಿಯ ವರೆಗೂ ಕಾರ್ಯಾಚರಣೆ ನಡೆಸಿದರೂ ಕಾರ್ಮಿಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಸುಮಾರು ಏಳು ಗಂಟೆಯ ವೇಳೆಗೆ ಮೃತದೇಹವನ್ನು ಎನ್ ಡಿ ಆರ್ ಎಫ್ ತಂಡ ಹೊರತೆಗೆದಿದೆ.

 Share: | | | | |


ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Posted by Vidyamaana on 2024-05-20 04:44:23 |

Share: | | | | |


ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

ಬೆಂಗಳೂರು : ಬೈಕ್‌ನ ಪೆಟ್ರೋಲ್ ಟ್ಯಾಂಕ್‌ ಮೇಲೆ ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಚಾಲನೆ ಮಾಡಿದ್ದ ಆರೋಪದಡಿ ಸಿಲಂಬರಸನ್ (21) ಎಂಬುವವರನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಲಹಂಕದಿಂದ ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಯುವತಿ ಜೊತೆ ಆರೋಪಿ ಬೈಕ್‌ನಲ್ಲಿ ಸಂಚರಿಸಿದ್ದ

ಬೆಳ್ತಂಗಡಿ ತಾಲೂಕಿನ ಜನಪ್ರತಿನಿಧಿಗಳಗೆ ಯಾಕಿಷ್ಟು ನಿರ್ಲಕ್ಷ್ಯ?

Posted by Vidyamaana on 2024-03-25 13:25:25 |

Share: | | | | |


ಬೆಳ್ತಂಗಡಿ ತಾಲೂಕಿನ ಜನಪ್ರತಿನಿಧಿಗಳಗೆ ಯಾಕಿಷ್ಟು ನಿರ್ಲಕ್ಷ್ಯ?

ಬೆಳ್ತಂಗಡಿ: ಕಳೆದ ಎರಡು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಕುಚ್ಚಂಗಿ ಕೆರೆಯಲ್ಲಿ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಕಾರಿನಲ್ಲಿ  ಬೆಳ್ತಂಗಡಿಯ ಮೂವರ ಶವ ಪತ್ತೆಯಾಗಿತ್ತು.  ಈ ಸುದ್ಧಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಅದರೆ ಬೆಳ್ತಂಗಡಿಯ ಜನಪ್ರತಿನಿಧಿಗಳಿಗೆ ಮಾತ್ರ ಇನ್ನೂ ಈ ವಿಚಾರ ತಿಳಿದಂತಿಲ್ಲ . ಯಾಕೆಂದರೆ ಮೃತ ಮನೆಯವರಿಗೆ ಬಂದು ಸಾಂತ್ವನ ಹೇಳಿ ಧ್ಯೈರ್ಯ ಹೇಳುವಷ್ಟೂ ವ್ಯವಧಾನ ಅವರಿಗೆ ಇಲ್ಲದಾಗಿದೆ ಎಂದು ಮೃತ ಮನೆಯವರ ಕುಟುಂಬಸ್ಥರು ಹಾಗೂ ನೆರೆ ಹೊರೆಯವರು ಬೇಸರ ವ್ಯಕ್ತಪಡಿಸಿದ್ದಾರೆ. 

ಉಜಿರೆ ಕುಂಟಿನಿ ನಿವಾಸಿ ಸಾಹುಲ್ ಹಮೀದ್ ಅವರ ನೆರೆಯ ವ್ಯಕ್ತಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿ ಇಡೀ ಸಮಾಜ ಈ ಘಟನೆಯಿಂದ ನೊಂದಿದೆ. ಮೃತ ಶರೀರವನ್ನು ಅತೀ ಕ್ರೂರ ರೀತಿಯಲ್ಲಿ ಕೊಂದು ಸುಟ್ಟು ಹಾಕಿದ ಪರಿಣಾಮ ಮೂವರ ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಇದೆ. ಕುಟುಂಬಸ್ಥರು ಇದರ ಬಗ್ಗೆ ಯಾರಲ್ಲಿ ಹೇಳುವುದು ನಮಗೆ ನ್ಯಾಯ ದೊರಕಿಸಿಕೊಡುವವರು ಯಾರು ಎಂದು ಕಣ್ಣೀರು ಸುರಿಸುತಿದ್ದರೂ ಬೆಳ್ತಂಗಡಿ ತಾಲೂಕಿನ ಶಾಸಕರು ಸೇರಿದಂತೆ ಯಾರೂ ಕೂಡ ಮನೆಯವರಿಗೆ ಧೈರ್ಯ ತುಂಬುವ ಕೆಲಸ ಮಾಡದಿರುವುದು ತುಂಬಾ ನೋವನ್ನುಂಟು ಮಾಡಿದೆ ಎಂದಿದ್ದಾರೆ.

ಮದ್ದಡ್ಕದ ಇಸಾಕ್ ಅವರ ಕುಟುಂಬಿಕರು ಬೇಸರ ವ್ಯಕ್ತಪಡಿಸಿ ಹೊರ ತಾಲೂಕಿನ ಕೆಲವು ಜನಪ್ರತಿನಿಧಿಗಳನ್ನು ಹೊರತು ಪಡಿಸಿ ಬೆಳ್ತಂಗಡಿಯ  ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಯಾವುದೇ ಜನಪ್ರತಿನಿಧಿಗಳು ಖಂಡಿಸುವ ಅಥವಾ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುವಂತಹ ಒಂದು ಹೇಳಿಕೆ ನೀಡದಿರುವುದು ಬೇಸರ ತರಿಸಿದೆ. 

ಮಸಲ್ಮಾನರೆಂಬ ಕಾರಣಕ್ಕೆ ಈ ರೀತಿಯ ನಿರ್ಲಕ್ಷ್ಯವೇ ಯಾರಿಗೂ ಈ ರೀತಿ ಮಾಡಬಾರದು ಎಲ್ಲಾ ವಿಚಾರದಲ್ಲಿ ರಾಜಕೀಯ ಯೋಚನೆ ಮಾಡಬಾರದು ಕೆಲವೊಮ್ಮೆ ರಾಜಕೀಯ ಮರೆತು ಮಾನವೀಯತೆಯತ್ತ ಯೋಚನೆ ಮಾಡಬೇಕಾಗಿದೆ. 

ಶಿರ್ಲಾಲಿನ ಸಿದ್ದಿಕ್ ಅವರ ತಂದೆ ಮಾತನಾಡಿ ನನ್ನ ಮಗ ಇನ್ನು ಬರುವುದಿಲ್ಲ. ನಮ್ಮ ತಾಲೂಕಿನ ಯಾವನೇ ಒಬ್ಬ ಜನಪ್ರತಿನಿಧಿ ನಮಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಯಾಕೆಂದರೆ ನಾವು ಬಡವರು ಎಂಬ ಕಾರಣಕ್ಕೊ ಅಥವಾ ಇನ್ನೇನಾದರೂ ಕಾರಣವೋ ಗೊತ್ತಿಲ್ಲ ಎಂದು ದುಃಖಿಸಿದರು.

ಖರ್ಗೆ ಭೇಟಿಯಾದ ಪುತ್ತೂರು ಶಾಸಕ ಅಶೋಕ್ ರೈ

Posted by Vidyamaana on 2023-05-19 15:46:03 |

Share: | | | | |


ಖರ್ಗೆ ಭೇಟಿಯಾದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ದೆಹಲಿಯಲ್ಲಿ ಭೇಟಿಯಾದ ಪುತ್ತೂರು ಶಾಸಕ ಅಶೋಕ್ ರೈಯವರು ಖರ್ಗೆ ಜೊತೆ ಮಾತುಕತೆ ನಡೆಸಿದರು. ಪುತ್ತೂರು ಶಾಸಕರಾದ ಬಳಿಕ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ ಅವರು ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್ ಪ್ರಮುಖರನ್ನು ಭೇಟಿಯಾದರು.

ರಾಮ ಮಂದಿರ ಉದ್ಘಾಟನೆ : ಜ.22ರಂದು ಸರ್ಕಾರಿ ಕಚೇರಿ ಗಳಿಗೆ ಅರ್ಧ ದಿನ ರಜೆ ಘೋಷಿಸಿದ ಕೇಂದ್ರ ಸರ್ಕಾರ

Posted by Vidyamaana on 2024-01-18 15:52:36 |

Share: | | | | |


ರಾಮ ಮಂದಿರ ಉದ್ಘಾಟನೆ : ಜ.22ರಂದು ಸರ್ಕಾರಿ ಕಚೇರಿ ಗಳಿಗೆ ಅರ್ಧ ದಿನ ರಜೆ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ : ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನ ಅರ್ಧ ದಿನ ಮುಚ್ಚುವುದಾಗಿ ಘೋಷಿಸಿದರು. ಅತಿಯಾದ ಸಾರ್ವಜನಿಕ ಭಾವನೆಗಳಿಂದ ಪ್ರೇರಿತವಾದ ಈ ನಿರ್ಧಾರವು ಮಹತ್ವದ ಘಟನೆಯಲ್ಲಿ ಭಾಗವಹಿಸಲು ಅಥವಾ ವೀಕ್ಷಿಸಲು ಅಧಿಕಾರಿಗಳಿಗೆ ಅವಕಾಶ ನೀಡುವ ಗುರಿಯನ್ನು ಹೊಂದಿದೆ.ರಾಮ್ ಲಲ್ಲಾ ವಿಗ್ರಹವನ್ನ ಬುಧವಾರ ರಾತ್ರಿ ರಾಮ ದೇವಾಲಯದ ಗರ್ಭಗುಡಿಗೆ ತರಲಾಯಿತು ಎಂದು ಶ್ರೀ ರಾಮ್ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಖಚಿತಪಡಿಸಿದ್ದಾರೆ. ಸಧ್ಯ ವಿಗ್ರಹವನ್ನ ಗರ್ಭಗೃಹದಲ್ಲಿ ಇರಿಸಲಾಗಿದೆ.


ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ನಡೆಯಿತು. ಗರ್ಭಗುಡಿಯಲ್ಲಿ ವಿಗ್ರಹದ ಸ್ಥಾಪನೆ ಗುರುವಾರ ನಡೆಯುವ ನಿರೀಕ್ಷೆಯಿದೆ ಎಂದು ಮಿಶ್ರಾ ತಿಳಿಸಿದ್ದಾರೆ.


ಜನವರಿ 22ರಂದು ಪ್ರತಿಷ್ಠಾಪನಾ ಸಮಾರಂಭಕ್ಕೆ ಮುಂಚಿತವಾಗಿ ನಡೆಯುತ್ತಿರುವ ಆಚರಣೆಗಳ ಭಾಗವಾಗಿ ವಿಗ್ರಹವನ್ನ ಟ್ರಕ್ ಬಳಸಿ ದೇವಾಲಯಕ್ಕೆ ಸಾಗಿಸಲಾಯಿತು. ಔಪಚಾರಿಕ ಸಿದ್ಧತೆಗಳ ಭಾಗವಾಗಿ ಬುಧವಾರ ಕಲಶ ಪೂಜೆ ನಡೆಸಲಾಯಿತು.

ಪಕ್ಷ ಬದಿಗಿಟ್ಟು ಪದ್ಮರಾಜ್, ಕೋಟ, ಗೀತಾರನ್ನು ಗೆಲ್ಲಿಸುವ: ಸತ್ಯಜಿತ್ ಸುರತ್ಕಲ್

Posted by Vidyamaana on 2024-04-01 19:50:03 |

Share: | | | | |


ಪಕ್ಷ ಬದಿಗಿಟ್ಟು ಪದ್ಮರಾಜ್, ಕೋಟ, ಗೀತಾರನ್ನು ಗೆಲ್ಲಿಸುವ: ಸತ್ಯಜಿತ್ ಸುರತ್ಕಲ್

ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕನ್ನಡದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರನ್ನು ನಾರಾಯಣಗುರು ವಿಚಾರ ವೇದಿಕೆ ಬೆಂಬಲಿಸಲಿದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದ್ದಾರೆ.

ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚ‌ರ್

Posted by Vidyamaana on 2024-06-01 14:10:48 |

Share: | | | | |


ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚ‌ರ್

ಉಡುಪಿ: ಉಡುಪಿಯ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಕಾಮಕಾಂಡಕ್ಕೆ ವೈದ್ಯೆಯೊಬ್ಬರು ಬೇಸತ್ತು (Physical Abuse) ಹೋಗಿದ್ದಾರೆ. ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರಾಬರ್ಟ್‌ ರೆಬೆಲ್ಲೋ ವಿರುದ್ಧ ದೂರು ದಾಖಲಾಗಿದೆ.

ಕಳೆದ ಆರು ತಿಂಗಳಿನಿಂದ ತಾಲೂಕು ಆಸ್ಪತ್ರೆಯ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. 2023ರಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಸೇರಿದ್ದ ಮಹಿಳೆ ಎನ್‌ಆರ್‌ಸಿ ವಿಭಾಗದಲ್ಲಿ ವೈದ್ಯಾಧಿಕಾರಿಯಾಗಿದ್ದಾರೆ. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ರಾಬರ್ಟ್‌ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ರವಾನೆ ಮಾಡುತ್ತಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.



Leave a Comment: