ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಸುದ್ದಿಗಳು News

Posted by vidyamaana on 2024-07-01 12:44:53 |

Share: | | | | |


ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.‌

ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ.‌ ಆರೋಪಿ ಪತಿ ಲೋಕನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 Share: | | | | |


ಕಾಶ್ಮೀರ: ರಜೆ ಮೇಲೆ ಮನೆಗೆ ಬಂದಿದ್ದ ಸೈನಿಕ ಜಾವೇದ್ ನಾಪತ್ತೆ - ಕಾರಿನಲ್ಲಿ ರಕ್ತದ ಕಲೆ ಪತ್ತೆ

Posted by Vidyamaana on 2023-07-30 05:54:23 |

Share: | | | | |


ಕಾಶ್ಮೀರ: ರಜೆ ಮೇಲೆ ಮನೆಗೆ ಬಂದಿದ್ದ ಸೈನಿಕ ಜಾವೇದ್ ನಾಪತ್ತೆ - ಕಾರಿನಲ್ಲಿ ರಕ್ತದ ಕಲೆ ಪತ್ತೆ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ಕುಲ್ಲಾಮ್ ಜಿಲ್ಲೆಯಲ್ಲಿ ರಜೆಯ ಮೇಲೆ ಮನೆಗೆ ಬಂದಿದ್ದ 25 ವರ್ಷದ ಯೋಧನನ್ನು ಆತನ ವಾಹನದಿಂದ ಅಪಹರಿಸಲಾಗಿದೆ ಎಂದು ಆತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.


ಯೋಧ ಜಾವೇದ್ ಅಹ್ಮದ್ ವಾನಿ ಕುಲ್ಲಾಮ್ ಜಿಲ್ಲೆಯ ಅಚಾತಲ್ ಪ್ರದೇಶದ ನಿವಾಸಿಯಾಗಿದ್ದಾರೆ. ರೈಫಲ್ ಮ್ಯಾನ್ ಜಾವೇದ್ ಅಹ್ಮದ್ ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್ವೆಂಟ್ರಿ ರೆಜಿಮೆಂಟ್ ಗೆ ಸೇರಿದ್ದು, ಕೆಲವು ದಿನಗಳ ಹಿಂದೆ ರಜೆಯ ಮೇಲೆ ಮನೆಗೆ ಬಂದಿದ್ದರು.


ಜಾವೇದ್ ಅಹ್ಮದ್ ವಾನಿ ಅವರನ್ನು ಲೇಹ್ (ಲಡಾಖ್) ನಲ್ಲಿ ನಿಯೋಜಿಸಲಾಗಿತ್ತು ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಿನ್ನೆ ಸಂಜೆ ಪರಾನ್ ಹಾಲ್ ನಲ್ಲಿ ಅವರ ಕಾರು ಪತ್ತೆಯಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ ನೇಮಕ? ವಿಪಕ್ಷ ನಾಯಕನ ಹೆಸರೂ ಕೂಡ ಫೈನಲ್!

Posted by Vidyamaana on 2023-10-20 15:48:41 |

Share: | | | | |


ಕರ್ನಾಟಕ ಬಿಜೆಪಿ ಅಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ ನೇಮಕ? ವಿಪಕ್ಷ ನಾಯಕನ ಹೆಸರೂ ಕೂಡ ಫೈನಲ್!

ಬೆಂಗಳೂರು :ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಜ್ಯ ರಾಜಕೀಯದಲ್ಲಿ ಈ ಸುದ್ದಿ ಹೊಸ ಸಂಚಲನ ಮೂಡಿಸಿದೆ, ಶೋಭಾ ಕರಂದ್ಲಾಜೆ ನೇಮಕವಾದರೆ ಮೊದಲ ಬಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಹಿಳೆಯೊಬ್ಬರು ಅಧಿಕಾರ ವಹಿಸಿಕೊಂಡಂತಾಗುತ್ತದೆ.


ರಾಜ್ಯಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಹೈಕಮಾಂಡ್ ಈಗಾಗಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದು, ಶೀಘ್ರದಲ್ಲೇ ನಿರ್ಧಾರ ಮಾಡುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಬಿಎಸ್‌ವೈ ಅವರ ಇಚ್ಛೆಯಾಗಿತ್ತು.


ವಿಜಯೇಂದ್ರ ಪರ ಬಿಎಸ್‌ವೈ ಬ್ಯಾಟಿಂಗ್


ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಬೇಕೆಂದರೆ ಬಿಎಸ್ ಯಡಿಯೂರಪ್ಪ ಪಾತ್ರ ಮುಖ್ಯವಾಗುತ್ತದೆ. ಪಕ್ಷ ಸಂಘಟನೆ ದೃಷ್ಟಿಯಿಂದ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಪರಿಗಣಿಸುವಂತೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ರಾಷ್ಟ್ರೀಯಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಎಲ್ಲಾ ರೀತಿಯಿಂದಲೂ ಚಿಂತನೆ ಮಾಡಿರುವ ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆ ನೇಮಿಸಿದರೆ ಹೆಚ್ಚಿನ ವಿರೋಧ ಇರುವುದಿಲ್ಲ ಎನ್ನುವ ಲೆಕ್ಕಾಚಾರಕ್ಕೆ ಬಂದಿದೆ. ಬಿಎಸ್‌ವೈ ಕೂಡ ಶೋಭಾ ಅವರ ನೇಮಕಕ್ಕೆ ಒಮ್ಮತ ಮೂಡಬಹುದು ಎನ್ನಲಾಗಿದೆ.ವಿಪಕ್ಷ ನಾಯಕನ ಆಯ್ಕೆ


ಅಲ್ಲದೆ ಕಳೆದ 5 ತಿಂಗಳಿನಿಂದ ಖಾಲಿ ಇರುವ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ವಿಪಕ್ಷ ನಾಯಕರನ್ನಾಗಿ ಮಾಡಲು ಆಸಕ್ತಿ ಹೊಂದಿದೆ ಎಂದು ವರದಿಗಳು ಹೇಳಿವೆ.


ಇನ್ನು ಕೆಲವು ವರದಿಗಳ ಪ್ರಕಾರ, ಸದ್ಯ ಬಸವರಾಜ ಬೊಮ್ಮಾಯಿ ಅವರು ಶಸ್ತ್ರಚಿಕಿತ್ಸೆಗ ಒಳಗಾಗಿದ್ದು, ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ವಿಪಕ್ಷ ನಾಯಕ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದೆ.


ಒಕ್ಕಲಿಗರ ಮತ ಸೆಳೆಯಲು ತಂತ್ರ


ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದಾರೆ. ಇವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಕರ್ನಾಟಕ ವಿಧಾನಸಭಾಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒಕ್ಕಲಿಗ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸಿದ್ದವು.


ಅದೇ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೇಂದ್ರ ಸಚಿವೆ ಶೋಭಾ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗರ ಮತಗಳು ಸಿಗಬಹುದು ಎನ್ನುವ ಲೆಕ್ಕಾಚಾರ ಹೈಕಮಾಂಡ್‌ದ್ದಾಗಿದೆ ಎಂದು ಹೇಳಲಾಗಿದೆ. ಜೆಡಿಎಸ್ ಕೂಡ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಒಕ್ಕಲಿಗರ ಮತಗಳನ್ನು ಸೆಳೆಯುವುದು ಸುಲಭವಾಗಲಿದೆ ಎಂದು ಹೇಳಲಾಗಿದೆ

ಪುತ್ತೂರು ಅಕ್ರಮ ಸಕ್ರಮ ಸಮಿತಿ ರಚಿಸಿ ಸರಕಾರದ ಆದೇಶ

Posted by Vidyamaana on 2023-09-14 21:54:25 |

Share: | | | | |


ಪುತ್ತೂರು ಅಕ್ರಮ ಸಕ್ರಮ ಸಮಿತಿ ರಚಿಸಿ ಸರಕಾರದ ಆದೇಶ

ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ(ಅಕ್ರಮ ಸಕ್ರಮ) ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸಾಮಾನ್ಯ ಸದಸ್ಯರಾಗಿ ಎಂ ಮಹಮ್ಮದ್ ಬಡಗನ್ನೂರು, ಮಹಿಳಾ ಸದಸ್ಯರಾಗಿ ಶ್ರೀಮತಿ ರೂಪರೇಖಾ ಆಳ್ವ, ಪರಿಶಿಷ್ಟ ಜಾತಿ ಪ್ರವರ್ಗದಿಂದ ರಾಮಣ್ಣ ಪಿಲಿಂಜ, ಸದಸ್ಯ ಕಾರ್ಯದರ್ಶಿಯಾಗಿ ತಾಲೂಕಿನ ತಹಶೀಲ್ದಾರ್ ಅವರನ್ನು ನಾಮನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದೆ.

ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ಆಮಿಷಕ್ಕೆ

Posted by Vidyamaana on 2023-10-13 04:46:47 |

Share: | | | | |


ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ಆಮಿಷಕ್ಕೆ

ಸುಳ್ಯ, ಅ.12: ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ. 


ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದ. 


ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ. ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ  ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‌

ಆಸ್ಪತ್ರೆಯಲ್ಲೇ ಪ್ರೀ-ವೆಡ್ಡಿಂಗ್ ಶೂಟ್: ಗುತ್ತಿಗೆ ವೈದ್ಯನನ್ನು ಕೆಲಸದಿಂದ ವಜಾಗೊಳಿಸಿ ಡಿಸಿ ಆದೇಶ

Posted by Vidyamaana on 2024-02-09 19:02:36 |

Share: | | | | |


ಆಸ್ಪತ್ರೆಯಲ್ಲೇ ಪ್ರೀ-ವೆಡ್ಡಿಂಗ್ ಶೂಟ್: ಗುತ್ತಿಗೆ ವೈದ್ಯನನ್ನು ಕೆಲಸದಿಂದ ವಜಾಗೊಳಿಸಿ ಡಿಸಿ ಆದೇಶ

ಚಿತ್ರದುರ್ಗ: ಆಸ್ಪತ್ರೆಯಲ್ಲೇ ಆಪರೇಷನ್ ಮಾಡೋ ತರ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿ, ಕರ್ತವ್ಯ ಲೋಪ ಎಸಗಿದ್ದಂತ ವೈದ್ಯ ಡಾ.ಅಭಿಷೇಕ್ ಅವರನ್ನು ಕೆಲಸದಿಂದ ವಜಾಗೊಳಿಸಿ, ಜಿಲ್ಲಾಧಿಕಾರಿ ವೆಂಕಟೇಶ್ ಆದೇಶಿಸಿದ್ದಾರೆ.ಚಿತ್ರದುರ್ಗದ (Chitr

non

urga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿತ್ತು.


ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ , ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದರು.


ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುವ ವಿಡಿಯೋ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಆಗುತ್ತಿದ್ದಂತೇ, ಗುತ್ತಿಗೆ ವೈದ್ಯರ ಪ್ರೀ ವೆಡ್ಡಿಂಗ್ ಶೂಟಿಂಗ್ ಬಗ್ಗೆ ವೈದ್ಯರೇ ಹೀಗೆ ಮಾಡಿದ್ದು ಸರಿಯಲ್ಲ ಎಂಬುದಾಗಿ ಆಕ್ಷೇಪ, ಆಕ್ರೋಶ ಹೊರಬಿದ್ದಿತ್ತು. ಈ ಬೆನ್ನಲ್ಲೇ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ.

ಎ.23-24: ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಪುನ‌ರ್ ಪ್ರತಿಷ್ಠಾಪನಾ ಮಹೋತ್ಸವ

Posted by Vidyamaana on 2024-04-23 08:15:59 |

Share: | | | | |


ಎ.23-24: ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಪುನ‌ರ್ ಪ್ರತಿಷ್ಠಾಪನಾ ಮಹೋತ್ಸವ

ಪುತ್ತೂರು: ೧೯೬೪ರಲ್ಲಿ ಪುತ್ತೂರಿನ ಕೆಮ್ಮಿಂಜೆಯಲ್ಲಿ ನಿರ್ಮಿಸಲಾದ ಶ್ರೀ ರಾಮ ಭಜನಾ ಮಂದಿರವನ್ನು ನವೀಕರಿಸಲಾಗಿದ್ದುö,  ಇದರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮಗಳು ಏಪ್ರಿಲ್ ೨೩ ಮತ್ತು ೨೪ರಂದು  ನಡೆಯಲಿದೆ ಎಂದು ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಚಂದ್ರಶೇಖರ ಕೆಮ್ಮಿಂಜೆ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ೨೩ರಂದು ಸಂಜೆ ೭ ಗಂಟೆಯಿAದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ 



Leave a Comment: