ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

ಸುದ್ದಿಗಳು News

Posted by vidyamaana on 2024-07-25 13:38:46 |

Share: | | | | |


ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

      ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ

ಇದು ಹೇಗೆ ಕಾರ್ಯನಿರ್ವಹಿಸುತ್ತದೆ

ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.

ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ

ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ

ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.

 Share: | | | | |


ಉಳ್ಳಾಲದಲ್ಲಿ ಸೈಟ್ ಅಭಿವೃದ್ಧಿ ಹೆಸರಲ್ಲಿ ಬಿಲ್ಡರ್‌ನಿಂದ 86 ಲಕ್ಷ ಹಣ ಪಡೆದು ವಂಚನೆ ; ಮಂಗಳೂರಿನ ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ಮೇಲೆ ಕೇಸು ದಾಖಲು

Posted by Vidyamaana on 2024-05-29 05:56:24 |

Share: | | | | |


ಉಳ್ಳಾಲದಲ್ಲಿ ಸೈಟ್ ಅಭಿವೃದ್ಧಿ ಹೆಸರಲ್ಲಿ ಬಿಲ್ಡರ್‌ನಿಂದ 86 ಲಕ್ಷ ಹಣ ಪಡೆದು ವಂಚನೆ ; ಮಂಗಳೂರಿನ ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ಮೇಲೆ ಕೇಸು ದಾಖಲು

ಮಂಗಳೂರು, ಮೇ.27: ಸೈಟ್ ಅಭಿವೃದ್ಧಿ ಪಡಿಸುವ ನೆಪದಲ್ಲಿ ಬಿಲ್ಡರ್‌ ಒಬ್ಬರಿಂದ 86 ಲಕ್ಷ ರೂ. ಹಣ ಪಡೆದು ವಂಚಿಸಿ, ಲೇಔಟ್‌ ವ್ಯವಹಾರಕ್ಕೆ ಅಡ್ಡಿಪಡಿಸಿ,  ಜೀವ ಬೆದರಿಕೆಯೊಡ್ಡಿದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕೊಂದರ ಮ್ಯಾನೇಜರ್‌ ಸಹಿತ ಬ್ರೋಕರ್‌, ಸಿವಿಲ್‌ ಗುತ್ತಿಗೆದಾರನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ರಾಷ್ಟ್ರೀಕೃತ ಬ್ಯಾಂಕ್ ಒಂದರಲ್ಲಿ ಮ್ಯಾನೇಜರ್‌ ಆಗಿರುವ ಜೆಪ್ಪಿನಮೊಗರು ನಿವಾಸಿ ಪವನ್‌ ಕುಮಾರ್‌, ಬ್ರೋಕರ್‌ ಆಗಿರುವ ಗುರುರಾಜ್‌, ಸಿವಿಲ್‌ ಗುತ್ತಿಗೆದಾರ ಜಗದೀಶ್‌ ಹಾಗೂ ಅವರ ಸಹಚರ ಜಯಪ್ರಕಾಶ್‌ ಜೆ.ಪಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳ್ಳಾಲದ ಪುಷ್ಪರಾಜ್ ಎಂಬವರು ಬೆಂಗಳೂರು ಮೂಲದ ವೆಂಕಟೇಶ್ ಮತ್ತು ಮಹೇಶ್ ಕುಮಾರ್ ಎಂಬಿಬ್ಬರು ಬಿಲ್ಡರ್‌ ಗಳ ಜೊತೆಗೂಡಿ ಮಂಗಳೂರಿನಲ್ಲಿ ಲೇಔಟ್‌ ನಿರ್ಮಿಸಿ ಸಾರ್ವಜನಿಕವಾಗಿ ಸೈಟ್‌ ಮಾರಾಟ ಮಾಡಲು ಯೋಜನೆ ಹಾಕಿದ್ದರು. ಇದೇ ಸಂದರ್ಭ ಬ್ಯಾಂಕ್‌ ಮ್ಯಾನೇಜರ್‌ ಪವನ್‌ ಕುಮಾರ್‌ ಎಂಬಾತ ಪರಿಚಯವಾಗಿದ್ದು ತನ್ನ ಮೂಲಕ ಉಳ್ಳಾಲದಲ್ಲಿ ನಾಲ್ಕು ಎಕ್ರೆ ಜಮೀನನ್ನು ಕ್ರಯಕ್ಕೆ ಕೊಡಿಸಿದ್ದರು. 2022ರ ಫೆಬ್ರವರಿ ತಿಂಗಳಲ್ಲಿ ನಿವೇಶನಗಳನ್ನು ವಿಂಗಡಿಸಿ ಮಾರಾಟ ಮಾಡಲು ಆರಂಭಿಸಿದ್ದರು. ಈ ಬಗ್ಗೆ ಪವನ್‌ ಕುಮಾರ್‌, ಬಿಲ್ಡರ್‌ ಅವರಲ್ಲಿ  ಲೇಔಟ್‌ನ ಡ್ರೈನೇಜ್‌ ಇನ್ನಿತರ ಕೆಲಸಗಳನ್ನು ತಾನೇ ಮಾಡಿಸುತ್ತೇನೆಂದು ಹೇಳಿ ಮಾತುಕತೆ ನಡೆಸಿದ್ದರು.

ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ : ಆರೋಪಿ ಪದ್ಮರಾಜ್ ಪೊಲೀಸ್ ವಶಕ್ಕೆ

Posted by Vidyamaana on 2023-08-24 10:08:51 |

Share: | | | | |


ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ :  ಆರೋಪಿ ಪದ್ಮರಾಜ್ ಪೊಲೀಸ್ ವಶಕ್ಕೆ

ಪುತ್ತೂರು: ಇಲ್ಲಿನ ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.


ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ.


ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ವಾಹನ ಸವಾರ ರಿಗೆ ಬಿಗ್ ರಿಲೀಫ್: HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ

Posted by Vidyamaana on 2023-11-15 07:48:38 |

Share: | | | | |


 ವಾಹನ ಸವಾರ ರಿಗೆ ಬಿಗ್ ರಿಲೀಫ್:  HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ

ಬೆಂಗಳೂರು : 2019, ಏಪ್ರಿಲ್ 1ರ ನಂತ್ರ ಖರೀದಿಸಿದಂತ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ( HSRP Number Plate ) ಅಳವಡಿಸೋದು ಕಡ್ಡಾಯಗೊಳಿಸಲಾಗಿತ್ತು. ಇದಕ್ಕಾಗಿ ನವೆಂಬರ್.17 ಡೆಡ್ ಲೈನ್ ನೀಡಲಾಗಿತ್ತು. ಈಗ ಈ ಅವಧಿಯನ್ನು ಫೆ.17, 2024ರವರೆಗೆ ವಿಸ್ತರಿಸಲಾಗಿದೆ.ಈ ಮೂಲಕ ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಲಾಗಿದೆ.


ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ( Minister Ramalingareddy ) ಅವರು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಕೆಗೆ ಅವಧಿ ವಿಸ್ತರಿಸುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ. ಈ ಮನವಿಯ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದರು.


ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿರುವಂತ ಗಡುವನ್ನು ನವೆಂಬರ್.17ರಿಂದ ಫೆಬ್ರಬರಿ.17, 2024ರವರೆಗೆ ವಿಸ್ತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗುತ್ತಿದೆ. ಈ ಸಂಬಂಧ ಇಂದು ಸಂಜೆ ಆದೇಶ ಹೊರಡಿಸಲಾಗುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ HSRP ಪಡೆಯುವುದು ಹೇಗೆ?

ಕರ್ನಾಟಕ ಸಾರಿಗೆ ಇಲಾಖೆಯ ವೆಬ್ಸೈಟ್ - https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು ಬುಕ್ HSRP ಕ್ಲಿಕ್ ಮಾಡಿ. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ ಮತ್ತು ಕೇಳಿದ ಮೂಲ ವಾಹನ ವಿವರವನ್ನು ಭರ್ತಿ ಮಾಡಿ. ನಂತರ ಎಚ್‌ಎಸ್‌ಆರ್ಪಿಯನ್ನು ಅಂಟಿಸಲು ನಿಮ್ಮ ಅನುಕೂಲಕ್ಕೆ ಅನುಗುಣವಾಗಿ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ ಮತ್ತು ಆನ್ಲೈನ್ನಲ್ಲಿ HSRP ಶುಲ್ಕವನ್ನು ಪಾವತಿಸಲು ಮುಂದುವರಿಯಿರಿ. ಯಾವುದೇ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.


ಒಟಿಪಿಯನ್ನು ರಚಿಸಿ ವಾಹನ ಮಾಲೀಕರ ಮೊಬೈಲ್ ಗೆ ಕಳುಹಿಸಲಾಗುತ್ತದೆ. ಮಾಲೀಕರು ತಮ್ಮ ಅನುಕೂಲ ಮತ್ತು ವೆಬ್ಸೈಟ್ಗೆ ಅನುಗುಣವಾಗಿ ಅಂಟಿಸುವ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಬಹುದು.ನಂತರ ಮಾಲೀಕರು ಎಚ್‌ಎಸ್‌ಆರ್ಪಿಯನ್ನು ಅಂಟಿಸಲು ಅವನ / ಅವಳ ವಾಹನ ತಯಾರಕರು ಅಥವಾ ಡೀಲರ್ಗೆ ಭೇಟಿ ನೀಡಬೇಕು. ಕೆಲವು ತಯಾರಕರು ಮನೆಗಳು ಮತ್ತು ಕಚೇರಿಗಳ ಮನೆ ಬಾಗಿಲಿಗೆ ಎಚ್‌ಎಸ್‌ಆರ್ಪಿ ಸೇವೆಯನ್ನು ಒದಗಿಸುತ್ತಿದ್ದಾರೆ.

ಪುತ್ತೂರು ದರ್ಬೆ ಸಚಿನ್ ಟ್ರೇಡರ್ಸ್‌ ಬಳಿ ಕಾರು ಪಲ್ಟಿ

Posted by Vidyamaana on 2024-02-11 16:02:22 |

Share: | | | | |


ಪುತ್ತೂರು ದರ್ಬೆ ಸಚಿನ್ ಟ್ರೇಡರ್ಸ್‌ ಬಳಿ ಕಾರು ಪಲ್ಟಿ

ಪುತ್ತೂರು: ಪುತ್ತೂರು ದರ್ಬೆ ಸಚಿನ್ ಟ್ರೇಡರ್ಸ್‌ ಎದುರು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಫೆ 11ರಂದು ಮಧ್ಯಾಹ್ನ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ಮಂಗಳೂರು: ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ SDPI ಸೇರ್ಪಡೆ

Posted by Vidyamaana on 2023-06-22 01:51:24 |

Share: | | | | |


ಮಂಗಳೂರು: ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ SDPI ಸೇರ್ಪಡೆ

ಮಂಗಳೂರು : ಜೆಡಿಎಸ್ ಗೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.ಎಸ್.ಡಿ.ಪಿ. ಐ ಪಕ್ಷದ ಸಂಸ್ಥಾಪನಾ ದಿನಾಚರಣೆ ಸಂಬಂಧಿಸಿದ ನಾಯಕರ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಸುಮತಿ ಹೆಗ್ಡೆ ಎಸ್.ಡಿ.ಪಿ.ಐಗೆ ಸೇರ್ಪಡೆಗೊಂಡರು.


ಸುಮತಿ ಹೆಗ್ಡೆಯವರೊಂದಿಗೆ ಮಹಿಳಾ ಜೆಡಿಎಸ್ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿತಾ, ಜೆಡಿಎಸ್ ಮಂಗಳೂರು ನಗರ ಕಾರ್ಯದರ್ಶಿ ಅಲ್ತಾಫ್ ತುಂಬೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ.

ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ,ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ, ಅಲ್ಫೋನ್ಸ್ ಫ್ರಾಂಕೊ, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ,ರಾಜ್ಯ ಮುಖಂಡರಾದ ಅಥಾವುಲ್ಲ ಜೋಕಟ್ಟೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಎಸ್ ಡಿ ಪಿ ಐ ಕುರಿಯ ಬೂತ್ ಸಮೀತಿ ವತಿಯಿಂದ ರಂಝಾನ್ ಕಿಟ್ ವಿತರಣೆ

Posted by Vidyamaana on 2023-03-24 16:34:11 |

Share: | | | | |


ಎಸ್ ಡಿ ಪಿ ಐ ಕುರಿಯ ಬೂತ್ ಸಮೀತಿ ವತಿಯಿಂದ ರಂಝಾನ್ ಕಿಟ್ ವಿತರಣೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುರಿಯ ಬೂತ್ ಸಮೀತಿ ವತಿಯಿಂದ ವರ್ಷಂಪ್ರತಿ ರಂಝಾನ್ ತಿಂಗಳಲ್ಲಿ ದಾನಿಗಳ‌ ನೆರವಿನಿಂದ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ಗಳನ್ನು ನೀಡುತ್ತಿದ್ದು ಅದೇ ರೀತಿ ಈ ಬಾರಿ ಕೂಡ ಮಾ 24 ರಂದು ಶುಕ್ರವಾರ ಸುಮಾರು 120 ರಷ್ಟು ಆಹಾರ ಕಿಟ್ ಗಳನ್ನು ನೀಡಲಾಯಿತು..

 ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ SDPI ಪುತ್ತೂರು ವಿಧಾನಸಭಾ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಹಾಗೂ SDPI ಹಿರಿಯ ನಾಯಕರಾದ PBK ಮಹಮ್ಮದ್ ಹಾಗೂ ಆರ್ಯಾಪು ಚುನಾವಣಾ ಉಸ್ತುವಾರಿಯಾದ ಅಶ್ರಫ್ ಸಂಟ್ಯಾರ್ ರವರು ಆಗಮಿಸಿ, ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು...

ಹಾಜಿ ಇಬ್ರಾಹಿಂ ಸಾಗರ್ ಮಾತನಾಡಿ ಕುರಿಯ SDPI ಯ ಯುವಕರ ಈ ಉತ್ತಮ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.ಇಂತಹ ಮಾದರಿ ಕಾರ್ಯಗಳು ಹಾಗೂ ಸಾಮಾಜಿಕ ಸೇವೆಗಳು ತಾಲೂಕಿನ ‌ಪ್ರತಿಯೊಂದು ಕಡೆಗಳಲ್ಲಿ ಕೂಡ ನಡೆಯಬೇಕಿದೆ ಕುರಿಯದ ಎಸ್ಡಿಪಿಐ ಸದಸ್ಯರಿಗೆ ಹಾಗೂ ಕಿಟ್ ನೀಡಲು ಸಹಕಾರ ನೀಡಿದ ದಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು...

ಈ ಸಂದರ್ಭದಲ್ಲಿ ಸ್ಥಳೀಯ ಎಸ್ಡಿಪಿಐ ಕಾರ್ಯಕರ್ತರಾದ ಅಶ್ರಫ್,ಝೈದ್, ಜಬ್ಬಾರ್ ಕುರಿಯ, ಜಬ್ಬಾರ್ ಅಜ್ಜಿಕಟ್ಟೆ, ಸಾದಿಕ್ ಕುರಿಯ , ಶಾಕಿರ್ ಮುಂಡೂರು,ನಿಝಾಂ ಪಂಜಳ, ಫಾರೂಕ್ ಎಸ್,,ರವುಫ್ ಕುರಿಯ,ಪವಾಝ್ ಕುರಿಯ  ಹಾಗೂ ಪಕ್ಷದ ಅಭಿಮಾನಿಗಳು ಹಾಗೂ, ಹಿತೈಷಿಗಳು ಉಪಸ್ಥಿತರಿದ್ದರು...

Recent News


Leave a Comment: