ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಪೊಲೀಸರ ಮಹತ್ವದ ಕ್ರಮ : ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ನೀಡಬಹುದು!

Posted by Vidyamaana on 2023-06-16 04:21:50 |

Share: | | | | |


ಪೊಲೀಸರ ಮಹತ್ವದ ಕ್ರಮ : ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ನೀಡಬಹುದು!

ಬೆಂಗಳೂರು :ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ಪಡೆಯಲು ಮುಂದಾಗಿದ್ದಾರೆ.ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು, ದಯಾನಂದ್, ನಮ್ಮ 112 ಉನ್ನತೀಕರಿಸಲು ಮೊದಲ ಹೆಜ್ಜೆ ಇರಿಸಲಾಗಿದೆ.ನಾಗರಿಕರು ತುರ್ತು ಸಂದರ್ಭದಲ್ಲಿ ಸಹಾಯಕ್ಕೆ ಹಾಗೂ ಇತರೆ ಯಾವುದೇ ರೀತಿಯ ದೂರುಗಳು ಇದ್ದರೆ ಇನ್ನು ಮುಂದೆ 9480801000 ವಾಟ್ಸ್‌ಆಯಪ್ ನಂಬರ್‌ಗೆ ಕಳುಹಿಸಬಹುದು ಎಂದು ಹೇಳಿದ್ದಾರೆ.

ನಮ್ಮ 112 ನಿಯಂತ್ರಣ ಕೊಠಡಿ‌ ಮೂಲಕ ಜನರ ದೂರು ಸ್ವೀಕರಿಸುತ್ತಿದ್ದ ಬೆಂಗಳೂರು ಪೊಲೀಸರು, ಇದೀಗ ವಾಟ್ಸ್‌ಆಯಪ್‌ ಮೂಲಕವೂ ದೂರು ಪಡೆಯಲು ಮುಂದಾಗಿರುವುದರಿಂದ ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.

ಸಾರ್ವಜನಿಕ ಸ್ಥಳದಲ್ಲಿ ತಲವಾರು ಪ್ರದರ್ಶಿಸಿದ ಪ್ರಕರಣ

Posted by Vidyamaana on 2023-11-11 15:02:09 |

Share: | | | | |


ಸಾರ್ವಜನಿಕ ಸ್ಥಳದಲ್ಲಿ ತಲವಾರು ಪ್ರದರ್ಶಿಸಿದ ಪ್ರಕರಣ

ಪುತ್ತೂರು: ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ ಕಛೇರಿಯ ಮುಂಭಾಗದಲ್ಲಿ ತಲ್ವಾರ್‌ನೊಂದಿಗೆ ಕಾರಿನಲ್ಲಿ ಬಂದ ತಂಡ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ.10ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕ ಶಾಂತಿಗೋಡು ಗ್ರಾಮದ ದಿನೇಶ್ ಪಂಜಿಗ(38ವ), ನರಿಮೊಗರು ಗ್ರಾಮದ ಭವಿತ್(19ವ), ಬೊಳುವಾರು ನಿವಾಸಿ ಮನ್ವಿತ್(18ವ), ಚಿಕ್ಕಮುನ್ನೂರು ಗ್ರಾಮದ ಜಯಪ್ರಕಾಶ್(18ವ), ಚಿಕ್ಕಮುನ್ನೂರು ಗ್ರಾಮದ ಚರಣ್(23ವ), ಬನ್ನೂರು ಗ್ರಾಮದ ಮನೀಶ್(23ವ), ಕಸಬ ಗ್ರಾಮದ ವಿನೀತ್(19ವ) ಸಹಿತ ಇಬ್ಬರು ಅಪ್ರಾಪ್ತ ಪ್ರಾಯದ ಬಾಲಕರನ್ನು ಪೊಲಿಸರು ವಶಕ್ಕೆ ಪಡೆದು ಕೊಂಡು ಪ್ರಕರಣ ದಾಖಲಿಸಿಕೊಂಡಿದ್ದರು. ನ.11ರಂದು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ಅರೋಪಿಗಳಿಗೆ ನ.15ರ ತನಕ ನ್ಯಾಯಾಂಗ ಕಸ್ಟಡಿಗೆ ನೀಡಿದ್ದಾರೆ

ಮುಕ್ವೆ ನಿವಾಸಿ, ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ನಾಪತ್ತೆ!!

Posted by Vidyamaana on 2024-02-20 16:27:26 |

Share: | | | | |


ಮುಕ್ವೆ ನಿವಾಸಿ, ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ನಾಪತ್ತೆ!!

ಉಳ್ಳಾಲ: ಪುತ್ತೂರು ಮೂಲದ ವಿದ್ಯಾರ್ಥಿನಿಯೋರ್ವಳು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇದೀಗ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.


ಕೋಟೆಕಾರು ಬಳಿಯ ಮಾಡೂರಿನ ಪಿಜಿಯಲ್ಲಿದ್ದು, ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದ, ಪುತ್ತೂರು ಮುಕ್ವೆ ನಿವಾಸಿ ಚೈತ್ರಾ (27) ನಾಪತ್ತೆಯಾದ ವಿದ್ಯಾರ್ಥಿನಿ. 


ಚೈತ್ರಾ ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿ ಫುಡ್ ಸೆಕ್ಯುರಿಟಿ ವಿಷಯದಲ್ಲಿ ಪಿಎಚ್ ಡಿ ಅಧ್ಯಯನ ನಡೆಸುತ್ತಿದ್ದಳು. ಕೋಟೆಕಾರು ಮಾಡೂರಿನ ಅಹನಾ ಎಂಬ ಪಿಜಿಯಲ್ಲಿ ಚೈತ್ರಾ ನೆಲೆಸಿದ್ದಳು. 


ಚೈತ್ರಾಳ ತಂದೆ ಮೃತರಾಗಿದ್ದು ಮಂಗಳೂರಿನ ಸಂಬಂಧಿಕರ ಆಶ್ರಯದಲ್ಲಿದ್ದುಕೊಂಡು ಎಂಎಸ್ಸಿ ಪೂರೈಸಿದ್ದಳು. ಕಳೆದ ಫೆ.17ರಂದು ಬೆಳಗ್ಗೆ 9 ಗಂಟೆಗೆ ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾ ಕದ್ರಿಯ ಮನೆಗೂ ತೆರಳದೆ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಳು ಎಂದು ದೂರಲಾಗಿದೆ.


 ಫೆ.17 ರಂದು ಚೈತ್ರಾ ನಾಪತ್ತೆಯಾದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಇದಾಗಿ ಮೂರು ದಿನ ಕಳೆದರೂ ಚೈತ್ರಾ ಮರಳಿ ಬಂದಿಲ್ಲ.

ಜಿ.ಎಲ್. ಜ್ಯುವೆಲ್ಲರ್ಸ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಧ್ವಜವಂದನೆ

Posted by Vidyamaana on 2023-08-16 09:56:04 |

Share: | | | | |


ಜಿ.ಎಲ್. ಜ್ಯುವೆಲ್ಲರ್ಸ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಧ್ವಜವಂದನೆ

ಪುತ್ತೂರು: ಚಿನ್ನಾಭರಣಗಳಲ್ಲಿ ವಿಶಿಷ್ಟ ಸ್ಥಾನಮಾನ ಕಾಯ್ದುಕೊಂಡಿರುವ ಪುತ್ತೂರಿನ ಪ್ರತಿಷ್ಠಿತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಸಂಸ್ಥೆಯ ಮಾಲಕ ಜಿ.ಎಲ್‌ ಬಲರಾಮ ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿ, ಶುಭ ಹಾರೈಸಿದರು.

ಲಕ್ಷ್ಮೀಕಾಂತ ಆಚಾರ್ಯ, ಸುಧನ್ವ ಆಚಾರ್ಯ, ವೇದ ಲಕ್ಷ್ಮೀಕಾಂತ ಆಚಾರ್ಯ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಂಧ್ರ ಶಾಸಕನ ಸಂಬಂಧಿಕರು ಅಮೆರಿಕದ ಆಕ್ಸಿಡೆಂಟ್‌ನಲ್ಲಿ ಬಲಿ!

Posted by Vidyamaana on 2023-12-28 16:48:43 |

Share: | | | | |


ಆಂಧ್ರ ಶಾಸಕನ ಸಂಬಂಧಿಕರು ಅಮೆರಿಕದ ಆಕ್ಸಿಡೆಂಟ್‌ನಲ್ಲಿ ಬಲಿ!

    ಆಂಧ್ರ ಶಾಸಕ ಪಿ ವೆಂಕಟ ಸತಿಶ್‌ ಕುಮಾರ್‌ರ 6 ಮಂದಿ ಸಂಬಂಧಿಕರು ಅಮೆರಿಕದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆಂದ್ರದ ಅಮಲಾಪುರಂಗೆ ಸೇರಿದ ಇವರು ಅಮೆರಿಕ ಪ್ರವಾಸಕ್ಕೆ ಹೋಗಿದ್ರು. ಆದ್ರೆ ಡಿಸೆಂಬರ್‌ 26ರಂದು ಟೆಕ್ಸಾಸ್‌ ಬಳಿ ಇವರು ಟ್ರಾವೆಲ್‌ ಮಾಡ್ತಿದ್ದ ಕಾರು ಎದುರಿಗೆ ಬಂದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಉಂಟಾಗಿದೆ.ಘಟನೆಯಲ್ಲಿ ಬದುಕುಳಿದ ಒಬ್ಬ ವ್ಯಕ್ತಿಯನ್ನ ಏರ್‌ಲಿಫ್ಟ್‌ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈತನ ಸ್ಥಿತಿಯೂ ಗಂಭೀರ ಎನ್ನಲಾಗ್ತಿದೆ.

ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

Posted by Vidyamaana on 2023-07-10 07:10:00 |

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.



Leave a Comment: