ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ

Posted by Vidyamaana on 2024-06-29 13:06:13 |

Share: | | | | |


ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮೇ.26 ಸುಳ್ಯ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸುಳ್ಯ ಪಟ್ಟಣ ಪಂಚಾಯತ್, ಪುತ್ತಿಲ ಅಭಿಮಾನಿಗಳ ವತಿಯಿಂದ ನಿರ್ಮಿಸಿದ ಮನೆ ಸೇವಾಶ್ರಯದ ಹಸ್ತಾಂತರ

Posted by Vidyamaana on 2024-05-26 07:56:26 |

Share: | | | | |


ಮೇ.26 ಸುಳ್ಯ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸುಳ್ಯ ಪಟ್ಟಣ ಪಂಚಾಯತ್, ಪುತ್ತಿಲ ಅಭಿಮಾನಿಗಳ ವತಿಯಿಂದ ನಿರ್ಮಿಸಿದ ಮನೆ ಸೇವಾಶ್ರಯದ ಹಸ್ತಾಂತರ

ಸುಳ್ಯ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸುಳ್ಯ ಪಟ್ಟಣ ಪಂಚಾಯತ್, ಪುತ್ತಿಲ ಅಭಿಮಾನಿಗಳ ವತಿಯಿಂದ ಬಡ ಮಹಿಳೆಗಾಗಿ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ಮೇ.26 ರಂದು ನಡೆಯಲಿದೆ.

ಸುಳ್ಯದ ಪೈಚ್ಚಾರಿನಲ್ಲಿ ಬಡ ಮಹಿಳೆಗೆ ನೂತನವಾಗಿ ನಿರ್ಮಿಸಿದ ಮನೆ ಸೇವಾಶ್ರಯದ ಹಸ್ತಾಂತರ ಕಾರ್ಯಕ್ರಮ ನಾಳೆ (ಮೇ.26) ಬೆಳಿಗ್ಗೆ

ಪಾಲ್ತಾಡಿ ಬಳಿ ಮದುವೆ ಟೆಂಪೋ ಪಲ್ಟಿ :ಬೆಳ್ಳಾರೆಯಿಂದ ಈಶ್ವರಮಂಗಲ ಕಡೆ ತೆರಳುತ್ತಿದ್ದ ಟೆಂಪೋ

Posted by Vidyamaana on 2023-10-22 21:58:27 |

Share: | | | | |


ಪಾಲ್ತಾಡಿ ಬಳಿ  ಮದುವೆ ಟೆಂಪೋ ಪಲ್ಟಿ :ಬೆಳ್ಳಾರೆಯಿಂದ ಈಶ್ವರಮಂಗಲ ಕಡೆ ತೆರಳುತ್ತಿದ್ದ ಟೆಂಪೋ

ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಪಾಲ್ತಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ   ಪಲ್ಟಿಯಾದ ಘಟನೆ ಅ 22 ರಂದು ಆದಿತ್ಯವಾರ ದಂದು  ಸಂಜೆ ನಡೆದಿದೆ.

💥ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ ಪಾಲ್ತಾಡಿ ಬಳಿ ಮದುವೆ ಟೆಂಪೋ ಪಲ್ಟಿ ವಿಡಿಯೋ


ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಟೆಂಪೋದಲ್ಲಿ ಹೆಚ್ಚಿನವರು ಮಹಿಳೆಯರಿದ್ದು ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆ ತರಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.


ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ

Posted by Vidyamaana on 2023-01-10 11:32:15 |

Share: | | | | |


ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ

ಪುತ್ತೂರು: ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿಯನ್ನು ಕೇಂದ್ರೀಕರಿಸಿಕೊಂಡು ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಕಚೇರಿ ಕಾರ್ಯಾರಂಭ ಮಾಡಿದೆ.

ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದ ಹಿಂಬದಿಯ ಕೊಠಡಿಯಲ್ಲಿದೆ ಇಲಾಖೆಯ ಕಚೇರಿ. ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಇದೇ ಕೊಠಡಿಯಲ್ಲಿತ್ತು.

ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಮಂಜುಳಾಶ್ರೀ ಶೆಣೈ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರಿನಲ್ಲಿದ್ದ ಕಚೇರಿಯ ವಿಸ್ತರಿತ ಭಾಗ ಇದೀಗ ಪುತ್ತೂರಿನಲ್ಲಿ ಕಾರ್ಯಾರಂಭ ಮಾಡಿದೆ. ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವ ಹಲವು ಯೋಜನೆಗಳು ಇಲಾಖೆಯಲ್ಲಿದ್ದು, ಮೀನುಗಾರಿಕೆ ಕೃಷಿ ಮಾಡುವವರಿಕೆ, ಎಫ್ಓಪಿ ಸಂಸ್ಥಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.


ಜ. 4ರಂದು ಸಚಿವ ಎಸ್. ಅಂಗಾರ ಅವರು ಕಚೇರಿಯನ್ನು ಉದ್ಘಾಟಿಸಿದರು. ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಉಪನಿರ್ದೇಶಕಿ ಸುಶ್ಮಿತಾ ರಾವ್, ತಾ.ಪಂ. ಇಓ ನವೀನ್ ಕುಮಾರ್ ಭಂಡಾರಿ, ಸಾಜ ರಾಧಾಕೃಷ್ಣ ಆಳ್ವ, ಹರೀಶ್ ಬಿಜತ್ರೆ, ಪುತ್ತೂರ್ದ ಮುತ್ತು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮೊದಲಾದವರು ಉಪಸ್ಥಿತರಿದ್ದರು.


Read More:ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ

ಅಯ್ಯೋ ದೇವ್ರೇ.. ಆಟವಾಡ್ತಿದ್ದ ಮಗು ಫರ್ಸ್ಟ್ ಫ್ಲೋರಿನಿಂದ ಬಿತ್ತು..

Posted by Vidyamaana on 2023-08-27 10:30:32 |

Share: | | | | |


ಅಯ್ಯೋ ದೇವ್ರೇ.. ಆಟವಾಡ್ತಿದ್ದ ಮಗು ಫರ್ಸ್ಟ್ ಫ್ಲೋರಿನಿಂದ ಬಿತ್ತು..

ಮಂಗಳೂರು: ತಾಯಿ ಜೊತೆ ಬ್ಯಾಂಕಿಗೆ ಬಂದಿದ್ದ ಮಗುವೊಂದು ಹೊರಗಡೆ ಆವರಣದಲ್ಲಿ ಆಟವಾಡುತ್ತಾ ಗ್ರಿಲ್ ಮೇಲೇರಿ ಅಲ್ಲಿಂದ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ನಡೆದಿದೆ. 

ಆ.25ರಂದು ಮಗು ತನ್ನ ತಾಯಿ ಜೊತೆಗೆ ಇಲ್ಲಿರುವ ಬ್ಯಾಂಕಿಗೆ ಬಂದಿದ್ದ ಸಂದರ್ಭದಲ್ಲಿ ತಾಯಿ ಒಳಗಿರುವಂತೆ ಮಗು ಪ್ರಥಮ ಮಹಡಿಯ ಆವರಣದಲ್ಲಿ ಆಟವಾಡುತ್ತಿತ್ತು.

ಬಳಿಕ ಅಲ್ಲೇ ಇದ್ದ ಗ್ರಿಲ್ ಮೇಲೆರಿ ಮುಂದಕ್ಕೆ ಬಾಗಿದ ಸಂದರ್ಭ ಮಗು ತಲೆಕೆಳಗಾಗಿ ಬಿದ್ದಿದೆ.

ಈ ಸಂದರ್ಭದಲ್ಲಿ ಮಗುವನ್ನು ಹುಡುಕುತ್ತಾ ಹೊರಗಡೆ ಬಂದ ಮಗುವಿನ ತಾಯಿ ಕೆಳಗೆ ನೋಡಿ ಮಗು ಬಿದ್ದಿರುವುದನ್ನು ಕಂಡು ಬೊಬ್ಬೆ ಹಾಕಿದಾಗ ಬ್ಯಾಂಕ್ ಒಳಗಿದ್ದವರು ಮತ್ತು ಅಕ್ಕಪಕ್ಕದವರು ಬಂದು ಕೆಳಗೆ ಬಿದ್ದಿದ್ದ ಮಗುವನ್ನು ರಕ್ಷಿಸಿದ್ದಾರೆ.

ಅದೃಷ್ಟವಶಾತ್ ಈ ಮಗು ಪ್ರಾಣಾಪಾಯದಿಂದ ಪಾರಾಗಿದ್ದು,ಕೆಳಗೆ ಬಿದ್ದ ರಭಸಕ್ಕೆ ಮಗುವಿನ ತಲೆ ಮತ್ತು ಕೈಗೆ ಗಾಯಗಳಾಗಿವೆ.

ಮಗುವನ್ನು ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದುಅಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮಗು ಆಟವಡುತ್ತಾ ಗ್ರಿಲ್ ಮೇಲೆ ಹತ್ತಿ ಕೆಳಗೆ ಬೀಳುತ್ತಿರುವ ದೃಶ್ಯ ಇಲ್ಲಿ ಅಳವಡಿಸಲಾಗಿದ್ದ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

ಪುಟ್ಟರಾಜುಗೆ ನೋಡಿದ ಹುಡ್ಗೀನಾ ಎಚ್‌ಡಿಕೆ ಮದುವೆಯಾಗೋದು ಸರಿನಾ?: ಸಚಿವ ಎನ್.ಚಲುವರಾಯಸ್ವಾಮಿ

Posted by Vidyamaana on 2024-03-27 08:22:35 |

Share: | | | | |


ಪುಟ್ಟರಾಜುಗೆ ನೋಡಿದ ಹುಡ್ಗೀನಾ ಎಚ್‌ಡಿಕೆ ಮದುವೆಯಾಗೋದು ಸರಿನಾ?: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ (ಮಾ.27): ನಮ್ಮ ಮಂಡ್ಯ ಜಿಲ್ಲೆಗೆ ಕೆಟ್ಟ ದೃಷ್ಟಿ ಬೀಳುವುದು ಬೇಡ. ನಾವು ನಮ್ಮ ಜಿಲ್ಲೆಯನ್ನು ಹೇಗೋ ಅಭಿವೃದ್ಧಿ ಮಾಡಿಕೊಳ್ಳುತ್ತೇವೆ. ಆದರೆ, ನೀವು ಮಾತ್ರ ನಮ್ಮ ಜಿಲ್ಲೆಗೆ ಬರಬೇಡಿ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯದಿಂದ ಕಣಕ್ಕಿಳಿಯುವ ಮಾಜಿ ಸಿಎಂ ಕುಮಾರಸ್ವಾಮಿ ಕುರಿತು ಮನವಿ ಮಾಡಿದರು.ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ನಡೆದ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನೀವು ಇನ್ನೊಮ್ಮೆ ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾದರೂ ನಮಗೆ ಸಂತೋಷ. ನಿಮ್ಮ ಬಗ್ಗೆ ನಾವು ಕೆಟ್ಟದಾಗಿ ಮಾತನಾಡುವುದಿಲ್ಲ. ಜಿಲ್ಲೆಯ ಕಡೆ ಮಾತ್ರ ನಿಮ್ಮ ದೃಷ್ಟಿ ಬೀಳದಿರಲಿ ಎಂದರು.


ಕುಮಾರಸ್ವಾಮಿ ನನಗೆ ಯಾವತ್ತೂ ವೈರಿಯಲ್ಲ. ಅವರು ನನ್ನನ್ನು ವೈರಿ ಅಂತ ಕರೆದಿದ್ದಾರೆ. ಅವರು ನನಗೆ ಸ್ನೇಹಿತರು. ಬುಟ್ಟಿಯೊಳಗೆ ಕರಿ ನಾಗರಹಾವು ಇದೆ, ಬಿಳಿ ನಾಗರಹಾವಿದೆ. ನಾಳೆ ಬಿಡ್ತೀವಿ, ನಾಡಿದ್ದು ಬಿಡ್ತೀವಿ ಎಂದು ಹೇಳುತ್ತಲೇ ಇದ್ದಾರೆ. ಇವರನ್ನು ನಂಬಿಕೊಂಡು ಪುಟ್ಟರಾಜು ಸಭೆ ಮಾಡಿದರು. ಧರ್ಮಸ್ಥಳ, ಚುಂಚನಗಿರಿ, ಅಯೋಧ್ಯೆಗೆಲ್ಲಾ ಹೋಗಿ ಬಂದರು. ಎಸ್.ಎಂ.ಕೃಷ್ಣ ಅವರ ಮನೆಗೂ ಹೋಗಿ ಬಂದರು. ಈಗ ಯಾಕೋ ಆಗ್ತಾ ಇಲ್ಲ ಕಣಯ್ಯ. ನೀನು ನೋಡಿದ ಹುಡುಗಿ ಸ್ವಲ್ಪ ಚೆನ್ನಾಗಿದ್ದಾಳೆ. ಹಾಗಾಗಿ ನಾನೇ ಮದುವೆಯಾಗಬೇಕು ಅಂತ ಬಯಸಿದ್ದೇನೆ.ನಿನಗೆ ಮುಂದೆ ಒಳ್ಳೆಯ ಹುಡುಗಿ ನೋಡೋಣ ಅಂದಿದ್ದಾರಂತೆ. ಮಗನ ಮದುವೆ ಮಾಡೋಕೆ ಹೋಗೆ ಅಪ್ಪನೇ ಮದುವೆಯಾದ ಎಂಬಂತಾಗಿದೆ ಎಂದು ಕುಹಕವಾಡಿದರು. ಈಗ ಪುಟ್ಟರಾಜು ಕತೆ ಏನಾಗಬೇಕು. ನಾನು ಹೇಗೋ ಕಾಂಗ್ರೆಸ್ ಸೇರಿ ಬಚಾವಾದೆ. ಆದರೆ, ಪುಟ್ಟರಾಜು ಕತೆ ಮುಗಿತು. ಅವರೂ ನಮ್ಮ ಸ್ನೇಹಿತರೇ. ಅವರೂ ಕೂಡ ಜೆಡಿಎಸ್‌ನೊಳಗೆ ಸಂತೋಷದಿಂದ ಏನೂ ಇಲ್ಲ ಎಂದರು. ಕಳೆದ ಚುನಾವಣಾ ಸಮಯದಲ್ಲಿ ಸುಮಲತಾ ಅವರನ್ನು ಸಾಕಷ್ಟು ಹೀಯಾಳಿಸಿದರು. ಇವತ್ತು ನಮ್ಮ ಅಕ್ಕ ಅಂತಾರೆ. ಅವತ್ತೇ ಅಕ್ಕ ಅಂದಿದ್ದರೆ ಅಂಬರೀಶ್ ಅಣ್ಣನವರ ಆತ್ಮಕ್ಕೆ ಶಾಂತಿ ಸಿಗುತ್ತಿತ್ತು.ನಮ್ಮ ಅಕ್ಕ ಚುನಾವಣೆಗೆ ನಿಂತಿದ್ದಾರೆ. ಅವರು ಗೆದ್ದರೂ ಒಂದೇ, ನಮ್ಮ ಅಣ್ಣ ಗೆದ್ದರೂ ಒಂದೇ ಎಂದಿದ್ದರೂ ಆಗುತ್ತಿತ್ತು. ಈಗ ಅವರ ಓಲೈಕೆ ಮಾಡಿಕೊಳ್ಳೋಕೆ ಅಕ್ಕ ಅಂತಿದ್ದಾರೆ ಎಂದು ದೂಷಿಸಿದರು. ಸಭೆಯಲ್ಲಿ ಅಭ್ಯರ್ಥಿ ಸ್ಟಾರ್‌ ಚಂದ್ರು, ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ದಿನೇಶ್ ಗೂಳಿಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಡಿ.ಗಂಗಾಧರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ, ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.



Leave a Comment: