ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಇನ್ ಸ್ಟಾದಲ್ಲಿ ಫೇಕ್ ಅಕೌಂಟ್ ಡಬಲ್ ಗೇಮ್ ಆಡಿದ ರಫೀಕ್ ಪೊಲೀಸರ ಬಲೆಗೆ

Posted by Vidyamaana on 2023-11-05 04:35:11 |

Share: | | | | |


ಇನ್ ಸ್ಟಾದಲ್ಲಿ ಫೇಕ್ ಅಕೌಂಟ್ ಡಬಲ್ ಗೇಮ್ ಆಡಿದ ರಫೀಕ್ ಪೊಲೀಸರ ಬಲೆಗೆ

ಬಂಟ್ವಾಳ, ನ.4: ಇನ್ಸ್ಟಾಗ್ರಾಮಲ್ಲಿ ಫೇಕ್ ಐಡಿ ಸೃಷ್ಟಿಸಿ ಅಪ್ರಾಪ್ತ ಬಾಲಕಿಯರಿಬ್ಬರ ಜೊತೆಗೆ ಮೋಸದಾಟದ ಮೂಲಕ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಾಸರಗೋಡು ಮೂಲದ ಯುವಕನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.  


ವಿಟ್ಲ ಠಾಣೆ ವ್ಯಾಪ್ತಿಯಲ್ಲಿ ಪರಸ್ಪರ ಸಂಬಂಧಿಕರಾಗಿರುವ 16 ವರ್ಷ ಮತ್ತು 17 ವರ್ಷದ ಇಬ್ಬರು ಮುಸ್ಲಿಂ ಯುವತಿಯರಿಗೆ ಹುಡುಗಿ ಹೆಸರಲ್ಲೇ ಇನ್ಸ್ ಟಾ ಗ್ರಾಮಿನಲ್ಲಿ ಯುವಕನೊಬ್ಬ ಕನೆಕ್ಟ್ ಆಗಿದ್ದ. ಹುಡುಗಿ ಹೆಸರಲ್ಲಿ ಆರಂಭದಲ್ಲಿ ಸಂಪರ್ಕ ಬೆಳೆಸಿ, ಬಳಿಕ ತನ್ನ ಹೆಸರನ್ನು ಅಡ್ಡೂರಿನ ತೌಫಿಲ್ ಎಂದು ಪರಿಚಯ ಮಾಡಿಕೊಂಡಿದ್ದ. ಆನಂತರ 16 ವರ್ಷದ ಯುವತಿ ಜೊತೆಗೆ ಆತ್ಮೀಯತೆ ಬೆಳೆಸಿ ರಾತ್ರಿ ವೇಳೆ ಮನೆಯ ಪರಿಸರಕ್ಕೆ ಬಂದು ದೈಹಿಕ ಸಂಪರ್ಕ ಬೆಳೆಸಿದ್ದ. 


ಇದೇ ವೇಳೆ, ಅದೇ ಪರಿಸರದ ಇನ್ನೊಬ್ಬ ಯುವತಿಗೂ ಒಬ್ಬಾತ ಇನ್ ಸ್ಟಾ ಗ್ರಾಮಿನಲ್ಲಿ ಹುಡುಗಿ ಹೆಸರಿನಲ್ಲಿ ಪರಿಚಯ ಆಗಿದ್ದು ಬಳಿಕ ತಾನು ಕಾಸರಗೋಡಿನ ರಫೀಕ್ ಎಂದು ಪರಿಚಯ ಮಾಡಿಕೊಂಡಿದ್ದ. ಕಳೆದ ಐದಾರು ತಿಂಗಳಲ್ಲಿ ಇಬ್ಬರು ಅಪ್ರಾಪ್ತ ಯುವತಿಯರ ಜೊತೆಗೂ ಈತನ ಕಾಮದಾಟ ನಡೆದಿತ್ತು  ಮನೆಯವರಿಗೆ ವಿಷಯ ತಿಳಿದು ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು. ಇಬ್ಬರು ಯುವತಿಯರೂ ಸಾಮಾನ್ಯ ಬಡ ಕುಟುಂಬದವರಾಗಿದ್ದು ಮೊಬೈಲ್ ಗೀಳು ಇವರನ್ನು ಅಡ್ಡದಾರಿ ಹಿಡಿಸಿತ್ತು. 

ಆದರೆ ಆರೋಪಿ ಅಲ್ಲಿನ ವರೆಗೂ ತನ್ನ ನಿಜ ಹೆಸರನ್ನಾಗಲೀ, ತನ್ನ ಮೊಬೈಲ್ ನಂಬರನ್ನಾಗಲೀ ಯುವತಿಯರಿಗೆ ನೀಡಿರಲಿಲ್ಲ. ಇನ್ಸ್ ಟಾ ಗ್ರಾಮಿನಲ್ಲಿಯೇ ಮೆಸೇಜ್, ಕರೆ ಮಾಡುತ್ತಿದ್ದ ಯುವಕನ ಪತ್ತೆ ಪೊಲೀಸರಿಗೆ ಕಷ್ಟವಾಗಿತ್ತು. ಬಳಿಕ ಪೊಲೀಸರ ಸೂಚನೆಯಂತೆ, ಒಬ್ಬಾಕೆಯ ಮನೆಯವರ ಮೂಲಕವೇ ಟ್ರಾಪ್ ಮಾಡಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲವೆಂದು ಹೇಳಿ, ಬರಲು ತಿಳಿಸಿದ್ದು ಅದರಂತೆ ರಾತ್ರಿ ವೇಳೆ ಮನೆಗೆ ಬಂದಿದ್ದ ಯುವಕನನ್ನು ಪೊಲೀಸರೇ ಸೇರಿ ಅರೆಸ್ಟ್ ಮಾಡಿದ್ದಾರೆ. 


ಕಾಸರಗೋಡು ಮೂಲದ ಆಗರ್ಭ ಶ್ರೀಮಂತ ಕುಟುಂಬದ 23 ವರ್ಷದ ಯುವಕ ಅಹಮದ್ ರಫೀಕ್ ಎಂಬಾತ ಈ ರೀತಿ ವಂಚನೆ ಎಸಗಿದವನಾಗಿದ್ದು ಆರೋಪಿ ಇನ್ಸ್ ಟಾ ಗ್ರಾಮಿನಲ್ಲಿ ಮೂರು ಫೇಕ್ ಐಡಿ ಸೃಷ್ಟಿಸಿರುವುದು ತನಿಖೆಯಲ್ಲಿ ಬಯಲಾಗಿದೆ. ತಡರಾತ್ರಿಯಲ್ಲಿ ಬರುತ್ತಿದ್ದ ಆರೋಪಿ, ಯುವತಿಯರ ಜೊತೆಗೆ ಹಲವಾರು ಬಾರಿ ದೈಹಿಕ ಸಂಪರ್ಕ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ದೂರು ದಾಖಲಾಗಿದೆ.


ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಪ್ರಾಪ್ತ ಯುವತಿಯರಿಗೆ ದೌರ್ಜನ್ಯ ಎಸಗಿದ್ದರಿಂದ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ, ಚೈಲ್ಡ್ ಕೇರ್ ಸಂಸ್ಥೆಯವರು ತನಿಖೆ ನಡೆಸುತ್ತಿದ್ದಾರೆ.

ಮ್ಯಾನ್ಮಾರ್ ಜೊತೆಗಿನ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಗೊಳಿಸಿದ ಭಾರತ

Posted by Vidyamaana on 2024-02-08 16:24:36 |

Share: | | | | |


ಮ್ಯಾನ್ಮಾರ್ ಜೊತೆಗಿನ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಗೊಳಿಸಿದ ಭಾರತ

ನವದೆಹಲಿ: ಭಾರತದ ಗಡಿಗಳನ್ನು ಭದ್ರಪಡಿಸುವ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪದ ನಂತರ ಮ್ಯಾನ್ಮಾರ್ ನೊಂದಿಗಿನ ಮುಕ್ತ ಸಂಚಾರ ಆಡಳಿತವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವಾಲಯ ಗುರುವಾರ ಪ್ರಕಟಿಸಿದೆ.ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮ್ಯಾನ್ಮಾರ್ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನಸಂಖ್ಯಾ ರಚನೆಯನ್ನು ಕಾಪಾಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಗೆ ಸಿಕ್ತು ನಿರೀಕ್ಷಣಾ ಜಾಮೀನು

Posted by Vidyamaana on 2023-06-28 17:47:21 |

Share: | | | | |


ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಗೆ ಸಿಕ್ತು ನಿರೀಕ್ಷಣಾ ಜಾಮೀನು

ಪುತ್ತೂರು :ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಯೆ ನ್ನಲಾಗಿದ್ದ ವಿನೋದ್ ಕುಮಾರ್ ರೈ ಯವರಿಗೆ ನಿರೀಕ್ಷಣಾ ಜಾಮೀನನ್ನು ಪುತ್ತೂರು ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಪುತ್ತೂರು ತಾಲೂಕು ಒಳಮೋಗ್ರು ಗ್ರಾಮದ ಕೈಕಾರ ಪನಡ್ಕ ಎಂಬಲ್ಲಿ  ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ, ಗೋಣಿಚೀಲದಲ್ಲಿ ಮದ್ಯವನ್ನು ಮಾರಾಟ ಮಾಡಿ, ಹಣ ಪಡೆದಿರುವುದಾಗಿ ಆರೋಪಿಯೆನ್ನಲಾಗಿದ್ದ ವಿನೋದ್ ಕುಮಾರ್ ರೈ ಯವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಕರ್ನಾಟಕ ಅಬಕಾರಿ ಕಾಯಿದೆಯನ್ವಯ ಪ್ರಕರಣ ದಾಖಲಿಲಾಗಿತ್ತು.

ಹೀಗಿರುವಾಗ,ಈ ವಿಚಾರ ತಿಳಿದ ವಿನೋದ್ ಕುಮಾರ್ ರೈ ಯವರು ಅವರ ಪರ ವಕೀಲರಾದ ಮಹೇಶ್ ಕಜೆ ಯವರ  ಮುಖಾಂತರ ಪುತ್ತೂರಿನ ಮಾನ್ಯ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು  ಸಲ್ಲಿಸಿದ್ದರು.ಈ ಮೇಲೆ ತಿಳಿಸಿದ ಆರೋಪಿಯು ಕೃತ್ಯವನ್ನು ಮಾಡಿದ್ದಾರೆ ಎಂಬುವುದಕ್ಕೆ ಸಂಬಂಧಿಸಿದಂತೆ ಯಾವುದೇ ಪೂರಕವಾದ ಸಾಕ್ಷ್ಯಧಾರಗಳು ಕಂಡು ಬಂದಿರುವುದಿಲ್ಲ. ಎಂಬಿತ್ಯಾದಿ ಅಂಶಗಳನ್ನು ವಾದಿಸಿದ್ದರು. ಸರಕಾರಿ ಅಭಿಯೋಜಕರು ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪವನ್ನು ಸಲ್ಲಿಸಿದ್ದರು. ವಾದ -ವಿವಾದವನ್ನು ಆಲಿಸಿದ 

ಪುತ್ತೂರಿನ ಮಾನ್ಯ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ. ಡಿ ಯವರು ಆರೋಪಿಗೆ ಶರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುತ್ತಾರೆ.

ಮೂಡುಬಿದಿರೆ: ವಿಶಾಲ್ ಟೂರಿಸ್ಟ್ ಬಸ್ ಪಲ್ಟಿ: ಹಲವು ಮಂದಿಗೆ ಗಾಯ

Posted by Vidyamaana on 2023-08-26 01:32:33 |

Share: | | | | |


ಮೂಡುಬಿದಿರೆ: ವಿಶಾಲ್ ಟೂರಿಸ್ಟ್ ಬಸ್ ಪಲ್ಟಿ: ಹಲವು ಮಂದಿಗೆ ಗಾಯ

ಮೂಡುಬಿದಿರೆ: ಪಡ್ಡಂದಡ್ಕ ಗಾಂಧೀನಗರ ತಿರುವಿನಲ್ಲಿ ಶುಕ್ರವಾರ ರಾತ್ರಿ ವಿಶಾಲ್ ಟೂರಿಸ್ಟ್ ಬಸ್ ಪಲ್ಟಿಯಾಗಿ ಹಲವು ಮಂದಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಸ್ಸು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಕಾರ್ಕಳ ಮೂಡುಬಿದಿರೆಯಾಗಿ ಬೆಂಗಳೂರಿಗೆ ಸಾಗುವ ವಿಶಾಲ್ ಟೂರಿಸ್ಟ್ ಆಗಿದ್ದು, ಬೆಳ್ತಂಗಡಿ ತಾಲೂಕಿನ ಪಡ್ಡಂದಡ್ಕ ಗಾಂಧೀನಗರದ ನಡುವೆ

ಅಪಘಾತಕ್ಕೀಡಾಗಿದೆ. ಒಟ್ಟು 27 ಮಂದಿ

ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಊರವರು ಜಮಾಯಿಸಿದ್ದಾರೆ. ತಕ್ಷಣ ಅಂಬ್ಯುಲೆನ್ಸ್ ಸೇವೆಯ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಅಹ್ವಾನ

Posted by Vidyamaana on 2024-04-13 17:38:35 |

Share: | | | | |


ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಅಹ್ವಾನ

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಅಹ್ವಾನಿಸಲಾಗಿದೆ


ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಆಂಗ್ಲ ಮಾಧ್ಯಮದಲ್ಲಿ ರಾಜ್ಯಪಠ್ಯಕ್ರಮವನ್ನು ಅಳವಡಿಸಿಕೊಂಡು 6 ರಿಂದ 10 ನೇ ತರಗತಿಯವರೆಗೆ ಕಾರ್ಯನಿರ್ವಹಿಸುತ್ತಿರುತ್ತವೆ.

ಡಿ.03ರಂದು ನಡೆಯಲಿದೆ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ

Posted by Vidyamaana on 2023-11-24 11:50:09 |

Share: | | | | |


ಡಿ.03ರಂದು ನಡೆಯಲಿದೆ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ

ಪುತ್ತೂರು : ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ಸಂಯೋಜನೆಯಲ್ಲಿ, ಪುತ್ತೂರು ನಗರ ಆರಕ್ಷಕ ಉಪನಿರೀಕ್ಷಕರಾಗಿರುವ ಆಂಜನೇಯ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಡಿಸೆಂಬರ್ 3ರಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜು(ಸ್ವಾಯತ್ತ) ನಲ್ಲಿ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತೇಜಿಸುವ ದೃಷ್ಟಿಯಿಂದ ಮಾದರಿ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆಯು ನಡೆಯಲಿದೆ.

ಕೆ.ಎ.ಎಸ್,  ಎಫ್.ಡಿ.ಎ, ಎಸ್.ಡಿ.ಎ,  ಪಿ.ಎಸ್.ಐ, ಪಿ.ಸಿ, ಪಿ.ಡಿ.ಒ, ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯಲ್ಲಿರುವವರಿಗೆ ಪ್ರೇರಣೆ ನೀಡಲು ರಾಜ್ಯದಲ್ಲೇ ಪ್ರಥಮ ಬಾರಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಪಿಯುಸಿ / ಪದವಿ ಓದುತ್ತಿರುವ / ಓದು ಮುಗಿಸಿರುವ 40 ವರ್ಷದ ವರೆಗಿನ ಅಭ್ಯರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಮೊದಲು ನೋಂದಣಿ ಮಾಡಿದ 1000 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಋಣಾತ್ಮಕ ಅಂಕಗಳನ್ನು ಪರಿಗಣಿಸಲಾಗುತ್ತದೆ.100 ಅಂಕಗಳ ಪ್ರಶ್ನೆ ಪತ್ರಿಕೆ ಇದಾಗಿದ್ದು, ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ಕಾಲಾವಕಾಶ 90 ನಿಮಿಷ (ಬೆಳಿಗ್ಗೆ 11:00 ರಿಂದ 12:30). 

ಭಾಗವಹಿಸುವ ಅಭ್ಯರ್ಥಿಗಳು ಬೆಳಿಗ್ಗೆ 10:00 ರ ಒಳಗಾಗಿ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಿರತಕ್ಕದ್ದು. ನಂತರ ಬಂದವರಿಗೆ ಅವಕಾಶವಿಲ್ಲ. ಪರೀಕ್ಷಾ ಪತ್ರಿಕೆ ಕನ್ನಡ ಮಾಧ್ಯಮದಲ್ಲಿ ಇರುತ್ತದೆ. ಆಯೋಜಕರ ತೀರ್ಮಾನವೇ ಅಂತಿಮವಾಗಿರುತ್ತದೆ. ನೋಂದಣಿಗಾಗಿ ವಿದ್ಯಾಮಾತಾದ ಪುತ್ತೂರು / ಸುಳ್ಯ ಕಛೇರಿಗೆ 26 ನವೆಂಬರ್ 2023ರ ಒಳಗಾಗಿ ಭೇಟಿ ನೀಡಬಹುದು. ಇಲ್ಲವೇ ಇಲ್ಲಿ ನೀಡಿರುವ QR ಕೋಡ್ ಬಳಸಿ ನೋಂದಾಯಿಸಿಕೊಳ್ಳಬಹುದು.



 ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ  ಅಕಾಡೆಮಿ,ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ

ಫೋನ್ ನಂ. :  9148935808 / 9620468869

ಸುಳ್ಯ ಶಾಖೆ :

ವಿದ್ಯಾಮಾತಾ ಅಕಾಡೆಮಿ

 ಟಿ.ಎ.ಪಿ.ಸಿ.ಎಂ.ಎಸ್  ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239

PH: 9448527606 ನ್ನು ಸಂಪರ್ಕಿಸಬಹುದು.



Leave a Comment: