ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


92 ವರ್ಷದ ಮಾಧ್ಯಮ ದೊರೆ ಮುರ್ಡೋಕ್ ಗೆ 5ನೇ ಮದುವೆ

Posted by Vidyamaana on 2024-03-09 12:58:01 |

Share: | | | | |


92 ವರ್ಷದ ಮಾಧ್ಯಮ ದೊರೆ ಮುರ್ಡೋಕ್ ಗೆ 5ನೇ ಮದುವೆ

ವಾಷಿಂಗ್ಟನ್‌: ಮಾಧ್ಯಮ ದೊರೆ ರೂಪರ್ಟ್‌ ಮುರ್ಡೋಕ್ ತಮ್ಮ 92ನೇ ವಯಸ್ಸಿನಲ್ಲಿ 5ನೇ ಮದುವೆಗೆ ಸಜ್ಜುಗೊಂಡಿದ್ದು, ತಮ್ಮ ಗೆಳತಿ ಎಲೆನಾ ಜುಕೋವಾ (67) ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕ್ಯಾಲಿಫೋರ್ನಿ­ಯಾದ ಮೊರಗಾದಲ್ಲಿರುವ ಮುರ್ಡೋಕ್ ಅವರ ಎಸ್ಟೇಟ್‌ನಲ್ಲಿ ಇವರಿಬ್ಬರ ಮದುವೆ ಜೂನ್‌ ತಿಂಗಳಿನಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ವರದಿಯಾಗಿದೆ.


ಎಲೆನಾ ಜುಕೋವಾ ಅವರು ನಿವೃತ್ತ ಜೀವ ಶಾಸ್ತ್ರಜ್ಞೆ­ಯಾಗಿದ್ದು, ಕಳೆದ ವರ್ಷ ಬೇಸಗೆಯಲ್ಲಿ ಇಬ್ಬರ ನಡುವೆ ಉಂಟಾದ ಪರಿಚಯ ಸ್ನೇಹಕ್ಕೆ ತಿರುಗಿ ಇದೀಗ ಮದುವೆಯ ಹಂತಕ್ಕೆ ತಲುಪಿದೆ. 2022ರಲ್ಲಿ ತಮ್ಮ 4ನೇ ಪತ್ನಿಯಾಗಿದ್ದ ರೂಪದರ್ಶಿ ಜೆರ್ರಿ ಹಾಲ್‌ಗೆ ಮುರ್ಡೋಕ್ ವಿಚ್ಛೇದನ ನೀಡಿದ್ದರು. ಇವರಲ್ಲದೇ ಪೆಟ್ರೀಷಿಯಾ ಬುಕರ್‌, ಅನ್ನಾ ಮನ್‌, ವೆಂಡಿ ಡೆಂಗ್‌ ಹಾಗೂ ಜೆರ್ರಿ ಮುಡೋìಕ್‌ ಅವರ ಮಾಜಿ ಪತ್ನಿಯರು.

ಅಮೆರಿಕದ ಖ್ಯಾತ ಮಾಧ್ಯಮ ಸಂಸ್ಥೆಗಳಾದ ವಾಲ್‌ಸ್ಟ್ರೀಟ್‌, ನ್ಯೂಯಾರ್ಕ್‌ ಪೋಸ್ಟ್‌, ಫಾಕ್ಸ್‌ ನ್ಯೂಸ್‌, ಭಾರತದ ಸ್ಟಾರ್‌ ಇಂಡಿಯಾ ಸೇರಿದಂತೆ ಬಹುತೇಕ ರಾಷ್ಟ್ರೀಯ- ಅಂತಾ­ರಾಷ್ಟ್ರೀಯ ಮಾಧ್ಯಮಗಳು ಮುರ್ಡೋಕ್ ಅವರ ಒಡೆತನಕ್ಕೆ ಸೇರಿವೆ.

ಗಾಯಗೊಂಡ ಕಾಡಾನೆ ದಾಳಿ : ಅರಣ್ಯ ಇಲಾಖೆಯ ಸಿಬ್ಬಂದಿ ವೆಂಕಟೇಶ್ ಮೃತ್ಯು

Posted by Vidyamaana on 2023-09-01 01:37:43 |

Share: | | | | |


ಗಾಯಗೊಂಡ ಕಾಡಾನೆ ದಾಳಿ : ಅರಣ್ಯ ಇಲಾಖೆಯ ಸಿಬ್ಬಂದಿ ವೆಂಕಟೇಶ್ ಮೃತ್ಯು

ಹಾಸನ : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಆಲೂರು ಸಮೀಪ(Hassan) ಹಳ್ಳಿಯೂರಿನಿಂದ ವರದಿಯಾಗಿದೆ.

ಗುರುವಾರ ಬೆಳಗ್ಗೆ ಗಾಯಗೊಂಡು ತಿರುಗಾಡುತಿದ್ದ ಭೀಮ ಹೆಸರಿನ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟೇಶ್ ಮುಂದಾಗಿದ್ದರು.ಈ ವೇಳೆ ವೆಂಕಟೇಶ್ ಅವರ ಮೇಲೆ ಆನೆ ದಾಳಿ ನಡೆಸಿದೆ.

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ತಕ್ಷಣ ಹಾಸನದ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

 

“ಹಾಸನ ಅರಣ್ಯ ವಿಭಾಗದ ಆಲೂರು, ಬೇಲೂರು. ಯಸಳೂರು, ಸಕಲೇಶಪುರ ಮತ್ತು ಅರಕಲಗೂಡು ವಲಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಭೀಮ ಕಾಡಾನೆಗೆ ಇತರೆ ಕಾಡಾನೆಗಳು ಆಗಸ್ಟ್ ಎರಡನೇ ವಾರದಲ್ಲಿ ದಾಳಿ ಮಾಡಿರುವುದರಿಂದ ತೀವ್ರವಾಗಿ ಗಾಯಗೊಂಡಿತ್ತು”


ಕಾಡಾನೆಗೆ ಆ.25 ರಂದು ಚಿಕಿತ್ಸೆ ನೀಡಲಾಗಿದ್ದು, ಗಾಯವಾಸಿಯಾಗದೇ ಉಲ್ಬಣಗೊಂಡಿರುವುದರಿಂದ ಹೆಚ್ಚಿನ ಚಿಕಿತ್ಸೆ ನೀಡುವ ಕಾರ್ಯಾಚರಣೆ ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಅನುಮತಿ ನೀಡಿದ್ದರು

ಜಲಸಿರಿ ಅಧಿಕಾರಿಗಳ ನಿರ್ಲಕ್ಷ್ಯ - ಪುತ್ತೂರಿನಾದ್ಯಂತ ಕುಡಿಯುವ ನೀರಿನ ಬವಣೆ

Posted by Vidyamaana on 2024-05-11 22:50:45 |

Share: | | | | |


ಜಲಸಿರಿ ಅಧಿಕಾರಿಗಳ ನಿರ್ಲಕ್ಷ್ಯ - ಪುತ್ತೂರಿನಾದ್ಯಂತ ಕುಡಿಯುವ ನೀರಿನ ಬವಣೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿರುವ 170 ಕೊಳವೆ ಬಾವಿಗಳ ನಿರ್ವಹಣೆಯನ್ನು ನಗರಸಭೆ ಈಗಾಗಲೇ ಜಲಸಿರಿ ಸುಪರ್ದಿಗೆ ನೀಡಿದ್ದ ಪರಿಣಾಮ ಎಲ್ಲೆಡೆ ಕುಡಿಯುವ ನೀರಿನ ಬವಣೆ ಉಂಟಾಗಿದೆ. ಈ ನಿಟ್ಟಿನಲ್ಲಿ 170 ಕೊಳವೆ ಬಾವಿಗಳ ನಿರ್ವಹಣೆಗೆ ಈ ಹಿಂದೆ ಇದ್ದ 31 ಪಂಪ್ ಆಪರೇಟರ್ಗಳನ್ನು ಪುನಃ ನಿಯೋಜನೆ ಮಾಡಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ನಗರಸಭೆ ಹಾಗೂ ಜಲಸಿರಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ನಗರಸಭೆ ಮಾಜಿ ವಿಪಕ್ಷ ನಾಯಕ ಎಚ್.ಮಹಮ್ಮದಾಲಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಲಸಿರಿ ಯೋಜನೆ ಕಾಮಗಾರಿ ಸಂಪೂರ್ಣಗೊಳ್ಳುವ ಮೊದಲೇ ನೀರಿನ ಸಮಸ್ಯೆಯ ಸಾಧಕ-ಬಾಧಕಗಳನ್ನು ಪರಿಶೀಲಿಸದೆ ನಗರಸಭೆ ನೀರು ಸರಬರಾಜು ನಿರ್ವಹಣೆಯನ್ನು ಸುಯೇಜ್ ಕಂಪೆನಿಗೆ (ಜಲಸಿರಿ) ಟ್ರಯಲ್ಗೆ ನೀಡಿದ್ದು, ಜಲಸಿರಿಯವರು 170 ಕೊಳವೆ ಬಾವಿಗಳ ನೀರು ಒದಗಿಸುವ ನಿರ್ವಹಣೆ ಮಾಡುತ್ತಿದ್ದ 31 ಆಪರೇಟರ್ಗಳನ್ನು ಕೈಬಿಟ್ಟು ಕೆಲವೇ ಕಲವು ಪಂಪ್ ಆಪರೇಟರ್ಗಳ ಮೂಲಕ ನೀರು ಸರಬರಾಜು ಮಾಡುತ್ತಿದೆ. ಪರಿಣಾಮ ನೀರು ಸರಿಯಾಗಿ ಸರಬರಾಜಾಗುತ್ತಿಲ್ಲ. ಅಲ್ಲದೆ ಹೊಸ ಯೋಜನೆಯಿಂದಲೂ ನೀರು ವಿತರಣೆ ಆಗುತ್ತಿಲ್ಲ. ಜನರಿಗೆ ಇತ್ತ ಕೊಳವೆ ಬಾವಿಯಿಂದ ಅತ್ತ ಜಲಸಿರಿ ಯೋಜನೆಯಿಂದ ನೀರು ಇಲ್ಲದಂತಾಗಿದೆ. ಇದಕ್ಕೆ ನೀರು ಸರಬರಾಜು ಹೊಣೆಹೊತ್ತ ಜಲಸಿರಿ ಹಾಗೂ ನಗರಸಭೆ ಪ್ರಮುಖ ಕಾರಣ ಎಂದು ಅವರು ಆರೋಪಿಸಿದರು.


ಬಿಲ್ಕಿಸ್ ಬಾನೋ ಪ್ರಕರಣದಲ್ಲಿ‌ ಅಪರಾಧಿಗಳ ಬಿಡುಗಡೆ, ಗುಜರಾತ್‌ ಸರ್ಕಾರದ ಆದೇಶ ರದ್ದು

Posted by Vidyamaana on 2024-01-08 21:57:45 |

Share: | | | | |


ಬಿಲ್ಕಿಸ್ ಬಾನೋ ಪ್ರಕರಣದಲ್ಲಿ‌ ಅಪರಾಧಿಗಳ ಬಿಡುಗಡೆ, ಗುಜರಾತ್‌ ಸರ್ಕಾರದ ಆದೇಶ  ರದ್ದು

ನವದೆಹಲಿ ಜ.8: ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಅವಧಿಗೆ ಮೊದಲೇ ಬಿಡುಗಡೆಗೊಳಿಸಿದ್ದ ಗುಜರಾತ್‌ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ. ಚುನಾವಣೆ ಹೊತ್ತಲ್ಲಿ ಕೋರ್ಟ್ ನೀಡಿರುವ ಆದೇಶ ಗುಜರಾತ್‌ ಸರ್ಕಾರಕ್ಕೆ ಹಿನ್ನಡೆ ಆದಂತಾಗಿದೆ. 


ಗುಜರಾತ್‌ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಂತ್ರಸ್ತ ಮಹಿಳೆ ಬಿಲ್ಕಿಸ್‌ ಬಾನು ಸುಪ್ರೀಂಕೋರ್ಟ್‌ ಗೆ ಸಲ್ಲಿಸಿದ್ದ ಮನವಿಯನ್ನು ಜಸ್ಟೀಸ್‌ ಬಿ.ವಿ.ನಾಗರತ್ನ ಮತ್ತು ಜಸ್ಟೀಸ್‌ ಉಜ್ಜಾಲ್‌ ಭುವನ್‌ ಅವರನ್ನೊಳಗೊಂಡ ಪೀಠ ತೀರ್ಪು ನೀಡಿದೆ. 2002ರಲ್ಲಿ ಗುಜರಾತ್‌ ನ ಗೋಧ್ರಾದಲ್ಲಿ ಬಿಲ್ಕಿಸ್‌ ಬಾನು ಮೇಲೆ ಅತ್ಯಾಚಾರ ಎಸಗಿ, ಆಕೆಯ 7 ಮಂದಿ ಕುಟುಂಬ ಸದಸ್ಯರನ್ನು ಕೊಲೆಗೈದ ಪ್ರಕರಣದಲ್ಲಿ 11 ಮಂದಿ ದೋಷಿಗಳಾಗಿದ್ದು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು.‌ ಆದರೆ ಗುಜರಾತ್‌ ಸರ್ಕಾರ 2022ರಲ್ಲಿ 11 ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆಗೊಳಿಸಲು ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ರದ್ದು ಮಾಡಿದೆ. 




ಆ ರೀತಿಯ ಆದೇಶವನ್ನು ಜಾರಿಗೊಳಿಸುವ ಅಧಿಕಾರ ಗುಜರಾತ್‌ ಸರ್ಕಾರಕ್ಕಿಲ್ಲ. ಇದೊಂದು ವಂಚನೆ ಕೃತ್ಯ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಅಲ್ಲದೆ, 11 ಅಪರಾಧಿಗಳು ಎರಡು ವಾರದೊಳಗೆ ಶರಣಾಗಿ, ಜೈಲಿಗೆ ಮರಳಬೇಕು ಎಂದು ತೀರ್ಪಿನಲ್ಲಿ ಸೂಚಿಸಿದೆ. ಅಪರಾಧಿಗಳ ಶೀಘ್ರ ಬಿಡುಗಡೆಯ ಅಧಿಕಾರ ಗುಜರಾತ್‌ ಸರ್ಕಾರಕ್ಕಿಲ್ಲ. ಬದಲಿಗೆ ಅಪರಾಧಿಗಳ ಅವಧಿ ಪೂರ್ವ ಬಿಡುಗಡೆಗೆ ಮಹಾರಾಷ್ಟ್ರ ಸರ್ಕಾರ ಪರಿಶೀಲನೆ ನಡೆಸಬಹುದು, ಯಾಕೆಂದರೆ ಆರೋಪಿಗಳ ವಿಚಾರಣೆ ನಡೆದಿರುವುದು ಮಹಾರಾಷ್ಟ್ರದಲ್ಲಿ.  ಗುಜರಾತ್‌ ನಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದೆ. 


ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ ಎಲ್ಲ 11 ಅಪರಾಧಿಗಳನ್ನು ಜೀವಾವಧಿ ಶಿಕ್ಷೆಯ 14 ವರ್ಷ ಪೂರ್ತಿಗೊಳಿಸಿದ್ದಾರೆಂದು ಹೇಳಿ ಗುಜರಾತ್ ಸರ್ಕಾರ, 2022ರ ಆಗಸ್ಟ್ 15ರಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಿತ್ತು.

ನನ್ನ ಮತ ನನ್ನ ಹಕ್ಕು - ಅಬುದಾಬಿ To ಕುಂತೂರು

Posted by Vidyamaana on 2024-04-26 18:34:04 |

Share: | | | | |


ನನ್ನ ಮತ ನನ್ನ ಹಕ್ಕು - ಅಬುದಾಬಿ To ಕುಂತೂರು

ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ಮತದಾನ ಮಾಡುವಂತೆ ಚುನಾವಣಾ ಆಯೋಗ ಎಷ್ಟೇ ಜಾಗೃತಿ ಮೂಡಿಸಿದ್ರೂ ಜನರು ಮಾತ್ರ ಅದೆಷ್ಟು ನಿರ್ಲಕ್ಷ್ಯವಹಿಸಿದ್ದಾರೆಂದರೆ ಅವರು ತಮ್ಮೂರಲ್ಲೇ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುತ್ತಿಲ್ಲ. ಕೆಲವರು ಬಿಸಿಲು ಝಳಕ್ಕೆ ಹೆದರಿ ಮನೆಯಲ್ಲಿ ಉಳಿದರೆ ಇನ್ನು ಕೆಲವರು ಮತದಾನದ ದಿನದಂದು ರಜೆ ಸಿಕ್ಕಿದ್ದಕ್ಕೆ ಟ್ರಿಪ್ ಹೋಗುತ್ತಿರೋ ಜನರ ನಡುವೆ ಕುಂತೂರು ಎಮಿರೇಟ್ಸ್ ಕ್ಲಬ್ ಇದರ ಗೌರವಾಧ್ಯಕ್ಷ ಸತ್ತಾರ್ ಯು ಕೆ ಮತದಾನ ಮಾಡುವ ಸಲುವಾಗಿಯೇ 

ಇಂದು ಕರೆಂಟ್ ಇಲ್ಲ

Posted by Vidyamaana on 2024-02-29 04:44:20 |

Share: | | | | |


ಇಂದು ಕರೆಂಟ್ ಇಲ್ಲ

ಪುತ್ತೂರು: ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಉಪ್ಪಿನಂಗಡಿ ವಾಟರ್‌ಸಪ್ಪೆ ಮತ್ತು ಕಾಂಚನ ಮತ್ತು 110/33/11 ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕಮ್ಮಾರ ಫೀಡರ್‌ನಲ್ಲಿ ಫೆ.29 ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರ ಮತ್ತು 110/33/11ಕೆವಿ ಕಣ್ಣೀರಿ ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ, ಕ್ಯೂಲ, ನೆಕ್ಕಿಲಾಡಿ ಬಜತ್ತೂರು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.



Leave a Comment: