ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಸುದ್ದಿಗಳು News

Posted by vidyamaana on 2024-07-06 04:30:03 |

Share: | | | | |


ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ

ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

 Share: | | | | |


ಪತ್ರಕರ್ತನ ಮೊಬೈಲ್ ಒಡೆದು ಹಾಕಿದ ಪ್ರಕರಣ ಸುಖಾಂತ್ಯ

Posted by Vidyamaana on 2023-07-20 02:17:28 |

Share: | | | | |


ಪತ್ರಕರ್ತನ ಮೊಬೈಲ್ ಒಡೆದು ಹಾಕಿದ ಪ್ರಕರಣ ಸುಖಾಂತ್ಯ

ಪುತ್ತೂರು: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಅವರ ಮೊಬೈಲ್ ಒಡೆದು ಹಾಕಿರುವ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ ಎಂದು ತಿಳಿದುಬಂದಿದೆ.

ಬಪ್ಪಳಿಗೆ ಎಂಬಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಮೊಬೈಲ್ ಕಸಿದು‌ ಹಾನಿಗೊಳಿಸಲಾಗಿದೆ ಎಂದು ನಿಶಾಂತ್ ಆರೋಪಿಸಿದ್ದರು. ಇದನ್ನು ಪತ್ರಕರ್ತರ ಸಂಘಗಳು ಖಂಡಿಸಿ, ಸೂಕ್ತ ತನಿಖೆ ನಡೆಸಲು ಆಗ್ರಹಿಸಿದ್ದವು. ಇದೀಗ ಬಂದ ಮಾಹಿತಿಯಂತೆ, ಮೊಬೈಲ್ ಒಡೆದು‌ ಹಾಕಿದವರು‌ ಹೊಸ ಮೊಬೈಲನ್ನು ನಿಶಾಂತ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ. ಈ‌ ಹಿನ್ನೆಲೆಯಲ್ಲಿ ಪ್ರಕರಣವನ್ನು ಸುಖಾಂತ್ಯಗೊಳಿಸಲಾಗಿದೆ ಎಂದು‌ ತಿಳಿದುಬಂದಿದೆ.

ಏರ್ ಇಂಡಿಯಾ ಗಗನಸಖಿ ಕೊಲೆ ಪ್ರಕರಣದ ಆರೋಪಿ ವಿಕ್ರಂ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ

Posted by Vidyamaana on 2023-09-08 21:50:08 |

Share: | | | | |


ಏರ್ ಇಂಡಿಯಾ ಗಗನಸಖಿ ಕೊಲೆ ಪ್ರಕರಣದ ಆರೋಪಿ ವಿಕ್ರಂ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ

ಮುಂಬೈ: ಗಗನಸಖಿ ಒಬ್ಬರನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಅಂಧೇರಿಯ ಪೊಲೀಸ್ ಠಾಣೆಯಲ್ಲಿ ತನ್ನ ಪ್ಯಾಂಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮುಂಬೈನ ಮರೋಲ್ ಪ್ರದೇಶದಲ್ಲಿ ವಾಸಿಸುತ್ತಿದ್ದ 23 ವರ್ಷದ ಗಗನಸಖಿಯನ್ನು ಕೊಂದ ಆರೋಪದಲ್ಲಿ ವಿಕ್ರಂ ಅತ್ವಾಲ್ ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಗಗನಸಖಿ ರೂಪಲ್ ಒಗ್ರೆ ಅಂಧೇರಿಯ ಅಪಾರ್ಟ್ಮೆಂಟ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಛತ್ತೀಸ್ ಗಢ ಮೂಲದ ಅವರು ವಿಮಾನಯಾನ ಸಂಸ್ಥೆಯಲ್ಲಿ ತರಬೇತಿಗಾಗಿ ಏಪ್ರಿಲ್ ನಲ್ಲಿ ಮುಂಬೈಗೆ ಬಂದಿದ್ದರು.

ಕೊಲೆ ಆರೋಪದ ಮೇಲೆ ರೂಪಾಲ್ ಉಳಿದುಕೊಂಡಿದ್ದ ಅಪಾರ್ಟ್ಮೆಂಟ್ ನ ಸ್ವಚ್ಚತಾ ಕೆಲಸಗಾರ 40 ವರ್ಷದ ವಿಕ್ರಮ್ ಅತ್ವಾಲ್ ಎಂಬುವವನ್ನು ಪೊಲೀಸರು ಬಂಧಿಸಿದ್ದರು. ಆದರೆ ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

Posted by Vidyamaana on 2024-03-12 10:00:00 |

Share: | | | | |


ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

ಪುತ್ತೂರು: ಅಂಬಿಕಾ ವಿದ್ಯಾ ಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಹೌದು.ವಿಶ್ವ ಹಿಂದೂ ಪರಿಷತ್ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ರಾಂ ಭಟ್ ಅವರ ಆತ್ಮೀಯರಾಗಿದ್ದು, ರಾಜಕೀಯವಾಗಿಯೂ ಸಾಕಷ್ಟು ಕೆಲಸ ನಿರ್ವಹಿಸಿದ್ದಾರೆ.


ಅವರು ಪುತ್ರ ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಬೆಳ್ತಂಗಡಿ; ಬಸ್‌ ಹತ್ತುವಾಗ ಮಹಿಳೆಯ ಚಿನ್ನದ ಸರ ಕಳ್ಳತನ

Posted by Vidyamaana on 2023-12-13 11:24:20 |

Share: | | | | |


ಬೆಳ್ತಂಗಡಿ; ಬಸ್‌ ಹತ್ತುವಾಗ ಮಹಿಳೆಯ ಚಿನ್ನದ ಸರ ಕಳ್ಳತನ

ಬೆಳ್ತಂಗಡಿ; ಬಸ್‌ ಹತ್ತುವಾಗ ಮಹಿಳೆಯ ಚಿನ್ನದ ಸರ ಕಳ್ಳತನ ಮಾಡಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ವಾರಿಜ ಅವರು ದಿನಾಂಕ 12.12.2023 ರಂದು ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್ ಆರ್ ಟಿ ಸಿ ಬಸ್ಸು ಹತ್ತುವಾಗ ಯಾರೋ ಅವರ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದಿದ್ದಾರೆ. ಅಷ್ಟರಲ್ಲಿ ಅವರು ಜೋರಾಗಿ ಕಿರುಚಿದ್ದಾರೆ. ಆದರೆ ಯಾರು ಸರ ಕದ್ದಿದ್ದಾರೆ ಅನ್ನೋದು ಮಾತ್ರ ಗೊತ್ತಾಗಿಲ್ಲ. ಚಿನ್ನದ ಸರ 36 ಗ್ರಾಂ ಇದ್ದು ಅಂದಾಜು ಮೌಲ್ಯ 1.44 ಸಾವಿರ ಇರಬಹುದು ಎನ್ನಲಾಗಿದೆ. ಇನ್ನು ವಾರಿಜ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 120/2023 ಕಲಂ:392 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಪಾಕಿಸ್ತಾನ ಪರ ಘೋಷಣೆ ಆರೋಪ : ಪುತ್ತೂರಿನಲ್ಲಿ ಬಿಜೆಪಿಯಿಂದ ಪ್ರತಿಕೃತಿ ದಹಿಸಿ ಆಕ್ರೋಶ

Posted by Vidyamaana on 2024-02-28 20:57:08 |

Share: | | | | |


ಪಾಕಿಸ್ತಾನ ಪರ ಘೋಷಣೆ ಆರೋಪ : ಪುತ್ತೂರಿನಲ್ಲಿ ಬಿಜೆಪಿಯಿಂದ ಪ್ರತಿಕೃತಿ ದಹಿಸಿ ಆಕ್ರೋಶ

ಪುತ್ತೂರು : ವಿಧಾನಸೌಧದಲ್ಲಿ ನಿನ್ನೆ ಸಂಜೆ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ನಾಸೀರ್ ಹುಸೇನ್ ರವರ ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ಹೊರ ಹಾಕಿದರು.

ಪುತ್ತೂರು : ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ

Posted by Vidyamaana on 2023-11-09 16:48:21 |

Share: | | | | |


ಪುತ್ತೂರು : ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ

ಪುತ್ತೂರು: ಖ್ಯಾತ ಹುಲಿವೇಷ ತಂಡದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ದ. ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ತಿಳಿಸಿದ್ದಾರೆ.

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ. ಸದ್ಯ ಅಪಘಾತದ ವಿಚಾರಕ್ಕೆ ಹತ್ಯೆಯಾಗಿದೆ ಎಂಬುದು ಸದ್ಯದ ತನಿಖೆಯಿಂದ ಹೊರ ಬಂದಿರುವ ಮಾಹಿತಿಯಾಗಿದ್ದು, ಹಳೇ ವೈಷಮ್ಯದಿಂದ ಹತ್ಯೆ ನಡೆಯಿತಾ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು.

ಇನ್ನು ಅಕ್ಷಯ್ ಕಲ್ಲೇಗ ಓರ್ವ ರೌಡಿ ಶೀಟರ್ ಆತನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಆರೋಪಿಗಳೆಲ್ಲರೂ ಅಕ್ಷಯ್ ಕಲ್ಲೇಗನ ಪರಿಚಯಸ್ಥರೇ ಆಗಿದ್ದರು. ಹತ್ಯೆಯ ಹಿಂದೆ ಬೇರೇ ಏನಾದರು ಕಾರಣವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.



Leave a Comment: