ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಸರ್ಕಾರ ರಚನೆಗೆ ಮುನ್ನವೇ ನಿತೀಶ್ ಕುಮಾರ್‌ ಮಹತ್ವದ ಬೇಡಿಕೆ : ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ!

Posted by Vidyamaana on 2024-06-06 14:23:57 |

Share: | | | | |


ಸರ್ಕಾರ ರಚನೆಗೆ ಮುನ್ನವೇ ನಿತೀಶ್ ಕುಮಾರ್‌ ಮಹತ್ವದ ಬೇಡಿಕೆ : ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ!

ನವದೆಹಲಿ : 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಕ್ಕಿಲ್ಲ. ಈ ಕಾರಣದಿಂದಾಗಿ, ನರೇಂದ್ರ ಮೋದಿ ಈಗ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರವನ್ನು ನಡೆಸಬೇಕಾಗುತ್ತದೆ. ಇಲ್ಲಿಯವರೆಗೆ, ಸರ್ಕಾರ ರಚನೆಗೆ ಯಾವುದೇ ಮಾರ್ಗಸೂಚಿಯನ್ನು ನಿಗದಿಪಡಿಸಲಾಗಿಲ್ಲ, ಆದರೆ ನಿತೀಶ್ ಕುಮಾರ್ ಅವರ ಪಕ್ಷವು ಈಗಾಗಲೇ ಹಲವು ಬೇಡಿಕೆಗಳನ್ನು ಇಟ್ಟಿದೆ.

ಸೇನೆಯಲ್ಲಿ ಸೈನಿಕರ ನೇಮಕಾತಿಗಾಗಿ ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ ತರಬೇಕೆಂದು ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಗುರುವಾರ ಒತ್ತಾಯಿಸಿದ್ದಾರೆ. "ಅಗ್ನಿವೀರ್ ಯೋಜನೆಗೆ ಸಾಕಷ್ಟು ವಿರೋಧವಿತ್ತು ಮತ್ತು ಅದರ ಪರಿಣಾಮವು ಚುನಾವಣೆಯಲ್ಲಿಯೂ ಕಂಡುಬಂದಿದೆ. ಆದ್ದರಿಂದ, ಅಗ್ನಿವೀರ್ ಯೋಜನೆಯನ್ನು ಮರುಪರಿಶೀಲಿಸುವ ಅವಶ್ಯಕತೆಯಿದೆ ಎಂದು ತಿಳಿಸಿದ್ದಾರೆ.

ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

Posted by Vidyamaana on 2024-02-06 12:24:15 |

Share: | | | | |


ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು :ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕೊಲೆ ಮಗ ಮಾಡಿದಲ್ಲ ಬದಲಿಗೆ ಅಪ್ಪನ ಕೊಲೆಯನ್ನು ತನ್ನ ಮೇಲೆ ಹಾಕಿಕೊಂಡು ಮಗನೇ ಪೊಲೀಸರಿಗೆ ತಾನೇ ಕೊಲೆ ಮಾಡಿದ್ದ ಎನ್ನಲಾಗಿದೆ.ಈ ನಡುವೆ ಫಿಂಗರ್ ಪ್ರಿಂಟ್ ಪತ್ತೆಯಾದ ಹಿನ್ನೆಲೆ ತನಿಖೆ ನಡೆಸಿದ್ದ ಪೊಲೀಸರು ಕೊಲೆಯಲ್ಲಿ ತಂದೆ ಕೊಲೆ ಮಾಡಿದ್ದ ಎನ್ನಲಾಗಿದೆ.ಮಹಿಳೆ ಕೊಲೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದೆ. ಈ ನಡುವೆ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟ ಇತ್ತು. ಕೆಲವೊಮ್ಮೆ ಎರಡು ಮೂರು ದಿನಗಳ ಕಾಲ ಮನೆಗೆ ಬರ್ತಾ ಇರಲಿಲ್ಲ. ಹೀಗಾಗಿ ಮಗನ ಜೊತೆ ಸೇರಿ ಕೊಲೆ ಮಾಡಲು ನಿರ್ಧಾರ ಮಾಡಿದೆ ಎಂದು ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎನ್ನಲಾಗಿದೆ. ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತೆ, ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಗ ಪೊಲೀಸರ ಮುಂದೆ ಹೇಳಿದ್ದ ಎನ್ನಲಾಗಿದೆ.

ವರಿಷ್ಠರ ಭೇಟಿಗೆ ವಿಜಯೇಂದ್ರ, ಅಶೋಕ್‌ ಡಿ.1ರಂದು ದೆಹಲಿಗೆ

Posted by Vidyamaana on 2023-11-28 17:08:52 |

Share: | | | | |


ವರಿಷ್ಠರ ಭೇಟಿಗೆ ವಿಜಯೇಂದ್ರ, ಅಶೋಕ್‌ ಡಿ.1ರಂದು ದೆಹಲಿಗೆ

ಬೆಂಗಳೂರು (ನ.28) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಅವರು ಡಿ.1ರಂದು ಶುಕ್ರವಾರ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಸಂಬಂಧ ದೆಹಲಿಗೆ ತೆರಳಲಿದ್ದಾರೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಮತ್ತು ಅಶೋಕ್ ಅವರು ಪ್ರತಿಪಕ್ಷದ ನಾಯಕರಾದ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ತಿಳಿಸುವುದರ ಜತೆಗೆ ಕೋರ್ ಕಮಿಟಿ ಪುನಾರಚನೆ, ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ, ವಿಧಾನಸಭೆಯ ಉಪನಾಯಕ, ಮುಖ್ಯ ಸಚೇತಕ, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ, ಉಪನಾಯಕ ಮತ್ತು ಮುಖ್ಯ ಸಚೇತಕ ಹುದ್ದೆಗಳಿಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ ಎಂದು ಮುೂಲಗಳು ತಿಳಿಸಿವೆ.ಅಲ್ಲದೆ, ಉಭಯ ನಾಯಕರ ನೇಮಕಕ್ಕೆ ಸಂಬಂಧಿಸಿದಂತೆ ಬೃಹತ್ ಸಮಾವೇಶ ಆಯೋಜಿಸುವ ಉದ್ದೇಶವನ್ನು ಹೊಂದಲಾಗಿದೆ. ಹೀಗಾಗಿ, ಈ ಸಮಾವೇಶದ ದಿನಾಂಕ, ರಾಷ್ಟ್ರೀಯ ನಾಯಕರ ಲಭ್ಯತೆ ಆಧರಿಸಿ ಅವರನ್ನು ಆಹ್ವಾನಿಸುವ ಬಗ್ಗೆಯೂ ಚರ್ಚೆ ನಡೆಯುವ ನಿರೀಕ್ಷೆಯಿದೆ.


ಜತೆಗೆ ಪಕ್ಷದ ಸಂಘಟನೆ ಬಲಪಡಿಸುವ ಕುರಿತಂತೆ ಹೋರಾಟಗಳನ್ನು ಹಮ್ಮಿಕೊಳ್ಳುವ ಬಗ್ಗೆ ವರಿಷ್ಠರಿಂದ ಸಲಹೆ- ಸೂಚನೆಗಳನ್ನು ಪಡೆಯಬಹುದು. ಮುಖ್ಯವಾಗಿ ಪಕ್ಷ ತೊರೆಯಲು ಸಜ್ಜಾಗಿರುವ ಕೆಲವು ನಾಯಕರನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ವಿಜಯೇಂದ್ರ ಅವರು ವರಿಷ್ಠರೊಂದಿಗೆ ಮಾತುಕತೆ ನಡೆಸುವ ಸಂಭ‍ವ ಹೆಚ್ಚಾಗಿದೆ ಎನ್ನಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಪುತ್ತೂರು ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ

Posted by Vidyamaana on 2023-09-27 13:16:41 |

Share: | | | | |


ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಪುತ್ತೂರು ಬಿಜೆಪಿ  ವತಿಯಿಂದ   ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ

ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ರಕ್ತದಾನ ಶಿಬಿರ ಪುತ್ತೂರು ಬ್ಲಡ್ ಬ್ಯಾಂಕ್ನಲ್ಲಿ ಮಂಗಳವಾರ ನಡೆಯಿತು.


ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಮೋದಿಯವರ ಜನ್ಮದಿನದಿಂದ ಆಕ್ಟೋಬರ್ 2 ಗಾಂಧಿ ಜಯಂತಿವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.


ಶಿಬಿರದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಮಾಜಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಳ್ಕೊಟ್ಟು,, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಆಶಾ ತಿಮ್ಮಪ್ಪ ಗೌಡ, ಮೀನಾಕ್ಷಿ ಶಾಂತಿಗೋಡು, ಟಿ.ಎ.ಪಿ.ಸಿ.ಎಮ್.ಎಸ್. ಅಧ್ಯಕ್ಷ ಕೃಷ್ಣಕುಮಾರ್ ರೈ, ಮಾಜಿ ನಗರಸಭಾ ಅಧ್ಯಕ್ಷ ಲೋಕೇಶ್ ಹೆಗ್ಡೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ,ನಿತೀಶ್ ಕುಮಾರ್ ಶಾಂತಿವನ, ಜಯಶ್ರೀ ಎಸ್. ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಬಿ.ಎಲ್.ಎ. ಹರೀಶ್ ಬಿಜತ್ರೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸುರೇಶ್ ಆಳ್ವ, ನಗರ ಮಂಡಲ ಕಾರ್ಯದರ್ಶಿ ಅಶೋಕ್ ಹಾರಾಡಿ, ಬನ್ನೂರು ಶಕ್ತಿ ಕೇಂದ್ರ ಪ್ರಮುಖ ನಾಗೇಶ್ ಬನ್ನೂರು, ಕಬಕ ಶಕ್ತಿ ಕೇಂದ್ರ ಪ್ರಮುಖ ಜಯರಾಮ ನೆಕ್ಕರೆ, ಒಳಮೊಗ್ರು ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ರೈ, ಪಕ್ಷದ ಪ್ರಮುಖರಾದ ವಿಶ್ವನಾಥ ಕುಲಾಲ್, ರಫೀಕ್ ಪರ್ಲಡ್ಕ, ಉಮರಬ್ಬ ಗಡಿಯಾರ ಹಾಗೂ ಪಕ್ಷದ ಹಿರಿಯ, ಕಿರಿಯ ಕಾರ್ಯಕರ್ತರು ಭಾಗವಹಿಸಿದ್ದರು.

ದಕ್ಷಿಣ ಆಫ್ರಿಕಾ ಕನಸು ನುಚ್ಚುನೂರು: ಭಾರತ ಆಸ್ಟ್ರೇಲಿಯ ಫೈನಲ್

Posted by Vidyamaana on 2023-11-17 08:42:10 |

Share: | | | | |


ದಕ್ಷಿಣ ಆಫ್ರಿಕಾ ಕನಸು ನುಚ್ಚುನೂರು: ಭಾರತ ಆಸ್ಟ್ರೇಲಿಯ ಫೈನಲ್

ಕೋಲ್ಕತಾ : ಇಲ್ಲಿನ ಈಡನ್ ಗಾರ್ಡನ್ಸ್ ನಲ್ಲಿ ಗುರುವಾರ ನಡೆದ ವಿಶ್ವಕಪ್ 2ನೇ ಸೆಮಿ ಫೈನಲ್ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್‌ ಆಸ್ಟ್ರೇಲಿಯ ಅಮೋಘ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದು,ಭಾನುವಾರ ಭಾರತದೊಂದಿಗೆ ದೊಡ್ಡ ಹಣಾಹಣಿ ನಡೆಸಲು ಸಿದ್ಧವಾಗಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯದ ಬಿಗಿ ದಾಳಿಗೆ ನಲುಗಿ ಭಾರೀ ಆಘಾತಕ್ಕೆ ಸಿಲುಕಿತಾದರೂ ಆಪದ್ಬಾಂಧವನಂತೆ ಡೇವಿಡ್ ಮಿಲ್ಲರ್ ಅವರು ಶತಕದ ನೆರವಿನಿಂದ ಇನ್ನೂರರ ಗಡಿ ದಾಟಲು ಸಾಧ್ಯವಾಯಿತು. 213 ರನ್ ಗಳ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ  47.2 ಓವರ್ ಗಳಲ್ಲಿ ಗುರಿ ತಲುಪಿ(215) 3 ವಿಕೆಟ್ ಗಳ ಜಯಭೇರಿ ಬಾರಿಸಿ ಫೈನಲ್ ಗೆ ಲಗ್ಗೆ ಇಟ್ಟಿತು.


ಆಸೀಸ್ ಭರ್ಜರಿ ಆರಂಭ ಪಡೆಯಿತು. ಟ್ರಾವಿಸ್ ಹೆಡ್ 62 ರನ್( 48 ಎಸೆತ) ಗಳಿಸಿ ಔಟಾದರು. ಡೇವಿಡ್ ವಾರ್ನರ್ 29(18ಎಸೆತ) ಗಳಿಸಿ ಔಟಾದರು. 6.1 ಓವರ್ ಗಳಲ್ಲೇ 60 ರನ್ ಕಲೆ ಹಾಕಿ ಗೆಲುವಿನ ಸೂಚನೆ ನೀಡಿತು. ಆಬಳಿಕ ದಕ್ಷಿಣ ಆಫ್ರಿಕಾ ಬೌಲರ್ ಗಳು ಮೇಲುಗೈ ಸಾಧಿಸಿದರೂ ಗೆಲುವು ತನ್ನದಾಗಿಸಿಕೊಳ್ಳಲು ಸಾಧ್ಯವಾಗಲಿಲ್ಲ.


ಹೆಡ್ ಅವರನ್ನು ಮಹಾರಾಜ್, ವಾರ್ನರ್ ಅವರನ್ನು ಮಾರ್ಕ್ರಾಮ್ ಬೌಲ್ಡ್ ಮಾಡಿ ಸಂಭ್ರಮಿಸಿದರು. ಆ ಬಳಿಕ ಮಿಚೆಲ್ ಮಾರ್ಷ್ ಶೂನ್ಯಕ್ಕೆ ನಿರ್ಗಮಿಸಿದರು. 18 ರನ್ ಗಳಿಸಿದ್ದ ಮಾರ್ನಸ್ ಲಬುಶೆನ್ ಅವರನ್ನು ಶಮ್ಸಿ ಎಲ್ಬಿಡಬ್ಲ್ಯೂ ಬಲೆಗೆ ಕೆಡವಿದರು. ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಶಮ್ಸಿ ಕ್ಲೀನ್ ಬೌಲ್ಡ್ ಮಾಡಿ ಸಂಭ್ರಮದಲ್ಲಿ ತೇಲಾಡಿದರು.ತಾಳ್ಮೆಯ ಆಟವಾಡಿದ  ಸ್ಟೀವನ್ ಸ್ಮಿತ್ ಅವರು ದೊಡ್ಡ ಹೊಡೆತಕ್ಕೆ ಮುಂದಾಗಿ ಜೆರಾಲ್ಡ್ ಕೋಟ್ಜೀ ಎಸೆದ ಚೆಂಡನ್ನು ವಿಕೆಟ್ ಕೀಪರ್ ಡಿ ಕಾಕ್ ಕೈಗಿತ್ತು ನಿರ್ಗಮಿಸಿದರು. 62 ಎಸೆತಗಳಲ್ಲಿ 30 ರನ್ ಗಳಿಸಿ ನಿರ್ಗಮಿಸಿದರು.


49 ಎಸೆತಗಳಲ್ಲಿ 28 ರನ್ ಗಳಿಸಿದ್ದ ಜೋಶ್ ಇಂಗ್ಲಿಸ್ ಅವರನ್ನು ಕೋಟ್ಜೀ ಕ್ಲೀನ್ ಬೌಲ್ಡ್ ಮಾಡಿದರು. ಕೊನೆಯಲ್ಲಿ ಮಿಚೆಲ್ ಸ್ಟಾರ್ಕ್16 (38 ಎಸೆತ) ನಾಯಕ ಪ್ಯಾಟ್ ಕಮ್ಮಿನ್ಸ್ 14 ರನ್ (29ಎಸೆತ) ಗಳಿಸಿ ಔಟಾಗದೆ ಉಳಿದರು.

ADVERTISEMENT

5 ನೇ ಬಾರಿ ಸೆಮಿ ಫೈನಲ್ ನಲ್ಲಿ ಎಡವಿದ ದಕ್ಷಿಣ ಆಫ್ರಿಕಾದ ವಿಶ್ವಕಪ್ ಕನಸು ನುಚ್ಚುನೂರಾಯಿತು. 1992 ರಲ್ಲಿ ಇಂಗ್ಲೆಂಡ್‌ ವಿರುದ್ಧ ಸಿಡ್ನಿ 19 ರನ್‌ ಸೋಲು,1999 ರಲ್ಲಿ ಆಸ್ಟ್ರೇಲಿಯ ವಿರುದ್ಧ ಬರ್ಮಿಂಗ್‌ಹ್ಯಾಮ್‌ ನಲ್ಲಿ ಪಂದ್ಯ ಟೈ, 2007 ರಲ್ಲಿ ಆಸ್ಟ್ರೇಲಿಯ ವಿರುದ್ಧ ಗ್ರಾಸ್‌ ಐಲೆಟ್‌ 7 ವಿಕೆಟ್‌ ಸೋಲು, 2015ರಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಆಕ್ಲೆಂಡ್‌ ನಲ್ಲಿ 4 ವಿಕೆಟ್‌ ಸೋಲು ದಕ್ಷಿಣ ಆಫ್ರಿಕಾ ಅನುಭವಿಸಿದೆ.


1975 ಮತ್ತು 1996 ರಲ್ಲಿ ಫೈನಲ್ ನಲ್ಲಿ ಆಸ್ಟ್ರೇಲಿಯ ಸೋತು ರನ್ನರ್ ಅಪ್ ಆಗಿತ್ತು.

ಪುತ್ತೂರು : ಅನಾರೋಗ್ಯದಿಂದಾಗಿ ಪ್ರತಿಭಾನ್ವಿತ ವಿದ್ಯಾರ್ಥಿ ಸುಪ್ರೀತ್ ನಿಧನ

Posted by Vidyamaana on 2023-11-01 17:54:59 |

Share: | | | | |


ಪುತ್ತೂರು : ಅನಾರೋಗ್ಯದಿಂದಾಗಿ ಪ್ರತಿಭಾನ್ವಿತ ವಿದ್ಯಾರ್ಥಿ ಸುಪ್ರೀತ್ ನಿಧನ

ಪುತ್ತೂರು : ಪ್ರಾಥಮಿಕ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸರ್ವೆ ಸಮೀಪ ನಡೆದಿದೆ.ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಮೃತ ಬಾಲಕ.ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.


ಸುಪ್ರೀತ್ ರವರು ಮುಂಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಮತ್ತು ಕುಂಞ ಮೇಸ್ತ್ರಿ ಅವರ ಪುತ್ರ.

ಈತ ಶಾಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ



Leave a Comment: