ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಕಾಸರಗೋಡು ಖಾಸಗಿ ಬಸ್ ಪಲ್ಟಿ, ಚಾಲಕ ಚೇತನ್ ಕುಮಾರ್ ಮೃತ್ಯು ; 20 ಮಂದಿ ಪ್ರಯಾಣಿಕರಿಗೆ ಗಾಯ

Posted by Vidyamaana on 2024-03-18 20:29:07 |

Share: | | | | |


ಕಾಸರಗೋಡು ಖಾಸಗಿ ಬಸ್ ಪಲ್ಟಿ, ಚಾಲಕ ಚೇತನ್ ಕುಮಾರ್ ಮೃತ್ಯು ; 20 ಮಂದಿ ಪ್ರಯಾಣಿಕರಿಗೆ ಗಾಯ

ಕಾಸರಗೋಡು: ಪೆರಿಯ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಮಾ.18 ರ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.. ಇಪ್ಪತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ ಮೆಹಬೂಬ್ ಬಸ್ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ.  ಮಧೂರು ರಾಮನಗರ ಮೂಲದ ಚೇತನ್ ಕುಮಾರ್ (37) ಮೃತ ವ್ಯಕ್ತಿ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದರಿಂದಾಗಿ ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಸ್ಸಿನಲ್ಲಿದ್ದ ಎಲ್ಲರನ್ನೂ ಇಲ್ಲಿಂದ ಹೊರತೆಗೆದ ಬಳಿಕ ಅಗ್ನಿಶಾಮಕ ದಳದವರು ತಂದ ಕ್ರೇನ್ ಬಳಸಿ ಬಸ್ ಅನ್ನು ರಸ್ತೆ ಬದಿಗೆ ಸ್ಥಳಾಂತರಿಸಲಾಯಿತು. ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ

Posted by Vidyamaana on 2021-11-10 18:50:09 |

Share: | | | | |


ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ ಕಾರ್ಯಕ್ರಮ ಜರಗಿತು.

ಮಂಗಳೂರು ವಿಶ್ವವಿದ್ಯಾಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಪುತ್ತೂರು ಅಕ್ಷಯ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕಾಟಿಪಳ್ಳ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಿ. ದಯಾಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಟಿಪಳ್ಳ ಶ್ರೀ ನಾರಾಯಣಗುರು ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗುಣವತಿ ರಮೇಶ್ ಅವರು ನಾರಾಯಣಗುರುಗಳ ಸಾಮಾಜಿಕ ಸುಧಾರಣೆ ಹಾಗೂ ಅವರ ಚಿಂತನೆಗಳ ಬಗ್ಗೆ ಉಪನ್ಯಾಸ ನೀಡಿದರು. ನಾರಾಯಣಗುರು ಅಧ್ಯಯನ ಪೀಠದ ಸಂಯೋಜಕ ಡಾ. ಗಣೇಶ್ ಅಮೀನ್ ಸಂಕಮಾರ್ ಅವರು, ನಾರಾಯಣಗುರುಗಳ ತತ್ವದ ಮಹತ್ವವನ್ನು ತಿಳಿಸಿದರು. 

ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಅಧ್ಯಕ್ಷತೆ ವಹಿಸಿದ್ದರು. ಕಾಟಿಪಳ್ಳ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಯ ಸದಸ್ಯ ಭೋಜ ಅಂಚನ್ ಮಧ್ಯ, ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ, ಪ್ರಾಂಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಗನ್ ದೀಪ್ ಎ.ಬಿ. ಉಪಸ್ಥಿತರಿದ್ದರು.

ಗ್ರಂಥಾಪಾಲಕಿ ಪ್ರಭಾವತಿ ಸ್ವಾಗತಿಸಿ, ಉಪನ್ಯಾಸಕಿ ರಶ್ಮಿ ಕೆ. ವಂದಿಸಿದರು. ಉಪನ್ಯಾಸಕಿ ಆಶಿಕಾ ಫರ್ಝಾನ ಕೆ.ಎ. ಕಾರ್ಯಕ್ರಮ ನಿರೂಪಿಸಿದರು.

ಮೇ.26 ಸುಳ್ಯ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸುಳ್ಯ ಪಟ್ಟಣ ಪಂಚಾಯತ್, ಪುತ್ತಿಲ ಅಭಿಮಾನಿಗಳ ವತಿಯಿಂದ ನಿರ್ಮಿಸಿದ ಮನೆ ಸೇವಾಶ್ರಯದ ಹಸ್ತಾಂತರ

Posted by Vidyamaana on 2024-05-26 07:56:26 |

Share: | | | | |


ಮೇ.26 ಸುಳ್ಯ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸುಳ್ಯ ಪಟ್ಟಣ ಪಂಚಾಯತ್, ಪುತ್ತಿಲ ಅಭಿಮಾನಿಗಳ ವತಿಯಿಂದ ನಿರ್ಮಿಸಿದ ಮನೆ ಸೇವಾಶ್ರಯದ ಹಸ್ತಾಂತರ

ಸುಳ್ಯ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸುಳ್ಯ ಪಟ್ಟಣ ಪಂಚಾಯತ್, ಪುತ್ತಿಲ ಅಭಿಮಾನಿಗಳ ವತಿಯಿಂದ ಬಡ ಮಹಿಳೆಗಾಗಿ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ಮೇ.26 ರಂದು ನಡೆಯಲಿದೆ.

ಸುಳ್ಯದ ಪೈಚ್ಚಾರಿನಲ್ಲಿ ಬಡ ಮಹಿಳೆಗೆ ನೂತನವಾಗಿ ನಿರ್ಮಿಸಿದ ಮನೆ ಸೇವಾಶ್ರಯದ ಹಸ್ತಾಂತರ ಕಾರ್ಯಕ್ರಮ ನಾಳೆ (ಮೇ.26) ಬೆಳಿಗ್ಗೆ

ಉಡುಪಿಗೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

Posted by Vidyamaana on 2023-10-13 14:50:42 |

Share: | | | | |


ಉಡುಪಿಗೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

ಶಿರ್ವ: ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದ ಯವತಿಯ ಶವ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಆ.13ರ ಶುಕ್ರವಾರ ಪತ್ತೆಯಾಗಿದೆ.


ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ಕಾಣೆಯಾದ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಬಿ.ಕಾಂ. ಪದವೀಧರೆಯಾಗಿದ್ದ ಆಕೆ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು. ಮಾನಸಿಕವಾಗಿ ನೊಂದಿದ್ದ ಈಕೆ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.


ಮಲ್ಪೆಯ ಮುಳುಗು ತಜ್ಞ ಈಶ್ವರ್‌ ಮಲ್ಪೆ ಕೊಳೆತ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದು, ಮರಣೋತ್ತರ ಶವ ಪರೀಕ್ಷೆ ನಡೆಸಲು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ

Posted by Vidyamaana on 2024-05-12 18:27:03 |

Share: | | | | |


ಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ

ಪುತ್ತೂರು: ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, 

ಪೊದೆಯಿಂದ ತುಂಬಿದ ರಸ್ತೆ : ಮಹಿಳೆಯಿಂದ ಶಾಸಕರಿಗೆ ದೂರು

Posted by Vidyamaana on 2023-12-14 17:39:51 |

Share: | | | | |


ಪೊದೆಯಿಂದ ತುಂಬಿದ ರಸ್ತೆ : ಮಹಿಳೆಯಿಂದ ಶಾಸಕರಿಗೆ ದೂರು

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.


ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಸಕರಿಗೆ ಮೊಬೈಲ್ ಕರೆ ಮಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು. ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪೃವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.

ಮಳೆಗಾಲದಲ್ಲಿ ರಸ್ತೆ ಬದಿ, ಕೆಲವು ಕಡೆಗಳಲ್ಲಿ ರಸ್ತೆ ಮಧ್ಯೆತನಕವೂ ಹುಲ್ಲು, ಪೊದೆಗಳು ಬೆಳೆಯುತ್ತದೆ, ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ. ರಸ್ತೆ ಬದಿಯಲ್ಲಿರುವ ಪೊದೆಗಳನ್ನು ತೆರವು ಮಾಡುವಂತೆ ನಗರಸಭೆಗೆ ಸೂಚನೆ ನೀಡಿದ್ದೇನೆ, ನಗರಸಭಾ ವ್ಯಾಪ್ತಿಯ ಎಲ್ಲಾ ರಸ್ತೆಗಳಲ್ಲೂ ತೆರವು ಕಾರ್ಯಾಚರಣೆ ನಡೆಯಲಿದೆ.

ಅಶೋಕ್‌ರೈ ಶಾಸಕರು ಪುತ್ತೂರು



Leave a Comment: