ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಮೃತ್ಯು

ಸುದ್ದಿಗಳು News

Posted by vidyamaana on 2024-07-03 20:52:26 |

Share: | | | | |


ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಮೃತ್ಯು

ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಗರದ ಬಲ್ಮಠ ಬಳಿ ಬುಧವಾರ ಸಂಭವಿಸಿದೆ.ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ತಿಳಿದು ಬಂದಿದೆ.ಮಧ್ಯಾಹ್ನ ಕಟ್ಟಡದ ಕಾಮಗಾರಿ ನಡೆಯುತಿದ್ದ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದರು.

ಘಟನೆ ನಡೆದ ವಿಚಾರ ತಿಳುಯುತ್ತಲೇ ಸ್ಥಳಕ್ಕೆ ಅಗ್ನಿಶಾಮಕ ದಳ , ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದಾರೆ ಇದಾದ ಕೆಲವು ಗಂಟೆಗಳ ಬಳಿಕ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ನಡುವೆ ಮಣ್ಣಿನಡಿ ಸಿಲುಕಿದ್ದ ಚಂದನ್ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿತ್ತು.

ರಿಟೇನಿಂಗ್ ವಾಲ್ ಮತ್ತು ಶೀಟ್ ಗಳ ಮಧ್ಯೆ ಸಿಲುಕಿದ್ದ ಕಾರ್ಮಿಕನ ರಕ್ಷಣೆಗಾಗಿ ರಾತ್ರಿಯ ವರೆಗೂ ಕಾರ್ಯಾಚರಣೆ ನಡೆಸಿದರೂ ಕಾರ್ಮಿಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಸುಮಾರು ಏಳು ಗಂಟೆಯ ವೇಳೆಗೆ ಮೃತದೇಹವನ್ನು ಎನ್ ಡಿ ಆರ್ ಎಫ್ ತಂಡ ಹೊರತೆಗೆದಿದೆ.

 Share: | | | | |


ಅತ್ಯುತ್ತಮ ಬ್ರ್ಯಾಂಡ್ ನ ಉಡುಪುಗಳನ್ನು ಈಸೀ ಬೈ ಮಾಡ್ಬೇಕಾ ಹಾಗಾದ್ರೆ ಜಿ.ಎಲ್. ಒನ್ ಮಾಲ್ ಗೆ ಬನ್ನಿ ಪುತ್ತೂರಿನಲ್ಲಿ ಈಸೀ ಬೈ ಶುಭಾರಂಭ

Posted by Vidyamaana on 2023-03-31 13:35:33 |

Share: | | | | |


ಅತ್ಯುತ್ತಮ ಬ್ರ್ಯಾಂಡ್ ನ ಉಡುಪುಗಳನ್ನು ಈಸೀ ಬೈ ಮಾಡ್ಬೇಕಾ ಹಾಗಾದ್ರೆ ಜಿ.ಎಲ್. ಒನ್ ಮಾಲ್ ಗೆ ಬನ್ನಿ ಪುತ್ತೂರಿನಲ್ಲಿ ಈಸೀ ಬೈ ಶುಭಾರಂಭ

ಪುತ್ತೂರು: ‘ಆತ್ಮ ನಿರ್ಭರ’ ನವಭಾರತದ ಆತ್ಮವಿಶ್ವಾಸದ ಪ್ರತೀಕವಾಗಿ ನವೀನ ಟ್ರೆಂಡಿಗ್ ಫ್ಯಾಶನ್ ಉಡುಪುಗಳ ಅದ್ಭುತ ಕಲೆಕ್ಷನ್ ಗಳೊಂದಿಗೆ ದೇಶಾದ್ಯಂತ 70 ನಗರಗಳಲ್ಲಿ 100 ಶೋ ರೂಂಗಳನ್ನು ಹೊಂದಿರುವ ‘ಈಸಿ ಬೈ’ ಇದೀಗ ಪುತ್ತೂರಿಗೆ ಕಾಲಿಟ್ಟಿದೆ. ತಾಲೂಕಿನ ಪ್ರಪ್ರಥಮ ಶಾಪಿಂಗ್ ಮಾಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪ್ರತಿಷ್ಟಿತ ಜಿ.ಎಲ್. ಸಮೂಹ ಸಂಸ್ಥೆಗೆ ಸೇರಿರುವ ಜಿ.ಎಲ್. ಒನ್ ಮಾಲ್ ನಲ್ಲಿ ‘ಈಸೀ ಬೈ’ ಮಾ :31 ರಂದು ಶುಭಾರಂಭಗೊಂಡಿತು.

ಎಸ್.ಜಿ. ಕಾರ್ಪೊರೇಟ್ಸ್ ನ ಆಡಳಿತ ನಿರ್ದೇಶಕರಾಗಿರುವ ಸತ್ಯಶಂಕರ ಭಟ್ ಅವರು ಈ ನೂತನ ಸಂಸ್ಥೆಯನ್ನು ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನ ಮಾಲಕ, ಹಿರಿಯ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಅವರ ಪತ್ನಿ ರಾಜಿ ಬಲರಾಮ ಆಚಾರ್ಯ, ವೇದ ಲಕ್ಷ್ಮೀಕಾಂತ್, ಸುಧನ್ವ ಆಚಾರ್ಯ, ಮೇಘಾ ಶಂಕರ್ ಮತ್ತು ಮನಸ್ವಿತ್ ಶಂಕರ್ ಈ ನೂತನ ಔಟ್ ಲೆಟ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಶುಭ ಹಾರೈಸಿದರು.

ನೇತ್ರಾವತಿ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಸುಹೈಲ್ ನೀರಿನಲ್ಲಿ ಮುಳುಗಿ ಮೃತ್ಯು

Posted by Vidyamaana on 2024-04-21 04:58:04 |

Share: | | | | |


ನೇತ್ರಾವತಿ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಸುಹೈಲ್ ನೀರಿನಲ್ಲಿ ಮುಳುಗಿ ಮೃತ್ಯು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ.

ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ ಬಾಲಕ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.

   ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

     

14 ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದ INDIA ಮೈತ್ರಿಕೂಟ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

Posted by Vidyamaana on 2023-09-15 09:06:27 |

Share: | | | | |


14 ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದ INDIA ಮೈತ್ರಿಕೂಟ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಮುಂಬೈ: ವಿರೋಧ ಪಕ್ಷದ ಮೈತ್ರಿಕೂಟ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (INDIA) ಈಗ ಕೆಲವು ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದೆ.  


ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ಬುಧವಾರ ನಡೆದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ INDIA ಮೈತ್ರಿಕೂಟ ಈ ನಿರ್ಧಾರವನ್ನು ತೆಗೆದುಕೊಂಡಿದೆ.


ವಾಸ್ತವವಾಗಿ, ಮಾಧ್ಯಮದ ಒಂದು ವಿಭಾಗವು ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ವಿರೋಧ ಪಕ್ಷಗಳು ಹಲವು ಬಾರಿ ಆರೋಪಿಸಿವೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಭೇಟಿಗೆ ಮಾಧ್ಯಮಗಳು ಅಗತ್ಯ ಪ್ರಸಾರವನ್ನು ನೀಡಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.ಮೈತ್ರಿಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯು ದೆಹಲಿಯ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆಯಿತು. ಶರದ್ ಪವಾರ್ ಹೊರತುಪಡಿಸಿ, ಕಾಂಗ್ರೆಸ್‌ನ ಕೆಸಿ ವೇಣುಗೋಪಾಲ್, ಡಿಎಂಕೆಯ ಟಿಆರ್ ಬಾಲು, ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಜನತಾ ದಳದ (ಯುನೈಟೆಡ್) ಸಂಜಯ್ ಝಾ, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ, ಶಿವಸೇನೆಯ (ಯುಬಿಟಿ) ಸಂಜಯ್ ರಾವತ್, ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದ್ದರು.


ಭಾರತ ಮೈತ್ರಿಯಿಂದ ಬಹಿಷ್ಕರಿಸಿದ ಆಂಕರ್‌ಗಳು:

* ಅದಿತಿ ತ್ಯಾಗಿ

* ಅಮನ್ ಚೋಪ್ರಾ

* ಅಮಿಶ್ ದೇವಗನ್

* ಆನಂದ ನರಸಿಂಹನ್

* ಅರ್ನಾಬ್ ಗೋಸ್ವಾಮಿ

* ಅಶೋಕ್ ಶ್ರೀವಾಸ್ತವ

* ಚಿತ್ರಾ ತ್ರಿಪಾಠಿ

* ಗೌರವ್ ಸಾವಂತ್

* ನಾವಿಕ ಕುಮಾರ್

* ಪ್ರಾಚಿ ಪರಾಶರ

* ರೂಬಿಕಾ ಲಿಯಾಕತ್

* ಶಿವ ಆರೂರ್

* ಸುಧೀರ್ ಚೌಧರಿ

* ಸುಶಾಂತ್ ಸಿನ್ಹಾ

ದ.ಕ ಜಿಲ್ಲೆ ಸೇರಿ ಕರಾವಳಿಯಲ್ಲಿ ಮೂರು ದಿನ ಬಿಸಿಗಾಳಿ ಸಾಧ್ಯತೆ: ಹವಾಮಾನ ಇಲಾಖೆ

Posted by Vidyamaana on 2024-04-27 13:31:37 |

Share: | | | | |


ದ.ಕ ಜಿಲ್ಲೆ ಸೇರಿ ಕರಾವಳಿಯಲ್ಲಿ ಮೂರು ದಿನ ಬಿಸಿಗಾಳಿ ಸಾಧ್ಯತೆ: ಹವಾಮಾನ ಇಲಾಖೆ

ಮಂಗಳೂರು: ದ.ಕ. ಜಿಲ್ಲೆ‌ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಹೇಳಿದೆ.

ಭಾರತೀಯ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ದ.ಕ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ವರದಿ ಮಾಡಿದೆ.

ಬನ್ನೂರು ಶಾಲಾ ವಠಾರದಲ್ಲಿ ವನಮಹೋತ್ಸವ

Posted by Vidyamaana on 2023-07-05 11:07:29 |

Share: | | | | |


ಬನ್ನೂರು ಶಾಲಾ ವಠಾರದಲ್ಲಿ ವನಮಹೋತ್ಸವ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್,

ರೋಟರಿ ಕ್ಲಬ್ ಪುತ್ತೂರು ಯುವ, ಇನ್ನರ್ ವೀಲ್ ಕ್ಲಬ್ ಪುತ್ತೂರು, ಬನ್ನೂರು ಸರಕಾರಿ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪೆನಿ, ಬನ್ನೂರು ಸ್ಪೂರ್ತಿ ಯುವ ಸಂಸ್ಥೆ, ಕರ್ನಾಟಕ ರಾಜ್ಯ ಅರಣ್ಯ ಇಲಾಖೆ

ಇದರ ಸಂಯುಕ್ತ ಆಶ್ರಯದಲ್ಲಿ ಬನ್ನೂರು ಸರಕಾರಿ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರಗಿತು.

ಪುತ್ತೂರು ನಗರಸಭೆಯ ಸದಸ್ಯರಾಗಿದ್ದ ಗೌರಿ ಬನ್ನೂರು ಅವರು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ.ವಿ, ರೋಟರಿ ಕ್ಲಬ್ ಪುತ್ತೂರು ಯುವದ ಅಧ್ಯಕ್ಷ ಪಶುಪತಿ ಶರ್ಮ, ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿ ಅಧ್ಯಕ್ಷ ಕುಸುಮಾಧರ್, ಸ್ಫೂರ್ತಿ ಯುವ ಸಂಸ್ಥೆಯ ದಿನೇಶ್ ಸಾಲಿಯಾನ್, ಎಸ್ ಡಿ ಎಂ ಸಿ ಅಧ್ಯಕ್ಷ ಗುರು ಪ್ರಸಾದ್, ಮುಖ್ಯ ಶಿಕ್ಷಕ ರಾಮಚಂದ್ರ, ಶಿಕ್ಷಕ ಕೋಟಿಯಪ್ಪ ಪೂಜಾರಿ, ಅಶ್ರಫ್, ಉಪವಲಯಾರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ರೋಟರಿ ಸೆಂಟ್ರಲ್ ನಿರ್ದೇಶಕ ರಾಕೇಶ್ ಶೆಟ್ಟಿ  ಉಪಸ್ಥಿತರಿದ್ದರು. 

ರೋಟರಿ ಸೆಂಟ್ರಲ್ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಸ್ವಾಗತಿಸಿ, ಪೂರ್ವಾಧ್ಯಕ್ಷ ರಫೀಕ್ ದರ್ಬೆ ವಂದಿಸಿದರು.

ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

Posted by Vidyamaana on 2024-02-29 15:25:20 |

Share: | | | | |


ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ದ.ಕ. ಜಿಲ್ಲೆಯ ವಿವಿಧ ರೂಟ್‌ಗಳಲ್ಲಿ ಚಲಿಸುವ ಎಲ್ಲಾ ಸಾರ್ವಜನಿಕ ಬಸ್‌ಗಳಲ್ಲಿ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿದಾವಿತ್ ಸಲ್ಲಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ ಮಾಲಕರು ಅಫಿದಾವಿತ್ ಸಲ್ಲಿಸಬೇಕು ಎಂದು ಡಿಸಿ ಆರ್‌ಟಿಒಗೆ ನಿರ್ದೇಶನ ನೀಡಿದರು. 


ಸಾರ್ವಜನಿಕರ ಜೀವರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು. ಇದರಲ್ಲಿ ನಿರ್ಲಕ್ಷ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಬಸ್‌ಗಳಲ್ಲಿ ಬಾಗಿಲನ್ನು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿವೆೆ. ಜನಸಂಪರ್ಕ ಸಭೆಗಳಲ್ಲಿಯೂ ಮನವಿಗಳು ಬಂದಿವೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತಿತರ ರಾಜ್ಯಗಳಲ್ಲೂ ಬಸ್‌ಗಳಲ್ಲಿ ಬಾಗಿಲು ಅಳವಡಿಸಿ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿಯೂ ಸಿಟಿ ಬಸ್‌ಗಳಲ್ಲಿ ಬಾಗಿಲು ಇರುವುದರಿಂದ ಸಾರ್ವಜನಿಕರ ಸಂಚಾರನಿರಾತಂಕವಾಗಿದೆ. ಇದರಿಂದ ಸಂಚಾರ ವ್ಯವಸ್ಥೆಯೂ ಸುಗಮವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೂ ಜಾರಿಗೆ ತರುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. 

ಫ್ಲೈಓವರ್ ಕತ್ತಲು: ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ 

ರಾ.ಹೆ.ಯಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಸುರತ್ಕಲ್, ಕೂಳೂರು, ಕೊಟ್ಟಾರ ಚೌಕಿ, ಕುಂಟಿಕಾನ, ಪಂಪ್‌ವೆಲ್ ಮೇಲ್ಸೇತುವೆಗಳಲ್ಲಿ ದಾರಿದೀಪದ ವ್ಯವಸ್ಥೆ ಇಲ್ಲದೆ ರಾತ್ರಿ ವೇಳೆ ಕತ್ತಲು ಆವರಿಸಿರುವ ಬಗ್ಗೆ ಜಿಲ್ಲಾಧಿಕಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 

ಕಳೆದ 10 ವರ್ಷಗಳಿಂದ ಈ ಸಮಸ್ಯೆ ಇದ್ದರೂ, ರಾ.ಹೆ. ಪ್ರಾಧಿಕಾರವು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಮಂಗಳೂರು ಮನಪಾದೊಂದಿಗೂ ಚರ್ಚಿಸಿಲ್ಲ. ಇದರಿಂದ ಹಲವಾರು ಅಪಘಾತಗಳು ಸಂಭವಿಸಿ, ಜೀವಹಾನಿಯಾಗಿರುವ ಘಟನೆಗಳು ನಡೆದಿವೆ.ಹೆದ್ದಾರಿಯ ಮೂಲ ಯೋಜನೆಯಲ್ಲಿಯೇ ಇದನ್ನು ಯಾಕೆ ಸೇರಿಸಿಲ್ಲ ಎಂಬುದರ ಬಗ್ಗೆ ವಿವರಣೆ ನೀಡುವಂತೆ ಜಿಲ್ಲಾಧಿಕಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದರು. 


ಜಿಲ್ಲೆಯ ಹಲವೆಡೆ ವಿವಿಧ ಕಾಮಗಾರಿಗಳಿಗಾಗಿ ಕೆಲವು ಏಜನ್ಸಿಗಳು ಅನುಮತಿ ಇಲ್ಲದೆ ಲೋಕೋಪಯೋಗಿ ರಸ್ತೆಗಳನ್ನು ಅಗೆದು, ಪೈಪ್, ಕೇಬಲ್ ಅಳವಡಿಸಿರುವ ಬಗ್ಗೆ ದೂರುಗಳು ಬಂದಿದೆ. ತಕ್ಷಣ ಅಂತಹವರಿಗೆ ನೊಟೀಸ್ ಜಾರಿ ಮಾಡಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು. 

ಸ್ಟೇಟ್‌ಬ್ಯಾಂಕ್ ವೃತ್ತ ಸಮಸ್ಯೆ 

ನಗರದ ಹೃದಯಭಾಗದ ಸ್ಟೇಟ್‌ಬ್ಯಾಂಕ್ ಬಳಿಯ ಹ್ಯಾಮಿಲ್ಟನ್ ವೃತ್ತವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ವಾಹನ ಸವಾರರು ತೀವ್ರಗೊಂದಲಕ್ಕೀಡಾಗುತ್ತಿದ್ದಾರೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ತಿಳಿಸಿದರು. 


ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಡಿ.ಸಿ. ಕಚೇರಿಯ ಮುಂದಿನ ವೃತ್ತವೇ ಈ ರೀತಿ ಅನಿಶ್ಚಿತತೆ ಸ್ಥಿತಿಯಲ್ಲಿ ನಿಲ್ಲಿಸಿರುವುದು ಸರಿಯಲ್ಲ. ಈ ವೃತ್ತದ ಸುತ್ತಮುತ್ತಲಿನಲ್ಲಿ ಪಾರ್ಕಿಂಗ್, ಫ್ಲೆಕ್ಸ್, ಕಟೌಟ್ ಸಮಸ್ಯೆಯೂ ಇದೆ. ಯಾವುದೇ ಸ್ಮಾರ್ಟ್‌ಸಿಟಿ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯವಾಗಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ಇನ್ನೊಂದು ಸಮಸ್ಯೆ ಸೃಷ್ಟಿಯಾಗಬಾರದು. ಈ ನಿಟ್ಟಿನಲ್ಲಿ ನಗರಪಾಲಿಕೆ, ನಗರ ಪೊಲೀಸ್ ಮತ್ತು ಸ್ಮಾರ್ಟ್‌ಸಿಟಿ ಅಧಿಕಾರಿಗಳು ಸಮನ್ವಯದಿಂದ ಸ್ಟೇಟ್ ಬ್ಯಾಂಕ್ ವೃತ್ತ ಸಂಚಾರ ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥ ಮಾಡಬೇಕು ಎಂದು ಸೂಚಿಸಿದರು. ನಗರದ ಲೇಡಿಹಿಲ್, ಕಂಕನಾಡಿ, ವೆಲೆನ್ಸಿಯಾ ಮತ್ತಿತರ ಕಡೆ ಸಂಜೆಯಾಗುತ್ತಿದ್ದಅತೆ ಹಳೆಯ ವಾಹನಗಳನ್ನು ರಸ್ತೆಯಲ್ಲಿಯೇ ನಿಲ್ಲಿಸಿ ಅದರಲ್ಲಿ ತಿಂಡಿ ತಿನಿಸು ಮಾರಾಟ ಮಾಡಲಾಗುತ್ತಿದೆ. ರಸ್ತೆ, ಫುಟ್‌ಪಾತ್ ಅತಿಕ್ರಮಿಸಿ ವ್ಯಾಪಾರ ಮಾಡಲಾಗುತ್ತಿದ್ದು, ಇಲ್ಲಿಗೆ ಬರುವ ಗ್ರಾಹಕರ ವಾಹನಗಳನ್ನು ರಸ್ತೆಯಲ್ಲಿಯೇ ನಿಲ್ಲಿಸಲಾಗುತ್ತಿದೆ. ಇದರಿಂದ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ಸಭೆಯಲ್ಲಿ ದೂರು ವ್ಯಕ್ತವಾಯಿತು. ಈ ಬಗ್ಗೆ ತಪಾಸಣೆ ನಡೆಸಿ ಕ್ರಮಕೈಗೊಳ್ಳುವಂತೆ ಮಹಾನಗರಪಾಲಿಕೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು. 

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಉಪ ಪೊಲೀಸ್ ಆಯುಕ್ತ ದಿನೇಶ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ಆರ್‌ಟಿಒ ಶ್ರೀಧರ್ ಮಲ್ನಾಡ್, ಲೋಕೋಪಯೋಗಿ ಇಲಾಖೆಯ ಕಾರ್ಯಕಾರಿ ಇಂಜಿನಿಯರ್ ಅಮರನಾಥ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.



Leave a Comment: