ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

Posted by Vidyamaana on 2024-02-07 14:56:48 |

Share: | | | | |


ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.


ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದರು. ‘ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಿದು. ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Posted by Vidyamaana on 2024-02-04 16:21:44 |

Share: | | | | |


ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

ಉಜಿರೆ:ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಗೆ ಲಾರಿಯಡಿಗೆ ಸಿಲುಕಿ ಬಸ್ ಕಾಯುತಿದ್ದ ಅಮಾಯಕರು ಬಲಿಯಾದ ಘಟನೆ. ಉಜಿರೆ ಸಮೀಪ ಮಧ್ಯಾಹ್ನ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ. ಸಾವನ್ನಪ್ಪಿದವರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ರಸ್ತೆಯಲ್ಲಿ ವಾಹನ ಸಂಚಾರ ಬ್ಲಾಕ್ ಆಗಿದೆ.

ವಿಟ್ಲ‌ಮುಡ್ನೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ

Posted by Vidyamaana on 2024-04-07 14:05:49 |

Share: | | | | |


ವಿಟ್ಲ‌ಮುಡ್ನೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಯನ್ನು ನಿಮಗೆ ತಲುಪಿಸಿ, ನುಡಿದಂತೆ ನಡೆದು ಇದೀಗ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದೇವೆ ಹರಸಿ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ವಿಟ್ಲ ಮುಡ್ನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಜನ ನೆಮ್ಮದಿಯಿಂದ ಇರಲು ಸಾಧ್ಯ. ಗೃಹಲಕ್ಣ್ಮಿ ಯೋಜನೆಯ ಎರಡು ಸಾವಿರ ಹಣ ಎಲ್ಲರ ಮನೆ ಬೆಳಗಿಸಿದೆ.‌ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಕುಟುಂಬಕ್ಕೆ ವಾರ್ಷಿಕ ಒಂದು ಲಕ್ಷ ಹಣ ನೀಡಲಿದ್ದೇವೆ ಎಂದು ಹೇಳಿದರು. 

ಉಪ್ಪಿನಂಗಡಿ ಪೊಲೀಸರ ಎರಡು ಕಡೆ ಪ್ರತ್ಯೇಕ ಕಾರ್ಯಾಚರಣೆ : ನಾಲ್ವರು ಗಾಂಜಾ ವ್ಯಸನಿಗಳ ದಸ್ತಗಿರಿ

Posted by Vidyamaana on 2023-09-03 10:45:47 |

Share: | | | | |


ಉಪ್ಪಿನಂಗಡಿ ಪೊಲೀಸರ ಎರಡು ಕಡೆ ಪ್ರತ್ಯೇಕ ಕಾರ್ಯಾಚರಣೆ : ನಾಲ್ವರು ಗಾಂಜಾ ವ್ಯಸನಿಗಳ ದಸ್ತಗಿರಿ

ಉಪ್ಪಿನಂಗಡಿ, : ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ, ಸರಳಿಕಟ್ಟೆ-ಮೂಡಡ್ಕ ಹಾಗೂ ಇಳಂತಿಲ ಗ್ರಾಮದ ರಿಫಾಯಿನಗರ ಎಂಬಲ್ಲಿ ಪ್ರತ್ಯೇಕವಾಗಿ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಗಾಂಜಾ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. 


ಬಂಧಿತರನ್ನು ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್ (24) ಹಾಗೂ ಅಬ್ದುಲ್ ಸಲೀಂ (24), ಬುಡೋಳಿ ನಿವಾಸಿ ಸಹ್ಯಾಝ್ ಅಹಮ್ಮದ್ (23), ಬಿಳಿಯೂರು ಗ್ರಾಮದ ನಿವಾಸಿ ಸಲೀಂ ಹುಸೈನ್ (40) ಎಂದು ಹೆಸರಿಸಲಾಗಿದೆ. 


ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟ ಹಿನ್ನಲೆಯಲ್ಲಿ ಅವರ ವಿರುದ್ದ ಎನ್ ಡಿ ಪಿ ಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಂಧಿತರಿಂದ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಅಧಿಕಾರ ಖಚಿತವೆಂದು ನಂಬಿ 22 ಲ್ಯಾಂಡ್‌ ಕ್ರೂಸರ್ ಖರೀದಿಸಿದ್ದ ಕೆಸಿಆರ್: ರೇವಂತ್

Posted by Vidyamaana on 2023-12-28 12:07:33 |

Share: | | | | |


ಅಧಿಕಾರ ಖಚಿತವೆಂದು ನಂಬಿ 22 ಲ್ಯಾಂಡ್‌ ಕ್ರೂಸರ್ ಖರೀದಿಸಿದ್ದ ಕೆಸಿಆರ್: ರೇವಂತ್

ತೆಲಂಗಾಣ:ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂಬ ಅತಿಯಾದ ಆತ್ಮವಿಶ್ವಾಸದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಸರ್ಕಾರ ಸುಮಾರು ₹66 ಕೋಟಿ ಖರ್ಚು ಮಾಡಿ 22 ಟೊಯೊಟಾ ಲ್ಯಾಂಡ್ ಕ್ರೂಸರ್‌ ಕಾರುಗಳನ್ನು ಖರೀದಿಸಿತ್ತು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇವಂತ್‌, ಹಿಂದಿನ ಸರ್ಕಾರದ ದುಂದು ವೆಚ್ಚದಿಂದ ಜನರು ಸಮಸ್ಯೆ ಎದುರಿಸಬೇಕಾಯಿತು ಎಂದರು.


ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನನಗಾಗಿ ಹೊಸ ವಾಹನಗಳನ್ನು ಖರೀದಿಸದಂತೆ ಅಧಿಕಾರಿಗಳಿಗೆ ತಿಳಿಸಿದ್ದೆ. ಹಳೆ ಕಾರುಗಳನ್ನೇ ರಿಪೇರಿ ಮಾಡಿ ಬಳಸುವಂತೆ ಸೂಚಿಸಿದ್ದೆ. ಈ ವೇಳೆ ಅಧಿಕಾರಿಗಳು ಹೊಸ ಕಾರುಗಳನ್ನು ಈಗಾಗಲೇ ಖರೀದಿಸಿರುವ ಬಗ್ಗೆ ನನಗೆ ಮಾಹಿತಿ ನೀಡಿದರು ಎಂದು ಹೇಳಿದ್ದಾರೆ.


ಹಿಂದಿನ ಸರ್ಕಾರ 22 ಲ್ಯಾಂಡ್ ಕ್ರೂಸರ್ ವಾಹನಗಳನ್ನು ಖರೀದಿಸಿತ್ತು. ಅವೆಲ್ಲವೂ ವಿಜಯವಾಡದಲ್ಲಿವೆ. ನೂತನ ಮುಖ್ಯಮಂತ್ರಿ(ಕೆಸಿಆರ್) ಪ್ರಮಾಣ ವಚನ ಸ್ವೀಕರಿಸಿದ ಮೇಲೆ ಅವುಗಳನ್ನು ತರಲು ಆಲೋಚಿಸಿದ್ದೆವು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.ಇವುಗಳೆಲ್ಲವೂ ಬುಲೆಟ್ ಪ್ರೂಫ್‌ ಕಾರುಗಳಾಗಿದ್ದು, ಒಂದು ಕಾರಿನ ಬೆಲೆ ಸುಮಾರು ₹3 ಕೋಟಿ. ಈ ರೀತಿಯಲ್ಲಿ ಕೆಸಿಆರ್ ಸರ್ಕಾರ ರಾಜ್ಯದ ಸಂಪತ್ತನ್ನು ಕೊಳ್ಳೆ ಹೊಡೆಯಲು ಹೊರಟಿತ್ತು ಎಂದರು.

ಪರಶುರಾಮ ಥೀಂ ಪಾರ್ಕ್ ಹಗರಣ ಸಿಐಡಿ ತನಿಖೆಗೆ ಸಿದ್ದರಾಮಯ್ಯ ಆದೇಶ; ಬಿಜೆಪಿ ಶಾಸಕನಿಗೆ ಎದುರಾಗುತ್ತಾ ಸಂಕಷ್ಟ?

Posted by Vidyamaana on 2024-02-09 07:41:42 |

Share: | | | | |


ಪರಶುರಾಮ ಥೀಂ ಪಾರ್ಕ್ ಹಗರಣ ಸಿಐಡಿ ತನಿಖೆಗೆ ಸಿದ್ದರಾಮಯ್ಯ ಆದೇಶ; ಬಿಜೆಪಿ ಶಾಸಕನಿಗೆ ಎದುರಾಗುತ್ತಾ ಸಂಕಷ್ಟ?

ಉಡುಪಿ : ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.


ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು.


ಆದೇಶದಲ್ಲೇನಿದೆ..!??


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಫೆ.2 ರಂದು ಬರೆದ ಪತ್ರದಲ್ಲಿ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಮಾಡಿರುವುದು ತಿಳಿದುಬಂದಿದೆ. ಈ ಕುರಿತು ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ಸಿಒಡಿ ಅಥವಾ ಉನ್ನತ ಮಟ್ಟದ ತನಿಖೆ ನಡೆದಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿನಂತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಒಡಿ ತನಿಖೆಗೆ ಆದೇಶಿಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

Recent News


Leave a Comment: