ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಅಶೋಕ್ ಕುಮಾರ್ ರೈ ಗೆ ಸಿಕ್ತು ಭರ್ಜರಿ ಗೆಲುವಿನ ರುಚಿ

Posted by Vidyamaana on 2023-05-13 08:01:56 |

Share: | | | | |


ಅಶೋಕ್ ಕುಮಾರ್ ರೈ ಗೆ  ಸಿಕ್ತು ಭರ್ಜರಿ ಗೆಲುವಿನ ರುಚಿ

ಪುತ್ತೂರು: ರಾಜ್ಯದ ಗಮನ ಸೆಳೆದಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಶೋಕ್ ಕುಮಾರ್ ರೈ 3351ಮತಗಳಿಂದ  ಜಯಭೇರಿ ಭಾರಿಸಿದ್ದಾರೆ.


ಜನಮತಗಣನೆಯಲ್ಲಿ ಮುನ್ನಡೆ ಸಾಧಿಸಿರುವ ಅಶೋಕ್ ಕುಮಾರ್ ರೈ ಅವರು, ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಿರೀಕ್ಷೆಯಂತೆ, ಪುತ್ತೂರಿನಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ.

ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ನಡುವಿನ ಪೈಪೋಟಿಯ ಲಾಭವನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡಿದೆ. ಬಿಜೆಪಿಯ ಮತಗಳು ವಿಭಜನೆಗೊಂಡಿದ್ದು ಹಾಗೂ ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗಿದ್ದರಿಂದ ಗೆಲುವಿನ ಪತಾಕೆ ಹಾರಿಸಲು ಸಾಧ್ಯವಾಯಿತು. ಅಶೋಕ್ ಕುಮಾರ್ ರೈ ಅವರ ಮುಂದಾಳುತ್ವ ಕಾಂಗ್ರೆಸಿಗೆ ವರದಾನವಾಗಿದೆ.

ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

Posted by Vidyamaana on 2023-07-10 16:41:37 |

Share: | | | | |


ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

ಚಿಕ್ಕಮಗಳೂರು: ಜಿನುಗು ಮಳೆಯ ನಡುವೆಯೇ ಕಾಫಿನಾಡಿನ ಪ್ರವಾಸಿ ತಾಣಗಳತ್ತ ಪ್ರತಿನಿತ್ಯವೂ ಸಾಗರೋಪಾದಿಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರವಾಸಿಗರು ರಸ್ತೆಗಳ ಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ಹುಚ್ಚಾಟ ಮೆರೆಯುತ್ತಿದ್ದಾರೆ.

ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರಿಗೆ ಹೇಳೋರಿಲ್ಲ-ಕೇಳೋರಿಲ್ಲ ಎಂಬಂತಾಗಿದ್ದು, ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಪ್ರವಾಸಿಗರು ಮುಂದಾಗಿದ್ದಾರೆ. ಈ ಭಾಗದಲ್ಲಿ ಮೊದಲೇ ಕಿರಿದಾದ ರಸ್ತೆಗಳು ಇದ್ದು, ವಾಹನ ಸವಾರರಿಗೆ ಇಕ್ಕಟ್ಟು ಆದಂತಾಗಿದೆ. ಇಂತಹದ್ದರಲ್ಲೂ ಕೆಲವರು ರಸ್ತೆ ಮಧ್ಯೆಯೆ ಕಾರ್ಗಳನ್ನು ನಿಲ್ಲಿಸಿ ಪುಂಡಾಟ ಮೆರೆಯುವ ಮೂಲಕ ಇನ್ನುಳಿದ ವಾಹನ ಸವಾರರಿಗೂ ಕಿರಿಕಿರಿ ಆಗುವಂತೆ ಮಾಡುತ್ತಿದ್ದಾರೆ. ದಟ್ಟ ಮಂಜು ಕವಿದ ದಾರಿಯಲ್ಲಿ ವಾಹನ ಪಾರ್ಕಿಂಗ್ ಮಾಡಿ ಡ್ಯಾನ್ಸ್ ಮಾಡುವ ಭರದಲ್ಲಿ ಇನ್ನುಳಿದ ವಾಹನಗಳಿಗೂ ಅಡ್ಡಲಾಗಿ ನಿಲ್ಲುತ್ತಿದ್ದಾರೆ.

ಇದರಿಂದ ಅಪಾಘಾತ, ಟ್ರಾಫಿಕ್ ಜಾಮ್ಗೂ ಆಹ್ವಾನ ನೀಡಿದಂತಾಗಿದೆ. ಅಷ್ಟೇ ಅಲ್ಲದೆ ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಕೂಡ ಕೆಲವು ಪ್ರವಾಸಿಗರು ಮುಂದಾಗುತ್ತಿದ್ದಾರೆ. ಈ ಹುಚ್ಚಾಟದಿಂದ ಬೇಸತ್ತ ಸ್ಥಳೀಯರು ಜಲಪಾತಗಳ ಬಳಿ ಪೊಲೀಸರು ಬೀಟ್ ಹಾಕುವಂತೆ ಮನವಿ ಮಾಡಿದ್ದಾರೆ.

ಬೊಳುವಾರಿನಲ್ಲಿ ನೆಲಕ್ಕುರುಳಿದ ಬೃಹತ್ ಮಾವಿನ ಮರ

Posted by Vidyamaana on 2024-04-27 21:58:21 |

Share: | | | | |


ಬೊಳುವಾರಿನಲ್ಲಿ ನೆಲಕ್ಕುರುಳಿದ ಬೃಹತ್ ಮಾವಿನ ಮರ

ಪುತ್ತೂರು: ಪುತ್ತೂರು ಬೊಳುವಾರು ಬಸ್ ಪ್ರಯಾಣಿಕರ ತಂಗುದಾಣದ ಪಕ್ಕದಲ್ಲಿದ್ದ ಭಾರಿ ಗಾತ್ರದ ಮಾವಿನ ಮರವೊಂದು ಧರಶಾಯಿಯಾದ ಘಟನೆ ಎ.27ರಂದು ನಡೆದಿದ್ದು, ಘಟನಾ ಸ್ಥಳಕ್ಮೆ ಶಾಸಕರು‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದು‌ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

 ಬಿದ್ದ ಮರದಲ್ಲಿದ್ದ ಮಾವಿನ ಕಾಯಿ ಕೊಯ್ಯಲು ಜನ ಮುಗಿ ಬಿದ್ದಿದ್ದಾರೆ.ಬೊಳುವಾರು ಬಸ್ ಪ್ರಯಾಣಿಕರ ತಂಗುದಾಣದ ಪಕ್ಕದಲ್ಲೇ ಹಲವು ವರ್ಷಗಳಿಂದ ಇದ್ದ ಮಾವಿನ ಮರವೊಂದು ಸಂಜೆ ವೇಳೆ ಆಕಸ್ಮಿಕವಾಗಿ ಧರಶಾಯಿಯಾಗಿದೆ.

ನ್ಯೂ ಮಾನಕ ಜ್ಯುವೆಲ್ಸ್ ಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

Posted by Vidyamaana on 2023-05-29 17:34:44 |

Share: | | | | |


ನ್ಯೂ ಮಾನಕ ಜ್ಯುವೆಲ್ಸ್ ಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು: ಮಾನಕ ಜ್ಯುವೆಲ್ಸಿನ ನೂತನ ಶೋರೂಂನ 2ನೇ ಮಳಿಗೆ ನ್ಯೂ ಮಾನಕ ಜ್ಯುವೆಲ್ಸ್ ಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.

ಇದೇ ಸಂದರ್ಭ ಸಂಸ್ಥೆಯ ಮಾಲಕರಾದ ಸಿದ್ಧನಾಥ್ ಅವರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಶಾಲು ಹೊದಿಸಿ, ಶ್ರೀ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಫೊಟೋ ನೀಡಿ ಗೌರವಿಸಿದರು.

ಜಿಲ್ಲೆಯ ಮಂಗಳೂರು ಬಂಟ್ವಾಳ ಉಳ್ಳಾಲ ಮೂಡುಬಿದರೆ ಶಾಲೆಗಳಿಗೆ ರಜೆ

Posted by Vidyamaana on 2023-07-04 02:48:11 |

Share: | | | | |


ಜಿಲ್ಲೆಯ ಮಂಗಳೂರು ಬಂಟ್ವಾಳ ಉಳ್ಳಾಲ ಮೂಡುಬಿದರೆ ಶಾಲೆಗಳಿಗೆ ರಜೆ


ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಮೂಡುಬಿದರೆ, ಉಳ್ಳಾಲ ತಾಲೂಕುಗಳ ಅಂಗನವಾಡಿ, ಶಾಲಾ - ಕಾಲೇಜುಗಳಿಗೆ ಜುಲೈ 4ರಂದು ರಜೆ‌ ಘೋಷಿಸಿ ಜಿಲ್ಲಾಧಿಕಾರಿ‌ ಆದೇಶ ಹೊರಡಿಸಿದ್ದಾರೆ.


ಪುತ್ತೂರಿನಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಇಲ್ಲಿನ ಶಾಲಾ - ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ತಿಳಿಸಿದ್ದಾರೆ.

ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಕ್ರಮಗಳನ್ನು ಘೋಷಿಸಿದೆ. ಅದರಂತೆ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ, ಪ್ರವಾಸಿಗರಿಗೆ ಎಚ್ಚರಿಕೆ ಹಾಗೂ ಸಮುದ್ರಕ್ಕೆ ಇಳಿಯದಂತೆಯೂ ಸೂಚನೆ ನೀಡಲಾಗಿದೆ.

ದ.ಕ.ದಲ್ಲಿ ತಹಶೀಲ್ದಾರ್‌ಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ. ಉಳಿದ ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಸೂಚಿಸಲಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.

ಪುತ್ತೂರು : ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆರತಿ ಮೃತ್ಯು

Posted by Vidyamaana on 2024-03-05 07:22:31 |

Share: | | | | |


ಪುತ್ತೂರು : ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆರತಿ ಮೃತ್ಯು

ಪುತ್ತೂರು : ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.


ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆರತಿ ಮೃತ ಯುವತಿ.ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ., ಅಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.

ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ.

ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.ಮೃತ ವಿದ್ಯಾರ್ಥಿನಿ ತಂದೆ, ತಾಯಿ ಮತ್ತು ಓರ್ವ ಸಹೋದರರನ್ನು ಅಗಲಿದ್ದಾರೆ.



Leave a Comment: