ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಸಂಸತ್​​ ದಾಳಿ ; ವಿಧಾನಸಭೆಯಲ್ಲಿ ಬಿಜೆಪಿ - ಕಾಂಗ್ರೆಸ್ ಮಧ್ಯೆ ವಾಕ್ಸಮರ, ಕಾಂಗ್ರೆಸ್ ಸಂಸದರು ಪಾಸ್ ಕೊಟ್ಟಿದ್ರೆ ಏನಾಗುತ್ತಿತ್ತು ಸ್ವಾಮಿ

Posted by Vidyamaana on 2023-12-13 21:33:56 |

Share: | | | | |


ಸಂಸತ್​​ ದಾಳಿ ; ವಿಧಾನಸಭೆಯಲ್ಲಿ ಬಿಜೆಪಿ - ಕಾಂಗ್ರೆಸ್ ಮಧ್ಯೆ ವಾಕ್ಸಮರ, ಕಾಂಗ್ರೆಸ್ ಸಂಸದರು ಪಾಸ್ ಕೊಟ್ಟಿದ್ರೆ ಏನಾಗುತ್ತಿತ್ತು ಸ್ವಾಮಿ

ಬೆಳಗಾವಿ, ಡಿ 13: ಸಂಸತ್​​ನಲ್ಲಿ ನಡೆದ ಭದ್ರತಾ ಲೋಪ ಘಟನೆ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ಸಂಸತ್ ಘಟನೆ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ವಾಕ್ಸಮರಕ್ಕೆ ಕಾರಣವಾಯಿತು. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಸತ್ ದಾಳಿ ಘಟನೆಯನ್ನು ಎಲ್ಲರೂ ಖಂಡಿಸಬೇಕಾಗುತ್ತದೆ. ಸಂಸತ್​ಗೆ ಹೋಗಿ ಯಾರಿಂದಲೋ ಪಾಸ್ ಪಡೆದು ಹೋಗಿದ್ದಾರೆ. ಸಂಸತ್ ಸದಸ್ಯರೊಬ್ಬರಿಂದ ಪಾಸ್ ಪಡೆದಿದ್ದಾರೆ ಎನ್ನಲಾಗಿದೆ.‌ ಪಾಸ್​ಗಳನ್ನು ಕೊಡುವಾಗ ಗೊತ್ತಿರುವವರಿಗೆ ಮಾತ್ರ ಕೊಡಬೇಕು. ಗೊತ್ತಿಲ್ಲದವರಿಗೆ ಪಾಸ್ ಕೊಡಬಾರದು. ಈ ಘಟನೆ ಮೇಲ್ನೋಟಕ್ಕೆ ಭದ್ರತಾ ಲೋಪವಾಗಿದೆ ಎಂದರು.


ಭದ್ರತಾ ಸಿಬ್ಬಂದಿ ಅವರನ್ನು ಸರಿಯಾಗಿ ತಪಾಸಣೆ ಮಾಡಿಲ್ಲ ಅನ್ಸುತ್ತೆ. ಸಚಿವರಿಗೆ ಸೇರಿ ಎಲ್ಲರಿಗೂ ತಪಾಸಣೆ ಮಾಡ್ತಾರೆ. ತಪಾಸಣೆ ಮಾಡಿದರೂ ಹೇಗೆ ಸ್ಮೋಕ್ ಸ್ಪ್ರೇ‌ ಮಾಡಿದ್ರು?. ನಾನು ಅನುಮಾನ ವ್ಯಕ್ತಪಡಿಸ್ತಿಲ್ಲ.‌ ಇಲ್ಲೂ ಕೂಡಾ ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕು.‌ ಪಾಸ್ ಪಡೆದು ಒಳ್ಳೆಯವ್ರೂ ಬರಬಹುದು, ಕೆಟ್ಟವರೂ ಬರಬಹುದು, ಉಗ್ರರೂ ಬರಬಹುದು. ಹಿಂದೆ ಸಂಸತ್​ಗೆ ಉಗ್ರರು‌ ನುಗ್ಗಿದ್ರು. ಗೃಹ ಸಚಿವರ ಬಳಿ ಅಧಿವೇಶನಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಕೊಡಲು ಹೇಳ್ತೀನಿ. ಸ್ಪೀಕರ್​ ಅವರು ಕೂಡಾ ನಿಮ್ಮ ಸಿಬ್ಬಂದಿಗೆ ಹೇಳಿ ಭದ್ರತಾ ಲೋಪ ಆಗದಂತೆ‌ ನೋಡಿಕೊಳ್ಳಬೇಕು ಎಂದು ಹೇಳಿದರು.ಪಾಸ್ ಕೊಡುವಾಗಲೂ ಎಚ್ಚರಿಕೆ ವಹಿಸಬೇಕು.‌ ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸ್ತೇನೆ. ಅದೃಷ್ಟವಶಾತ್​ ಸಂಸತ್​ನಲ್ಲಿ ಏನೂ ಆಗಿಲ್ಲ. ತಕ್ಷಣ ಸ್ಪೀಕರ್ ಕಲಾಪ ಮುಂದೂಡಿ ಎಲ್ಲರೂ ಹೊರಗೆ ಹೋಗಲು ಅವಕಾಶ ಮಾಡಿದ್ರು. ಈ ಕುರಿತು ಬಹಳ ಎಚ್ಚರಿಕೆ ವಹಿಸೋದು ಒಳ್ಳೆಯದು. ಇಂತಹ ಘಟನೆ ಮರುಕಳಿಸಬಾರದು ಎಂದರು.


ಪ್ರತಾಪ್ ಸಿಂಹ ಇಂಥವರಿಗೆ ಏಕೆ ಪಾಸ್ ಕೊಟ್ರು?:


ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಸಂಸದ ಪ್ರತಾಪ್ ಸಿಂಹ ಬಹಳ ಬುದ್ಧಿವಂತ. ಅವರ್ಯಾಕೆ ಇಂಥವರಿಗೆ ಪಾಸ್ ಕೊಟ್ರೋ. ಅವರ ಹೆಸರು ಹೇಳಲು ಇಲ್ಲಿ ನನಗೆ ಇಷ್ಟ ಇಲ್ಲ.‌ ಎಲ್ರೂ ಫೋನ್ ಮಾಡ್ತಿದ್ದಾರೆ, ಏನು, ಯಾಕೆ ಅಂತ. ನಾನು ಟಿವಿಯಲ್ಲಿ ನೋಡಿದೆ. ಮೇಲಿಂದಲೇ ಅವರು ಜಂಪ್ ಮಾಡಿದಾರೆ. ಸಂಸದರೆಲ್ಲ ಇಲಿಗಳಂತೆ ಬಚ್ಚಿಕೊಳ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿಪಕ್ಷದಲ್ಲಿರುವವರೇ ಹೊಣೆ ಹೊರಬೇಕು. ಅವರು ಏನು ಬುದ್ಧಿವಾದ ಹೇಳ್ತಾರೋ ಹೇಳಲಿ ಎಂದರು.ಡಿಕೆಶಿ ರಾಜಕೀಯ ಬೆರೆಸುತ್ತಿದ್ದಾರೆ:


ಈ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಇದು ಖಂಡನೆ ಮಾಡುವ ವಿಚಾರ. ಸಿಎಂ, ಗೃಹ ಸಚಿವರು ಚೆನ್ನಾಗಿಯೇ ಮಾತಾಡಿದ್ರು. ಆದರೆ ಡಿಕೆಶಿ ಅವರು ಈ ವಿಚಾರ ರಾಜಕೀಯಕ್ಕೆ ಬಳಸಿಕೊಂಡ್ರು. ಅವರ ತಮ್ಮನೂ ಸಂಸದ, ಅವರೇ ಪಾಸ್ ಕೊಟ್ಟಿದ್ದಿದ್ರೆ ಏನ್ ಮಾಡ್ತಿದ್ರಿ. ಡಿಕೆಶಿಗೆ ಅಶೋಕ್ ಟಾಂಗ್ ನೀಡಿದರು. ಈ ವೇಳೆ ಗದ್ದಲ ಏರ್ಪಟ್ಟಿತು.ಕಾಂಗ್ರೆಸ್ ಸಂಸದರು ಪಾಸ್ ಕೊಟ್ಟಿದ್ರೆ ಏನಾಗುತ್ತಿತ್ತು?:


ಈ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇದೇ ಪಾಸ್ ಕಾಂಗ್ರೆಸ್ ಸಂಸದರು ಕೊಟ್ಟಿದ್ದಿದ್ರೆ ಏನಾಗ್ತಿತ್ತು?. ಆಗ ಅಶೋಕ್, ಬಿಜೆಪಿಯವರು ಸುಮ್ನಿರ್ತಿದ್ರಾ?. ಆಗ‌ ನಮಗೆಲ್ಲ ದೇಶದ್ರೋಹದ ಪಟ್ಟ ಕಟ್ಟುತ್ತಿದ್ದರು. ಈಗ ಪ್ರತಾಪ್ ಸಿಂಹ ಬಗ್ಗೆ ಇವರ ನಿಲುವೇನು? ಎಂದು ಪ್ರಶ್ನಿಸಿದರು.


ಇಂತಹ ಘಟನೆಯನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸಂಸದರು ಕೊಟ್ಟಿದ್ದರೆ ಭಯೋತ್ಪಾದಕರ ಹಣೆ ಪಟ್ಟಿ ಕಟ್ತಿದ್ರು. ಇವರದು ಮಾತ್ರ ದೇಶಪ್ರೇಮ. ನಮ್ಮದು ಮಾತ್ರ ದೇಶ ದ್ರೋಹನಾ?.ಕಾಂಗ್ರೆಸ್ ಸಂಸದರಾಗಿದ್ದರೆ ಸುಮ್ಮನಿರ್ತಿದ್ರಾ? ಎಂದು ಆರ್.ಅಶೋಕ್​ಗೆ ನೇರ ಪ್ರಶ್ನೆ ಹಾಕಿದರು.ಕಾಂಗ್ರೆಸ್-ಬಿಜೆಪಿ ಮಧ್ಯೆ ವಾಕ್ಸಮರ:


ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ಮಧ್ಯೆ ತೀವ್ರ ಗದ್ದಲ ಏರ್ಪಟ್ಟಿತು. ಈ ಗದ್ದಲಕ್ಕೆ ಡಿಸಿಎಂ ಕಾರಣ ಎಂದು ಸುರೇಶ್ ಕುಮಾರ್ ಆಕ್ಷೇಪಿಸಿದರು. ಈ ವೇಳೆ ಸುರೇಶ್ ಕುಮಾರ್ ವಿರುದ್ಧ ತಿರುಗಿಬಿದ್ದ ಡಿಕೆಶಿ, ಕಾಂಗ್ರೆಸ್ ನವರು ಮಾಡಿದ್ರೆ ಸುಮ್ಮನಿರ್ತಿದ್ರಾ?. ಇಷ್ಟೊತ್ತಿಗೆ ನೀವು ಅಲ್ಲೋಲಕಲ್ಲೋಲ ಮಾಡಿಬಿಡ್ತಿದ್ರಿ ಎಂದು ತಿರುಗೇಟು ನೀಡಿದರು.

ಕೊಡಗು: ಕರ್ನಾಟಕದ 32 ಮೀ. ಉದ್ದದ ಗಾಜಿನ ಸೇತುವೆ ಉದ್ಘಾಟನೆ: ದ.ಭಾರತದ 2ನೇ ಸ್ಕಯ್ ವಾಕ್ ಬ್ರಿಡ್ಜ್

Posted by Vidyamaana on 2023-06-13 02:18:12 |

Share: | | | | |


ಕೊಡಗು: ಕರ್ನಾಟಕದ 32 ಮೀ. ಉದ್ದದ ಗಾಜಿನ ಸೇತುವೆ ಉದ್ಘಾಟನೆ: ದ.ಭಾರತದ 2ನೇ ಸ್ಕಯ್ ವಾಕ್ ಬ್ರಿಡ್ಜ್

ಮಡಿಕೇರಿ ಜೂ.12 : ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್‌ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ.

ಸುಮಾರು 5 ಟನ್ ಬಾರ ಹೊರುವ ಸಾಮರ್ಥ್ಯದ ಈ ಸೇತುವೆಯಲ್ಲಿ ಒಮ್ಮೆಗೆ 40-50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು. ಇದು ಕರ್ನಾಟಕದ ಮೊದಲ ಉದ್ದದ ಗ್ಲಾಸ್ ಸೇತುವೆಯಾಗಿದ್ದು, ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.

ನಂತರ ಮಾತನಾಡಿದ ಪೊನ್ನಣ್ಣ, ಕೊಡಗು ಪ್ರಕೃತಿ ದತ್ತವಾದ ನಿಸರ್ಗಕ್ಕೆ ಧಕ್ಕೆಯಾಗದ ವಿಚಾರವನ್ನು ಹೊರತುಪಡಿಸಿ ಅಭಿವೃದ್ಧಿ ಪಡಿಸಬೇಕು ಎಂದರು.

ಈ ಅಪರೂಪದ ಯೋಜನೆಯಿಂದ ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ. ಜೊತೆಗೆ ಅವಲಂಬಿತರಿಗೆ ಉದ್ಯೋಗವಕಾಶ ದೊರೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮ ನಿರೂಪಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ಭಾರತದ ಸ್ಟ್ರಾಟ್ ಲ್ಯಾಂಡ್ ದಕ್ಷಿಣದ ಕಾಶ್ಮೀರ ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇಂತಹ ಒಂದು ಅದ್ಭುತ ಯೋಜನೆ ಸ್ಥಾಪಿತವಾಗಿರುವುದು ಪ್ರವಾಸೋದ್ಯಮಕ್ಕೆ ಅಶೋದಯಕ ಬೆಳವಣಿಗೆ ಎಂದು ತಿಳಿಸಿದರು.ಟಿಕೆಟ್ ಕೌಂಟರನ್ನು ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್, ಪ್ಲೆಂಟೇಷನ್‌ನ ವಾಕ್ ಪಾಟ್‌ಅನ್ನು ಕೇಕಡ ಗಣಪತಿ ಹಾಗೂ ದೇವಯ್ಯ ಉದ್ಘಾಟಿಸಿದರು. ಫೋಟೋ ಪಾಯಿಂಟನ್ನು ಉದ್ಯಾಮಿ ಗ್ರೀನ್ ಲ್ಯಾಂಡ್ ಶರಿನ್ ಉದ್ಘಾಟಿಸಿದರು.

ಈ ಸಂದರ್ಭ ಓಂಕಾರೇಶ್ವರ ದೇವಾಲಯದ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ತುಳುವೆರ ಒಕ್ಕೂಟದ ಜಿಲ್ಲಾ ಖಜಾಂಚಿ ಪ್ರಭುರೈ, ಬೆಟ್ಟಗೇರಿ ಗ್ರಾ.ಪಂ ಸದಸ್ಯ ಗೋಪಾಲ, ಪ್ರಮುಖರಾದ ಮುಂಜಂದಿರ ಚಿಕ್ಕು ಕಾರ್ಯಪ್ಪ, ಅಜ್ಜಿಕುಟೀರ ನರೇನ್ ಕಾರ್ಯಪ್ಪ, ಮಿದೇರಿರ ನವೀನ್ ಹಾಜರಿದ್ದರು.

7ಲಕ್ಷ ರೂ.ಮೊತ್ತದ ಚೆಕ್ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ

Posted by Vidyamaana on 2023-09-24 07:31:17 |

Share: | | | | |


7ಲಕ್ಷ ರೂ.ಮೊತ್ತದ ಚೆಕ್ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ

ಮಣಿಪಾಲ: ಆಟೊ ರಿಕ್ಷಾದಲ್ಲಿ ಮರೆತು ಬಿಟ್ಟು ಹೋದ 7ಲಕ್ಷ ರೂ. ಮೊತ್ತದ ಚೆಕ್‌ ಹಾಗೂ ದಾಖಲೆ ಪತ್ರವನ್ನು ರಿಕ್ಷಾ ಚಾಲಕ ವಾರಸುದಾರರಿಗೆ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.


ಕುಂದಾಪುರ ನಿವಾಸಿ ಅನಂತ ದೇವಾಡಿಗ ಎಂಬವರು ಸೆ.18ರಂದು ಮಣಿಪಾಲ ರಿಕ್ಷಾ ನಿಲ್ದಾಣದಿಂದ ಸತೀಶ್ ಎಂಬವರ ರಿಕ್ಷಾದಲ್ಲಿ ಮಣಿಪಾಲದಿಂದ ಉಡುಪಿಗೆ ಬಾಡಿಗೆ ಮಾಡಿಕೊಂಡು ತೆರಳಿದ್ದರು. ಈ ವೇಳೆ ಅವರು ತಮ್ಮ ಕೈಯಲ್ಲಿದ್ದ ಚೆಕ್‌ ಹಾಗೂ ದಾಖಲಾತಿಗಳನ್ನು ರಿಕ್ಷಾದಲ್ಲಿಯೇ ಬಿಟ್ಟು ಹೋಗಿದ್ದರು. ಬಾಡಿಗೆ ಮುಗಿಸಿ ಮಣಿಪಾಲಕ್ಕೆ ಬಂದ ರಿಕ್ಷಾದಲ್ಲಿ ದಾಖಲಾತಿ ಬಿಟ್ಟು ಹೋಗಿ ರುವುದು ಸತೀಶ್ ಅವರ ಗಮನಕ್ಕೆ ಬಂತು.


ಈ ವಿಚಾರವನ್ನು ಸತೀಶ್, ತಮ್ಮ ಸಂಘದ ಅಧ್ಯಕ್ಷ ವಿಜಯ್ ಪುತ್ರನ್ ಹಿರೇಬೆಟ್ಟು ಅವರಿಗೆ ತಿಳಿಸಿದರು. ಬಳಿಕ ವಾರಸುದಾರರನ್ನು ಪತ್ತೆ ಹಚ್ಚ ಲಾಯಿತು.


ಮಣಿಪಾಲ ಪೊಲೀಸ್‌ ನಿರೀಕ್ಷಕ ದೇವರಾಜ್ ಹಾಗೂ ಎಸ್ಥೆಗಳಾದ ಅಕ್ಷಯ ಕುಮಾರಿ, ರಾಘವೇಂದ್ರ ಹಾಗೂ ಮನೋಹರ್ ಕುಮಾರ್‌ ಮೂಲಕ ಚೆಕ್‌ ಹಾಗೂ ದಾಖಲಾತಿಗಳನ್ನು ಹಸ್ತಾಂತರಿಸಲಾಯಿತು.

ಪುತ್ತೂರ್ದ ಪಿಲಿ ಯ ಊದು ಪೂಜೆ ಡೇಟ್ ಇಲ್ಲಿದೆ ನೋಡಿ!

Posted by Vidyamaana on 2023-10-15 08:24:18 |

Share: | | | | |


ಪುತ್ತೂರ್ದ ಪಿಲಿ ಯ ಊದು ಪೂಜೆ ಡೇಟ್ ಇಲ್ಲಿದೆ ನೋಡಿ!

ಪುತ್ತೂರು: ಪಿಲಿ ರಾಧಣ್ಣ ಮತ್ತು ಬಳಗದ ಪುತ್ತೂರ್ದ ಪಿಲಿ ಇದರ ಊದು ಪೂಜೆ ಕಾರ್ಯಕ್ರಮ ಅ. 23ರಂದು ಸಂಜೆ 7:30ಕ್ಕೆ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ.

ಪಿಲಿ ರಾಧಣ್ಣ ಮತ್ತು ಬಳಗದ 47ನೇ ವರ್ಷದ ಹುಲಿ ಕುಣಿತ ಕಾರ್ಯಕ್ರಮವು ಅ. 24 ರಂದು ಬೆಳಗ್ಗೆ 10 ಗಂಟೆಯಿಂದ ಹಲವು ಕಡೆಗಳಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸುಮಾರು 47 ವರುಷಗಳಿಂದ ಹುಲಿ ವೇಷ ಹಾಕಿ ಜನರನ್ನು ಮನರಂಜಿಸುತ್ತಿರುವ ಪಿಲಿ ರಾಧಣ್ಣ ಮತ್ತು ಬಳಗವು ಪುತ್ತೂರು ಮಾತ್ರವಲ್ಲದೇ ಜಿಲ್ಲೆಯ ಇನ್ನೂ ಹಲವು ಕಡೆಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ.

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

Posted by Vidyamaana on 2023-09-22 21:09:47 |

Share: | | | | |


ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ತಾಲೂಕಿನ ಸೋಣಂದೂರಿನಲ್ಲಿ ನಡೆದಿದೆ.


ಸೋಣಂದೂರು ಮುಂಡಾಡಿ ಮನೆ ನಿವಾಸಿಯಾಗಿರುವ ಪ್ರಶಾಂತ್‌ ಮೃತಪಟ್ಟವರು.


ಪ್ರಶಾಂತ್‌ ಸೆ.18 ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಮನೆಯವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.


ಘಟನೆಯ ಬಗ್ಗೆ ಮೃತನ ಸಂಬಂಧಿಯಾಗಿರುವ ಪ್ರತೀಕ್‌ ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!

Posted by Vidyamaana on 2023-12-25 12:55:35 |

Share: | | | | |


ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!

ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ.ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ನಿತ್ಯಾ (19) ಹೇಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ. ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿ ನಿತ್ಯಾ, ಹನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು.ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ನಿತ್ಯಾ ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲೇ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ ನೀಡಿದ್ದು,ನಿತ್ಯಾ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



Leave a Comment: