ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ

Posted by Vidyamaana on 2023-06-06 09:01:45 |

Share: | | | | |


ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ

ಮಂಗಳೂರು: ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.ಮಂಗಳೂರಿನಲ್ಲಿ ಪಶ್ಚಿಮ ವಲಯದ ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಗೃಹ‌ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ಕೋಮು‌ಸೌಹಾರ್ದ ಕಾಪಾಡಲು ಕಠಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ‌ ನೀಡಿದ್ದೇನೆ ಎಂದ ಅವರು ಮುಂದೆ‌ ಬೇರೆ ಕಡೆ ಅಗತ್ಯ‌ ಬಿದ್ದರೆ ಅಲ್ಲಿಯೂ ವಿಂಗ್ ರಚಿಸಲಾಗುವುದು ಎಂದು ಹೇಳಿದರು.

ಇಲ್ಲಿನ‌ ಜನರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕಾಗಿದೆ. ಡ್ರಗ್ಸ್ ನಿಯಂತ್ರಣಕ್ಕೆ ಅಭಿಯಾನ ನಡೆಸಲು ಸೂಚಿಸಿದ್ದು, ಆ.15 ರೊಳಗೆ ಡ್ರಗ್ಸ್ ಚಟುವಟಿಕೆ ಹತ್ತಿಕ್ಕಲು ಗಡುವು ನೀಡಿದ್ದೇನೆ ಎಂದರು.

ಬಹರೈನ್ ನಲ್ಲಿ ಅಪಘಾತ: ಭಾರತ ಮೂಲದ ಐವರು ಮೃತ್ಯು

Posted by Vidyamaana on 2023-09-03 15:23:02 |

Share: | | | | |


ಬಹರೈನ್ ನಲ್ಲಿ ಅಪಘಾತ: ಭಾರತ ಮೂಲದ ಐವರು ಮೃತ್ಯು

ಮನಾಮಾ: ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕೇರಳದ ನಿವಾಸಿಗಳು ಹಾಗೂ ತೆಲಂಗಾಣದ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಬಹರೈನ್ ರಾಜಧಾನಿ ಮನಾಮಾದ ಶೇಖ್ ಖಲೀಫಾ ಬಿನ್ ಸಲ್ಮಾನ್ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.


ವಿ.ಪಿ.ಮಹೇಶ್ (33), ಮಲಪ್ಪುರಂನ ನಿವಾಸಿ ಜಗತ್ ವಾಸುದೇವನ್ (26), ತ್ರಿಶೂರ್ ನ ಚಾಲಕುಡಿಯ ಜಾರ್ಜ್ (28), ಕಣ್ಣೂರಿನ ಅಖಿಲ್ ರಘು (28), ತೆಲಂಗಾಣದ ಸುಮನ್ ರಾಜಣ್ಣ (27) ಮೃತರು ಎಂದು ಗುರುತಿಸಲಾಗಿದೆ.


ಸಲ್ಮಾಬಾದ್ ನ ಗಲ್ಫ್ ಏರ್ ಕ್ಲಬ್ ನಲ್ಲಿ ಮುಹರಕ್ ಅಲ್ ಹಿಲಾಲ್ ಆಸ್ಪತ್ರೆ ಆಯೋಜಿಸಿದ್ದ ಓಣಂ ಆಚರಣೆಯಲ್ಲಿ ಪಾಲ್ಗೊಂಡ ನಂತರ ಐವರು ಕಾರಿನಲ್ಲಿ ವಾಪಸಾಗುತ್ತಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.


ಐವರು ಆಸ್ಪತ್ರೆ ಯಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದು‌‌ ಬಂದಿದೆ.

ಕಡಬ; ಮೂತ್ರ ವಿಸರ್ಜನೆಗೆ ತೆರಳಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ವಿಜಯನಗರ ನಾಗೇಶ್ ಪೊಲೀಸ್ ವಶಕ್ಕೆ

Posted by Vidyamaana on 2023-11-15 05:48:55 |

Share: | | | | |


ಕಡಬ; ಮೂತ್ರ ವಿಸರ್ಜನೆಗೆ ತೆರಳಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ವಿಜಯನಗರ ನಾಗೇಶ್ ಪೊಲೀಸ್ ವಶಕ್ಕೆ

ಕಡಬ; ಮೂತ್ರ ವಿಸರ್ಜನೆಗೆ ತೆರಳಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಕಡಬ; ಮೂತ್ರ ವಿಸರ್ಜನೆಗೆ ತೆರಳಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಹೇಯ ಕೃತ್ಯ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ(24) ಬಂಧಿತ ಆರೋಪಿ.


ಈ ಕಾಮ ಪಿಶಾಚಿ ಮಹಾರಾಷ್ಟ್ರದ ಕೂಲಿ ಕಾರ್ಮಿರರೋರ್ವರ ಏಳು ವರ್ಷದ ಮಗಳು ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.


ಅತ್ಯಾಚಾರದ ಬಳಿಕ ಬಾಲಕಿಗೆ ರಕ್ತಸ್ರಾವವಾಗಿ ಆಕೆ ತೀವ್ರವಾಗಿ ಅಸ್ವಸ್ಥಗೊಂಡಿದ್ದಾಳೆ. ಈ ವೇಳೆ ಪ್ರಕರಣ ಬಯಲಾಗಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿದ್ದಾರೆ.ಅದರಂತೆ ಆರೋಪಿಯನ್ನು ಬಂಧಿಸಲಾಗಿದೆ.

ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್

Posted by Vidyamaana on 2023-12-18 14:30:37 |

Share: | | | | |


ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್

ಮಡಿಕೇರಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಮಾತನಾಡಿದ ಅವರು, ಕೊರೊನಾ ರೂಪಾಂತರಿ ಬಗ್ಗೆ ಯಾರೂ ಸಹ ಆತಂಕಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ಸಂಬಂಧಿ ಸಮಸ್ಯೆ ಇದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.


60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು. ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಕೇರಳದಿಂದ ಬರುವವರ ಮೇಲೆ ಹೆಚ್ಚು ಟೆಸ್ಟ್ ಮಾಡುವಂತೆ ಆದೇಶ ಮಾಡಿದ್ದೇವೆ ಎಂದು ಹೇಳಿದರು.

ಯುವತಿ ನಾಪತ್ತೆ

Posted by Vidyamaana on 2024-02-29 04:29:14 |

Share: | | | | |


ಯುವತಿ ನಾಪತ್ತೆ

ಕಾರ್ಕಳ; ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದಲ್ಲಿ ನಡೆದಿದೆ. ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುವ ಪ್ರಮೀಳಾ, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ A.: 08253-271100, ಸಂಖ್ಯೆ 9480805470, 9480805471, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು A.: 08258-231083, .: 9480805435, ಜಿಲ್ಲಾ ಪೊಲೀಸ್‌ ಕಚೇರಿ ದೂ.ಸಂಖ್ಯೆ: 0820-2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್‌ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ನಿಧನ

Posted by Vidyamaana on 2024-02-28 11:19:42 |

Share: | | | | |


ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ನಿಧನ

ರಾಜೀವ್​ ಗಾಂಧಿ(Rajiv Gandhi) ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಸಂತನ್​(Santhan) ಬುಧವಾರ ಬೆಳಗ್ಗೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಸಂತನ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದರು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಬಿಡುಗಡೆಯಾದ ಬಳಿಕ ಅವರನ್ನು ತಿರುಚ್ಚಿಯ ಕೇಂದ್ರ ಕಾರಾಗೃಹದ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು.


ನವೆಂಬರ್ 11, 2022 ರಂದು, ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದೇಶದ ಮರುದಿನವೇ ನಳಿನಿ, ಶ್ರೀಹರನ್, ಸಂತನ್, ರಾಬರ್ಟ್ ಪಾಯಸ್, ಜಯಕುಮಾರ್ ಮತ್ತು ರವಿಚಂದ್ರನ್ 32 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದರು.


ಇಲ್ಲಿ ಒಂದು ಸಮಸ್ಯೆ ಇತ್ತು. ನಳಿನಿ ಮತ್ತು ರವಿಚಂದ್ರನ್ ಅವರನ್ನು ಬಿಡುಗಡೆ ಮಾಡಲಾಯಿತು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡಲು ಅವಕಾಶ ನೀಡಲಾಯಿತು ಆದರೆ ಉಳಿದ ನಾಲ್ವರನ್ನು ತಿರುಚ್ಚಿ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು. ನಾಲ್ವರೂ ಶ್ರೀಲಂಕಾದ ಪ್ರಜೆಗಳಾಗಿದ್ದರಿಂದ ಹೀಗೆ ಮಾಡಲಾಗಿತ್ತು.


ಸಂತನ್ ಅವರು ತಿರುಚ್ಚಿ ಜೈಲಿನ ವಿಶೇಷ ಶಿಬಿರದಲ್ಲಿರುವ ತಮ್ಮ ಸೆಲ್ ನಿಂದ ಬಹಿರಂಗ ಪತ್ರ ಬರೆದಿದ್ದರು. ತ್ರದ ಮೂಲಕ, ಅವರು ತಮ್ಮ ದೇಶಕ್ಕೆ ಮರಳಲು ಧ್ವನಿ ಎತ್ತುವಂತೆ ವಿಶ್ವದಾದ್ಯಂತದ ತಮಿಳರಿಗೆ ಮನವಿ ಮಾಡಿದ್ದರು.32 ವರ್ಷಗಳಿಂದ ತಾಯಿಯನ್ನು ನೋಡಿಲ್ಲ ಎಂದಿದ್ದರು

ನನ್ನನ್ನು ಶ್ರೀಲಂಕಾಕ್ಕೆ ಕಳುಹಿಸಲು ವ್ಯವಸ್ಥೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವರು ಮತ್ತು ವಿದೇಶಾಂಗ ಸಚಿವರಿಗೆ ಪತ್ರ ಬರೆದಿದ್ದರು. ನನ್ನ ಪಾಸ್‌ಪೋರ್ಟ್ ಅನ್ನು ನವೀಕರಿಸಲು ಚೆನ್ನೈನಲ್ಲಿರುವ ಶ್ರೀಲಂಕಾದ ಡೆಪ್ಯುಟಿ ಹೈಕಮಿಷನ್ ಕಚೇರಿಗೆ ಹೋಗಲು ನನಗೆ ಅನುಮತಿ ನೀಡುವಂತೆ ನಾನು ಅಧಿಕಾರಿಗಳನ್ನು ವಿನಂತಿಸಿದೆ. ನನಗೆ ಇನ್ನೂ ಯಾವುದೇ ಉತ್ತರವೇ ಬಂದಿಲ್ಲ ಎಂದಿದ್ದರು.



Leave a Comment: