ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ಪುತ್ತೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹಲವರಿಗೆ ಗಾಯ

Posted by Vidyamaana on 2023-12-21 13:29:57 |

Share: | | | | |


ಪುತ್ತೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹಲವರಿಗೆ ಗಾಯ

ಪುತ್ತೂರು : ಓಮ್ನಿ ಕಾರು ಮತ್ತು ಆಲ್ಟೊ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಡಿ 20 ರ  ತಡರಾತ್ರಿ ಈ ಘಟನೆ ನಡೆದಿದ್ದು, ಹಲವರಿಗೆ ಗಾಯಗಳಾಗಿವೆ. ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಖಾಸಗಿ ಕಾಲೇಜಿನ ಬಸ್ ಗೂ ಕಾರು ಡಿಕ್ಕಿಯಾಗಿದ್ದು, ಹಾನಿಯಾಗಿದೆ ಎಂದು ತಿಳಿದು ಬಂದಿದೆ

ಪುತ್ತೂರು- ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ-ಪೈವಳಿಕೆ ಮೂಲದ ನಾಲ್ವರಿಗೆ ಗಂಭೀರ ಗಾಯ

Posted by Vidyamaana on 2024-03-10 20:33:46 |

Share: | | | | |


ಪುತ್ತೂರು- ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ-ಪೈವಳಿಕೆ ಮೂಲದ ನಾಲ್ವರಿಗೆ ಗಂಭೀರ ಗಾಯ

ಪುತ್ತೂರು ಮಾ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಸ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ.


ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕ್ ಸೈಡ್ ಕೋಡುವ ಸಂದರ್ಭ ಕಾರು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಾಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

ಸುರತ್ಕಲ್ ಬೀಚ್ ಗೆ ತೆರಳಿದ ವಿಟ್ಲ ಮೂಲದ ವಿದ್ಯಾರ್ಥಿನಿ ನಿಶಾ ನೀರಿನಲ್ಲಿ ಮುಳುಗಿ ಮೃತ್ಯು..!!!

Posted by Vidyamaana on 2023-10-19 21:09:46 |

Share: | | | | |


ಸುರತ್ಕಲ್ ಬೀಚ್ ಗೆ ತೆರಳಿದ ವಿಟ್ಲ ಮೂಲದ ವಿದ್ಯಾರ್ಥಿನಿ ನಿಶಾ ನೀರಿನಲ್ಲಿ ಮುಳುಗಿ ಮೃತ್ಯು..!!!

ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.


ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.


ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ.

ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.

ತಲೆಕೆಳಗಾದ ಚುನಾವಣಾ ಸಮೀಕ್ಷೆ ಟಿವಿ ಲೈವ್‌ನಲ್ಲೇ ಕಣ್ಣೀರು ಹಾಕಿದ ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್‌ ಗುಪ್ತಾ

Posted by Vidyamaana on 2024-06-05 09:46:29 |

Share: | | | | |


ತಲೆಕೆಳಗಾದ ಚುನಾವಣಾ ಸಮೀಕ್ಷೆ ಟಿವಿ ಲೈವ್‌ನಲ್ಲೇ ಕಣ್ಣೀರು ಹಾಕಿದ ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್‌ ಗುಪ್ತಾ

ಹೊಸದಿಲ್ಲಿ : ಆಕ್ಸಿಸ್ ಮೈ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಅವರು 2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ತಮ್ಮ ಲೆಕ್ಕಾಚಾರ ಮೀರುತ್ತಿದ್ದಂತೆ, ಇಂಡಿಯಾ ಟುಡೇ ಟಿ ವಿ ಲೈವ್ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಇಂಡಿಯಾ ಟುಡೆಯ ಚುನಾವಣಾ ಫಲಿತಾಂಶಗಳ ಲೈವ್ ಕವರೇಜ್‌ನಲ್ಲಿ ಕಾಣಿಸಿಕೊಂಡ ಗುಪ್ತಾ, ಕಣ್ಣೀರಿಡುತ್ತಿದ್ದಂತೆ ಆಂಕರ್ಗಳು ಅವರಿಗೆ ಸಾಂತ್ವನ ಹೇಳಿದರು.


ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 361-401 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು. INDIA ಒಕ್ಕೂಟವು 131-166 ಸ್ಥಾನಗಳನ್ನು ಗೆಲ್ಲಲಿದೆ, ಸಮೀಕ್ಷೆಗಳ ಪ್ರಕಾರ ಇತರ ಪಕ್ಷಗಳು 8 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿತ್ತು.


ಶನಿವಾರದ ಅಂತಿಮ ಸುತ್ತಿನ ಮತದಾನದ ನಂತರ ಬಿಡುಗಡೆಯಾದ ಬಹುಪಾಲು ಎಕ್ಸಿಟ್ ಪೋಲ್‌ಗಳು ಬಿಜೆಪಿ ಮತ್ತು ಎನ್‌ಡಿಎ ಮುನ್ನಡೆ ಸಾಧಿಸಲಿವೆ ಎಂದು ತೋರಿಸಿದ್ದವು.

ಮನೆಯಲ್ಲೇ ನೇಣು ಬಿಗಿದುಕೊಂಡ ಮಹಿಳೆ… ಪ್ರಿಯಕರ ಲಿಂಗರಾಜು ಪೊಲೀಸ್ ವಶಕ್ಕೆ

Posted by Vidyamaana on 2023-10-19 09:50:08 |

Share: | | | | |


ಮನೆಯಲ್ಲೇ ನೇಣು ಬಿಗಿದುಕೊಂಡ ಮಹಿಳೆ…  ಪ್ರಿಯಕರ ಲಿಂಗರಾಜು ಪೊಲೀಸ್ ವಶಕ್ಕೆ

ರಾಮನಗರ: ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕನಕಪುರದ ನಿರ್ವಾಣೇಶ್ವರ ನಗರದಲ್ಲಿ ಮಂಗಳವಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.



ಕಮಲಾಬಾಯಿ (38) ಆತ್ಮಹತ್ಯೆಗೆ ಶರಣಾದ ಮಹಿಳೆ.


ಮಂಗಳವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಮಲಾಬಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಬುಧವಾರ ಬೆಳಿಗ್ಗೆ ಮನೆಯವರಿಗೆ ಗೊತ್ತಾಗಿದೆ ಅಷ್ಟೋತ್ತಿಗಾಗಲೇ ಮಹಿಳೆ ಮೃತಪಟ್ಟಿದ್ದರು ಎನ್ನಲಾಗಿದೆ. ಬಳಿಕ ಮನೆಯವರು ಕನಕಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯ ಪ್ರಿಯಕರ ಲಿಂಗರಾಜು ನಾಯಕ(47) ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಪತಿಯಿಂದ ದೂರವಾಗಿದ್ದ ಕಮಲಾಬಾಯಿ ಲಿಂಗರಾಜು ನಾಯಕ್ ಜೊತೆ ಸಂಬಂಧ ಹೊಂದಿರುವ ಬಗ್ಗೆ ಶಂಕೆ ಇತ್ತು, ಅಲ್ಲದೆ ಈ ಹಿಂದೆ ಇಬ್ಬರು ಜೊತೆಯಲ್ಲಿ ವಾಸಿಸುತ್ತಿದ್ದು, ಇಬ್ಬರ ನಡುವೆ ಗಲಾಟೆ ಆಗಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಮೃತ ಮಹಿಳೆಯ ಮಗ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಲಿಂಗರಾಜು ನನ್ನ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಲಿಂಗರಾಜುನನ್ನು ವಿಚಾರಣೆ ನಡೆಸುತ್ತಿದ್ದಾರೆ.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯ ಪ್ರಿಯಕರ ಲಿಂಗರಾಜು ನಾಯಕ(47) ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

BREAKING:ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ

Posted by Vidyamaana on 2024-06-05 15:25:31 |

Share: | | | | |


BREAKING:ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯ ಸೋಲಿನ ಜವಾಬ್ದಾರಿಯನ್ನು ಹೊತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಬುಧವಾರ ರಾಜೀನಾಮೆ ನೀಡಿದ್ದಾರೆ. ಪಕ್ಷದ ಕಳಪೆ ಪ್ರದರ್ಶನದ ನಂತರ ಅವರು ರಾಜ್ಯದ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರೋದಾಗಿ ತಿಳಿದು ಬಂದಿದೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ತಮ್ಮನ್ನು ಉಪಮುಖ್ಯಮಂತ್ರಿ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ನಾಯಕತ್ವವನ್ನು ವಿನಂತಿಸಲು ಸಜ್ಜಾಗಿದ್ದಾರೆ.

Recent News


Leave a Comment: