ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ಶಿವಮೊಗ್ಗದಿಂದ ಸ್ಪರ್ಧೆ ಮಾಡುವೆ: ಕೆ.ಎಸ್.ಈಶ್ವರಪ್ಪ

Posted by Vidyamaana on 2024-03-13 16:58:40 |

Share: | | | | |


ಶಿವಮೊಗ್ಗದಿಂದ ಸ್ಪರ್ಧೆ ಮಾಡುವೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರು ಸಭೆ ಕರೆದಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಮುಂದುವರೆಯುವೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರನಿಗೆ ಟಿಕೆಟ್ ಪಡೆಯುವುದರ ಹಿಂದೆ ಬರೀ ನನ್ನ ರಾಜಕೀಯ ಭವಿಷ್ಯ ಅಡಗಿಲ್ಲ. ಬದಲಿಗೆ ಬಿಜೆಪಿಯ ಭವಿಷ್ಯ ಅಡಗಿದೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸುವ ಕೆಲಸವೂ ಇದರ ಹಿಂದೆ ಇದೆ ಎಂದರು.

ಹಾವೇರಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುವುದಿಲ್ಲ. ಬೆಂಬಲಿಗರ ಒತ್ತಾಯವೂ ಇರುವುದರಿಂದ ಅಗತ್ಯ ಬಿದ್ದರೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಹೇಳಿದರು.

ಛೆ.. ಎಂಥಾ ಅವಸ್ಥೆ.. ನಿಮ್ಮ ಜೊತೆ- ನಿಮ್ಮ ಕಷ್ಟಕ್ಕೆ ನಾನಿದ್ದೇನೆ

Posted by Vidyamaana on 2023-08-26 16:08:11 |

Share: | | | | |


ಛೆ.. ಎಂಥಾ ಅವಸ್ಥೆ.. ನಿಮ್ಮ ಜೊತೆ- ನಿಮ್ಮ ಕಷ್ಟಕ್ಕೆ ನಾನಿದ್ದೇನೆ

ಪುತ್ತೂರು:ದುಷ್ಕರ್ಮಿಯಿಂದ ಕೊಲೆಯಾದ ಅಳಿಕೆ ಕುದ್ದುಪದವು ನಿವಾಸಿ ಗೌರಿ ಮನೆಗೆ ಆ. ೨೬ ರಂದು ಶಾಸಕರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅತ್ಯಂತ ಕಡುಬಡತನದಲ್ಲಿ ಕಾಲ ಕಳೆಯುತ್ತಿರುವ ಮೃತ ಗೌರಿ ತಾಯಿಯ ಕಷ್ಟ ಕಂಡು ಶಾಸಕರು ಮರುಗಿದರು. ಗೌರಿ ತಾಯಿಯ ಜೊತೆ ಮಾತನಾಡುವ ವೇಳೆ ಶಾಸಕರಲ್ಲಿ ತನ್ನ ಕುಟುಂಬದ ಸಂಕಷ್ಟವನ್ನು ವಿವರಿಸುವ ವೇಳೆ ನನ್ನ ಸಹೋದರಿ ಅಂಗವಿಕಲೆ ಆಕೆಗೆ ಯಾವುದೇ ಪಿಂಚಣಿ ನೀಡುತ್ತಿಲ್ಲ, ಆಧಾರ್ ಕಾರ್ಡು ಇಲ್ಲ ಎಂದು ಅಧಿಕಾರಿಗಳು ಆಕೆಗೆ ಯಾವುದೇ ಸವಲತ್ತನ್ನು ನೀಡಿಲ್ಲ ಎಂದು ಶಾಸಕರಲ್ಲಿ ಹೇಳಿದರು. ತಕ್ಷಣವೇ ವಿಕಲಚೇತನ ಯುವತಿ ಮಲಗಿದ್ದ ಸ್ಥಳಕ್ಕೆ ತೆರಳಿದ ಶಾಸಕರು ಒಮ್ಮೆಲೆ ಅಚ್ಚರಿಗೊಂಡದ್ದು ಮಾತ್ರವಲ್ಲದೆ ಪಿಂಚನಿ ಕೊಡದೇ ಇರುವ ವಿಚಾರ ಕೇಳಿ ಆಕ್ರೋಶಗೊಂಡರು.

ಛೇ.. ಎಂಥಾ ಅವಸ್ಥೆ.... ವಿಕಲ ಚೇತನಳಾದರೂ ಪಿಂಛಣಿ ಕೊಡ್ಲಿಕ್ಕೆ ಆಗ್ಲಿಲ್ವ ಇಲ್ಲಿನ ವ್ಯವಸ್ಥೆಗೆ? ಎಷ್ಟು ವರ್ಷದಿಂದ ಯುವತಿ ಮಲಗಿದ್ದಲ್ಲೇ ಇದ್ದಾರೆ? ನಿಮ್ಮ ಮನೆಗೆ ಓಟು ಕೇಳಲು ರಾಜಕೀಯದವರು ಬರುವುದಿಲ್ಲವೇ ತಾಯಿ ಎಂದು ಗೌರಿ ತಾಯಿಯನ್ನು ಪ್ರಶ್ನಿಸಿದರು. ಈ ವೇಳೆ ಉತ್ತರಿಸಿದ ಗೌರಿ ತಾಯಿ ನನ್ನ ಸಹೋದರಿ ಶಾರದಾ ಅನೇಕ ವರ್ಷಗಳಿಂದ ಮಲಗಿದ್ದಲ್ಲೇ ಇದ್ದಾಳೆ, ನಾನು ಕೂಲಿ ಕೆಲಸಕ್ಕೆ ತೆರಳಿ ಮಕ್ಕಳನ್ನು ಸಾಕುತ್ತಿದ್ದೇನೆ, ವಿಕಲ ಚೇತನ ನನ್ನ ಸಹೋದರಿಗೆ ಆಧಾರ್ ಕಾರ್ಡು ಇಲ್ಲದ ಕಾರಣ ಸರಕಾರದಿಂದ ಏನೂ ಸಿಗುತ್ತಿಲ್ಲ ಎಂದು ಹೇಳಿದರು.

ನಾಳೆ ನಿಮ್ಮ ಮನೆಗೆ ನನ್ನ ಕಚೇರಿಯಿಂದ ಜನ ಬರುತ್ತಾರೆ ಅವರು ನಿಮ್ಮ ಸಹೋದರಿಗೆ ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ದಪಡಿಸಿ ಮುಂದಿನ ತಿಂಗಳು ಅವರಿಗೆ ವಿಕಲಚೇತನ ಪಿಂಚಣಿ ಬರುತ್ತದೆ ಏನೂ ಹೆದರಬೇಡಿ, ನಿಮ್ಮ ಜೊತೆ ನಾನಿದ್ದೇನೆ, ನಿಮ್ಮ ಕಷ್ಟದ ಜೊತೆ ನಾನಿದ್ದೇನೆ, ಧೈರ್ಯವಾಗಿ ಇರಿ ಎಂದು ಗೌರಿ ತಾಯಿಗೆ ಸಾಂತ್ವನ ಹೇಳಿದರು. ಗೌರಿ ಕುಟುಂಬದ ಬಡತನವನ್ನು ಕಂಡು ಶಾಸಕರ ಕಣ್ಣುಗಳು ತೇವಗೊಂಡವು...

SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್

Posted by Vidyamaana on 2023-08-08 11:28:41 |

Share: | | | | |


SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ದಾಖಲಾಗುತ್ತಿರುವ ಸುಳ್ಳು ಕ್ರಿಮಿನಲ್​ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ ಪಡಿಸುತ್ತಿವೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.ಅಲ್ಲದೇ, ಈ ರೀತಿಯ ಪ್ರಕರಣಗಳು ನ್ಯಾಯಾಂಗ ಕ್ಷೇತ್ರದ ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿವೆ ಎಂದು ತಿಳಿಸಿದೆ. 


ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯಿದೆಯಡಿ ದಾಖಲಾಗಿದ್ದನ್ನು ಪ್ರಶ್ನಿಸಿ ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತ ಪಡಿಸಿದೆ. ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಅಡಿ ಸುಳ್ಳು ಪ್ರಕರಣಗಳು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಲಿದ್ದು, ನಿಯಂತ್ರಿಸುವಲ್ಲಿ ವಿಫಲವಾದಲ್ಲಿ ಇಡೀ ಅಪರಾಧ ನ್ಯಾಯ ವ್ಯವಸ್ಥೆಗೆ ದೊಡ್ಡ ಹೊರೆಯಾಗಬಹುದು ಎಂದು ತಿಳಿಸಿದೆ.


ಜತೆಗೆ, ಈ ಸಂಬಂಧ ಪ್ರಕರಣದಲ್ಲಿ ಸಿಲುಕುವವರಿಗೆ ಕಿರುಕುಳ ಮುಂದುವರೆಯಲಿದೆ ಮತ್ತು ನ್ಯಾಯ ತಪ್ಪಿದಂತಾಗಬಹುದು ಎಂದು ಪೀಠ ಅಭಿಪ್ರಾಯ ವ್ಯಕ್ತ ಪಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವರ್ಗಗಳಜನತೆಯ ಮೇಲಿನ ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ಕಾಯಿದೆ ಜಾರಿ ಮಾಡಲಾಗಿದೆ. ಆದರೆ, ಈ ಕಾಯಿದೆ ಉಲ್ಲಂಘನೆ ಮಾಡಿರುವುದಕ್ಕೆ ಪ್ರಸ್ತುತದ ಪ್ರಕರಣ ಒಂದು ಉತ್ತಮ ನಿರ್ದಶನವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ. 


ಅಲ್ಲದೇ, ಈ ರೀತಿಯ ಪ್ರಕರಣಗಳಿಂದ ನಿಜವಾಗಿಯೂ ಸಮಸ್ಯೆಗೆ ಸಿಲುಕಿರುವವರು ನ್ಯಾಯಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ಸುಳ್ಳು ಪ್ರಕರಣವನ್ನು ವಿಚಾರಣೆಗೊಳಪಡಿಸುವುದು ಒಂದು ರೀತಿಯ ಅಪಹಾಸ್ಯದಂತಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಜತೆಗೆ, ದೂರುದಾರರ ತಂದೆ ಅರ್ಜಿದಾರರಿಗೆ ತಮ್ಮ ಜಮೀನನ್ನು ಮಾರಾಟ ಮಾಡಿದ್ದಾರೆ. ಅಲ್ಲದೇ, ಆ ಆಸ್ತಿಯನ್ನು ಅರ್ಜಿದಾರರು ಕಳೆದ 50 ವರ್ಷಗಳಿಂದ ತಮ್ಮಲ್ಲಿ ಉಳಿಸಿಕೊಂಡಿರುವ ಸಂಬಂಧ ಸರ್ಕಾರದಲ್ಲಿ ದಾಖಲೆಗಳಿವೆ. ಹಾಗೆ, ಅರ್ಜಿದಾರರು ಜಮೀನನ್ನು ಖರೀದಿ ಮಾಡಿದ್ದಾರೆ ವಿನಃ ಅತಿಕ್ರಮ ಮಾಡಿಲ್ಲ ಎಂಬ ಅಂಶ ದಾಖಲೆಗಳಲ್ಲಿ ಎತ್ತಿ ತೋರಿಸುತ್ತಿದೆ, ಆದರೂ ಈಅಂಶವನ್ನು ಪರಿಗಣಿಸದೇ ದೂರು ನೀಡಲಾಗಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.


ಪ್ರಕರಣದ ಹಿನ್ನೆಲೆ : ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರ ವಿರುದ್ಧ ತಮ್ಮ ಮನೆಯ ನೆರೆಹೊರೆಯವರು ಮನೆ ಒತ್ತುವರಿ ಮತ್ತು ನಿರಂತರ ಕಿರುಕುಳ ನೀಡಲಾಗುತ್ತಿದೆ. ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಖಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳು ಸೇರಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್‌ಗಳನ್ನು ಸೇರ್ಪಡೆ ಮಾಡಿದ್ದರು. ಪ್ರಕರಣ ಸಂಬಂಧ ರಾಮಮೂರ್ತಿ ನಗರದ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು.

ಉಪ್ಪಳ ಗೇಟ್ | ಖಾಸಗಿ ಬಸ್ ಗೆ ಕಂಟೈನರ್ ಡಿಕ್ಕಿ: ನಾಲ್ವರಿಗೆ ಗಾಯ

Posted by Vidyamaana on 2024-05-13 15:11:55 |

Share: | | | | |


ಉಪ್ಪಳ ಗೇಟ್ | ಖಾಸಗಿ ಬಸ್ ಗೆ ಕಂಟೈನರ್ ಡಿಕ್ಕಿ: ನಾಲ್ವರಿಗೆ ಗಾಯ

ಉಪ್ಪಳ: ಖಾಸಗಿ ಬಸ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ನಡೆದಿದೆ.

ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲಿಸಿದ್ದ ಬಸ್ಸನ್ನು ಹಿಂದಿಕ್ಕುವ ರಭಸದಲ್ಲಿ ಕಂಟೈನರ್ ಲಾರಿಯೊಂದು ಮುಂದೆ ಬರುತ್ತಿದ್ದ ಇನ್ನೊಂದು ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ತಲಪಾಡಿ ಯಿಂದ ಕಾಸರಗೋಡಿಗೆ ಹಾಗೂ ಲಾರಿ ಮಂಗಳೂರು ಕಡೆಗೆ ತೆರಳುತ್ತಿತ್ತು.

ಮಂಗಳೂರಿನ ಲೇಡೀಸ್ ಪಿಜಿಯಲ್ಲಿ ಕೆಲಸಕ್ಕಿದ್ದ ಹುಡುಗಿಯೊಂದಿಗೆ ಲವ್

Posted by Vidyamaana on 2023-11-04 07:26:19 |

Share: | | | | |


ಮಂಗಳೂರಿನ ಲೇಡೀಸ್ ಪಿಜಿಯಲ್ಲಿ ಕೆಲಸಕ್ಕಿದ್ದ ಹುಡುಗಿಯೊಂದಿಗೆ ಲವ್

ಮಂಗಳೂರು: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ. 


ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ. 


ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿ‌ನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

Posted by Vidyamaana on 2023-06-16 08:23:17 |

Share: | | | | |


ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

ಕಾಸರಗೋಡು; ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ, ಕಾಸರಗೋಡಿನ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು

ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.



Leave a Comment: