ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಜುಲೈನಿಂದ 200 ಯೂನಿಟ್ ವರೆಗೆ ಉಚಿತ ವಿದ್ಯುತ್

Posted by Vidyamaana on 2023-06-02 10:11:01 |

Share: | | | | |


ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಜುಲೈನಿಂದ 200 ಯೂನಿಟ್ ವರೆಗೆ ಉಚಿತ ವಿದ್ಯುತ್

ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು.

ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಸಂಪೂರ್ಣ ವಿವರ ನೀಡಿದರು.


ಮೊದಲ ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್​ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು.  12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡುತ್ತೇವೆ. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಜುಲೈ 1ರಿಂದ ಆಗಸ್ಟ್​ 1ರವರೆಗೆ ಬಳಸುವ ವಿದ್ಯುತ್​ ಬಳಕೆಗೆ ಬಿಲ್​  ಎಂದು ತಿಳಿಸಿದರು.

ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

Posted by Vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ನಳಿನ್ ಕುಮಾರ್ ಕಟೀಲ್ ಗೆಲ್ಲಿಸಿ ಕೊಡಿ: ನಳಿನ್ ಕಟೀಲ್ ಪರ ವಿಜಯೇಂದ್ರ ಬ್ಯಾಟಿಂಗ್

Posted by Vidyamaana on 2023-11-22 18:20:03 |

Share: | | | | |


ನಳಿನ್ ಕುಮಾರ್ ಕಟೀಲ್ ಗೆಲ್ಲಿಸಿ ಕೊಡಿ: ನಳಿನ್ ಕಟೀಲ್ ಪರ ವಿಜಯೇಂದ್ರ ಬ್ಯಾಟಿಂಗ್

ಮಂಗಳೂರು: ಮತ್ತೆ ನಳಿನ್ ಕುಮಾರ್ ಕಟೀಲ್ ಗೆಲ್ಲಿಸಿ ಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಮಂಗಳೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮತ್ತೆ ನಳಿನ್ ಕಟೀಲ್ ಗೆಲ್ಲಿಸಿ ಕೊಡಿ. ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಹೇಳುವ ಮೂಲಕ ನಳಿನ್ ಕಟೀಲ್ ಪರ ವಿಜಯೇಂದ್ರ ಬ್ಯಾಟಿಂಗ್ ಮಾಡಿದ್ದಾರೆ.

ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಗೆ ಉಚಿತ ತರಬೇತಿ

Posted by Vidyamaana on 2024-01-08 12:51:41 |

Share: | | | | |


ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಗೆ ಉಚಿತ ತರಬೇತಿ

 ಪುತ್ತೂರು /ಸುಳ್ಯ :ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಿರುವ  ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ದಿನಾಂಕ 23.01.2024ರಂದು ನಡೆಯಲಿರುವ ಪಿ ಎಸ್ ಐ 545 ಹುದ್ದೆಗಳ ಮರು ಪರೀಕ್ಷೆಯನ್ನು ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ತರಬೇತಿಯನ್ನು ನೀಡುತ್ತಿದ್ದು, ದಿನಾಂಕ 09.01.2024 ರಿಂದ ತರಗತಿಗಳು ಪ್ರಾರಂಭವಾಗಲಿದೆ,ಈ ತರಗತಿಗಳು ಆನ್ ಲೈನ್ ಮೂಲಕ ತರಗತಿಗಳು ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಛೇರಿ ಸಂಖ್ಯೆ 9448527606ನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪುತ್ತೂರು ; ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ ಹೆಸರಲ್ಲಿ ಮಹಿಳೆಗೆ ವಂಚನೆ

Posted by Vidyamaana on 2023-09-21 04:42:02 |

Share: | | | | |


ಪುತ್ತೂರು ; ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ ಹೆಸರಲ್ಲಿ ಮಹಿಳೆಗೆ ವಂಚನೆ

ಪುತ್ತೂರು ; ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುನ್ನೂರು ಗ್ರಾಮದಲ್ಲಿ ನಡೆದಿದೆ.


  ಚಿಕ್ಕಮುಡ್ನೂರು  ನಿವಾಸಿಯಾದ ಝೀನತ್ ಬಾನು ಎಂಬವರಿಗೆ 2022 ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿ ವಾಟ್ಸಾಪ್ ಕರೆ ಮಾಡಿ ತಾನು ಕೌನ್ ಬನೇಗಾ ಕರೋಡಪತಿ ಎಂಬ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನೀವು ರೂ. 25 ಲಕ್ಷ ಲಾಟರಿ ಗೆದ್ದಿದ್ದೀರಿ ಎಂದಿದ್ದಾನೆ.


ನಂತರ ಹಣ ಪಡೆಯಲು ನೀವು ಟ್ಯಾಕ್ಸ್ ಕಟ್ಟಲು ಹಾಗೂ ಇನ್ನಿತರ ಚಾರ್ಜಸ್ ಗಳು ಇವೆ ಎಂದು ಹೇಳಿ ಝೀನತ್ ಅವರಿಂದ 2022 ಮೇ ತಿಂಗಳಿನಿಂದ 2023 ಸೆಪ್ಟೆಂಬರ್ 13 ರವರೆಗಿನ ಅವಧಿಯಲ್ಲಿ ಅಪರಿಚಿತ ವ್ಯಕ್ತಿ ವಿವಿಧ ಬ್ಯಾಂಕ್ ಖಾತೆಗಳಿಗೆ ಸುಮಾರು ರೂ. 12,93,200/- ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಕ್ರ 9.29/2023 do: 66(D), IT act 417 420 IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ ಆತ್ಮಹತ್ಯೆ!!!

Posted by Vidyamaana on 2023-06-09 03:21:43 |

Share: | | | | |


ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ ಆತ್ಮಹತ್ಯೆ!!!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ.

ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿಯ ನಿವಾಸಿ ಬಾಲಕೃಷ್ಣ (58) ಎಂಬವರು ಆತ್ಮಹತ್ಯೆಗೈದ ಚಾಲಕ. ಬಾಲಕೃಷ್ಣ ಗುರುವಾರ(ಜೂ.8) ತಮ್ಮ ಮನೆ ರಾಘವೇಂದ್ರ ನಿಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸಿದ್ದರು.

ಮೃತರ ಪುತ್ರ ಚೇತನ್‌ ನೀಡಿದ ದೂರಿನಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Leave a Comment: