ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


BREAKING:ಚಂದನ್ ಶೆಟ್ಟಿ-ನಿವೇದಿತಾಗೆ ವಿಚ್ಚೇದನ ಮಂಜೂರು: 4 ವರ್ಷಗಳ ದಾಂಪತ್ಯ ಜೀವನ ಅಂತ್ಯ

Posted by Vidyamaana on 2024-06-07 19:33:50 |

Share: | | | | |


BREAKING:ಚಂದನ್ ಶೆಟ್ಟಿ-ನಿವೇದಿತಾಗೆ ವಿಚ್ಚೇದನ ಮಂಜೂರು: 4 ವರ್ಷಗಳ ದಾಂಪತ್ಯ ಜೀವನ ಅಂತ್ಯ

ಬೆಂಗಳೂರು : ರ್ಯಾಪ್ ಹಾಡುಗಾರ ಚೆಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿಯೇ ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಲಯಕ್ಕೆ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜೂನ್.6ರ ನಿನ್ನೆ ಸಲ್ಲಿಸಿದ್ದಂತ ವಿಚ್ಚೇದನ ಅರ್ಜಿಯ ವಿಚಾರಣೆಯನ್ನು ಇಂದು ವಿಚಾರಣೆ ನಡೆಸಿತು.

ಬಳಿಕ ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ವಿವಾಹ ವಿಚ್ಚೇದನಕ್ಕೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ 4 ವರ್ಷದ ಚೆಂದನ್ ಶೆಟ್ಟಿ-ನಿವೇದಿತಾ ದಾಂಪತ್ಯ ಜೀವನ ಅಂತ್ಯಗೊಂಡಂತೆ ಆಗಿದೆ.ಜೂನ್.6ರ ನಿನ್ನಯಂದು ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ವಿವಾಹ ವಿಚ್ಚೇದನಕ್ಕಾಗಿ ಕೌಟುಂಬಿಕ ನ್ಯಾಯಲಯಕ್ಕೆ ಸ್ವ ಇಚ್ಚೆಯಿಂದ ಪರಸ್ಪರ ಒಪ್ಪಿ ಇಬ್ಬರೂ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಶಾಂತಿನಗರದ ಫ್ಯಾಮಿಲಿ ನ್ಯಾಯಾಲಯದ ನ್ಯಾಯಮೂರ್ತಿಗಳು ನಡೆಸಿದರು. ಇಂದಿನ ವಿಚಾರಣೆಗಾಗಿ ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ಖುದ್ದು ಕೋರ್ಟ್ ಗೆ ಹಾಜರಾಗಿದ್ದರು. ಇಬ್ಬರು ಪರಸ್ಪರ ನಗು ನಗುತ್ತಲೇ ಕೋರ್ಟ್ ಗೆ ಹಾಜರಾಗಿದ್ದರು

ಹಲೋ.. ನಾನು ಅನಿತಾ ಹುಡುಗಿ ಹೆಸರಿನಲ್ಲಿ ಚಾಟ್ ಮಾಡಿ ಯಾಮಾರಿಸಿ ಹಣ ಪೀಕಿದ್ದ ಆರೋಪಿ ಅಂದರ್

Posted by Vidyamaana on 2024-01-13 06:28:44 |

Share: | | | | |


ಹಲೋ.. ನಾನು ಅನಿತಾ ಹುಡುಗಿ ಹೆಸರಿನಲ್ಲಿ ಚಾಟ್ ಮಾಡಿ ಯಾಮಾರಿಸಿ ಹಣ ಪೀಕಿದ್ದ ಆರೋಪಿ ಅಂದರ್

ಬೆಂಗಳೂರು : ಯಾರಾದ್ರೂ ವಾಟ್ಸ್ ಅಪ್ ನಲ್ಲಿ ಹಾಯ್ ಹಲೋ ಅಂತಾ ಮೆಸೇಜ್ ಮಾಡಿದ್ರೆ ಹುಷಾರಾಗಿರಿ. ಹುಡುಗಿಯ ಡಿಪಿ ಹಾಕಿ ಹುಡುಗಿ ರೀತಿ ಹುಡಗರೇ ಚಾಟ್ ಮಾಡುತ್ತಾರೆ. ಬಣ್ಣ ಬಣ್ಣದ ಮಾತನಾಡಿ ಸೆಕ್ಸ್ ವಿಚಾರ ಮಾತಾಡಿ ನಿಮ್ಮನ್ನ ಖೆಡ್ಡಾಗೆ ಕೆಡವೋದು ಫಿಕ್ಸ್. ಆ ಖಾಸಗಿ ಫೋಟೋಗಳ ಸ್ಕ್ರೀನ್ ಶಾಟ್ ಹಾಗೂ ಸ್ಕ್ರೀನ್ ರೆಕಾರ್ಡ್ ಮಾಡಿ ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಾರೆ.ಇದೇ ರೀತಿ ಹುಡುಗಿ ಹೆಸರಲ್ಲಿ ಬ್ಲಾಕ್ ಮೇಲ್ ಮಾಡುತಿದ್ದ ಆರೋಪಿಯನ್ನ ಉತ್ತರ ವಿಭಾಗದ ಸೆನ್ ಪೊಲೀಸರು ಬಂಧಿಸಿದ್ದಾರೆ.


ಹರಿ ಅಲಿಯಾಸ್ ನರಹರಿ ಬಂಧಿತ ಆರೋಪಿಯಾಗಿದ್ದು, ನಗರದ ಬೊಮ್ಮನಹಳ್ಳಿಯ ಎನ್ ಆರ್ ಲಾಡ್ಜ್ ಕೆಲಸ ಮಾಡುತ್ತಿದ್ದ. ಲಾಡ್ಜ್ ಗೆ ಬರುವ ಗ್ರಾಹಕರ ನಂಬರ್ ಪಡೆದು ಹುಡುಗಿ ರೀತಿಯಲ್ಲಿ ಮೆಸೇಜ್ ಮಾಡುತಿದ್ದ. ಅನಿತಾ ಎಂಬ ಹೆಸರಿನಲ್ಲಿ ಮೆಸೆಜ್ ಮಾಡುತ್ತಿದ್ದ ಆರೋಪಿ.ನಂತರ ಖಾಸಗಿ ಪೋಟೋಗಳನ್ನ ಕಳಿಸುವಂತೆ ಹೇಳುತ್ತಿದ್ದ. ನಂತರ ಅದೇ ಪೋಟೋಗಳನ್ನಿಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ವ್ಯಕ್ತಿಯೊಬ್ಬರ ಬಳಿ ಹಂತ ಹಂತವಾಗಿ 1 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ.

ವಾಟ್ಸಾಪ್ ಖಾತೆಗೆ ಹುಡುಗಿಯರು ಭಾವಚಿತ್ರ ಬಳಕೆ ಮಾಡಿಕೊಂಡು ವಂಚನೆ ಮಾಡುತಿದ್ದ ಆರೋಪಿ ಬ್ಯಾಂಕ್ ನ ಮಾಹಿತಿ ಆಧಾರ ಮೇಲೆ ಬಂಧಿಸಲಾಗಿದೆ. ಒಟ್ಟಾರೆಯಾಗಿ ಗೊತ್ತಿಲ್ಲದ ನಂಬರ್ ನಿಂದ ಯಾರಾದ್ರು ಮೇಸೆಜ್ ಮಾಡಿದ್ರೆ ಎಚ್ಚರಿಕೆಯಿಂದ ಇರುವುದು ಒಳಿತು.

ಕಣ್ಣೂರು - ಅಪಘಾತಕ್ಕೀಡಾದ ಸಿಎನ್ ಜಿ ಆಟೋ ರಿಕ್ಷಾಕ್ಕೆ ಬೆಂಕಿ - ಇಬ್ಬರ ಸಜೀವ ದಹನ

Posted by Vidyamaana on 2023-10-14 13:17:23 |

Share: | | | | |


ಕಣ್ಣೂರು - ಅಪಘಾತಕ್ಕೀಡಾದ ಸಿಎನ್ ಜಿ ಆಟೋ ರಿಕ್ಷಾಕ್ಕೆ ಬೆಂಕಿ - ಇಬ್ಬರ ಸಜೀವ ದಹನ

ಕಣ್ಣೂರು ಅಕ್ಟೋಬರ್ 14: ಸಿಎನ್ ಜಿ ಚಾಲಿತ ಆಟೋ ರಿಕ್ಷಾವೊಂದು ಅಪಘಾತಕ್ಕೀಡಾದ ಬಳಿಕ ಬೆಂಕಿ ಹೊತ್ತಿಕೊಂಡು ಆಟೋದಲ್ಲಿದ್ದ ಇಬ್ಬರು ಸಜೀವವಾಗಿ ದಹನವಾದ ಘಟನೆ ಕಣ್ಣೂರಿನ ಕತಿರೂರಿನಲ್ಲಿ ನಡೆದಿದೆ.ಅಪಘಾತದಲ್ಲಿ ಚಾಲಕ ಅಭಿಲಾಷ್ (37) ಮತ್ತು ಆತನ ಸ್ನೇಹಿತ ಸಜೀಶ್ (36) ಸುಟ್ಟು ಕರಕಲಾಗಿದ್ದಾರೆ.ಆಟೋರಿಕ್ಷಾ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಟೋ ಪಲ್ಟಿಯಾಗಿದ್ದು, ಈ ವೇಳೆ ಸಿಎನ್ ಜಿ ಸಿಲಿಂಡರ್‌ನಿಂದ ಬೆಂಕಿ ಹೊತ್ತಿಕೊಂಡಿದೆ.


ಬೆಂಕಿಯ ಕೆನ್ನಾಲಗೆಗೆ ಸ್ಥಳೀಯರಿಗೂ ಆಟೋ ರಿಕ್ಷಾದ ಹತ್ತಿರಕ್ಕೂ ಹೋಗಲು ಆಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಪೊಲೀಸರು ಮೃತದೇಹಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರಿಬ್ಬರ ಶವಗಳು ಗುರುತು ಹಿಡಿಯಲಾಗದಷ್ಟು ಸುಟ್ಟು ಕರಕಲಾಗಿದ್ದರಿಂದ ಅವರನ್ನು ಗುರುತಿಸಲು ಸಾಕಷ್ಟು ಸಮಯ ಹಿಡಿಯಿತು. ಪೊಲೀಸರು ಆಟೋದಲ್ಲಿದ್ದ ಲೈಸೆನ್ಸ್ ಪ್ಲೇಟ್ ಬಳಸಿ ಅದು ಅಭಿಲಾಷ್ ಅವರದ್ದೇ ಎಂದು ನಿರ್ಧರಿಸಿದ್ದಾರೆ. ಮತ್ತೊಂದೆಡೆ, ಸಜೀಶ್ ತನ್ನ ಸಹೋದರಿಯ ಮನೆಗೆ ಭೇಟಿ ನೀಡಲು ಆಗಾಗ್ಗೆ ಅಭಿಲಾಷ್ ಆಟೋದಲ್ಲಿ ಬಂದಿದ್ದ ಎಂದು ತಿಳಿದು ಬಂದಿದೆ.ದುರಂತವೆಂದರೆ, ಸಹೋದರಿಯ ಮನೆಯಿಂದ ಕೇವಲ ನೂರು ಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ. ಅಭಿಲಾಷ್ ಆರು ತಿಂಗಳ ಹಿಂದೆಯಷ್ಟೇ ಆಟೋ ಖರೀದಿಸಿದ್ದರು.

ಸ್ಟೂಡೆಂಟ್ ವೀಕ್ಷಿತ್ ಸೂಸೈಡ್ ಪ್ರಕರಣ – ತಂದೆ ಕೊಟ್ಟ ದೂರಿನಲ್ಲೇನಿದೆ

Posted by Vidyamaana on 2023-10-10 21:21:15 |

Share: | | | | |


ಸ್ಟೂಡೆಂಟ್ ವೀಕ್ಷಿತ್ ಸೂಸೈಡ್ ಪ್ರಕರಣ – ತಂದೆ ಕೊಟ್ಟ ದೂರಿನಲ್ಲೇನಿದೆ

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೃತ ವೀಕ್ಷಿತ್ ರವರ ತಂದೆ ಚೆನ್ನಪ್ಪ ಗೌಡ ರವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.


ಕುರಿಯ ಗಡಾಜೆ ನಿವಾಸಿ ಚೆನ್ನಪ್ಪ ಗೌಡ ರವರು ಲಾರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಚೆನ್ನಪ್ಪ ಗೌಡ ರವರಿಗೆ ಇಬ್ಬರು ಗಂಡು ಮಕ್ಕಳಿದ್ದು, ಹಿರಿಯ ಮಗ ಬೆಂಗಳೂರಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಮಾಡಿಕೊಂಡಿದ್ದು, ಕಿರಿಯ ಮಗ ವೀಕ್ಷಿತ್ ಪುತ್ತೂರಿನ ಫಿಲೋಮಿನ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅ.9 ರಂದು ತನ್ನ ಪತ್ನಿ ಮತ್ತು ಮಗನೊಂದಿಗೆ ಊಟ ಮಾಡಿ ಮಲಗಿದ್ದು, ಮಗ ವೀಕ್ಷಿತ್ ಆತನ ಬೆಡ್ ರೂಮಿನಲ್ಲಿ ಮಲಗಿರುತ್ತಾನೆ.


ಅ.10 ರಂದು ಬೆಳಿಗ್ಗೆ ವೀಕ್ಷಿತ್ ರವರ ರೂಮಿನ ಬಾಗಿಲು ಬಡಿದಾಗ ವೀಕ್ಷಿತ್ ರವರಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದ ಕಾರಣ ಪತ್ನಿಯನ್ನು ಕರೆದು ಇಬ್ಬರು ಸೇರಿ ಜೋರಾಗಿ ಕರೆದಿದರೂ ವೀಕ್ಷಿತ್ ರವರಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದ ಕಾರಣ ಸಂಶಯಗೊಂಡು ಒಂದು ಪಿಕಾಸಿನಲ್ಲಿ ಬಾಗಿಲನ್ನು ಮೀಟಿ ಬಾಗಿಲನ್ನು ತೆಗೆದು ನೋಡಿದಾಗ ರೂಮಿನಲ್ಲಿರುವ ಫ್ಯಾನಿಗೆ

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿರುತ್ತದೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ UDR .No: 36/2023 ಕಲo: 174 CRPC ರಂತೆ ಪ್ರಕರಣ ದಾಖಲಾಗಿದೆ.

ಮೃತ ವೀಕ್ಷಿತ್ ತಂದೆ ನೀಡಿದ ದೂರಿನಲ್ಲಿ ಮಗ ಯಾವುದೋ ವಿಚಾರಕ್ಕೆ ಮನಸಿನಲ್ಲಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಲ್ಲೇಖಿಸಿದ್ದು, ಮರಣದ ಮೇಲೆ ಯಾವುದೇ ಸಂಶಯವಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವೀಕ್ಷಿತ್ ರಾತ್ರಿ ಇನ್ಸ್ಟಾಗ್ರಾಮ್ ನಲ್ಲಿ ಸ್ನೇಹಿತೆಯ ಫೋಟೋ ಸ್ಟೋರಿ ಹಾಕಿದ್ದ ಎಂಬ ಮಾಹಿತಿ ಆತನ ಆಪ್ತ ವಲಯದಿಂದ ತಿಳಿದು ಬಂದಿದೆ.

ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಮಧ್ಯಂತರ ಜಾಮೀನು ಮಂಜೂರು

Posted by Vidyamaana on 2023-12-28 19:30:06 |

Share: | | | | |


ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಮುಸ್ಲಿಂ ಮಹಿಳೆಯರನ್ನು ನಿಂದಿಸಿದ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಮಧ್ಯಂತರ ಜಾಮೀನು ಮಂಜೂರು ಆಗಿದೆ ಎಂದು ಹಿರಿಯ ವಕೀಲ ಮತ್ತು ಕರ್ನಾಟಕದ ಮಾಜಿ ಎಎಜಿ ಅರುಣಾ ಶ್ಯಾಮ್ ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ನೀಡಿದ್ದಾರೆ.ಡಿಸೆಂಬರ್ 24 ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಹನುಮ ಜಯಂತಿ ಆಚರಣೆಯ ಅಂಗವಾಗಿ ನಡೆದ ‘ಸಂಕೀರ್ತನಾ ಯಾತ್ರೆ’ಯಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಪ್ರಭಾಕರ್ ಭಟ್ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.

ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಆರೋಪಿಗೆ ಜಾಮೀನು

Posted by Vidyamaana on 2023-12-06 21:25:29 |

Share: | | | | |


ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಆರೋಪಿಗೆ ಜಾಮೀನು

ಪುತ್ತೂರು: ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು, ಅಪಹರಿಸಿ, ನಂತರ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ ಕಡಬದ  ಯಜ್ಞೇಶ್ ಎಂಬವರಿಗೆ  ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಘಟನೆಯ ಹಿನ್ನಲೆ :

ದಿನಾಂಕ 10/10/2020 ರಂದು ಬೆಳಿಗ್ಗೆ 07:30 ಗಂಟೆಗೆ ಅಪ್ರಾಪ್ತ ಬಾಲಕಿಯು ತನ್ನ ಮನೆಯಿಂದ ಹೊರಡುವಾಗ ತನಗೆ ಇನ್ನು ಮೂರು ದಿನ ವಿಶೇಷ ತರಗತಿಯಿದ್ದು, ಬೊಳುವಾರಿನ  ತನ್ನ ಗೆಳತಿಯ ಮನೆಗೆ ಹೋಗಿ ಶುಕ್ರವಾರದಂದು ಸಂಜೆ ಮನೆಗೆ ಬರುವುದಾಗಿ ತಿಳಿಸಿ ಕಾಲೇಜಿಗೆ ಹೋಗಿರುತ್ತಾಳೆ. ಬಳಿಕ ಅಪ್ರಾಪ್ತ ಬಾಲಕಿಯು ಮನೆಗೆ ಫೋನ್ ಮಾಡದೆ ಇರುವುದರಿಂದ, ಅವಳ ಸ್ನೇಹಿತೆಯಲ್ಲಿ ವಿಚಾರಿಸಿದಾಗ, ಅವಳು ಸ್ನೇಹಿತೆಯ ಮನೆಗೆ ಹೋಗದೆ ಇರುವುದನ್ನು ತಿಳಿದು, ನಂತರ  ಕಾಲೇಜಿನಲ್ಲಿ ವಿಚಾರಿಸಿದಾಗ, ಮಧ್ಯಾಹ್ನದವರೆಗೆ ಕಾಲೇಜಿಗೆ ಬಂದು ನಂತರ ಬಂದಿರುವುದಿಲ್ಲ ಎಂಬುದನ್ನು ತಿಳಿದು, ಅಪ್ರಾಪ್ತ ಬಾಲಕಿಯ ತಂದೆಯು  ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನಂತೆ ಪೊಲೀಸರು  ಭಾರತೀಯ ದಂಡ ಸಂಖ್ಯೆಯ ಕಲಂ 363 ರಂತೆ ಪ್ರಕರಣ ದಾಖಲಿಸಿದ್ದರು. ಈ ನಡುವೆ ಅಪ್ರಾಪ್ತ ಬಾಲಕಿಯು ತನ್ನ ತಂದೆಯೊಂದಿಗೆ ದಿನಾಂಕ 13/10/2023 ರಂದು ಪೊಲೀಸ್ ಠಾಣೆಗೆ ಹಾಜರಾಗಿ ಆರೋಪಿಯನ್ನು ಕಳೆದ ಮೂರು ತಿಂಗಳಿನಿಂದ ಪ್ರೀತಿಸುತ್ತಿದ್ದು, ದಿನಾಂಕ 10 /10 /2023 ರಂದು ಮಡಿಕೇರಿಗೆ ಹೋಗಿ ಅಲ್ಲಿ ಆರೋಪಿಯ  ಅತ್ತೆ ಮನೆಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿರುವುದಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಈ ಆಧಾರದಲ್ಲಿ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ ಕಾಯಿದೆಯ ಕಲಂ 4ರನ್ವಯ ಪ್ರಕರಣ ದಾಖಲಿಸಿ, ತದನಂತರ ತನಿಖೆ ಮುಂದುವರಿಸಿ, ಆರೋಪಿಯನ್ನಲಾಗಿದ್ದ  ಯಜ್ಞೆಶ್ ರವರನ್ನು ಬಂಧಿಸಿ, ವಿಚಾರಣೆ ಮುಂದುವರಿಸಿದ್ದರು.


    ಆರೋಪಿಯು ತನ್ನ ಪರ ವಕೀಲರಾದ ಕಜೆ ಲಾ ಚೇಂಬರ್ಸ್ ನ  ಶ್ರೀ ಮಹೇಶ್ ಕಜೆ ಅವರ ಮುಖಾಂತರ   ಜಾಮೀನು ಕೋರಿ ಅರ್ಜಿ   ಸಲ್ಲಿಸಿದ್ದರು. ವಾದ -ವಿವಾದವನ್ನು ಆಲಿಸಿದ ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕಾಂತರಾಜು ಎಸ್ ವಿ ರವರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.



Leave a Comment: