ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಇಷ್ಟು ದಿನ ಪಾಸಾಗ್ತಿತ್ತು ಇನ್ನು ಕಷ್ಟ - ವಿಧಾನಸೌಧದಲ್ಲಿ ನಕಲಿ ಪಾಸ್ ಗಳದ್ದೇ ಕಾರುಬಾರು

Posted by Vidyamaana on 2023-07-15 10:49:03 |

Share: | | | | |


ಇಷ್ಟು ದಿನ ಪಾಸಾಗ್ತಿತ್ತು ಇನ್ನು ಕಷ್ಟ - ವಿಧಾನಸೌಧದಲ್ಲಿ ನಕಲಿ ಪಾಸ್ ಗಳದ್ದೇ ಕಾರುಬಾರು

ಬೆಂಗಳೂರು: ಇತ್ತೀಚೆಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸಭೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಕುರ್ಚಿಯಲ್ಲಿ ಕುಳಿತ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿಧಾನಸೌಧ ಪ್ರವೇಶ ದ್ವಾರದಲ್ಲಿ ಪೊಲೀಸರು ತಪಾಸಣೆ ಚುರುಕುಗೊಳಿಸಿದ್ದು, ಕಳೆದ ನಾಲ್ಕೈದು ದಿನಗಳಲ್ಲಿ 250ಕ್ಕೂ ಹೆಚ್ಚು ನಕಲಿ ಪಾಸ್‌ ಗಳು ಪತ್ತೆಯಾಗಿವೆ. ಅಲ್ಲದೆ, ಶಾಸಕರು, ಸಚಿವರ ಹೆಸರಿನ ಪಾಸ್‌ಗಳನ್ನು ಕಲರ್‌ ಜೆರಾಕ್ಸ್‌ ಮಾಡಿಸಿ ಭದ್ರತಾ ಸಿಬ್ಬಂದಿಗೆ ಯಾಮಾರಿಸುತ್ತಿದ್ದ ಸಂಚು ಬಹಿರಂಗಗೊಂಡಿದೆ.ವಿಧಾನಸೌಧ ಪ್ರವೇಶಕ್ಕೆ ಶಾಸಕರು, ಸಚಿವರಿಗೆ ಗುರುತಿನ ಚೀಟಿ ನೀಡಲಾಗುತ್ತದೆ. ಅದೇ ರೀತಿ ಅವರ ಸಿಬ್ಬಂದಿ ಮತ್ತು ವಾಹನಗಳಿಗೂ ಅಧಿಕೃತ ಪಾಸ್‌ ನೀಡಲಾಗುತ್ತದೆ. ಅದನ್ನು ದುರ್ಬಳಕೆ ಮಾಡಿಕೊಳ್ಳುವ ವಂಚಕರು, ಈ ಪಾಸ್‌ಗಳನ್ನು ದುರ್ಬಳಕೆ ಮಾಡಿಕೊಂಡು ಕಲರ್‌ ಜೆರಾಕ್ಸ್‌ ಮಾಡಿ ಒಳ ಪ್ರವೇಶಿಸುತ್ತಿರುವುದು ಪತ್ತೆಯಾಗಿದೆ. ಹೀಗೆ ಕಳೆದ 4-5 ದಿನಗಳಲ್ಲಿ ಸುಮಾರು 300 ಮಂದಿ ಈ ರೀತಿ ನಕಲಿ ಪಾಸ್‌ಗಳನ್ನು ಬಳಸಿಕೊಂಡು ವಿಧಾನಸೌಧ ಪ್ರವೇಶಿಸಿರುವುದು ಪತ್ತೆಯಾಗಿದೆ.ನಕಲಿ ಪಾಸ್‌ಗಳು ಮಾತ್ರವಲ್ಲ, ಅವಧಿ ಮೀರಿದ ಪಾಸ್‌ಗಳು ತಪಾಸಣೆ ವೇಳೆ ಸಿಕ್ಕಿವೆ. ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಜನಪ್ರತಿನಿಧಿಗಳು ಮತ್ತು ಅವರ ಸಿಬ್ಬಂದಿಗೂ ಮಾಹಿತಿ ನೀಡಿ ನಕಲಿ ಪಾಸ್‌ಗಳ ಕಡಿವಾಣಕ್ಕೆ ಸಹಾಯ ನೀಡುವಂತೆ ಕೋರಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.


ಜುಲೈ 10ರಂದು ಬಜೆಟ್‌ ಮಂಡನೆ ವೇಳೆ ತಿಪ್ಪೇರುದ್ರಸ್ವಾಮಿ ಎಂಬಾತ ದೇವದುರ್ಗ ಶಾಸಕಿ ಕೆರೆಮ್ಮ ಸ್ಥಾನದಲ್ಲಿ ಕೆಲ ಹೊತ್ತು ಕುಳಿತುಕೊಂಡಿರುವುದು ಪತ್ತೆಯಾಗಿತ್ತು. ಹೀಗಾಗಿ ವಿಧಾನಸೌಧ ಭದ್ರತಾ ಉಸ್ತುವಾರಿ ವಹಿಸಿಕೊಂಡಿದ್ದ ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಡಾ ಎಸ್‌ .ಡಿ.ಶರಣಪ್ಪ, ಎಲ್ಲ ಪ್ರವೇಶ ದ್ವಾರದಲ್ಲಿ ತಪಾಸಣೆ ಬಿಗಿಗೊಳಿಸಿದರು.



ಮತ್ತೂಂದೆಡೆ ಅದೇ ದಿನ ಜು. 10ರಂದು ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಉದ್ಯೋಗಿ ಬ್ಯಾಗಿನಲ್ಲಿ ಚಾಕು ಇರುವುದು ಪತ್ತೆಯಾಗಿದ್ದು, ಪೊಲೀಸ್‌ ವಿಚಾರಣೆ ವೇಳೆ ಕ್ರಿಮಿನಲ್‌ ಉದ್ದೇಶವಿಲ್ಲದಿರುವುದು ಕಂಡು ಬಂದಿದ್ದರಿಂದ ಮುಚ್ಚಳಿಕೆ ಪತ್ರ ಬರೆಸಿ ಪೊಲೀಸರು ಬಿಟ್ಟು ಕಳುಹಿಸಿದ್ದರು. ಹೀಗಾಗಿ ವಿಧಾನಸೌಧಕ್ಕೆ ಪ್ರವೇಶಿಸುವ ಎಲ್ಲಾ ಗೇಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ತಪಾಸಣೆ ಬಿಗಿಗೊಳಿಸುವಂತೆ ಸೂಚಿಸಲಾಗಿದೆ.ಅಲ್ಲದೆ, ಬ್ಯಾಗ್‌ ಸೇರಿ ಇತರೆ ವಸ್ತುಗಳನ್ನು ಇಟ್ಟುಕೊಂಡು ಅನುಮಾನಸ್ಪದವಾಗಿ ಬರುವ ಎಲ್ಲರನ್ನು ಲೋಹಪರಿಶೋಧಕ ಯಂತ್ರಗಳ ಪರೀಕ್ಷೆ ಒಳಪಡಿಸಬೇಕು. ಅಲ್ಲದೆ, ಬ್ಯಾಗ್‌ಗಳನ್ನು ಕಡ್ಡಾಯವಾಗಿ ಸ್ಕಾನಿಂಗ್‌ಗೆ ಒಳಪಡಿಸಬೇಕು. ಅಧಿಕೃತ ಗುರುತಿನ ಚೀಟಿ ಅಥವಾ ಪಾಸ್‌ ಇದ್ದರೆ ಮಾತ್ರ ಒಳಪ್ರವೇಶಿಸಲು ಬಿಡಬೇಕು ಎಂದು ಮಾರ್ಷಲ್‌ಗ‌ಳಿಗೂ ಖಡಕ್‌ ಎಚ್ಚರಿಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.


ಈ ಕುರಿತು ಮಾಹಿತಿ ನೀಡಿದ ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಡಾ ಎಸ್‌.ಡಿ.ಶರಣಪ್ಪ, ಮುಂದಿನ ದಿನಗಳಲ್ಲಿ ನಕಲಿ ಪಾಸ್‌ ಬಳಸಿದರೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ವಿಟ್ಲ: ಬೊರ್ ವೆಲ್ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ - ಸವಾರ ರಂಜಿತ್ ಮೃತ್ಯು

Posted by Vidyamaana on 2023-03-18 10:49:06 |

Share: | | | | |


ವಿಟ್ಲ: ಬೊರ್ ವೆಲ್ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ - ಸವಾರ ರಂಜಿತ್ ಮೃತ್ಯು

ವಿಟ್ಲ:ಮಾ 18 ಕಡೂರು ಕಾಂಞಗಾಡ್ ಅಂತರಾಜ್ಯ ಹೆದ್ದಾರಿಯವಿಟ್ಲ ಸಮೀಪದ ಕಾಶಿ ಮಠ ಬಳಿ ಕೊಳವೆ ಬಾವಿ ಕೊರೆಯುವ ಯಂತ್ರ ಹೊತ್ತ ವಾಹನ ಹಾಗೂ ದ್ವಿಚಕ್ರ ವಾಹನ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ವಾಹನ ಸಹ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮಾ 18 ರಂದು ಮಧ್ಯಾಹ್ನ ದುರ್ಘಟನೆ ನಡೆದಿದೆ.ಅಲಂಗಾರು ಬ್ರಾಣ ಪಾದೆ ನಿವಾಸಿ ರಂಜಿತ್ (19) ಸ್ಥಳದಲ್ಲೆ ಮೃತಪಟ್ಟ ಯುವಕ. ಸವಾರ ನಿತಿನ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ ಕೊಳವೆ ಬಾವಿ ಕೊರೆಯುವ ಯಂತ್ರವಿದ್ದ ಲಾರಿಯ ಚಾಲಕ ಅಜಾಗರೂಕತೆಯಿಂದ ಹಾಗೂ ನಿರ್ಲಕ್ಷ್ಯತನದಿಂದ, ಘನ ವಾಹನವೆಂದು ಲೆಕ್ಕಿಸದೆ ಚಲಾಯಿಸಿದೆ ಅಪಘಾತಕ್ಕೆ ಕಾರಣವೆಂದು ಸ್ಥಳೀಯರು ಅರೋಪಿಸಿದ್ದಾರೆ.ಢಿಕ್ಕಿಯ ಬಳಿಕ ಲಾರಿಯು ಬೈಕ್ ಸವಾರರನ್ನು ಕೆಲ ಮೀಟರುಗಳ ದೂರ ಎಳೆದೊಯ್ದಿದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆ ಛಿದ್ರವಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

ರನ್ ವೇ ನಲ್ಲಿ ಬದ್ಧ ವೈರಿಗಳ ಕಾಳಗ: ನಾಗರ ಹಾವಿನ ಮೇಲೆ 3 ಮುಂಗುಸಿಗಳ ದಾಳಿ, ಅಪರೂಪದ Video

Posted by Vidyamaana on 2024-08-13 07:51:26 |

Share: | | | | |


ರನ್ ವೇ ನಲ್ಲಿ ಬದ್ಧ ವೈರಿಗಳ ಕಾಳಗ: ನಾಗರ ಹಾವಿನ ಮೇಲೆ 3 ಮುಂಗುಸಿಗಳ ದಾಳಿ, ಅಪರೂಪದ Video

ಪಾಟ್ನಾ: ವಿಮಾನ ನಿಲ್ದಾಣದ ರನ್ ವೇ ನಲ್ಲಿಯೇ ಬದ್ಧ ವೈರಿಗಳಾದ ಹಾವು ಮತ್ತು ಮುಂಗುಸಿಗಳು ಕಾದಾಡಿರುವ ವಿಡಿಯೋ ವೈರಲ್ ಆಗುತ್ತಿದೆ.ಹಾವು ಮತ್ತು ಮುಂಗುಸಿ ಜೈವಿಕವಾಗಿ ಬದ್ಧವೈರಿಗಳು.. ಇವುಗಳ ಕದನ ಮನುಷ್ಯಕ ಕಣ್ಣಿಗೆ ಕಾಣಸಿಗುವುದು ಅಪರೂಪ. ಆದರೆ ಬಿಹಾರ ರಾಜಧಾನಿ ಪಾಟ್ನಾದ ವಿಮಾನ ನಿಲ್ದಾಣದ ರನ್ ವೇ ಮೇಲೆಯೇ ಇಂತಹ ಅಪರೂಪದ ದೃಶ್ಯ ಕಂಡಿದೆ.

ಕಂಕನಾಡಿ ರಸ್ತೆಯಲ್ಲೇ ನಮಾಝ್ ವಿಚಾರ - ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಏನಂದ್ರು?

Posted by Vidyamaana on 2024-05-30 22:05:48 |

Share: | | | | |


ಕಂಕನಾಡಿ ರಸ್ತೆಯಲ್ಲೇ ನಮಾಝ್ ವಿಚಾರ - ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಏನಂದ್ರು?

ಮಂಗಳೂರು : ಕಂಕನಾಡಿಯ ಒಳ ರಸ್ತೆಯೊಂದರಲ್ಲಿ ನಾಲ್ಕಾರು ಜನ ಮಸೀದಿಯ ಗೇಟ್ ಬಳಿ ರಸ್ತೆಯಲ್ಲಿ ನಮಾಝ್ ಮಾಡಿದ ಘಟನೆ ಆಕಸ್ಮಿಕವಾಗಿ ನಡೆದಿರುವಂತದ್ದು. ಸಾರ್ವಜನಿಕರಿಗೆ ತೊಂದರೆಯಾಗುವಂತಹ ಯಾವುದೇ ವಿಚಾರವನ್ನೂ ಒಪ್ಪುವಂತದ್ದಲ್ಲ. ಆದರೆ ಈ ಪ್ರಕರಣ ಅಷ್ಟು ಗಂಭೀರವೂ ಅಲ್ಲ.ಪೊಲೀಸರು ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದು ಮುಂದೆ ಈ ರೀತಿ ನಡೆಯದಂತೆ ಜಾಗೃತೆ ವಹಿಸಲು ಸೂಚಿಸಬಹುದಿತ್ತು. ಪೊಲೀಸರೇ ಏಕಾಏಕಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವುದು ಸರಿಯಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದ್ದಾರೆ.

ಪೂನಂ ಪುಣ ಆತಿಜಲಿಗೆ.. ಸತ್ತಳೆಂದು ನಂಬಿದ್ದ ಪೂನಂ ಪಾಂಡೆ ಕೊಟ್ರು ಶಾಕಿಂಗ್ ನ್ಯೂಸ್

Posted by Vidyamaana on 2024-02-03 13:35:15 |

Share: | | | | |


ಪೂನಂ ಪುಣ ಆತಿಜಲಿಗೆ.. ಸತ್ತಳೆಂದು ನಂಬಿದ್ದ ಪೂನಂ ಪಾಂಡೆ ಕೊಟ್ರು ಶಾಕಿಂಗ್ ನ್ಯೂಸ್

ಮುಂಬೈ : ಬಾಲಿವುಡ್​ ನಟಿ, ಮಾದಕ ಚೆಲುವೆ ಪೂನಂ ಪಾಂಡೆ ಸತ್ತಿಲ್ಲ ಬದುಕಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ರಿವೀಲ್​ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟಿ ಪೂನಂ ಪಾಂಡೆ ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾರೆ.ನಿಮ್ಮೆಲ್ಲರೊಂದಿಗೆ ಮಹತ್ವದ ವಿಷಯವನ್ನು ಹಂಚಿಕೊಳ್ಳಲು ಬಯಸಿದ್ದು, ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್​ನಿಂದ ನಾನು ಬಳಲುತ್ತಿಲ್ಲ. ಆದರೆ, ದುರಂತವೆಂದರೆ ಈ ರೋಗವನ್ನು ಹೇಗೆ ಎದುರಿಸಬೇಕೆಂಬುದರ ಬಗ್ಗೆ ಜ್ಞಾನದ ಕೊರತೆಯಿಂದ ಸಾವಿರಾರು ಮಹಿಳೆಯರ ಜೀವವನ್ನು ಈ ರೋಗ ಬಲಿ ಪಡೆದುಕೊಂಡಿದೆ.


ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಭಿನ್ನವಾಗಿ, ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಗಟ್ಟಬಲ್ಲದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳು ಪ್ರಮುಖವಾಗಿದ್ದು, ಈ ಕಾಯಿಲೆಯಿಂದ ಯಾರೂ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳಲು ನಾವು ಎಚ್ಚರದಿಂದಿರಬೇಕು. ವಿಮರ್ಶಾತ್ಮಕ ಅರಿವಿನೊಂದಿಗೆ ಒಬ್ಬರಿಗೊಬ್ಬರು ಜಾಗೃತಿ ಮೂಡಿಸೋಣ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಹಿಳೆಯರಿಗೆ ತಿಳಿಸೋಣ ಏನು ಮಾಡಬಹುದೆಂಬುದನ್ನು ಒಟ್ಟಾಗಿ, ರೋಗದ ವಿನಾಶಕಾರಿ ಪರಿಣಾಮವನ್ನು ಕೊನೆಗೊಳಿಸಲು ಶ್ರಮಿಸೋಣ ಎಂದು ಹೇಳಿದ್ದಾರೆ.

ಬಿಗ್ ಬಾಸ್‌ನಲ್ಲಿ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ಬೋಳಿಸಿದ ಕಡಬದ ಯುವಕ

Posted by Vidyamaana on 2024-01-30 07:25:20 |

Share: | | | | |


ಬಿಗ್ ಬಾಸ್‌ನಲ್ಲಿ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ಬೋಳಿಸಿದ ಕಡಬದ ಯುವಕ

ಕಡಬ: ಬಿಗ್ ಬಾಸ್ ಸೀಸನ್ 10 ರಲ್ಲಿ ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಕಡಬದ ಯುವಕ ಝೈನುಲ್ ಆಬಿದ್ ಎಂಬ ಯುವಕ ಅರ್ಧ ಗಡ್ಡ, ಮೀಸೆ ತೆಗೆದು ವೈರಲ್ ಆಗಿದ್ದಾನೆ.ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝೈನುಲ್ ಆಬಿದ್, ಈ ಸಲದ ಬಿಗ್ ಬಾಸ್ ಸೀಸನ್‌ನಲ್ಲಿ ಡ್ರೋಣ್ ಪ್ರತಾಪ್ ವಿನ್ನರ್ ಆಗಿ ಹೊರಬರಲಿದ್ದಾರೆ. ಪ್ರತಾಪ್ ಏನಾದರೂ ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿ ವೀಡಿಯೋ ಷೇರ್ ಮಾಡಿದ್ದನು. ಜೊತೆಗೆ ಹಾಗಾದರೆ ಹಸಿ ಮೆಣಸಿನಕಾಯಿ ತಿನ್ನುವುದಾಗಿಯೂ ಮತ್ತೊಂದು ವೀಡಿಯೋ ಹರಿಯಬಿಟ್ಟಿದ್ದನು.


ಕೊನೆಗೂ ಬಿಗ್ ಬಾಸ್‌ನಲ್ಲಿ ಕಾರ್ತಿಕ್ ವಿನ್ನರ್ ಆಗಿ ಹೊರ ಬಂದಿದ್ದು, ಪ್ರತಾಪ್ ರನ್ನರ್ ಅಪ್ ಅಷ್ಟೇ ಆಗಿದ್ದಾರೆ. ಫಲಿತಾಂಶ ಹೊರ ಬರುತ್ತಲೇ ಆಬಿದ್ ತಾನು ಹಾಕಿದ ಚಾಲೆಂಜ್‌ನಂತೆ ಅರ್ಧ ಗಡ್ಡ ಮೀಸೆ ಬೋಳಿಸಿಕೊಂಡು ಹಸಿ ಮೆಣಸಿನಕಾಯಿ ತಿಂದು ವೀಡಿಯೋ ಮಾಡಿ ಅಪ್ಲೋಡ್ ಮಾಡಿದ್ದಾನೆ. ವೀಡಿಯೋ ವೈರಲ್ ಆಗಿದೆ.

Recent News


Leave a Comment: