ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಆಯಿಷಾ ಶಹಿಮ ನಿಧನ

Posted by Vidyamaana on 2024-03-20 15:57:15 |

Share: | | | | |


ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಆಯಿಷಾ ಶಹಿಮ ನಿಧನ

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.

ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆ ಗೆ ದಾಖಲು

Posted by Vidyamaana on 2024-02-29 04:26:07 |

Share: | | | | |


ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆ ಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಧಾನಸಭಾ ಕಲಾಪದಲ್ಲೂ ಭಾಗವಹಿಸಲು ಸಾಧ್ಯವಾಗದೆ ಅವರು ಇಂದು ಜಯನಗರದ ಅಫೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.ವಿಧಾನಸಭಾ ಕಲಾಪದಲ್ಲಿ ಪಾಲ್ಗೊಳ್ಳಲು ಅವರು ಇಂದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ್ದರು ಈ ವೇಳೆ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ತಕ್ಷಣ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ರಾಜ್ಯಸಭಾ ಚುನಾವಣೆ ಮುಕ್ತಾಯದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದ್ದ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದೆ. ಇದಕ್ಕೂ ಮುನ್ನ ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ಗಂಟಲು ಇನ್ಫೆಕ್ಷನ್‌ನಿಂದ ಬಳಲುತ್ತಿದ್ದರು. ಇನ್ನು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ಯಾಲೆಸ್ತೀನ್ ಪರ ಘೋಷಣೆ ವಿವಾದ; ಪೊಳ್ಳು ಬೆದರಿಕೆಗೆ ಹೆದರುವುದಿಲ್ಲ: ಅಸಾದುದ್ದೀನ್ ಓವೈಸಿ

Posted by Vidyamaana on 2024-06-26 20:07:03 |

Share: | | | | |


ಪ್ಯಾಲೆಸ್ತೀನ್ ಪರ ಘೋಷಣೆ ವಿವಾದ; ಪೊಳ್ಳು ಬೆದರಿಕೆಗೆ ಹೆದರುವುದಿಲ್ಲ: ಅಸಾದುದ್ದೀನ್ ಓವೈಸಿ

ದೆಹಲಿ ಜೂನ್ 26: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಮಾಡಿದ ಹೇಳಿಕೆ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು. ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಓವೈಸಿ ಅವರು ಪ್ಯಾಲೆಸ್ತೀನ್‌ನ ಯುದ್ಧ ಪೀಡಿತ ಪ್ರದೇಶಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಇದನ್ನು ಆಡಳಿತಾರೂಢ ಪಕ್ಷದ ಸಂಸದರು ಖಂಡಿಸಿದ್ದಾರೆ.

ಐದು ಬಾರಿ ಹೈದರಾಬಾದ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಓವೈಸಿ ಜೈ ತೆಲಂಗಾಣ ಮತ್ತು ಜೈ ಪ್ಯಾಲೆಸ್ತೀನ್ ಘೋಷಣೆಗಳನ್ನು ಕೂಗಿದ್ದರು. ಈ ಘೋಷಣೆಗೆ ಆಕ್ರೋಶ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ, ಓವೈಸಿ ಇಂಥಾ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನನಗೂ ಸಂವಿಧಾನದ ಬಗ್ಗೆ ಸ್ವಲ್ಪ ತಿಳಿದಿದೆ, ಈ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.

ಅಸಾದುದ್ದೀನ್ ಓವೈಸಿ ಟ್ವೀಟ್

ಪುತ್ತೂರಿನ ಗ್ರಾಮೀಣ ರಸ್ತೆಗಿಳಿದ ಕ್ಲಾಸ್ ಆನ್ ವ್ಹೀಲ್ಸ್ ಕಂಪ್ಯೂಟರ್ ಸಾಕ್ಷರತೆಯ ಕ್ರಾಂತಿ ಪ್ರಾರಂಭ!

Posted by Vidyamaana on 2023-11-21 09:59:26 |

Share: | | | | |


ಪುತ್ತೂರಿನ ಗ್ರಾಮೀಣ ರಸ್ತೆಗಿಳಿದ ಕ್ಲಾಸ್ ಆನ್ ವ್ಹೀಲ್ಸ್  ಕಂಪ್ಯೂಟರ್ ಸಾಕ್ಷರತೆಯ ಕ್ರಾಂತಿ ಪ್ರಾರಂಭ!

ಪುತ್ತೂರು: ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ದಶಮಾನೋತ್ಸವದ ಸವಿ ನೆನಪಿಗಾಗಿ ರಾಜ್ಯದಲ್ಲೇ ವಿನೂತನ ಯೋಜನೆಯಾದ ಕ್ಲಾಸ್ ಆನ್ ವ್ಹೀಲ್ಸ್ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದ ಕಂಪ್ಯೂಟರ್ ಸಾಕ್ಷರತೆಯ ಡಿಜಿಟಲ್ ಬಸ್‌ನ ಉದ್ಘಾಟನಾ ಸಮಾರಂಭ ಕುಂಜೂರುಪಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ರಿಬ್ಬನ್ ಕಟ್ ಮಾಡಿ ಉದ್ಘಾಟಿಸಿ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿ ವಾಟ್ಸಾಪ್ ಗ್ರೂಪೊಂದು ಆಕ್ಟೀವ್ ಆಗಿ ಕಂಪ್ಯೂಟರ್ ಸಾಕ್ಷರತೆ ಮಾಡುವಲ್ಲಿ ಪ್ರಯತ್ನ ಪಟ್ಟದ್ದು ಒಳ್ಳೆಯ ಬೆಳವಣಿಗೆ. ನಾನು ಕೂಡ ಸರಕಾರಿ ಶಾಲೆಯಲ್ಲಿಯೇ ಓದಿದವನು. ಅದರ ಮಿಡಿತ ನನಗೆ ಚೆನ್ನಾಗಿ ಗೊತ್ತಿದೆ. ಇದರ ಪ್ರಯೋಜನವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಿ ಎಂದು ಹೇಳಿದ ಅವರು ಈ ಯೋಜನೆಯ ನಿರ್ವಹಣೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.


     ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ರವರು ಮಾತನಾಡಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಮಕ್ಕಳು ಚೆನ್ನಾಗಿ ಓದಬೇಕೆಂಬ ಹಂಬಲ ಇರುತ್ತದೆ. ಕಂಪ್ಯೂಟರ್ ಸಾಕ್ಷರತೆಯಲ್ಲಿ ಕೆಲವು ಶಾಲೆಗೆ ಅವಕಾಶ ದೊರೆಯಲಿಲ್ಲ. ಇದೀಗ ಹನೀಫ್ ಪುತ್ತೂರುರವರು ಕಂಪ್ಯೂಟರ್ ಸಾಕ್ಷರತೆಗಾಗಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು. ಸರಕಾರಿ ಶಾಲೆಗೆ ಸಾಕಷ್ಟು ಸೌಲಭ್ಯಗಳನ್ನು ಸರಕಾರ ನೀಡುತ್ತಿದೆ. ಅಡಿಪಾಯ ಕೊಟ್ಟಾಗ ಮಕ್ಕಳು ಬೆಳೆಯಲು ಸಾಧ್ಯ. ಪ್ರಾಥಮಿಕ ಹಂತದಲ್ಲಿಯೇ ಕಂಪ್ಯೂಟರ್ ಕಲಿತರೆ ಮುಂದಿನ ವಿದ್ಯಾಭ್ಯಾಸಕ್ಕೆ ಉಪಯೋಗವಾಗುತ್ತದೆ. ನಮ್ಮ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಿ. ಕಂಪ್ಯೂಟರ್ ಕಲಿತು ಸಮಾಜಕ್ಕೆ ಮಾದರಿಯಾಗಿ ಎಂದರು.


ಪುತ್ತೂರು ಸಂತ ಫಿಲೋಮಿನಾ ಪಿಯು ಕಾಲೇಜಿನ ಪ್ರಾಂಶುಪಾಲ ಅಶೋಕ್ ರಾಯನ್ ಕ್ರಾಸ್ತಾರವರು ಮಾತನಾಡಿ ಇಂದಿನ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಬಹಳ ಮುಖ್ಯ. ಈ ಡಿಜಿಟಲ್ ಬಸ್ ನೋಡುವಾಗಲೇ ಸಂತೋಷವಾಗುತ್ತಿದೆ. ಇದರ ಹಿಂದಿರುವ ಯೋಚನೆ, ಯೋಜನೆ ವಿಶಿಷ್ಟವಾಗಿದೆ. ಇದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇನೆ. ಪ್ರಸ್ತುತ ದಿನದಲ್ಲಿ ಇದು ಪ್ರಮುಖವಾದ ಹೆಜ್ಜೆಯಾಗಿದೆ ಇದೊಂದು ಅದ್ಭುತವಾದ ಸಾಧನೆಯಾಗಿದೆ ಎಂದರು. ಇವರಿಗೆ ದೇವರ ಆಶೀರ್ವಾದ, ಸಹಕಾರ, ಪ್ರೋತ್ಸಾಹ ಸಿಗಲಿ. ಸರಕಾರಿ ಶಾಲಾ ಮಕ್ಕಳಿಗೆ ಇದರಿಂದ ಒಳ್ಳೆಯ ಫಲ ಸಿಗಲಿ ಎಂದರು.

ಪುತ್ತೂರು ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪನಾ ನಿರ್ದೇಶಕರಾದ ಡಾ. ಯು.ಪಿ.ಶಿವಾನಂದರು ಮಾತನಾಡಿ ಹನೀಫ್ ರವರು ಸರಕಾರಿ ಶಾಲೆಯಲ್ಲಿ ಕಲಿತ ಕಾರಣ ಡಿಜಿಟಲ್ ಕಲ್ಪನೆ ಅವರಿಗೆ ಬಂದಿದೆ. ಸಣ್ಣ ವಯಸ್ಸಿನಲ್ಲಿಯೇ ಸಾಕ್ಷರತೆ ಮುಖ್ಯ. ಗ್ರಾಮೀಣ ಭಾಗದಲ್ಲಿ ಕಂಪ್ಯೂಟರ್ ಶಿಕ್ಷಣ ಕೊರತೆಯಿರುವ ಶಾಲೆಗೆ ಸಾಕ್ಷರತೆ ಸೌಲಭ್ಯ ಒದಗಿಸುತ್ತಿದ್ದಾರೆ. ಡಿಜಿಟಲ್ ಬಸ್‌ನ ಕಲ್ಪನೆ ವಿಶೇಷವಾಗಿದೆ ಎಂದು ಹೇಳಿ ಅಭಿನಂದನೆ ಸಲ್ಲಿಸಿ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಸಮಾಜಮುಖಿ ಕಾರ್ಯಗಳನ್ನು ಉಲ್ಲೇಖಿಸಿದರು. ಹನೀಫ್ ರವರು ಸುದ್ದಿ ವೆಬ್‌ಸೈಟ್, ಇ-ಪೇಪರ್‌ಗಳ ಟೆಕ್ನಿಕಲ್ ಸಲಹೆಗಾರರಾಗಿದ್ದು ಎಲೆಮರೆಯ ಕಾಯಿಯಂತೆ ಇದ್ದಾರೆ. ಇಂದು ಮಕ್ಕಳ ಉತ್ತಮ ಭವಿಷ್ಯಕ್ಕೆ ನಾಂದಿ ಹಾಡಿದ್ದಾರೆ ಎಂದರು.


ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಹಮ್ಮದ್ ಎಂ.ಎಸ್ ಮಾತನಾಡಿ ಎಂ.ಚಾರಿಟೇಬಲ್ ಟ್ರಸ್ಟ್‌ನವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ. ಟ್ರಸ್ಟ್‌ನಿಂದ ಆಸ್ಪತ್ರೆಯಲ್ಲಿರುವರಿಗೆ ಸಹಾಯ ಹಸ್ತ ಚಾಚುವ ಮೂಲಕ ಉತ್ತಮ ಕಾರ್ಯ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ವಿದ್ಯಾವಂತರಾದರೆ ಸಾಕಾಗುವುದಿಲ್ಲ. ಕಂಪ್ಯೂಟರ್ ಶಿಕ್ಷಣ ಕೂಡ ಪಡೆಯಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದರು. ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್‌ರವರು ಮಾತನಾಡಿ, ಕುಂಜೂರು ಪಂಜ ಶಾಲೆಯ ಅಭಿವೃದ್ಧಿಗೆ ಫೇಸ್‌ಬುಕ್ ಮೂಲಕ ರೂ.15 ಲಕ್ಷ ಬಂದಿದೆ. ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಕೂಡ ಇದರಲ್ಲಿ ಪಾತ್ರ ವಹಿಸಿದೆ. ಇದರಲ್ಲಿ ಕೃಷಿಕರ ಬೆವರಿನ ಹಣ ಕೂಡ ಬಂದಿದೆ. ಕುಂಜೂರುಪಂಜ ಶಾಲೆ ಮೊದಲು ಅನುದಾನಿತ ಶಾಲೆಯಾಗಿದ್ದು ಇಂದು ಸರಕಾರಿ ಶಾಲೆಯಾಗಿ ಪರಿವರ್ತನೆ ಆಗಿದೆ. ಈ ಶಾಲೆಗೆ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಬಲ ಕೂಡ ಬಂದಿದೆ ಎಂದು ಹೇಳಿ ನೂತನ ಯೋಜನೆಗೆ ಶುಭ ಹಾರೈಸಿದರು.

ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಮಾತನಾಡಿ ಹನೀ‌ಫ್ ಅವರು ತನ್ನ ಹುಟ್ಟೂರಿಗೆ ಉತ್ತಮ ಕೊಡುಗೆ ನೀಡಿದ್ದಾರೆ. ಇದು ಎಲ್ಲರಿಗೂ ಪ್ರೇರಣೆಯಾಗಲಿ ಎಂದರು.


ಎಂ.ಫ್ರೆಂಡ್ಸ್ ನ ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ ಪ್ರಾಸ್ತಾವಿಕವಾಗಿ ಮಾತನಾಡಿ 2013ರಲ್ಲಿ ಮಾಡಿದ ಎಂ.ಫ್ರೆಂಡ್ಸ್ ವಾಟ್ಸಾಪ್ ಗ್ರೂಪ್ ಬಳಿಕ ಚಾರಿಟೇಬಲ್ ಟ್ರಸ್ಟ್ ಆಗಿ ಪರಿವರ್ತನೆಯಾಯಿತು. ಇದರ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಕುಂಜೂರುಪಂಜ ಶಾಲೆಯಲ್ಲಿ ಕಂಪ್ಯೂಟರ್ ಸಾಕ್ಷರತೆಯ ಡಿಜಿಟಲ್ ಬಸ್‌ನ್ನು ಉದ್ಘಾಟಿಸಿದ್ದೇವೆ. ಇದರ ಕನಸನ್ನು ಕಂಡವರು ಹನೀ‌ಫ್ ರವರು. ಸಾಮಾಜಿಕ ಕಳಕಳಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಈ ಯೋಜನೆ ಆರಂಭಿಸಿದ್ದಾರೆ ಎಂದರು. ಡಿಜಿಟಲ್ ಬಸ್ ಯೋಜನೆಗೆ ರೂ.60ಲಕ್ಷ ವೆಚ್ಚ ತಗುಲಿದ್ದು  ಹನೀಫ್ ರವರು ರೂ.50 ಲಕ್ಷ ನೀಡಿದ್ದಾರೆ. ಉಳಿದ ರೂ.10ಲಕ್ಷ ಮೊತ್ತವನ್ನುಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಭರಿಸಿದೆ. ಪುತ್ತೂರಿನ ಶಿಕ್ಷಣಾಧಿಕಾರಿ ಲೋಕೇಶ್‌ರವರು ಪೂರ್ಣ ಸಹಕಾರ ನೀಡಿದ್ದಾರೆ. ತಾಲೂಕಿನ 10 ಶಾಲೆಗಳನ್ನು ಕಂಪ್ಯೂಟರ್ ಸಾಕ್ಷರತೆಗಾಗಿ ನೀಡಿದ್ದಾರೆ. ಒಂದು ದಿನದಲ್ಲಿ ಮೂರು ಶಾಲೆಗೆ ಬಸ್ ಸಂಚರಿಸಲಿದ್ದು ವರ್ಷದಲ್ಲಿ 5೦೦೦ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತದೆ. ಡಿಜಿಟಲ್ ಬಸ್‌ಗೆ ತಿಂಗಳಿಗೆ 1ಲಕ್ಷರೂ. ವೆಚ್ಚ ನಿರ್ವಹಣೆಗೆ ಬೇಕಾಗಿದೆ. ಹಲವಾರು ದಾನಿಗಳು ನಿರ್ವಹಣಾ ವೆಚ್ಚಕ್ಕೆ ಕೈಜೋಡಿಸಿದ್ದಾರೆ. ಬಸ್ ಪಾರ್ಕಿಂಗ್‌ಗೆ ಫಿಲೋಮಿನಾ ಶಿಕ್ಷಣ ಸಂಸ್ಥೆ ಸೌಲಭ್ಯ ಒದಗಿಸಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಮಹಮ್ಮದ್ ಹನೀಫ್ ಜಿ. ಮಾತನಾಡಿ ಕುಂಜೂರುಪಂಜ ಶಾಲೆಯಲ್ಲಿ ಇಂದು ಹಬ್ಬದ ವಾತಾವರಣ ಆಗಿದೆ. ಹನೀಫ್ ರವರ ಯೋಜನೆಗೆ ಮುಂದೆ ನಿರ್ವಹಣೆ ಹೇಗೆ ಎನ್ನುವ ಯೋಚನೆ ಮಾಡಿದ್ದೆವು ಆಗ ಹನೀಫ್ ರವರು ನೀಡಿದ ಸಲಹೆಯಂತೆ ಇದನ್ನು ಮುಂದುವರಿಸುತಿದ್ದೇವೆ ಎಂದು ಹೇಳಿ ಈ ಯೋಜನೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.


ಸನ್ಮಾನ: ಕ್ಲಾಸ್ ಆನ್ ವ್ಹೀಲ್ಸ್ ಕಂಪ್ಯೂಟರ್ ಸಾಕ್ಷರತೆಯ ಡಿಜಿಟಲ್ ಬಸ್‌ನ ರೂವಾರಿ ಯುಎಇ ಮಹಮ್ಮದ್ ಬಿನ್ ರಾಶಿದ್ ಸ್ಪೇಸ್ ಸೆಂಟರ್ ಲ್ಯಾಬ್‌ನ ಕ್ಲೌಡ್ ಮತ್ತು ಇನ್ ಫ್ರಾಸ್ಟ್ರಕ್ಚರ್ ಮೆನೇಜರ್ ಜನಾಬ್ ಮಹಮ್ಮದ್ ಹನೀಫ್ ಅವರ ಪರವಾಗಿ ಅವರ ತಂದೆ ಅಬ್ಬಾಸ್ ಹಾಜಿ ಬಳ್ಳೇರಿರವರನ್ನು ಶಾಲು, ಸ್ಮರಣಿಕೆ, ಫಲಪುಷ್ಪ, ಹೂಗುಚ್ಚ ನೀಡಿ ಸನ್ಮಾನಿಸಲಾಯಿತು.

ಅಭಿನಂದನೆ: ಡಿಜಿಟಲ್ ಬಸ್ ಸುಂದರವಾಗಿ ಮೂಡಿಬರಲು ಶ್ರಮಿಸಿದ, ಇದರ ಹಿಂದೆ ಕೆಲಸ ನಿರ್ವಹಿಸಿದ. ಬೈಕಂಪಾಡಿಯ ರೋಡ್ರಿಕ್ಸ್ ಇಂಡಸ್ಟ್ರೀಸ್ ಮಾಲಕ ನವೀನ್, ಉಸ್ತುವಾರಿ ವಹಿಸಿದ್ದ ಅಬೂಬಕ್ಕರ್ ಪುತ್ತು, ಡಿಸೈನಿಂಗ್ ಮಾಡಿದ ಜ್ಞಾನೇಶ್‌ರವರನ್ನು ಅಭಿನಂದಿಸಲಾಯಿತು. ಡಿಜಿಟಲ್ ಬಸ್‌ನ ಡಾಕ್ಯುಮೆಂಟರಿ ನಿರ್ಮಿಸಿದ ಝೂಮ್ ಟಿವಿ ತಂಡ, ಹಾಗೂ ಸುದ್ದಿ ಮಾಧ್ಯಮ ತಂಡವನ್ನು ಅಭಿನಂದಿಸಲಾಯಿತು. ಡಿಜಿಟಲ್ ಬಸ್‌ನಲ್ಲಿ ಕಂಪ್ಯೂಟರ್ ಶಿಕ್ಷಕಿಯರಾಗಿ ಕರ್ತವ್ಯ ನಿರ್ವಹಿಸಲಿರುವ ಶಿಕ್ಷಕಿಯರಾದ ವೀಕ್ಷಾ, ಚೈತ್ರಾರವರನ್ನು ಅಭಿನಂದಿಸಲಾಯಿತು.

ಅಬ್ಬಾಸ್ ಹಾಜಿ ಬಳ್ಳೇರಿ, ನಿವೃತ್ತ ಸೈನಿಕ ಚಂದಪ್ಪ ಮೂಲ್ಯ, ಫಾರೂಕ್ ಜುಬೈನ್, ಬೈಕಂಪಾಡಿಯ ರೋಡ್ರಿಕ್ಸ್ ಇಂಡಸ್ಟ್ರೀಸ್ ಮಾಲಕ ನವೀನ್, ಶ್ರೀರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಹಮ್ಮದ್ ಮುಸ್ತಫಾ ಕಾರ್ಯಕ್ರಮ ನಿರೂಪಿಸಿ ಶಾಕಿರ್ ಹಾಜಿ ವಂದಿಸಿದರು.


ಡಿಜಿಟಲ್ ಬಸ್ ಕನಸಿನ ರೂವಾರಿ ಹನೀಫ್ ಪುತ್ತೂರು ಬೆನ್ನೆಲುಬಾಗಿ ನಿಂತ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್



ಯುಎಇಯ ಅಬುಧಾಬಿಯಲ್ಲಿನ ಸಂಸ್ಥೆಯೊಂದು ಹಮ್ಮಿಕೊಂಡಿದ್ದ ಸ್ಪರ್ಧೆಯಲ್ಲಿ ಆರ್ಯಾಪು ಗ್ರಾಮದ ಬಲ್ಲೇರಿ ಅಬ್ಬಾಸ್ ಹಾಜಿ ಅವರ ಪುತ್ರ ಯುಎಇಯಲ್ಲಿ ಉದ್ಯೋಗಿಯಾಗಿರುವ ಮಹಮ್ಮದ್ ಹನೀಫ್ ಅವರು ವಿಜೇತರಾಗಿದ್ದರು. ಹನೀಫ್ ಅವರು ತನ್ನೂರಿನ ಗ್ರಾಮೀಣ ಪ್ರದೇಶದಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಕಂಪ್ಯೂಟರ್ ಬಸ್ ಪ್ರಾರಂಭಿಸುವ ಇರಾದೆ ವ್ಯಕ್ತಪಡಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಒಂದು ಮೊಬೈಲ್ ಬಸ್‌ನ್ನು ಅತ್ಯಾಧುನಿಕ ಟೆಕ್ನಾಲಜಿಯಲ್ಲಿ ನಿರ್ಮಿಸಿ ಶಾಲೆಗಳಿಗೆ ತೆರಳಿ ಕಂಪ್ಯೂಟರ್ ಬೋಧಿಸುವ ಕನಸನ್ನು ಬಿಚ್ಚಿಟ್ಟರು. ಈ ಯೋಜನೆಯನ್ನು ಮೆಚ್ಚಿ ಲಕ್ಷಾಂತರ ಜನರು ಆನ್‌ಲೈನ್ ವೋಟ್ ಮಾಡುವ ಮೂಲಕ ಅವರನ್ನು ವಿಜೇತರನ್ನಾಗಿಸಿದ್ದರು. ಸ್ಪರ್ಧೆಯಲ್ಲಿ ದೊರೆತ ರೂ.50ಲಕ್ಷ ಬಹುಮಾನದ ಮೊತ್ತವನ್ನುಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ಗೆ ಹಸ್ತಾಂತರಿಸಿ ಬಸ್ ಕನಸನ್ನು ಸಾಕ್ಷಾತ್ಕರಿಸಿದರು. ಬಸ್‌ಗೆ ಒಟ್ಟು 60 ಲಕ್ಷ ರೂ. ಖರ್ಚು ಆಗಿದ್ದು, ಹೆಚ್ಚುವರಿ ರೂ.10 ಲಕ್ಷ ಮೊತ್ತವನ್ನು ಎಂ.ಫ್ರೆಂಡ್ಸ್ ಟ್ರಸ್ಟ್ ಭರಿಸಿದೆ. ಅರವಿಂದ್ ಮೋಟಾರ್ಸ್‌ನ ಟಾಟಾ ಕಂಪೆನಿಯ ಹೀರಾ ಮಾಡೆಲಿನ ಈ ಬಸ್‌ನ್ನು ಕಂಪ್ಯೂಟರ್ ಕ್ಲಾಸ್ ರೂಮ್ ಆಗಿ ಪರಿವರ್ತಿಸಲಾಯಿತು.

ಮಂಗಳೂರು : ಎ.14ರ ಮೋದಿ ಸಮಾವೇಶ ರದ್ದು-ರೋಡ್ ಶೋ ಸಿದ್ಧತೆ

Posted by Vidyamaana on 2024-04-10 13:12:47 |

Share: | | | | |


ಮಂಗಳೂರು : ಎ.14ರ ಮೋದಿ ಸಮಾವೇಶ ರದ್ದು-ರೋಡ್ ಶೋ ಸಿದ್ಧತೆ

ಮಂಗಳೂರು, ಎ.10: ಎಪ್ರಿಲ್ 14ರಂದು ಮಂಗಳೂರಿನಲ್ಲಿ ಆಯೋಜಿಸಿದ್ದ ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಕೊನೆಕ್ಷಣದಲ್ಲಿ ರದ್ದು ಪಡಿಸಲಾಗಿದೆ. ಅದರ ಬದಲು ಮಂಗಳೂರು ನಗರದಲ್ಲಿ ಕೇವಲ ರೋಡ್ ಶೋ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿದೆ.

ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು. ಇಂದು ಬೆಳಗ್ಗೆ ಮೈದಾನದಲ್ಲಿ ಚಪ್ಪರ ಮುಹೂರ್ತವನ್ನೂ ನಡೆಸಲಾಗಿತ್ತು. ಜರ್ಮನ್ ನಿರ್ಮಿತ ಬೃಹತ್ ಪೆಂಡಾಲ್ ಹಾಕಲು ಸಿದ್ಧತೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ತಾಂತ್ರಿಕ ಕಾರಣದಿಂದಾಗಿ ಬೃಹತ್ ಸಮಾವೇಶ ನಡೆಸುವುದನ್ನು ರದ್ದು ಪಡಿಸಲಾಗಿದೆ.

ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ

Posted by Vidyamaana on 2023-01-10 11:32:15 |

Share: | | | | |


ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ

ಪುತ್ತೂರು: ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿಯನ್ನು ಕೇಂದ್ರೀಕರಿಸಿಕೊಂಡು ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಕಚೇರಿ ಕಾರ್ಯಾರಂಭ ಮಾಡಿದೆ.

ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದ ಹಿಂಬದಿಯ ಕೊಠಡಿಯಲ್ಲಿದೆ ಇಲಾಖೆಯ ಕಚೇರಿ. ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಇದೇ ಕೊಠಡಿಯಲ್ಲಿತ್ತು.

ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಮಂಜುಳಾಶ್ರೀ ಶೆಣೈ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರಿನಲ್ಲಿದ್ದ ಕಚೇರಿಯ ವಿಸ್ತರಿತ ಭಾಗ ಇದೀಗ ಪುತ್ತೂರಿನಲ್ಲಿ ಕಾರ್ಯಾರಂಭ ಮಾಡಿದೆ. ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವ ಹಲವು ಯೋಜನೆಗಳು ಇಲಾಖೆಯಲ್ಲಿದ್ದು, ಮೀನುಗಾರಿಕೆ ಕೃಷಿ ಮಾಡುವವರಿಕೆ, ಎಫ್ಓಪಿ ಸಂಸ್ಥಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.


ಜ. 4ರಂದು ಸಚಿವ ಎಸ್. ಅಂಗಾರ ಅವರು ಕಚೇರಿಯನ್ನು ಉದ್ಘಾಟಿಸಿದರು. ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಉಪನಿರ್ದೇಶಕಿ ಸುಶ್ಮಿತಾ ರಾವ್, ತಾ.ಪಂ. ಇಓ ನವೀನ್ ಕುಮಾರ್ ಭಂಡಾರಿ, ಸಾಜ ರಾಧಾಕೃಷ್ಣ ಆಳ್ವ, ಹರೀಶ್ ಬಿಜತ್ರೆ, ಪುತ್ತೂರ್ದ ಮುತ್ತು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮೊದಲಾದವರು ಉಪಸ್ಥಿತರಿದ್ದರು.


Read More:ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ



Leave a Comment: