ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಮಗನ ಸಾವಿನ ನೋವಲ್ಲಿ ತಾಯಿ ಸಹೋದರಿ ಆತ್ಮಹತ್ಯೆ ; ದೀಪಾವಳಿ ಮಧ್ಯೆ ಕುಟುಂಬಕ್ಕೆ ಆಘಾತ

Posted by Vidyamaana on 2023-11-15 05:50:17 |

Share: | | | | |


ಮಗನ ಸಾವಿನ ನೋವಲ್ಲಿ ತಾಯಿ ಸಹೋದರಿ ಆತ್ಮಹತ್ಯೆ ; ದೀಪಾವಳಿ ಮಧ್ಯೆ ಕುಟುಂಬಕ್ಕೆ ಆಘಾತ

ಕಾರವಾರ, ನ.15: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ. 


ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು.‌ ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ.‌‌ ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.‌


ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ‌ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ.‌ ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 


ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಶೋಭಕ್ಕನ ಕಾರಿನ ಡೋರಿಗೆ ಗುದ್ದಿ ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದ ಲಾರಿ

Posted by Vidyamaana on 2024-04-08 19:48:49 |

Share: | | | | |


ಶೋಭಕ್ಕನ ಕಾರಿನ ಡೋರಿಗೆ ಗುದ್ದಿ ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದ ಲಾರಿ

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಾರಿಗೆ ಸವಾರನೊಬ್ಬ ಬಲಿಯಾಗಿದ್ದಾನೆ. ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಮೃತ ದುರ್ದೈವಿ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ‌ ದೇವಸಂದ್ರ ವಿನಾಯಕ‌ ದೇವಸ್ಥಾನ ಬಳಿ ಅಪಘಾತ (Ro

non

Accident) ಸಂಭವಿಸಿದೆ.

ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಕಾರಿನ ಡೋರ್ ತೆರೆಯುವಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಪ್ರಕಾಶ್‌ ಗುದ್ದಿ ಕೆಳೆಗೆ ಬಿದ್ದಿದ್ದಾರೆ. ರಸ್ತೆಗೆ ಬಿದ್ದ ಪ್ರಕಾಶ್‌ ಮೇಲೆ ಖಾಸಗಿ ಬಸ್‌ ಹರಿದಿದೆ. ಗಂಭೀರ ಗಾಯಗೊಂಡ ಪ್ರಕಾಶ್‌ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಪ್ರಕಾಶ್‌ ಮೃತಪಟ್ಟಿದ್ದಾರೆ.

ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ

Posted by Vidyamaana on 2023-05-26 23:22:57 |

Share: | | | | |


ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ.

ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು.ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯ ಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ದ.ಕ.ಸಂಸದ ನಳಿನ್‌ ಕುಮಾರ್ ಕಟೀಲ್‌ ಅವರು ಭರವಸೆ ನೀಡಿದ್ದರು.ಅದರಂತೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ(ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ 2022ರ ಸೆಪ್ಟೆಂಬರ್ 22ರಂದು ಆದೇಶ ಹೊರಡಿಸಲಾಗಿತ್ತು.ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ದ.ಕ.ಜಿಲ್ಲಾಧಿಕಾರಿ ಕಚೇಳುಯಲ್ಲಿಯೇ ಕೆಲಸ ನೀಡಲಾಗಿತ್ತು.ಕಳೆದ ಅಕ್ಟೋಬರ್ 14ರಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು.

ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ಅವರನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು ಎನ್ನಲಾಗಿದೆ.ಇದೀಗ ಸರಕಾರ ಬದಲಾಗಿದ್ದು, ನೂತನ ಕುಮಾರಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ವರದಿಯಾಗಿದೆ.

ಪುತ್ತೂರು ಎಪಿಎಂಸಿ ರೈಲ್ವೇ ಅಂಡರ್ ಪಾಸ್ ವೀಕ್ಷಿಸಿ ಸಂಸದ ಕಟೀಲ್

Posted by Vidyamaana on 2023-07-18 08:06:25 |

Share: | | | | |


ಪುತ್ತೂರು ಎಪಿಎಂಸಿ ರೈಲ್ವೇ ಅಂಡರ್ ಪಾಸ್ ವೀಕ್ಷಿಸಿ ಸಂಸದ ಕಟೀಲ್

ಪುತ್ತೂರು: ಬಹುಬೇಡಿಕೆಯ ಪುತ್ತೂರು ಎಪಿಎಂಸಿ ಅಂಡರ್ ಪಾಸ್ ರಸ್ತೆ ಸಂಚಾರಕ್ಕೆ ತೆರೆದುಕೊಂಡಿದೆ. ಇದೇ ರೀತಿಯಲ್ಲಿ ಜಿಲ್ಲೆಯ ಹಲವು ಕಡೆಗಳಲ್ಲಿ ಅಂಡರ್ ಪಾಸ್ ಅಥವಾ ಓವರ್ ಬ್ರಿಡ್ಜಿನ ಅಗತ್ಯವಿದೆ. ಇದಲ್ಲದೇ ಇರುತ್ತಿದ್ದರೆ ಇಷ್ಟರೊಳಗೆ ಮಂಗಳೂರಿಗೆ ವಂದೇ ಮಾತರಂ ರೈಲು ಬರುತ್ತಿತ್ತು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಪುತ್ತೂರು ಎಪಿಎಂಸಿ ರೈಲ್ವೇ ಅಂಡರ್ ಪಾಸಿಗೆ ಮಂಗಳವಾರ ಭೇಟಿ ನೀಡಿ ಮಾತನಾಡಿದರು.

ಪುತ್ತೂರು ಎಪಿಎಂಸಿ ರಸ್ತೆಯ ಅಂಡರ್ ಪಾಸ್ ರಸ್ತೆ ಕಾಮಗಾರಿ ಕಾಲಮಿತಿಯೊಳಗೆ ಒಂದು ಹಂತಕ್ಕೆ ಮುಗಿದಿದೆ. ಮುಂದಿನ ಕಾಮಗಾರಿಗೆ ಕೆಲ ತೊಡಕುಗಳಿವೆ. ಅವನ್ನು ಮಾತುಕತೆಯ ಮೂಲಕ ಬಗೆಹರಿಸಿ, ಶೀಘ್ರ ಕಾಮಗಾರಿ ಆರಂಭಿಸಲಾಗುವುದು‌ ಎಂದರು.

ಜಿಲ್ಲೆಯ ಕೆಲವು ಕಡೆಗಳಲ್ಲಿ ಇಂತಹದ್ದೇ ಸಮಸ್ಯೆ ಇದೆ. ಫಾರೆಸ್ಟ್ ಬರುವ ಕಾರಣ ಕಾಮಗಾರಿ ವಿಳಂಬ ಆಗುತ್ತಿದೆ. ವಂದೆ ಮಾತರಂ ರೈಲು ಮಂಗಳೂರಿಗೆ ಆಗಮಿಸಲು ಇದೇ ತೊಡಕಾಯಿತು ಎಂದರು.

ವಿವೇಕಾನಂದ ಕಾಲೇಜು ರಸ್ತೆಯ ರೈಲ್ವೇ ಮೇಲ್ಸೆತುವೆ ಅಗಲೀಕರಣ ಕಾಮಗಾರಿಯೂ ಶೀಘ್ರವೇ ಆರಂಭಗೊಳ್ಳಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಜಿ.ಪಂ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಆಶಾ ತಿಮ್ಮಪ್ಪ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧರ್ ಜೈನ್, ಸಹಾಯಕ ಕಮೀಷನರ್ ಗಿರೀಶ್ ನಂದನ್, ಪೌರಾಯುಕ್ತ ಮಧು ಎಸ್ ಮನೋಹರ್, ತಹಸೀಲ್ದಾರ್ ಶಿವಶಂಕರ್, ಎಪಿಎಂಸಿ ಕಾರ್ಯದರ್ಶಿ ಸಹಿತ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮತ್ತಿತರರು ಉಪಸ್ಥಿತರಿದ್ದರು.


ಸ್ಯಾನಿಟರಿ ಪ್ಯಾಡ್‌ಗಳಲ್ಲಿ 5 ಕೋಟಿ ರೂ. ಮೌಲ್ಯದ ಕೊಕೇನ್‌ ಪತ್ತೆ ದಂಗಾದ ಕಸ್ಟಮ ಅಧಿಕಾರಿಗಳು ಲಾಕ್ ಆದ ಮೂವರು ಆಫ್ರಿಕನ್ ಲೇಡೀಸ್

Posted by Vidyamaana on 2023-10-14 12:12:21 |

Share: | | | | |


ಸ್ಯಾನಿಟರಿ ಪ್ಯಾಡ್‌ಗಳಲ್ಲಿ 5 ಕೋಟಿ ರೂ. ಮೌಲ್ಯದ ಕೊಕೇನ್‌ ಪತ್ತೆ ದಂಗಾದ ಕಸ್ಟಮ ಅಧಿಕಾರಿಗಳು ಲಾಕ್ ಆದ ಮೂವರು ಆಫ್ರಿಕನ್ ಲೇಡೀಸ್

ಮುಂಬೈ, : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.68 ಕೋಟಿ ರೂ ಮೌಲ್ಯದ ಕೊಕೇನ್‌ ಸಹಿತ ಮೂವರು ಆಫ್ರಿಕನ್ ಮಹಿಳೆಯರನ್ನು ಬಂಧಿಸಲಾಗಿದೆ.


ಸ್ಯಾನಿಟರಿ ಪ್ಯಾಡ್‌ಗಳಲ್ಲಿ ನಿಷಿದ್ಧ ವಸ್ತುಗಳನ್ನು ಮರೆಮಾಡಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ತಿಳಿಸಿದೆ.


ಮೂವರು ವಿದೇಶಿ ಮಹಿಳಾ ಪ್ರಯಾಣಿಕರಿಂದ ಒಟ್ಟು 568 ಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ಸ್ಯಾನಿಟರಿ ಪ್ಯಾಡ್ ಮತ್ತು ಗುದನಾಳದ ಒಳಗೆ ಮರೆಮಾಚಿ ಡ್ರಗ್ಸ್ ತರುತ್ತಿದ್ದರು.


ನಿರ್ದಿಷ್ಟ ಗುಪ್ತಚರ ವರದಿಯ ಆಧಾರದ ಮೇಲೆ, DRI ಯ ಮುಂಬೈ ಘಟಕವು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ನಾಪತ್ತೆಯಾಗಿದ್ದ ಬಾಲಕರು ಪುತ್ತೂರಿನಲ್ಲಿ ಪತ್ತೆ ; ಚಿತ್ರದುರ್ಗಕ್ಕೆ ಹೊರಟಿದ್ದ ಮಕ್ಕಳು ಕಾಸಿಲ್ಲದೆ ಬಾಕಿ

Posted by Vidyamaana on 2023-08-23 04:01:32 |

Share: | | | | |


ನಾಪತ್ತೆಯಾಗಿದ್ದ ಬಾಲಕರು ಪುತ್ತೂರಿನಲ್ಲಿ ಪತ್ತೆ ; ಚಿತ್ರದುರ್ಗಕ್ಕೆ ಹೊರಟಿದ್ದ ಮಕ್ಕಳು ಕಾಸಿಲ್ಲದೆ ಬಾಕಿ

ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.


ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ. 

ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.


ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.



Leave a Comment: