ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಸಹೋದರ ಆದಿಲ್ ಗೆ ಹಲ್ಲೆ.

Posted by Vidyamaana on 2023-02-08 16:23:20 |

Share: | | | | |


ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಸಹೋದರ  ಆದಿಲ್ ಗೆ ಹಲ್ಲೆ.

ಸುರತ್ಕಲ್: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಅವರ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳದ ಗಣೇಶ್ ಪುರ ಎಂಬಲ್ಲಿ ನಡೆದಿದೆ.

ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.

ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು:ಅಶೋಕ್ ರೈ

Posted by Vidyamaana on 2023-05-03 10:05:42 |

Share: | | | | |


ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು:ಅಶೋಕ್ ರೈ

ಪುತ್ತೂರು: ನಾನು ರಾಜಕೀಯಕ್ಕೆ ಬಂದ ಮೇಲೆ ಯಾರನ್ನೂ ವೈಯುಕ್ತಿಕವಾಗಿ ದೂಷಿಸುವ ಕೆಲಸವನ್ನು ಮಾಡಿಲ್ಲ, ಈಗಲೂ ಮಾಡಿಲ್ಲ, ಮುಂದೆಯೂ  ಮಾಡುವುದಿಲ್ಲ, ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು ಕ್ಷೆತ್ರವನ್ನು ಅಭಿವೃದ್ದಿ ಮಡುವುದಕ್ಕೋಸ್ಕರವಾಗಿದ್ದು ನಾನು ಮಾಡಿದ ಭಾಷಣವನ್ನು ತಿರುಚುವ ಕೆಲಸವನ್ನು ಬಿಜೆಪಿಗರು ತೆರೆಮರೆಯಲ್ಲಿ ಮಾಡುತ್ತಿದ್ದು ನೀವು ಆ ಕೆಲಸವನ್ನು ಬಿಟ್ಟು ನೀವು ಅಭಿವೃದ್ದಿ ಕೆಲಸ ಮಡಿದ್ದರೆ ಅದನ್ನು ಚರ್ಚಿಸುವ ಬನ್ನಿ ಎಂದು ಬಿಜೆಪಿಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸವಾಲು ಹಾಕಿದ್ದಾರೆ.

ವಿಟ್ಲದ ಚಂದಳಿಕೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಪುತ್ತೂರಿನಲ್ಲಿ ಕಳೆದ ಐದು ವರ್ಷದಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆದಿಲ್ಲ. ಕಳೆದ ಚುನಾವಣೆಯ ಸಮಯದಲ್ಲಿ ಬಿಜೆಪಿ ನೀಡಿದ ಆಶ್ವಾಸನೆ ಈಡೇರಿಸಿಲ್ಲ. ಪುತ್ತೂರು ನಗರದಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು ಮಾಡಿಲ್ಲ, ಪುತ್ತೂರಿನಲ್ಲಿ ರಿಂಗ್ ರೋಡ್ ಮಾಡುವುದಾಗಿ ಹೇಳಿದ್ದರು, ಬ್ರಹ್ಮನಗರದಲ್ಲಿ ಫ್ಲ್ಯಾಟ್ ನಿರ್ಮಿಸಿವುದಾಗಿ ಹೇಳಿದ್ದರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ರೂಪಿಸುವುದಾಗಿ ಹೇಳಿದ್ದರು, ವಿಟ್ಲದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು, ಉಪ್ಪಿನಂಗಡಿಯಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡುವುದಾಗಿ ಮಾತುಕೊಟ್ಟಿದ್ದರು, ಮನೆ ಇಲ್ಲದ ಬಡವರಿಗೆ ಮನೆ ನಿರ್ಮಾಣ ಮಾಡುವುದಾಗಿ ಹೇಳಿದ್ದರು ಇದರಲ್ಲಿ ಯಾವುದನ್ನಾದರೂ ಮಾಡಿದ್ದಾರ? ಎಂದು ಪ್ರಶ್ನಿಸಿದ ಅಶೋಕ್ ರೈ ರಸ್ತೆಗೆ ಅಷ್ಟು ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಫ್ಲೆಕ್ಸ್ ಹಾಕಿಸಿ ಕಳಪೆ ಕಾಮಗಾರಿ ನಡೆಸಿ ಅದರ ಮೂಲಕ ೬೦ % ಕಮಿಷನ್ ಹೊಡೆದದ್ದನ್ನು ಬಿಟ್ಟರೆ ಏನೂ ಮಾಡಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ವರ್ಷಕ್ಕೆ ನೂರಾರು ಮನೆಗಳನ್ನು ಬಡವರಿಗೆ ನೀಡಲಾಗುತ್ತಿತ್ತು ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮನೆ ನೀಡಿಲ್ಲ. ಶಾಲಾ ಮಕ್ಕಳ ಶೂ ಭಾಗ್ಯ, ಕ್ಷೀರ ಭಾಗ್ಯ, ಮೊಟ್ಟೆ ಭಾಗ್ಯ , ಇಂದಿರಾ ಕ್ಯಾಂಟೀನ್ ಎಲ್ಲವನ್ನೂ ಬಂದ್ ಮಡಿದ್ದೇ ಬಿಜೆಪಿ ಸರಕಾರದ ಸಾಧನೆಯಾಗಿದೆ. ಕಾಂಗ್ರೆಸ್ ಸರಕಾರ ಬಡವರಿಗೆ ನೆರವು ನೀಡುವ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದು ಅದೆಲ್ಲವನ್ನೂ ಬಿಜೆಪಿ ಕೈ ಬಿಟ್ಟು ಕೇವಲ ಭಾಷಣದಲ್ಲಿ ಮಾತ್ರ ಬಡವರ ಬಾಯಿಗೆ ಸಿಹಿ ಹಂಚುವ ಕೆಲಸವನ್ನು ಮಾಡಿದೆ ಎಂದು ಅಶೋಕ್ ರೈ ಹೇಳಿದರು. ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎಂ ಎಸ್ ಮಹಮ್ಮದ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಅಶೋಕ್ ಕುಮಾರ್ ರೈ ಗೆ ಸಿಕ್ತು ಭರ್ಜರಿ ಗೆಲುವಿನ ರುಚಿ

Posted by Vidyamaana on 2023-05-13 08:01:56 |

Share: | | | | |


ಅಶೋಕ್ ಕುಮಾರ್ ರೈ ಗೆ  ಸಿಕ್ತು ಭರ್ಜರಿ ಗೆಲುವಿನ ರುಚಿ

ಪುತ್ತೂರು: ರಾಜ್ಯದ ಗಮನ ಸೆಳೆದಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಶೋಕ್ ಕುಮಾರ್ ರೈ 3351ಮತಗಳಿಂದ  ಜಯಭೇರಿ ಭಾರಿಸಿದ್ದಾರೆ.


ಜನಮತಗಣನೆಯಲ್ಲಿ ಮುನ್ನಡೆ ಸಾಧಿಸಿರುವ ಅಶೋಕ್ ಕುಮಾರ್ ರೈ ಅವರು, ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಿರೀಕ್ಷೆಯಂತೆ, ಪುತ್ತೂರಿನಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ.

ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ನಡುವಿನ ಪೈಪೋಟಿಯ ಲಾಭವನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡಿದೆ. ಬಿಜೆಪಿಯ ಮತಗಳು ವಿಭಜನೆಗೊಂಡಿದ್ದು ಹಾಗೂ ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗಿದ್ದರಿಂದ ಗೆಲುವಿನ ಪತಾಕೆ ಹಾರಿಸಲು ಸಾಧ್ಯವಾಯಿತು. ಅಶೋಕ್ ಕುಮಾರ್ ರೈ ಅವರ ಮುಂದಾಳುತ್ವ ಕಾಂಗ್ರೆಸಿಗೆ ವರದಾನವಾಗಿದೆ.

ರಾಮ ಮಂದಿರ ಪ್ರತಿಷ್ಟಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಸೂಚನೆ

Posted by Vidyamaana on 2024-01-07 08:52:13 |

Share: | | | | |


ರಾಮ ಮಂದಿರ ಪ್ರತಿಷ್ಟಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಸೂಚನೆ

ಬೆಂಗಳೂರು : ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ.ಅಂದು ಶ್ರೀ ರಾಮನ ವಿಗ್ರಹ ಪ್ರತಿಷ್ಟಾಪನೆ ಆಗಲಿದ್ದು ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.ಜನವರಿ 22 ರಂದು ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್ ನಿಂದ 12 ಗಂಟೆ 32 ನಿಮಿಷಗಳವರೆಗೆ ಮಹಾಮಂಗಳಾರತಿ ಹಾಗೂ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದರು.ಆ ಸಮಯದಲ್ಲಿ ಶ್ರೀ ರಾಮ ವಿಗ್ರಹ ಪ್ರತಿಷ್ಟಾಪನೆ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ

Posted by Vidyamaana on 2023-11-10 19:15:26 |

Share: | | | | |


ಬಿಜೆಪಿ ರಾಜ್ಯಾಧ್ಯಕ್ಷರಾಗಿ  ವಿಜಯೇಂದ್ರ ಆಯ್ಕೆ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ  ಬಿ.ವೈ. ವಿಜಯೇಂದ್ರ ಆಯ್ಕೆಯಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸೀಟು ಗೆಲ್ಲದ ಹಿನ್ನಲೆಯಲ್ಲಿ ನಳೀನು ಕುಮಾರ್ ಕಟೀಲ್‌ ಅವರನ್ನು ಬದಲಾವಣೆ ಮಾಡಲಾಗುವುದು ಎನ್ನಲಾಗುತ್ತಿತ್ತು. ಯಾರಾಗ್ತಾರೆ ಬಿಜೆಪಿ ರಾಜ್ಯಾಧ್ಯಕ್ಷ ಎಂಬ ಬಗ್ಗೆಯೂ ಚರ್ಚೆಯಾಗುತ್ತಿತ್ತು. ಎಲ್ಲದಕ್ಕೂ ಈಗ ಫುಲ್ ಸ್ಟಾಪ್‌ ಬಿದ್ದಿದೆ. ಬಿಜೆಪಿ ಹೈಕಮಾಂಡ್‌ ಮಾಜಿ ಸಿಎಂ ಬಿ.ವೈ. ಯಡಿಯೂರಪ್ಪರ ಪುತ್ರ ಬಿ ಬೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದೆ.


ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಪುತ್ರ ವಿಜಯೇಂದ್ರ ಈ ಹಿಂದೆ ಭಾರತೀಯ ಜನತಾ ಯುವ ಮೋರ್ಚಾದ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ವಕೀಲರಾಗಿ ಸ್ವಲ್ಪ ಸಮಯ ಕೆಲಸ ಮಾಡಿದ್ದರು. ಸದ್ಯ ಶಿಕಾರಿ ಪುರದ ಶಾಸಕರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪ್ರಜ್ಞಾನಂದ

Posted by Vidyamaana on 2023-08-31 23:17:17 |

Share: | | | | |


ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪ್ರಜ್ಞಾನಂದ

ಹೊಸದಿಲ್ಲಿ: ಚೆಸ್ ವಿಶ್ವಕಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ಲೋಕ ಕಲ್ಯಾಣ್ ಮಾರ್ಗ್​ನಲ್ಲಿರುವ ಪ್ರಧಾನ ಮಂತ್ರಿಯ ನಿವಾಸಕ್ಕೆ ಕುಟುಂಬ ಸಮೇತ ಆಗಮಿಸಿದ ಪ್ರಜ್ಞಾನಂದ, ಮೋದಿ ಅವರೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ಞಾನಂದ, ಸನ್ಮಾನ್ಯ ಪ್ರಧಾನಮಂತ್ರಿಗಳನ್ನು ಅವರ ನಿವಾಸದಲ್ಲಿ ಭೇಟಿಯಾಗಿರುವುದು ದೊಡ್ಡ ಗೌರವ. ನನಗೆ ಮತ್ತು ನನ್ನ ಪೋಷಕರಿಗೆ ಅವರು ನೀಡಿದ ಪ್ರೋತ್ಸಾಹದ ಎಲ್ಲಾ ಮಾತುಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.


ಈ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಇವತ್ತು ಲೋಕ ಕಲ್ಯಾಣ್ ಮಾರ್ಗ್​ನಲ್ಲಿರುವ ತಮ್ಮ ನಿವಾಸಕ್ಕೆ ವಿಶೇಷ ಅತಿಥಿಗಳು ಆಗಮಿಸಿದ್ದರು. ನಿಮ್ಮ ಕುಟುಂಬದ ಜೊತೆ ನಿಮ್ಮನ್ನು ಭೇಟಿಯಾಗಿದ್ದು ಸಂತೋಷವಾಯಿತು. ನಿಮ್ಮ ಉತ್ಸಾಹ ಮತ್ತು ಪರಿಶ್ರಮವನ್ನು ನೀವು ನಿರೂಪಿಸಿದ್ದೀರಿ. ಭಾರತದ ಯುವಕರು ಯಾವುದೇ ಡೊಮೇನ್ ಅನ್ನು ಹೇಗೆ ಜಯಿಸಬಹುದು ಎಂಬುದಕ್ಕೆ ನೀವು ಉದಾಹರಣೆಯಾಗಿದ್ದೀರಿ. ನಿಮ್ಮ ಬಗ್ಗೆ ಹೆಮ್ಮೆಯಿದೆ ಪ್ರಜ್ಞಾನಂದ ಎಂದು ಟ್ವೀಟ್ ಮಾಡಿದ್ದಾರೆ.ಅಝರ್​ಬೈಜಾನ್​ನಲ್ಲಿ ಆಗಸ್ಟ್ 24 ರಂದು, 18 ವರ್ಷ ವಯಸ್ಸಿನ ಪ್ರಜ್ಞಾನಂದ ಅವರು ಚೆಸ್ ವಿಶ್ವ ಕಪ್ ಫೈನಲ್‌ನಲ್ಲಿ ಪ್ರಸ್ತುತ ವಿಶ್ವದ ನಂಬರ್ ಒನ್ ಮ್ಯಾಗ್ನಸ್ ಕಾರ್ಲ್‌ಸೆನ್‌ ವಿರುದ್ಧ ಟೈಬ್ರೇಕರ್‌ನಲ್ಲಿ ಸೋತಿದ್ದರು. ಈ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡುವ ಮೂಲಕ ಪ್ರಧಾನಿ ಯುವ ಚೆಸ್ ತಾರೆಯನ್ನು ಹುರಿದುಂಬಿಸಿದ್ದರು.


FIDE ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಪ್ರಜ್ಞಾನಂದನ ಬಗ್ಗೆ ನಾವೆಲ್ಲರೂ ಹೆಮ್ಮೆಪಡುತ್ತೇವೆ! ಅವರು ತಮ್ಮ ಅಸಾಧಾರಣ ಕೌಶಲ್ಯಗಳನ್ನು ಪ್ರದರ್ಶಿಸಿ ಫೈನಲ್‌ನಲ್ಲಿ ಮ್ಯಾಗ್ನಸ್ ಕಾರ್ಲ್‌ಸೆನ್‌ ಅವರಿಗೆ ಕಠಿಣ ಪೈಪೋಟಿ ನೀಡಿದರು. ಇದೇನು ಸಣ್ಣ ಸಾಧನೆಯಲ್ಲ. ಪ್ರಜ್ಞಾನಂದ ಅವರ ಮುಂಬರುವ ಪಂದ್ಯಾವಳಿಗಳಿಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು. ಇದೀಗ ಯುವ ಚೆಸ್ ತಾರೆಯನ್ನು ಪ್ರಧಾನಿ ನಿವಾಸಕ್ಕೆ ಕರೆಸಿ ಮೋದಿ ಕುಶಲೋಪರಿ ನಡೆಸಿದ್ದಾರೆ.



Leave a Comment: