ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಜಿಎಲ್ ಶಾಪಿಂಗ್ ಹಬ್ಬ ವರುಷದ ಹರುಷಕ್ಕೆ ಚಾಲನೆ

Posted by Vidyamaana on 2023-04-03 09:07:30 |

Share: | | | | |


ಜಿಎಲ್ ಶಾಪಿಂಗ್ ಹಬ್ಬ ವರುಷದ ಹರುಷಕ್ಕೆ ಚಾಲನೆ

ಪುತ್ತೂರು: ಜಿಎಲ್ ಶಾಪಿಂಗ್ ಹಬ್ಬ ವರುಷದ ಹರುಷಕ್ಕೆ ಏ. 3ರಂದು ಚಾಲನೆ ನೀಡಲಾಯಿತು.

ಏ. 9ರವರೆಗೆ ನಡೆಯಲಿರುವ ಈ ಹಬ್ಬ, ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ಎಲ್ಲಾ ಶಾಖೆಗಳಲ್ಲೂ ನಡೆಯಲಿದೆ.

ಮನೆಯಲ್ಲಿ ಜಿರಳೆ ಕಾಟ ಹೆಚ್ಚಾಗಿದ್ಯಾ..? ಶಾಶ್ವತವಾಗಿ ಮುಕ್ತಿ ಪಡೆಯಲು ಹೀಗೆ ಮಾಡಿ

Posted by Vidyamaana on 2024-02-15 07:24:48 |

Share: | | | | |


ಮನೆಯಲ್ಲಿ ಜಿರಳೆ ಕಾಟ ಹೆಚ್ಚಾಗಿದ್ಯಾ..? ಶಾಶ್ವತವಾಗಿ ಮುಕ್ತಿ ಪಡೆಯಲು ಹೀಗೆ ಮಾಡಿ

ಜಿರಳೆಗಳು ಎಂದರೆ ಎಂತಹ ಧೈರ್ಯವಂತರಿಗೂ ಭಯ. ಮನೆಯಲ್ಲಿ ಜಿರಳೆಗಳು ಹೆಚ್ಚಾದರೆ ಕಾಯಿಲೆ ಕೂಡ ಹೆಚ್ಚಾದಂತೆ ಎಂದು ಹೇಳುತ್ತಾರೆ. ಮನೆಯಲ್ಲಿ ಮಕ್ಕಳು ಮತ್ತು ವಯಸ್ಸಾದವರು ಇದ್ದರೆ ಅವರ ಬಗ್ಗೆ ಎಚ್ಚರಿಕೆ ವಹಿಸಬೇಕು. ಜಿರಳೆಗಳು ಅಡ್ಡಾಡಿದ ಆಹಾರ ಸೇವನೆ ಮಾಡಬಾರದು, ಏಕೆಂದರೆ ಅದರಿಂದ ಹತ್ತಾರು ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ.ಹೀಗಾಗಿ ಜಿರಳೆಗಳ ನಿವಾರಣೆ ಮಾಡುವುದು ಅತ್ಯಗತ್ಯವಾಗಿದೆ. 


ಬೋರಿಕ್ ಆಸಿಡ್


ಜಿರಳೆಗಳನ್ನು ಕೆರಳಿಸಲು ಅತ್ಯುತ್ತಮ ಪರಿಹಾರಗಳಲ್ಲಿ ಒಂದಾಗಿದೆ. ಬೋರಿಕ್ ಆಸಿಡ್ ಅನ್ನು ಹೆಚ್ಚಿನ ದೈನಂದಿನ ಅಗತ್ಯ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ನೀವು ಮಾಡಬೇಕಾಗಿರುವುದು ಇಷ್ಟೇ, ಜಿರಳೆ ಸಂಪರ್ಕಕ್ಕೆ ಬರುವ ಮೂಲೆ ಮತ್ತು ಮೂಲೆಯಲ್ಲಿ ಸ್ವಲ್ಪ ಬೋರಿಕ್ ಆಮ್ಲದ ಪುಡಿಯನ್ನು ಹಾಕಿದರೆ ಸಾಕು. 


ಬೇಕಿಂಗ್ ಸೋಡಾ


ಕೂಡ ಜಿರಳೆಯನ್ನು ದೂರ ಮಾಡಲು ಸಹಾಯ ಮಾಡುತ್ತದೆ. ಸಕ್ಕರೆ ಮತ್ತು ಬೇಕಿಂಗ್ ಸೋಡಾಗಳ ಸಂಯೋಜನೆಯು ಜಿರಳೆಗಳ ಸಂತಾನೋತ್ಪತ್ತಿಯನ್ನುತಡೆಗಟ್ಟುವ ಅತ್ಯುತ್ತಮ ಮಾರ್ಗಗಳಲ್ಲಿ ಒಂದಾಗಿದೆ. ನೀವು ಮಾಡಬೇಕಾಗಿರುವುದು ಇಷ್ಟೇ, ಈ ಜಿರಳೆಗಳು ನಿಮ್ಮ ಮನೆಯಲ್ಲಿ ಹಾದು ಹೋಗುವ ಸ್ಥಳವನ್ನು ಕಂಡುಕೊಂಡು ಆ ಜಾಗದಲ್ಲಿ ಇದನ್ನು ಸಿಂಪಡಿಸಿ. 


ಬೇವು


ಭಾರತದಲ್ಲಿ ವಿವಿಧ ಪ್ರದೇಶಗಳಿಗೆ ಬಳಸುವ ಅತ್ಯುತ್ತಮ ಪರಿಹಾರಗಳಲ್ಲಿ ಒಂದಾಗಿದೆ. ಬೇವು, ಪುಡಿಯಾಗಿ ಮತ್ತು ಎಣ್ಣೆಯಾಗಿ ದೊರೆಯುತ್ತದೆ. ಇವು ಜಿರಳೆಗಳನ್ನು ಕೊಲ್ಲಲು ಸಹಾಯ ಸಹಾಯ ಮಾಡುತ್ತದೆ. ಸಣ್ಣ ಪ್ರಮಾಣದ ಬೇವಿನ ಎಣ್ಣೆ ಮತ್ತು ನೀರನ್ನು ಮಿಶ್ರಣ ಮಾಡಬೇಕು ಮತ್ತು ಅದನ್ನು ಸ್ಪ್ರೇ ಬಾಟಲಿಯಲ್ಲಿ ಸಂಗ್ರಹಿಸಬೇಕು, ಜಿರಳೆಗಳು ಓಡಾಡುವ ಜಾಗದಲ್ಲಿ ಸಿಂಪಡಿಸಬೇಕು. 


ಪೆಪ್ಪರ್ ಮಿಂಟ್

ಎಣ್ಣೆಯನ್ನು ಮನೆಯಲ್ಲಿ ಜಿರಳೆಗಳನ್ನು ಕೆರಳಿಸಲು ಬಳಸಬಹುದು. ಸಮಪ್ರಮಾಣದ ಪುದೀನಾ ಎಣ್ಣೆ ಮತ್ತು ನೀರನ್ನು ಸ್ವಲ್ಪ ಉಪ್ಪಿನೊಂದಿಗೆ ಬೆರೆಸಿ ಸ್ಪ್ರೇ ಬಾಟಲಿಯಲ್ಲಿ ಸಂಗ್ರಹಿಸಿ ಮತ್ತು ಜಿರಳೆಗಳ ಮೇಲೆ ಸಿಂಪಡಿಸಿದರೆ ಜಿರಳೆ ಕೂಡಲೇ ಓಡಿ ಹೋಗುತ್ತದೆ. 


ಬೇ ಎಲೆಗಳು


ಅಂದರೆ ಪಲಾವ್ ಎಲೆಗಳು ಪ್ರತಿಯೊಂದು ಮನೆಯಲ್ಲೂ ಕಂಡುಬರುವ ಸಾಮಾನ್ಯ ಪದಾರ್ಥಗಳಲ್ಲಿ ಒಂದಾಗಿದೆ. ನೀವು ಮಾಡಬೇಕಾಗಿರುವುದು ಇಷ್ಟೇ, ಬೇ ಎಲೆಗಳನ್ನು ಪುಡಿಮಾಡುವುದು ಮತ್ತು ಕಪಾಟಿನ ಮೂಲೆಗಳಲ್ಲಿ ಇಡುವುದು, ಇದು ಜಿರಳೆಗಳನ್ನು ನಿವಾರಿಸುತ್ತದೆ. 


ಸೀಮೆ ಎಣ್ಣೆ


ಸಹ ಜಿರಳೆಗಳನ್ನು ದೂರ ಮಾಡಲು ಸಹಾಯ ಮಾಡುತ್ತದೆ. ಅದಕ್ಕಾಗಿ ನೀವು ಜೆರಳೆಗಳು ಹೆಚ್ಚಾಗಿ ಓಡಾಡುವ ಜಾಗದಲ್ಲಿ ಸೀಮೆ ಎಣ್ಣೆಯನ್ನು ಸಿಂಪಡಿಸಿದರೆ ಸಾಕು, ಸೀಮೆಎಣ್ಣೆಯ ಗಾಢ ಪರಿಮಳಕ್ಕೆ ಜಿರಳೆಗಳು ಅಲ್ಲಿಂದ ದೂರ ಓಡುತ್ತವೆ. ಅಲ್ಲದೆ ಜಿರಳೆ ಸಾಯುವ ಸಾಧ್ಯತೆ ಕೂಡ ಹೆಚ್ಚಾಗಿದೆ. 


ಲವಂಗಗಳ ಬಳಕೆ


ಲವಂಗವನ್ನು ಕಿಚನ್ ಡ್ರಾಯರ್‌ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.

ಕೆಣಕಿದ ಅಶೋಕ್ ರೈಗೆ ಸವಾಲೆಸೆದ SDPI

Posted by Vidyamaana on 2023-05-01 09:19:13 |

Share: | | | | |


ಕೆಣಕಿದ ಅಶೋಕ್ ರೈಗೆ ಸವಾಲೆಸೆದ SDPI

ಪುತ್ತೂರು: ಚುನಾವಣಾ ಪ್ರಚಾರ ಸಭೆಗಳಲ್ಲಿ ಅಶೋಕ್ ಕುಮಾರ್ ರೈ ಅವರು ಎಸ್.ಡಿ.ಪಿ.ಐ. ಅನ್ನು ಕೆಣಕಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಚುನಾವಣೆಯಲ್ಲಿ ಉತ್ತರ ನೀಡಲಾಗುವುದು ಎಂದು ಎಸ್.ಡಿ.ಪಿ.ಐ. ರಾಜ್ಯ ವಕ್ತಾರ ರಿಯಾಜ್ ಕಡಂಬು ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲೀಲ್ ಕರೋಪಾಡಿ ಕೊಲೆಗೈದ ವ್ಯಕ್ತಿಗೆ ರಕ್ಷಣೆ ನೀಡಿರುವ, ತನ್ನ ಅಪಾರ್ಟ್ ಮೆಂಟಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ ಎಂದು ಬೋರ್ಡ್ ಹಾಕಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೇಟ್ ನೀಡಿದೆ. ಭಾಷಣಗಳಲ್ಲಿ ಕಾಂಗ್ರೆಸ್ ಸೆಕ್ಯುಲರ್ ಪಕ್ಷ ಎಂದು ಹೇಳಿಕೊಳ್ಳುವ ರಾಷ್ಟ್ರೀಯ ನಾಯಕರು, ಪುತ್ತೂರಿನಲ್ಲಿ ಸಂಘ ಪರಿವಾರದ ವ್ಯಕ್ತಿಗೆ ಟಿಕೇಟ್ ನೀಡಿದೆ ಎಂದು ಲೇವಡಿ ಮಾಡಿದರು.

ಬಿಜೆಪಿ ಅಭ್ಯರ್ಥೀ ಸಂಘ ಪರಿವಾರದವರು, ಕಾಂಗ್ರೆಸಿನ ಅಭ್ಯರ್ಥಿಯೂ ಸಂಘ ಪರಿವಾರದವರು, ಪಕ್ಷೇತರರಾಗಿ ಸ್ಪರ್ಧಿಸಿದವರೂ ಸಂಘ ಪರಿವಾರದವರು. ಆದ್ದರಿಂದ ಪುತ್ತೂರಿನಲ್ಲಿ ನ್ಯಾಯ, ನೀತಿಯ ಪರವಾಗಿರುವ ಎಸ್.ಡಿ.ಪಿ.ಐ. ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದೆ ಎಂದರು.

ಫ್ಯಾಸಿಸ್ಟ್ ಸರಕಾರದ ಧೊರಣೆಯಿಂದಾಗಿ ಶಾಫಿ ಬೆಳ್ಳಾರೆ ಜೈಲಿಗೆ ಹೋಗುವಂತಾಯಿತು. ಕೋಮುವಾದವನ್ನು ಸೃಷ್ಟಿಸಿ ಆ ಮೂಲಕ ಆಡಳಿತವನ್ನು ನಡೆಸುವ ಪಕ್ಷ ಬಿಜೆಪಿ, ಧರ್ಮಗಳ ನಡುವೆ ಕಂದಕ ಸೃಷ್ಟಿ ಮಾಡುತ್ತಿವೆ. ಇದರಿಂದಾಗಿ ಇಂದು ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿದೆ ಎಂದು ವಿಶ್ಲೇಷಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಕ್ಷೇತ್ರ ಸಮಿತಿ ಸದಸ್ಯ ಇಬ್ರಾಹಿಂ ಹಾಜಿ ಸಾಗರ್, ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮರ್ದ, ತಾಲೂಕು ಉಪಾಧ್ಯಕ್ಷ ಅಬ್ದುಲ್ ಹಮೀದ್ ಉಪಸ್ಥಿತರಿದ್ದರು.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

Posted by Vidyamaana on 2023-07-06 07:04:55 |

Share: | | | | |


ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.


ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.

ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; 30 ವರ್ಷದ ವಾಚ್‌ಮೆನ್ ವಿರುದ್ಧ ಎಫ್‌ಐಆರ್

Posted by Vidyamaana on 2023-10-08 08:38:13 |

Share: | | | | |


ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; 30 ವರ್ಷದ ವಾಚ್‌ಮೆನ್ ವಿರುದ್ಧ ಎಫ್‌ಐಆರ್

 ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದಲ್ಲಿ ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 30 ವರ್ಷದ ವಾಚ್ಮೆನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ

ಸೊಸೈಟಿಯ ಸದಸ್ಯರೊಬ್ಬರು ನೀಡಿದ ದೂರಿನ ಮೇರೆಗೆ ವಸತಿ ಸಮುಚ್ಚಯದಲ್ಲಿ ಕೆಲಸ ಮಾಡುವ ವಾಚ್ಮೆನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅಕ್ಟೋಬರ್ 5ರ ರಾತ್ರಿ ಭದ್ರತಾ ಕ್ಯಾಬಿನ್ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Posted by Vidyamaana on 2024-05-26 06:37:52 |

Share: | | | | |


ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡುಗು ಜಿಲ್ಲೆಗಳ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



Leave a Comment: