ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ

Posted by Vidyamaana on 2023-10-15 21:48:29 |

Share: | | | | |


ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ

ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನ ಬಗ್ಗೆ ಕ್ರಿಕೆಟ್ ಬೆಟ್ಟಿಂಗ್  ಜೂಜಾಡಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಖಚಿತ ಮಾಹಿತಿಯೊಂದಿಗೆ ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.


ಹಳೆಯಂಗಡಿ ಬಳಿಯ ಚೇಳ್ಯಾರು ನಿವಾಸಿ ದೀಪಕ್(33), ಮರಕಡ  ಪಂಜಗುತ್ತು ಮನೆ ನಿವಾಸಿ ಸಂದೀಪ್ ಶೆಟ್ಟಿ(38) ಬಂಧಿತರು. ಇವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಅಲ್ಫಿಯಾ ಜೊತೆ ಅಖಿಲ್ ಮದುವೆ: ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು.

Posted by Vidyamaana on 2023-06-21 07:59:35 |

Share: | | | | |


ಅಲ್ಫಿಯಾ ಜೊತೆ ಅಖಿಲ್ ಮದುವೆ: ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು.

ತಿರುವನಂತಪುರಂ: ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಮದುವೆ ಆಗಲು ಹೋದ ವೇಳೆ ಪೊಲೀಸರು ಮಂಟಪದಿಂದ ಯುವತಿಯನ್ನು ಎಳೆದೊಯ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ಜೂ.17 ರಂದು ಆಲ್ಫಿಯಾ (18) ಅಖಿಲ್ (21) ನನ್ನು ತಿರುವನಂತಪುರಂನಲ್ಲಿರುವ ಕೋವಲಂ ದೇವಾಲಯದಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ. ಇನ್ನೇನು ಮದುವೆ ಶಾಸ್ತ್ರ ನಡೆದು ತಾಳಿ ಕಟ್ಟುವ ವೇಳೆಯೇ ಪೊಲೀಸರು ದೇವಸ್ಥಾನಕ್ಕೆ ಬಂದು ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ.ಮುಸ್ಲಿಂ ಯುವತಿ ಆಗಿರುವ ಆಲ್ಫಿಯಾ ಹಿಂದೂ ಯುವಕ ಅಖಿಲ್‌ ನನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾಳೆ. ಇಬ್ಬರ ಧರ್ಮ ಬೇರೆಯಾಗಿದ್ದರಿಂದ ಎರಡೂ ಕಡೆಯಿಂದ ಸಂಬಂಧಕ್ಕೆ ವಿರೋಧವಿದೆ.


ಜೂ.16 ರಂದು ಆಲ್ಫಿಯಾ ವಿವಾಹವಾಗುವ ನಿಟ್ಟಿನಲ್ಲಿ ತಿರುವನಂತಪುರಂಕ್ಕೆ ತೆರಳಿದ್ದಾರೆ. ಮರುದಿನ ಆಲ್ಫಿಯಾ ಮನೆಯವರು ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ ದೇವಸ್ಥಾನದಲ್ಲಿ ಇನ್ನೇನು ಅಖಿಲ್‌ – ಆಲ್ಫಿಯಾ ವಿವಾಹ ನಡೆಯಬೇಕು ಅಷ್ಟರಲ್ಲೇ ಪೊಲೀಸರು ಬಂದಿದ್ದಾರೆ. ಪ್ರಕರಣವನ್ನು ಮುಕ್ತಾಯಗೊಳಿಸಲು ಆಲ್ಫಿಯಾಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಬೇಕಾಗಿದ್ದು,  ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ನಿಟ್ಟಿನಲ್ಲಿ ನಮ್ಮೊಂದಿಗೆ ಬನ್ನಿ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಪೊಲೀಸರ ಮಾತನ್ನು ಕೇಳದಿದ್ದಕ್ಕೆ ಆಲ್ಫಿಯಾಳನ್ನು ಪೊಲೀಸರು ಎಳೆದೊಯ್ದು ವಾಹನದಲ್ಲಿ ಕೂರಿಸಿದ್ದಾರೆ.ನಾನು ಸ್ವಇಚ್ಛೆಯಿಂದ ಅಖಿಲ್‌ ನೊಂದಿಗೆ ಮದುವೆಯಾಗಲು ಮನೆಯಿಂದ ಬಂದಿರುವುದಾಗಿ ಪೊಲೀಸರ ಬಳಿ ಜೂ.16 ರಂದು ಹೇಳಿದ್ದೆ. ನನಗೆ 18 ವರ್ಷ ಆಗಿಲ್ಲ ಎಂದಿದ್ದಾರೆ. ನನ್ನ ಮನೆಯವರು ದೂರು ನೀಡಿದ ಬಳಿಕ ಈ ಘಟನೆ ನಡೆದಿದೆ ಎಂದು ಯುವತಿ ಅಲ್ಫಿಯಾ ಹೇಳಿದ್ದಾಳೆ.

ಇಂದು ಪುತ್ತೂರಿಗೆ ಬಹುಭಾಷಾ ನಟಿ ಪ್ರಿಯಾಮಣಿ

Posted by Vidyamaana on 2024-02-22 04:38:02 |

Share: | | | | |


ಇಂದು ಪುತ್ತೂರಿಗೆ ಬಹುಭಾಷಾ ನಟಿ ಪ್ರಿಯಾಮಣಿ

ಪುತ್ತೂರು: ಬಹುಭಾಷಾ ನಟಿ ಪ್ರಿಯಾಮಣಿ ಅವರು ಇಂದು (ಫೆ. 22) ಪುತ್ತೂರಿಗೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಸುಲ್ತಾನ್ ಡೈಮಂಡ್ ಅಂಡ್ ಗೋಲ್ಡ್ನ ಪುತ್ತೂರು ಶೋರೂಂ ಅನ್ನು ಉದ್ಘಾಟಿಸಲಿದ್ದಾರೆ.

ಗ್ರಾಹಕರ ವಿಶ್ವಾಸ ಗಳಿಸಿ ವಿಶ್ವಾಸಾರ್ಹ ಅಭರಣ ಬ್ರಾಂಡ್ ಎನಿಸಿಕೊಂಡಿರುವ ಸುಲ್ತಾನ್ ಡೈಮಂಡ್ಸ್ ಅಂಡ್ ಗೋಲ್ಡ್ ಪುತ್ತೂರು ಶಾಖೆ ಎಳ್ಮುಡಿಯಲ್ಲಿ ಭವ್ಯವಾಗಿ ನಿರ್ಮಾಣಗೊಂಡಿದೆ.

ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಯಾಗಿರುವರು. ಮಾಜಿ ಶಾಸಕ ಸಂಜೀವ ಮಠಂದೂರು ಅವರು ವೈವಿಧ್ಯಮಯದ ವಜ್ರದ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. 

ನಗರಸಭೆ ಸದಸ್ಯೆ ವಿದ್ಯಾ ಗೌರಿ ಅವರು ಜೆಮ್ ಸ್ಟೋನ್ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಪುತ್ತೂರಿನ ಎಸ್.ಡಿ.ಪಿ.ಐ. ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಅವರು "ಆಂಟಿಕ್" ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. 

ಮೌಂಟನ್ ವ್ಯೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆಪಿ ಅಹಮದ್ ಹಾಜಿ ಆಕರ್ಷಣ್ ಅವರು ಚಿನ್ನಾಭರಣದ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಸುದಾನ ವಸತಿಯುತ ಶಾಲಾ ಸಂಚಾಲಕ ರೆವರೆಂಡ್ ವಿಜಯ್ ಹಾರ್ವಿನ್ ಅವರು ಮಕ್ಕಳ ಚಿನ್ನಾಭರಣದ ಮತ್ತು ಬೆಳ್ಳಿಯ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಲಯನ್ಸ್ 317D ಅಧ್ಯಕ್ಷೆ  ಡಾಕ್ಟರ್ ರಂಜಿತಾ ಶೆಟ್ಟಿ ಅವರು CAIA - ಲೈಫ್ ಸ್ಟೈಲ್ ಜ್ಯುವೆಲ್ಲರಿಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ

Posted by Vidyamaana on 2023-11-08 16:58:52 |

Share: | | | | |


ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ

ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನಕ್ಕೊಳಗಾಗಿ, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತಿಳಿಸಿದ್ದಾರೆ.



ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕೇಶವ ಪಡೀಲ್ ರನ್ನು ಕೊಲೆ ಪ್ರಕರಣದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ. ಹೀಗಾಗಿ ಅವರನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ.


ಕೊಲೆ ಆರೋಪ ಬಂದಿರುವ ಕಾರಣ ತಕ್ಷಣವೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ವಿಷಯ ತಿಳಿಸಿ ಎಸ್.ಸಿ. ಘಟಕದ ಅಧ್ಯಕ್ಷ ಹುದ್ದೆಯಿಂದ ತೆರವು ಮಾಡಲಾಗುವುದು ಎಂದು ತಿಳಿಸಿದರು.

2ನೇ ಸುತ್ತಿನಲ್ಲೂ ಅಶೋಕ್ ಕುಮಾರ್ ರೈ 2220 ಮತಗಳ ಮುನ್ನಡೆ

Posted by Vidyamaana on 2023-05-13 04:05:50 |

Share: | | | | |


2ನೇ ಸುತ್ತಿನಲ್ಲೂ  ಅಶೋಕ್ ಕುಮಾರ್ ರೈ  2220 ಮತಗಳ ಮುನ್ನಡೆ

ಪುತ್ತೂರು : ತ್ರಿಕೋಣ ಸ್ಪರ್ಧೆಯ ಕಣವಾಗಿರುವ ಪುತ್ತೂರಿನಲ್ಲಿ ಮೊದಲ ಸುತ್ತಿನ ಮತ ಎಣಿಕೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 1034 ಮತಗಳ ಮುನ್ನಡೆ ಸಾಧಿಸಿದ್ದಾರೆ . ಎರಡನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಲೀಡ್ ಪಡೆದಿದ್ದು 2220 ಮತಗಳ ಮುನ್ನಡೆ ಪಡೆದಿದ್ದಾರೆ

ಯುಕೋ ಬ್ಯಾಂಕಿನಲ್ಲಿ 820 ಕೋಟಿ ಅಕ್ರಮ ವರ್ಗಾವಣೆ

Posted by Vidyamaana on 2023-12-06 12:13:46 |

Share: | | | | |


ಯುಕೋ ಬ್ಯಾಂಕಿನಲ್ಲಿ 820 ಕೋಟಿ ಅಕ್ರಮ ವರ್ಗಾವಣೆ

ಮಂಗಳೂರು: ದೇಶದ ಬ್ಯಾಂಕ್ ಗಳಲ್ಲಿ ಒಂದಾದ ಯುಕೊ ಬ್ಯಾಂಕ್ 41 ಸಾವಿರಕ್ಕೂ ಅಧಿಕ ಖಾತೆದಾರರ ಖಾತೆಗೆ ಸುಮಾರು 820 ಕೋಟಿ ರೂಪಾಯಿ ತಾಂತ್ರಿಕ ದೋಷದಿಂದ ಜಮೆಯಾಗಿದೆ ಎಂದು ಬ್ಯಾಂಕ್ ತಿಳಿಸಿದ್ದು, ಈ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಸಿದ್ದು, ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸಿದೆ.

ಈ ಕುರಿತು ಯುಕೊ ಬ್ಯಾಂಕ್, ಸಂಶಯಾಸ್ಪದ ಐಎಂಪಿಎಸ್ ವ್ಯವಹಾರಗಳಿಗೆ ಸಂಬಂಧಿಸಿ ತನ್ನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಎಂಜಿನಿಯರ್ ಹಾಗೂ ಇತರ ಕೆಲ ಅಪರಿಚಿತರ ವಿರುದ್ಧ ದೂರು ನೀಡಿದೆ. ಈ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನ. 10 ಹಾಗೂ 13ರ ಮಧ್ಯೆ 820 ಕೋಟಿ ರೂ. ಮೊತ್ತವನ್ನು ಏಳು ಖಾಸಗಿ ಬ್ಯಾಂಕ್‌ಗಳ 14,000 ಖಾತೆದಾರರಿಂದ ಐಎಂಪಿಎಸ್‌ ಆಂತರಿಕ ವಹಿವಾಟುಗಳ ಮೂಲಕ ಯುಕೋ ಬ್ಯಾಂಕ್‌ನ 41,000 ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.


ಹುಡುಕಾಟದ ಸಮಯದಲ್ಲಿ, ಮೊಬೈಲ್‌ ಫೋನ್‌ಗಳು, ಲ್ಯಾಪ್‌ಟಾಪ್‌ಗ್ಳು, ಕಂಪ್ಯೂಟರ್‌ ಸಿಸ್ಟಮ್‌ಗಳು, ಇಮೇಲ್‌ ಆಕ್ರೈವ್‌ಗಳು ಮತ್ತು ಡೆಬಿಟ್‌/ಕ್ರೆಡಿಟ್‌ ಕಾರ್ಡ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್‌ ಪುರಾವೆಗಳನ್ನು ಪಡೆಯಲಾಗಿದೆ


ಅಚಾನಕ್‌ ಆಗಿ ಖಾತೆಗೆ ಹಣ ಬಿದ್ದ ಕೂಡಲೇ ಕೆಲವರು ವಿತ್‌ಡ್ರಾ ಕೂಡ ಮಾಡಿಕೊಂಡಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.



Leave a Comment: