ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಮುಕ್ವೆ ನಿವಾಸಿ, ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ನಾಪತ್ತೆ!!

Posted by Vidyamaana on 2024-02-20 16:27:26 |

Share: | | | | |


ಮುಕ್ವೆ ನಿವಾಸಿ, ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ನಾಪತ್ತೆ!!

ಉಳ್ಳಾಲ: ಪುತ್ತೂರು ಮೂಲದ ವಿದ್ಯಾರ್ಥಿನಿಯೋರ್ವಳು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇದೀಗ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.


ಕೋಟೆಕಾರು ಬಳಿಯ ಮಾಡೂರಿನ ಪಿಜಿಯಲ್ಲಿದ್ದು, ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದ, ಪುತ್ತೂರು ಮುಕ್ವೆ ನಿವಾಸಿ ಚೈತ್ರಾ (27) ನಾಪತ್ತೆಯಾದ ವಿದ್ಯಾರ್ಥಿನಿ. 


ಚೈತ್ರಾ ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿ ಫುಡ್ ಸೆಕ್ಯುರಿಟಿ ವಿಷಯದಲ್ಲಿ ಪಿಎಚ್ ಡಿ ಅಧ್ಯಯನ ನಡೆಸುತ್ತಿದ್ದಳು. ಕೋಟೆಕಾರು ಮಾಡೂರಿನ ಅಹನಾ ಎಂಬ ಪಿಜಿಯಲ್ಲಿ ಚೈತ್ರಾ ನೆಲೆಸಿದ್ದಳು. 


ಚೈತ್ರಾಳ ತಂದೆ ಮೃತರಾಗಿದ್ದು ಮಂಗಳೂರಿನ ಸಂಬಂಧಿಕರ ಆಶ್ರಯದಲ್ಲಿದ್ದುಕೊಂಡು ಎಂಎಸ್ಸಿ ಪೂರೈಸಿದ್ದಳು. ಕಳೆದ ಫೆ.17ರಂದು ಬೆಳಗ್ಗೆ 9 ಗಂಟೆಗೆ ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾ ಕದ್ರಿಯ ಮನೆಗೂ ತೆರಳದೆ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಳು ಎಂದು ದೂರಲಾಗಿದೆ.


 ಫೆ.17 ರಂದು ಚೈತ್ರಾ ನಾಪತ್ತೆಯಾದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಇದಾಗಿ ಮೂರು ದಿನ ಕಳೆದರೂ ಚೈತ್ರಾ ಮರಳಿ ಬಂದಿಲ್ಲ.

ರಾಮ ಮಂದಿರ ಸ್ಫೋಟಿಸುವ ಬೆದರಿಕೆಯೊಡ್ಡಿದ ಇಬ್ಬರನ್ನು ಬಂಧಿಸಿದ STF

Posted by Vidyamaana on 2024-01-04 15:18:20 |

Share: | | | | |


ರಾಮ ಮಂದಿರ ಸ್ಫೋಟಿಸುವ ಬೆದರಿಕೆಯೊಡ್ಡಿದ ಇಬ್ಬರನ್ನು ಬಂಧಿಸಿದ STF

ಅಯೋಧ್ಯೆ: ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಎಸ್​ ಟಿಎಫ್​ ಬಂಧಿಸಿದೆ. ಈ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮಾಹಿತಿ ನೀಡಿದ್ದಾರೆ.


ಗೊಂಡಾದ ಕತ್ರಾ ನಿವಾಸಿಗಳಾದ ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ನನ್ನು ಎಸ್‌ ಟಿಎಫ್ ಬಂಧಿಸಿದೆ.

ಆರೋಪಿಯಿಂದ ಎರಡು ಮೊಬೈಲ್, ಮೇಲ್ ಐಡಿ, ಎರಡು ವೈ-ಫೈ ರೂಟರ್ ಮತ್ತು ಸಿಸಿಟಿವಿ ಡಿವಿಆರ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಕೆಲ ಸಮಯದ ಹಿಂದೆ ಭಾರತೀಯ ಕಿಸಾನ್ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಬೆದರಿಕೆ ಮೇಲ್ ಬಂದಿತ್ತು. ಇದರಲ್ಲಿ ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಭ್ ಯಶ್ ಹಾಗೂ ರಾಮ ಮಂದಿರ, ಯೋಗಿ ಆದಿತ್ಯನಾಥ್‌ ಅವರಿಗೆ ಬಾಂಬ್‌ ಬೆದರಿಕೆಯನ್ನು ಹಾಕಲಾಗಿತ್ತು. ‘@iDevendraOffice’ ಟ್ವಿಟರ್‌ ಖಾತೆಯ ಪೋಸ್ಟ್‌ ನಲ್ಲಿ ಬೆದರಿಕೆ ಹಾಕಿದ್ದರು.


ಬೆದರಿಕೆ ಪೋಸ್ಟ್‌ಗಳನ್ನು ಕಳುಹಿಸಲು ‘alamansarikhan608@gmail.com’ ಮತ್ತು ‘zubairkhanisi199@gmail.com’ ಇಮೇಲ್ ಐಡಿಗಳನ್ನು ಬಳಸಲಾಗಿದೆ ಎಂದು ಆರಂಭಿಕ ತನಿಖೆಯಲ್ಲಿ ತಿಳಿದು ಬಂದಿದೆ.ಎಸ್‌ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ತಹರ್‌ ಸಿಂಗ್‌ ಇಮೇಲ್‌ ಖಾತೆಗಳನ್ನು ರಚಿಸಿದ್ದು, ಓಂ ಪ್ರಕಾಶ್‌ ಇಮೇಲ್‌ ಕಳುಹಿಸಿದ್ದರು. ಇಬ್ಬರು ತಿವಾರಿ ಅವರ ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ

2034ರ ಫಿಫಾ ವಲ್ಡ್‌ಕಪ್‌ ಆತಿಥ್ಯವನ್ನ ಯಾರು ವಹಿಸಲಿದ್ದಾರೆ?

Posted by Vidyamaana on 2023-11-01 15:46:21 |

Share: | | | | |


2034ರ ಫಿಫಾ ವಲ್ಡ್‌ಕಪ್‌ ಆತಿಥ್ಯವನ್ನ ಯಾರು ವಹಿಸಲಿದ್ದಾರೆ?

 ಸೌದಿ ಅರೇಬಿಯಾ: 2034ರ ಫುಟ್‌ಬಾಲ್‌ ವಿಶ್ವಕಪ್‌ (ಫಿಫಾ) ಆತಿಥ್ಯವನ್ನ ಸೌದಿ ಅರೇಬಿಯಾ ವಹಿಸಲಿದೆ. ಆಸ್ಟ್ರೇಲಿಯನ್‌ ಫುಟ್‌ಬಾಲ್‌ ಫೆಡರೇಶನ್‌ ಬಿಡ್ಡಿಂಗ್‌ ಪ್ರಕ್ರಿಯೆಯಲ್ಲಿ ಭಾಗಿಯಾಗದ ಕಾರಣ 2034ರ ಫಿಫಾ ವರ್ಲ್ಡ್‌ಕಪ್‌ ಆತಿಥ್ಯವನ್ನ ಸೌದಿ ಅರೇಬಿಯಾಗೆ ವಹಿಸಲಾಗಿದೆ. ಈ ಕುರಿತು ಫಿಫಾ ಅಧ್ಯಕ್ಷ ಗಿಯಾನ್ನಿ ಇನ್‌ಫಾಂಟಿನೋ ತಿಳಿಸಿದ್ದಾರೆ.ಅಂದ್ಹಾಗೆ ಫಿಫಾ ವರ್ಲ್ಡ್‌ಕಪ್‌ 2030ರ ಆತಿಥ್ಯವನ್ನ ಮೊರಾಕೊ, ಪೋರ್ಚುಗಲ್‌ ಮತ್ತು ಸ್ಪೇನ್‌ಗೆ ವಹಿಸೋದಾಗಿ ಫಿಫಾ ನಿರ್ಧರಿಸಿದ ಬೆನ್ನಲ್ಲೇ 20234 ಫಿಫಾ ಆತಿಥ್ಯವನ್ನ ಸೌದಿ ಅರೇಬಿಯಾ ವಹಿಸೋದು ಖಚಿತವಾಗಿದೆ.

ಬಂಟ್ವಾಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-03-28 20:22:05 |

Share: | | | | |


ಬಂಟ್ವಾಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್

ಬಂಟ್ವಾಳ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಿ.ಸಿ. ರೋಡ್ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಸಂಜೆ ನಡೆಯಿತು.


ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ನಲ್ವತ್ತು ವರ್ಷದಲ್ಲಿ ಕಾಂಗ್ರೆಸ್ ನಾಯಕರು ಹಲವು ಯೋಜನೆಗಳನ್ನು ಜಿಲ್ಲೆಗೆ ತಂದಿದ್ದಾರೆ. ಇದರಲ್ಲಿ ಬಂದರು, ಏರ್ ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್. ಹೀಗೆ ಅನೇಕ ಯೋಜನೆಗಳು ಜಿಲ್ಲೆಗೆ ಬಂದಿದ್ದರೆ ಅದಕ್ಕೆ ಕಾಂಗ್ರೆಸ್ ನಾಯಕರು ಕಾರಣ. ನಂತರದ ಮೂವತ್ತ ಮೂರು ವರ್ಷದಲ್ಲಿ ಬಿಜೆಪಿ ನಾಯಕರು ಏನು ಮಾಡಿದ್ದಾರೆ ಎನ್ನುವುದು ನಿಮಗೆ ತಿಳಿದಿದೆ.



ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ

Posted by Vidyamaana on 2023-06-16 10:05:32 |

Share: | | | | |


ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ

ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ.

ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.

ಐ.ಎ.ಎಸ್ ಪರೀಕ್ಷೆ: ಯೂನಿವರ್ಸಲ್ ಕೋಚಿಂಗಿನ ವಿದ್ಯಾರ್ಥಿನಿಗೆ 2ನೇ ರ್ಯಾಂಕ್

Posted by Vidyamaana on 2023-05-24 14:01:39 |

Share: | | | | |


ಐ.ಎ.ಎಸ್ ಪರೀಕ್ಷೆ: ಯೂನಿವರ್ಸಲ್ ಕೋಚಿಂಗಿನ ವಿದ್ಯಾರ್ಥಿನಿಗೆ 2ನೇ ರ್ಯಾಂಕ್

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಬಾರಿ 10 ಮಂದಿ ಉತ್ತೀರ್ಣರಾಗಿದ್ದಾರೆ.

ಗರೀಮಾ ಲೋಹಿಯಾ 2ನೇ ಸ್ಥಾನ ಪಡೆದಿದ್ದರೆ, ವೈಷ್ಣವಿ ಪೌಲ್ 62ನೇ ಸ್ಥಾನ, ವಿಶ್ವಜೀತ್ ಸೌರ್ಯನ್ 126ನೇ ಸ್ಥಾನ, ಪಿ.ಶ್ರವಣ್ ಕುಮಾರ್ 222ನೇ ಸ್ಥಾನ, ಶಿವಾಂಗ್ ರಸ್ತೋಗಿ 307ನೇ ಸ್ಥಾನ, ಶುಭ್ರತೋಷ್ ಶರ್ಮ 358 ನೇ ಸ್ಥಾನ, ಸ್ವಸ್ಥಿಕಾ ಆರ್.ಪಿ. 456ನೇ ಸ್ಥಾನ, ಪ್ರಣಯ್ ಕುಮಾರ್ ಸಿಂಗ್ 602ನೇ ಸ್ಥಾನ, ಮನ್ ಪ್ರೀತ್ ಸಿಂಗ್ 616ನೇ ಸ್ಥಾನ ಹಾಗೂ ರಾಮ್ ದೇನಿ ಸಾಯಿನಾಥ್ 743ನೇ ಸ್ಥಾನ ಗಳಿಸಿದ್ದಾರೆ.

23 ವರ್ಷಗಳ ಹಿಂದೆ ಬೆಂಗಳೂರಿನ ವಿಜಯನಗರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಪ್ರಾರಂಭವಾದ ಯೂನಿವರ್ಸಲ್  ಕೋಚಿಂಗ್ ಸೆಂಟರ್ ನಲ್ಲಿ ವ್ಯಾಸಂಗ ಮಾಡಿದ ಸಾವಿರಾರು ಮಂದಿ ಈಗಾಗಲೇ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಈ ಬಾರಿಯೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಂಸ್ಥೆ ಇದೀಗ ಕೆಂಗೇರಿ ಸಮೀಪದ ರಾಮೋಹಳ್ಳಿಯಲ್ಲೂ ಇಂಟಿಗ್ರೇಟೆಡ್ ಪದವಿ ಶಿಕ್ಷಣ ನೀಡುತ್ತಿದೆ ಎಂದು ಸಂಸ್ಥೆಯ ನಿರ್ದೇಶಕ ಉಪೇಂದ್ರ ಶೆಟ್ಟಿ ತಿಳಿಸಿದ್ದಾರೆ.



Leave a Comment: