ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಅಶೋಕ್ ರೈ ಗೆಲುವಿಗೆ ಸುಮಾ ರೈ ಶ್ರಮ

Posted by Vidyamaana on 2023-05-01 17:25:03 |

Share: | | | | |


ಅಶೋಕ್ ರೈ ಗೆಲುವಿಗೆ ಸುಮಾ ರೈ ಶ್ರಮ

ಪುತ್ತೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಕುಮಾರ್ ರೈ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಬಾರಿ ಪುತ್ತೂರಿನಲ್ಲಿ ಗೆಲುವಿನ ವಿಶ್ವಾಸದಲ್ಲಿರುವ ಕಾಂಗ್ರೆಸ್ ಪಕ್ಷ ಅದಕ್ಕೆ ಸರಿಯಾಗಿ ತಮ್ಮೊಳಗಿರುವ ಬಣರಾಜಕೀಯವನ್ನು ಮರೆತು ಒಗ್ಗಟ್ಟಿನಿಂದ ಪ್ರಚಾರ ನಡೆಸ್ತಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಬಲಿ ಪಡೆದ ಕೇಬಲ್ ವೈರ್

Posted by Vidyamaana on 2024-03-23 06:09:56 |

Share: | | | | |


ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಬಲಿ ಪಡೆದ ಕೇಬಲ್ ವೈರ್

ತುಮಕೂರು, ಮಾ.22: ಸಾವು ಯಾವ ರೂಪದಲ್ಲಿ ಬರುತ್ತದೆಯೋ ಹೇಳಲು ಅಸಾಧ್ಯ. ಅದರಂತೆ ತುಮಕೂರು(Tumakuru) ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಯಮನ ರೂಪದಲ್ಲಿ ಬಂದ ಕೇಬಲ್ ವೈರ್ , ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟೆ ಮೂಲದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್​ವೊಬ್ಬರನ್ನ ಬಲಿ ಪಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36), ಮೃತ ದುರ್ದೈವಿ.ಘಟನೆ ವಿವರ

ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್​ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಸವಾರ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಲಕ್ಷ್ಮೀ ಬಾಯಿ ಅವರ ಮೃತದೇಹವನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು: ಮನೆಯಿಂದ 1 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

Posted by Vidyamaana on 2023-08-28 06:45:53 |

Share: | | | | |


ಪುತ್ತೂರು: ಮನೆಯಿಂದ 1 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

ಪುತ್ತೂರು: ಮನೆಯಿಂದ 1ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುನ್ನೂರು ಗ್ರಾಮದ ಜಿಡೆಕಲ್ಲು ನೆಕ್ಕರೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಚಿಕ್ಕಮುನ್ನೂರು ಗ್ರಾಮದ ಜಿಡೆಕಲ್ಲು ನೆಕ್ಕರೆ ಕಾರ್ಮಿನ್ ಮಿರಾಂದಾ ಅವರುಆ. 24ರಂದು ಸಂಜೆ 7 ಗಂಟೆಗೆ ಮನೆಯ ಹಿಂದಿನ ಜಾಗದ ವರ್ಕ್ ಏರಿಯಾದಲ್ಲಿ ಇಟ್ಟಿದ್ದ ಆರು ಗೋಣಿಚೀಲ ಅಡಿಕೆ ಮತ್ತು ಬೆಡ್ ರೂಮ್‌ನ ಕಪಾಟಿನಲ್ಲಿ ಇಟ್ಟಿದ್ದ 10 ಸಾವಿರ ರೂ. ಹಣ ಕಳವಾಗಿದೆ ಎಂದು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ

ತುಮಕೂರಿನಲ್ಲಿ ತ್ರಿವಳಿ ಕೊಲೆ ಪ್ರಕರಣ: ಬೆಳ್ತಂಗಡಿಯ ಮನೆಗಳಿಗೆ ತಲುಪಿದ ಮೃತದೇಹ

Posted by Vidyamaana on 2024-03-29 11:32:14 |

Share: | | | | |


ತುಮಕೂರಿನಲ್ಲಿ ತ್ರಿವಳಿ ಕೊಲೆ ಪ್ರಕರಣ: ಬೆಳ್ತಂಗಡಿಯ ಮನೆಗಳಿಗೆ ತಲುಪಿದ ಮೃತದೇಹ

ಬೆಳ್ತಂಗಡಿ, ಮಾ.29: ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಕೊಲೆಯಾದವರ ಮೃತದೇಹಗಳು ಇಂದು (ಮಾ.29) ಮುಂಜಾನೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದೆ.


ನಡ ಗ್ರಾಮದ ಟಿ.ಬಿ. ಕ್ರಾಸ್ ನಿವಾಸಿ ಆಟೋ ಚಾಲಕ ಶಾಹುಲ್ ಹಮೀದ್, ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ ಮತ್ತು ಶಿರ್ಲಾಲು ಗ್ರಾಮದ ಸಿದ್ದೀಕ್ ಯಾನೆ ಇಮ್ಮಿಯಾಝ್ ಎಂಬವರ ಮೃತದೇಹಗಳು ಕೊಲೆಗೈದು ಕಾರು ಸಹಿತ ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಾ.22ರಂದು ತುಮಕೂರಿನ ಕುಚ್ಚಂಗಿ ಕೆರೆ ಎಂಬಲ್ಲಿ ಪತ್ತೆಯಾಗಿದ್ದವು.ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಎನ್ ಎ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಬಂದಿರುವ ಕಾರಣ ಇದೀಗ ಮೂವರ ಮೃತದೇಹಗಳನ್ನು ಹಸ್ತಾಂತರಿಸಲಾಗಿದ್ದು, ಕೃತ್ಯ ಬೆಳಕಿಗೆ ಬಂದ ಏಳು ದಿನಗಳ ಬಳಿಕ ಅಂದರೆ ಇಂದು ಬೆಳಗ್ಗೆ ಉಜಿರೆಗೆ ತಲುಪಿವೆ.


.

ಏ 19:ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

Posted by Vidyamaana on 2023-04-18 15:37:50 |

Share: | | | | |


ಏ 19:ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

: ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ಏ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಳೆ ಬೆಳಗ್ಗೆ 8 ಗಂಟೆಗೆ  ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ  ಜೆ ಡಿ ಎಸ್ ಕಾರ್ಯಕರ್ತರು , ಬೆಂಬಲಿಗರು ಹಾಗೂ ಹಿತೈಷಿಗಳೊಂದಿಗೆ ಬೆಳಗ್ಗೆ 10 ಗಂಟೆಗೆ ದರ್ಬೆ ಸರ್ಕಲ್ ನಿಂದ ಬೃಹತ್ ರ‍್ಯಾಲಿಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ  ಇತ್ತೀಚೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‍ ಪಕ್ಷಕ್ಕೆ ಸೇರಿದ್ದರು.

BREAKING: ಗುಂಡಿಕ್ಕಿ ಶ್ರೀಲಂಕಾ ಮಾಜಿ ಕ್ರಿಕೆಟಿಗನ ಬರ್ಬರ ಹತ್ಯೆ

Posted by Vidyamaana on 2024-07-17 13:07:31 |

Share: | | | | |


BREAKING: ಗುಂಡಿಕ್ಕಿ ಶ್ರೀಲಂಕಾ ಮಾಜಿ ಕ್ರಿಕೆಟಿಗನ ಬರ್ಬರ ಹತ್ಯೆ

ಕೋಲಂಬೊ : ಶ್ರೀಲಂಕಾದ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ (41) ಅವರನ್ನು ಮಂಗಳವಾರ ರಾತ್ರಿ (ಜುಲೈ 16) ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಥಳೀಯ ಪೊಲೀಸರ ಪ್ರಕಾರ, ನಿರೋಶನಾ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆತನ ಮೇಲೆ ಗುಂಡು ಹಾರಿಸಿದ್ದಾನೆ

Recent News


Leave a Comment: