ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಜುಲೈ 31 ರಂದು ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

Posted by Vidyamaana on 2023-07-26 12:59:51 |

Share: | | | | |


ಜುಲೈ 31 ರಂದು ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಬೆಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ, ಜುಲೈ 31 ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡು ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.


ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು ಎಂದು ತಿಳಿಸಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇಕಡಾ 100 ರಷ್ಟು ಬಿತ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ

ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

Posted by Vidyamaana on 2024-01-22 09:05:12 |

Share: | | | | |


ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

ಶಿವಮೊಗ್ಗ, (ಜನವರಿ 22): ಯುವತಿಯೋರ್ವಳಿಗೆ ಮದುವೆ (Marriage) ನಿಶ್ಚಯವಾಗಿತ್ತು. ಇನ್ನೇನು ಮದುವೆಗೆ ಎರಡು ವಾರ ಬಾಕಿ ಉಳಿದಿತ್ತು. ಈ ಹಿನ್ನೆಲೆಯಲ್ಲಿ ಪೋಷಕರು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆದ್ರೆ, ಮದುವೆಯಾಗಬೇಕಿದ್ದ ಯುವತಿಯೇ ಸಾವಿನ ಮನೆ ಸೇರಿದ್ದಾಳೆ. ಹೌದು…ಮದುವೆಗೆ 13 ದಿನಗಳು ಇರುವಾಗ ಯುವತಿಯೊಬ್ಬಳು‌ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ. 13 ದಿನದಲ್ಲಿ ಹಸೆಮಣೆ ಏರಬೇಕಿದ್ದ ಚೈತ್ರಾ(26) ನೇಣಿಗೆ ಶರಣಾಗಿದ್ದಾಳೆ.ಚೈತ್ರಗೆ ಮುಂದಿನ ಫೆಬ್ರವರಿ 4 ರಂದು ವಿವಾಹ ನಿಶ್ಚಯವಾಗಿತ್ತು. ಆದ್ರೆ, ಇದೀಗ ಏಕಾಏಕಿ ಚೈತ್ರ ಆತ್ಮಹತ್ಯೆಗೆ ಶರಣಾಗಿದ್ದು,ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಎಂಕಾಂ ಪದವಿ ಪಡೆದಿದ್ದ ಚೈತ್ರ ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ನನಗೆ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ ನನಗೆ ಮದುವೆ ಬೇಡವೆಂದು ವಿರೋಧ ಮಾಡುತ್ತಿದ್ದಳು ಎನ್ನಲಾಗಿದೆ. ಆದರೆ ಮನೆಯವರು ಮನವೊಲಿಸಿದ್ದರು ಎನ್ನಲಾಗಿದೆ.


ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪುತ್ತೂರು : ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೊಬೈಲ್ ಒಡೆದು ಹಾನಿ : ದೂರು ದಾಖಲು

Posted by Vidyamaana on 2023-07-16 15:35:23 |

Share: | | | | |


ಪುತ್ತೂರು : ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೊಬೈಲ್ ಒಡೆದು ಹಾನಿ : ದೂರು ದಾಖಲು

ಪುತ್ತೂರು : ಬಪ್ಪಳಿಕೆ ಎಂಬಲ್ಲಿ ಪತ್ರಕರ್ತ ನಿಶಾಂತ್ ಬಿಲ್ಲಂಪದವು ಎಂಬವರ ಮೊಬೈಲ್ ಅನ್ನು ಒಡೆದು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.


ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 427 ಐಪಿಸಿ ರನ್ವಯ ದಾಖಲಿಸಿಕೊಂಡು ಸದ್ರಿ ದೂರಿನಲ್ಲಿ ಸಲ್ಲಿಸಿರುವ ವಿಚಾರಗಳ ಕುರಿತು ಸೂಕ್ತ ಕಾನೂನು ಮತ್ತು ನಿಯಮಗಳ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಮತ್ತು ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ.

ಇಂದು ರಂಜಾನ್ ಹಬ್ಬ ಹಿನ್ನೆಲೆ; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ

Posted by Vidyamaana on 2024-04-10 10:27:49 |

Share: | | | | |


ಇಂದು ರಂಜಾನ್ ಹಬ್ಬ ಹಿನ್ನೆಲೆ; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ

ಮಂಗಳೂರು: ಇಂದು ರಂಜಾನ್ ಹಬ್ಬ ಹಿನ್ನೆಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಏ.11ರಂದು ಇದ್ದ ಸಾರ್ವತ್ರಿಕ ರಜೆಯನ್ನು ಏ.10ರಂದು ನೀಡಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಕರ್ನಾಟಕ ಸರಕಾರವು 2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ: 11-04-2024 ರಂದು ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿತ್ತು

ರೆಸ್ಕ್ಯೂ ಇಂಡಿಯಾ ರಾಷ್ಟ್ರಮಟ್ಟದ 18ನೇ ಜೀವರಕ್ಷಕ ಈಜು ಪಂದ್ಯಾಟ ಲಿಖಿತ್ ರಾಮಚಂದ್ರಗೆ 4 ಚಿನ್ನ 1 ಬೆಳ್ಳಿ ಪದಕ

Posted by Vidyamaana on 2023-06-12 23:16:21 |

Share: | | | | |


ರೆಸ್ಕ್ಯೂ ಇಂಡಿಯಾ ರಾಷ್ಟ್ರಮಟ್ಟದ 18ನೇ ಜೀವರಕ್ಷಕ ಈಜು ಪಂದ್ಯಾಟ ಲಿಖಿತ್ ರಾಮಚಂದ್ರಗೆ 4 ಚಿನ್ನ 1 ಬೆಳ್ಳಿ ಪದಕ

ಪುತ್ತೂರು: ಬೆಂಗಳೂರಿನ ವಿಲನ್ ಗಾರ್ಡನ್‌ನಲ್ಲಿರುವ ರೇ-ಸೆಂಟರ್ ಈಜುಕೊಳದಲ್ಲಿ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಬಾರಿಗೆ ರೆಸ್ಕ್ಯೂಇಂಡಿಯಾ-2023 ಹೆಸರಿನಲ್ಲಿ ನಡೆದ ರಾಷ್ಟ್ರಮಟ್ಟದ 18ನೇ ರಾಷ್ಟ್ರೀಯ ಜೀವರಕ್ಷಕ ಈಜು ಪಂದ್ಯಾಟದಲ್ಲಿ ಲಿಖಿತ್ ರಾಮಚಂದ್ರ ಭಾಗವಹಿಸಿ 4 ಚಿನ್ನ ಮತ್ತು 1 ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.

ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲಾ 7ನೇ ತರಗತಿ ವಿದ್ಯಾರ್ಥಿಯಾಗಿರುವ, ಇಲ್ಲಿನ ಪರ್ಲಡ್ಕ ಡಾ| ಶಿವರಾಮ ಕಾರಂತ ಬಾಲವನದ ಈಜುಕೊಳದಲ್ಲಿ ಈಜು ತರಬೇತುದಾರರಾದ ಪಾರ್ಥ ವಾರಣಾಸಿಯವರ ನಿರ್ದೇಶನದಲ್ಲಿ ಜೀವ ರಕ್ಷಕ ಈಜು ತರಬೇತುದಾರ ರೋಹಿತ್ ರವರಿಂದ ಜೀವರಕ್ಷಕ ಈಜು ಮತ್ತುದೀಕ್ಷಿತ್ ಇಮಂದ ಕಳೆದ 8 ವರ್ಷಗಳಿಂದ ಇವರು ಈಜು ತರಬೇತಿ ಪಡೆಯುತ್ತಿದ್ದಾರೆ.

ವೈಯುಕ್ತಿಕ ಪ೦ದ್ಯಾಟಗಳಾದ 100ಮೀ ಟೊ ಎಫ್ ಫಿನ್ಸ್‌ನಲ್ಲಿ ಚಿನ್ನದ ಪದಕ, 50ಮೀ ಮ್ಯಾನಿಕನ್ ಕ್ಯಾರಿನಲ್ಲಿ ಚಿನ್ನದ ಪದಕ, 50ಮೀ ಫ್ರೀ ಸ್ಟೈಲ್ ಎಫ್ ಫಿನ್ಸ್‌ನಲ್ಲಿ ಬೆಳ್ಳಿ ಪದಕ, ಕರ್ನಾಟಕ ಟೀಮ್ ನಲ್ಲಿ 4x50 ಮೀ ಮೆತ್ತೆ ರಿಲೇ ಯಲ್ಲಿ ಚಿನ್ನದ ಪದಕ, 4x50 ಮೀ ಮಿಕ್ಸ್‌ಡ್ ರಿಲೇಯಲ್ಲಿ ಚಿನ್ನದ ಪದಕ ಪಡೆದುಕೊಂಡಿರುವ ಇವರು ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎ. ಮತ್ತು ದರ್ಬೆ ದೀಪ ಬ್ಯೂಟಿಪಾರ್ಲರ್ ಮಾಲಕಿ ದೀಪಾ ದಂಪತಿ ಪುತ್ರ,

ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿ ಆಫ್ ಇಂಡಿಯಾ ಮತ್ತು ಇಂಟರ್ನಾಷನಲ್ ಲೈಫ್ ಸೇವಿಂಗ್ ವತಿಯಿಂದ ಈ ಸ್ಪರ್ಧೆ ಆಯೋಜಿಸಲಾಗಿದ್ದು ಇಟಲಿಯ ಜೀವರಕ್ಷಕ ಈಜು ತರಬೇತುದಾರರಾದ ಲೊರೆಂಝೇ ಬರೇಲಿ ಇವರು ಮುಖ್ಯ ತೀರ್ಪುಗಾರರಾಗಿದ್ದರು. ಪುತ್ತೂರು ಅಕ್ವಾಟಕ ಕ್ಲಬ್ ನ ಜೀವರಶಕ ಈಜು ತರಬೇತುದಾರರಾದ ರೋಹಿತ್‌ ಪಿ ಈ ಪಂದ್ಯಾಟದಲ್ಲಿ ತೀರ್ಪುಗಾರರಾಗಿದ್ದರು.

ನನ್ನ ಸಾವಿಗೆ ನಾನೇ ಕಾರಣ.. ಕಾಯರ್ತಡ್ಕದಲ್ಲಿ ಯುವತಿ ನೇಣಿಗೆ ಶರಣು

Posted by Vidyamaana on 2024-02-08 17:57:10 |

Share: | | | | |


ನನ್ನ ಸಾವಿಗೆ ನಾನೇ ಕಾರಣ.. ಕಾಯರ್ತಡ್ಕದಲ್ಲಿ ಯುವತಿ ನೇಣಿಗೆ ಶರಣು

ಮಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಯುವತಿ ತನ್ನ ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಮೃತ ಯುವತಿ.ವನಿತಾರವರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದವರು ಅನಾರೋಗ್ಯ ಸಮಸ್ಯೆ ಕಾಡಿದ ಹಿನ್ನಲೆಯಲ್ಲಿ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಫೆ. 8 ರಂದು ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವುದು ಪತ್ತೆಯಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಡೆತ್ ನೋಟ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.



Leave a Comment: