ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಬೆಳ್ತಂಗಡಿ :App ಮೂಲಕ ಸಾಲ ಕೊಡ್ತೇವೆ ಅಂದವ್ರೇ ಒಟ್ರಾಶಿ ಹಣ ಪೀಕಿದ್ರು..

Posted by Vidyamaana on 2024-04-05 04:38:50 |

Share: | | | | |


ಬೆಳ್ತಂಗಡಿ :App ಮೂಲಕ ಸಾಲ ಕೊಡ್ತೇವೆ ಅಂದವ್ರೇ ಒಟ್ರಾಶಿ ಹಣ ಪೀಕಿದ್ರು..

ಬೆಳ್ತಂಗಡಿ: ಆಪ್‌ ಮೂಲಕ ಸಾಲ ನೀಡುವುದಾಗಿ ಹೇಳಿ ಮಹಿಳೆಗೆ ವಂಚಿಸಿರುವ ಘಟನೆ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ.

ತೆಂಕಕಾರಂದೂರು ಗ್ರಾಮದ ನೆಬಿಸಾ (38) ಎಂಬವರಿಗೆ ಅಪರಿಚಿತರು ಮಾ. 21 ರಂದು ಫೇಸ್ ಬುಕ್ ನಲ್ಲಿ ಮನಿ ವ್ಯೂ ಪರ್ಸನಲ್ ಲೋನ್ ಆಪ್ ಮೂಲಕ ಪರಿಚಯಿಸಿಕೊಂಡಿದ್ದರು.

ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-03-19 08:03:50 |

Share: | | | | |


ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಮಾ.20: ಗೋವಾದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಕೊಕೇನ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 35 ಗ್ರಾಂ ಕೊಕೇನ್ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಂಬ್ಲಮೊಗರು ಕೊಳಂಜಹಿಟ್ಟು ಸದಕತ್.ಯು ಯಾನೆ ಶಾನ್ ನವಾಝ್(31) ಮತ್ತು ಅಂಬ್ಲಮೊಗರು ಸೇನರಬೆಟ್ಟು ಅಶ್ಫಕ್ ಯಾನೆ ಅಶ್ಫಾ (25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಶದಲ್ಲಿದ್ದ ದ್ವಿಚಕ್ರ ವಾಹನ ಮತ್ತು ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000 ರೂ. ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೊಕೇನ್, 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ, ನಗದು ರೂ. 5560 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000 ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಂಗಳೂರು ನಗರಕ್ಕೆ ಗೋವಾದಿಂದ ಮಾದಕ ವಸ್ತುವಾದ ಕೊಕೇನ್ ಅನ್ನು ಖರೀದಿಸಿಕೊಂಡು ಸಾಗಾಟ, ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದರು.

ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ನವಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ಗಳಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ವಿತರಣೆ

Posted by Vidyamaana on 2024-06-03 08:28:45 |

Share: | | | | |


ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ವಿತರಣೆ

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮನೆ ಬಾಗಿಲಿಗೆ ಆರೋಗ್ಯ ಸೇವೆ ಪೂರೈಸಲು ಮುಂದಾಗಿದೆ.

ಹೌದು, ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ಪೂರೈಸಲು ನಮ್ಮ ಸರ್ಕಾರ ಮುಂದಾಗಿದೆ.

ನೂರಾರು ವಿಶೇಷ ಚೇತನ ಮಕ್ಕಳ ಪಾಲಿಗೆ ಬೆಳಕಾದ ಡಾ.ಧನಂಜಯ ಸರ್ಜಿ

Posted by Vidyamaana on 2024-05-31 05:56:04 |

Share: | | | | |


ನೂರಾರು ವಿಶೇಷ ಚೇತನ ಮಕ್ಕಳ ಪಾಲಿಗೆ ಬೆಳಕಾದ ಡಾ.ಧನಂಜಯ ಸರ್ಜಿ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರ ಮಾನವೀಯ ಕಳಕಳಿಯಲ್ಲಿ ಅತೀ ಪ್ರಮುಖ ಸ್ಥಾನ ಪಡೆಯುವುದು ಸರ್ಜಿ ಫೌಂಡೇಶನ್ ನ ವಿಶೇಷಚೇತನ ಮಕ್ಕಳ ಶಾಲೆ.

ಸಾಮಾಜಿಕ ಕಳಕಳಿ ಹೊಂದಿರುವ ಡಾ.ಧನಂಜಯ ಸರ್ಜಿ ಅವರು 2016 ರಲ್ಲಿಮಕ್ಕಳ ದಿನಾಚರಣೆ ಸಂದರ್ಭ 160 ವಿಶೇಷಚೇತನ ಹಾಗೂ ಅನಾಥ ಮಕ್ಕಳನ್ನು ಆರೋಗ್ಯಕ್ಕೆ ಸಂಬಂಧಿಸಿದಂತೆ ದತ್ತು ಪಡೆದಿದ್ದಾರೆ. ಇತ್ತೀಚೆಗೆ ಸರ್ಜಿ ಫೌಂಡೇಷನ್ ಅಡಿಯಲ್ಲಿ ಆ ಎಲ್ಲಾ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿರುವುದು ಸರ್ಜಿ ಅವರ ಮಾನವೀಯ ಮೌಲ್ಯಕ್ಕೆ ನಿದರ್ಶನವಾಗಿದೆ.

 ವಿಶೇಷಚೇತನ ಮಕ್ಕಳ ಬಾಳಿಗೆ ಹಾಗೂ ಆ ಕುಟುಂಬದ ಪಾಲಿಗೆ ಬೆಳಕಾಗಿದ್ದು ಸರ್ಜಿ ಇನ್‌ಸ್ಟಿಟೂಟ್

   ಇದು ವಿಶೇಷ ಚೇತನ ಮಕ್ಕಳ ತರಬೇತಿ ಕೇಂದ್ರ. ಡಾ.ಧನಂಜಯ ಸರ್ಜಿಯವರ ಈ ಮಾನವೀಯ ಕಳಕಳಿಯಿಂದ ಅಲ್ಲಿ ಸೇರ್ಪಡೆಗೊಂಡ ಮಕ್ಕಳು ಎಲ್ಲರಂತೆ ತಿರುಗಾಡಬಲ್ಲ, ಓಡಾಡಬಲ್ಲ ಹಾಗೆ ಮಾತೂ ಆಡಬಲ್ಲ ಶಕ್ತಿಯನ್ನು ಪಡೆದಿದ್ದಾರೆ. ಈ ಸಂಸ್ಥೆ  ನನ್ನಂತಹ ನೂರಾರು ಕುಟಂಬಗಳ ಬಾಳಿನ ಹೊಸ ಆಶಾಕಿರಣ ಎಂದರೆ ತಪ್ಪಿಲ್ಲ ಎನ್ನುತ್ತಾರೆ ಆ ಮಕ್ಕಳ ಹೆತ್ತವರು.

ಶಿವಮೊಗ್ಗದ ತರಂಗ ವಿಶೇಷಚೇತನ ಮಕ್ಕಳ ಶಾಲೆಗೆ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಯಂತ್ರೋಪಕರಣ ಹಾಗೂ ಕೊಠಡಿಯನ್ನು ಸರ್ಜಿ ಫೌಂಡೇಷನ್ ವತಿಯಿಂದ ನಿರ್ಮಾಣ ಮಾಡಿಕೊಡಲಾಗಿದೆ. ರವಿ ಡಿ. ಚನ್ನಣ್ಣನವರು ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದ ಸಂದರ್ಭ ಈ ವಿಶೇಷ ಚೇತನ ಮಕ್ಕಳ ಸಶಕ್ತರನ್ನಾಗಿಸಲು ಅರಿವು ಜಾಥಾ ಹಮ್ಮಿಕೊಳ್ಳಲಾಗಿತ್ತು.

ಅಧಿಕಾರಿಗಳು ಉದ್ಯಮಿಗಳಲ್ಲಿ ಹಣದ ಬೇಡಿಕೆ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡುವ ಅಗತ್ಯವಿಲ್ಲ: ಶಾಸಕ ಅಶೋಕ್ ರೈ

Posted by Vidyamaana on 2023-09-07 12:33:10 |

Share: | | | | |


ಅಧಿಕಾರಿಗಳು ಉದ್ಯಮಿಗಳಲ್ಲಿ ಹಣದ ಬೇಡಿಕೆ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡುವ ಅಗತ್ಯವಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ನನ್ನ ಹೆಸರು ಹೇಳಿಕೊಂಡು ಕೆಲವರು ಸರಕಾರಿ ಇಲಾಖೆಯ ಅಧಿಕಾರಿಗಳ ಬಳಿ, ಉದ್ಯಮಿಗಳ ಬಳಿ ಹಣ ಕೇಳುತ್ತಿದ್ದಾರೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದ್ದು ನನ್ನ ಹೆಸರು ಹೇಳಿ ಯಾರಾದರು ಹಣ ಕೇಳಿದರೆ ಕೊಡಬೇಕಾದ ಅವಶ್ಯಕತೆಯಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ತಿಳಿಸಿದ್ದಾರೆ.

ಕಳೆದ ಹಲವಾರು ದಿನಗಳಿಂದ ಈ ರೀತಿಯ ವಿಚಾರಗಳು ನಡೆಯುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ನಾನು ಯಾವುದೇ ಅಧಿಕಾರಿಗಳ ಬಳಿಯಾಗಲಿ, ಉದ್ಯಮಿಗಳ ಬಳಿಯಾಗಲಿ ಚುನಾವಣೆಗೆ ಮುನ್ನವೂ ಹಣ ಕೇಳಿಲ್ಲ ಆ ಬಳಿಕವೂ ಕೇಳಿಲ್ಲ ಇನ್ನು ಕೇಳುವುದೂ ಇಲ್ಲ ಅದರ ಅಗತ್ಯತೆ ನನಗಿಲ್ಲ. ನನ್ನ ಹೆಸರಿನಲ್ಲಿ ಯಾರಾದರೂ ಅಧಿಕಾರಿಗಳ ಬಳಿ , ಉದ್ಯಮಿಗಳ ಬಳಿ ಹಣ ಕೇಳಿದರೆ ಅವರು ಕೊಡಬೇಕಾದ ಅಗತ್ಯವಿಲ್ಲ. ಶಾಸಕರು ಹೇಳಿರಬಹುದೇ ಎಂಬ ಅನುಮಾನವೇ ಬೇಡ ನಾನು ಯಾರಲ್ಲೂ ಹಣ ಕಲೆಕ್ಷನ್ ಮಾಡಲು ಹೇಳಿಯೂ ಇಲ್ಲ , ಮುಂದಕ್ಕೆ ಹೇಳುವುದೂ ಇಲ್ಲಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.

ಜ. 20 ಮತ್ತು 21 ಸವಣೂರಿನಲ್ಲಿ ಜಿಲ್ಲಾ ಯುವ ಜನಮೇಳ

Posted by Vidyamaana on 2024-01-16 09:30:37 |

Share: | | | | |


ಜ. 20 ಮತ್ತು 21 ಸವಣೂರಿನಲ್ಲಿ ಜಿಲ್ಲಾ ಯುವ ಜನಮೇಳ

ಪುತ್ತೂರು : ಸವಣೂರಿನಲ್ಲಿ   ಜ. 20 ಮತ್ತು‌ 21 ರಂದು ಅದ್ದೂರಿಯಾಗಿ  ನಡೆಯಲಿರುವ ದ.ಕ.ಜಿಲ್ಲಾ ಮಟ್ಟದ ಯುವಜನ ಮೇಳ       ನಡೆಯಲಿದ್ದು, ಇದರ ಸಿದ್ಧತೆ ಮತ್ತು ಕಾರ್ಯಕ್ರಮದ ಬಗ್ಗೆ ಈ ತನಕ ನಡೆದ ಎಲ್ಲಾ ವಿವರಗಳನ್ನು  ಸಂಸದರಾದ ನಳಿನ್ ಕುಮಾರ್ ಕಟೀಲ್ ರವರಿಗೆ ದ.ಕ.ಜಿಲ್ಲಾ ಯುವ ಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳುರವರು ವಿವರಿಸಿದರು.

ಪಂಜ ಸಮೀಪದ ಬಲ್ಪದಲ್ಲಿ ಜರಗಿದ ಕಾರ್ಯಕ್ರಮವೊಂದರಲ್ಲಿ ಸಂಸದರನ್ನು ಭೇಟಿಯಾಗಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುವಲ್ಲಿ ಸಂಸದರ ಪೂರ್ಣ ಸಹಕಾರವನ್ನು    ಸುರೇಶ್ ರೈ ರವರು ಕೋರಿದರು. ಈ ಬಗ್ಗೆ  ಮಾತನಾಡಿದ ನಳಿನ್ ಕುಮಾರ್ ಕಟೀಲ್ ರವರು‌ ಸವಣೂರಿನ ನಡೆಯುವ ಜಿಲ್ಲಾ ಮಟ್ಟದ ಯುವ ಜನ ಮೇಳ ಯುವ ಪ್ರತಿಭೆಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಈ ಕಾರ್ಯಕ್ರಮ  ‌ ಮಾದರಿ ಕಾರ್ಯಕ್ರಮವಾಗಿ ಹೆಸರನ್ನು ತರಲಿ  ಎಂದು ಹಾರೈಸಿ, ಕಾರ್ಯಕ್ರಮದಲ್ಲಿ ಪೂರ್ಣ ರೀತಿಯಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

ಈ  ಸಂದರ್ಭದಲ್ಲಿ ದ.ಕ.ಜಿಲ್ಲಾ ಯುವ ಜನ ಒಕ್ಕೂಟದ ನಿರ್ದೇಶಕ ರಾಕೇಶ್ ರೈ ಕೆಡೆಂಜಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಸದಸ್ಯ   ಉಮಾಪ್ರಸಾದ್ ರೈ ನಡುಬೈಲುರವರುಗಳು ಉಪಸ್ಥಿತರಿದ್ದರು*



Leave a Comment: